ಶೀಘ್ರದಲ್ಲೇ ಸಿದ್ದರಾಮಯ್ಯ ಸರ್ಕಾರ ಪತನ: ಭವಿಷ್ಯ ನುಡಿದ ಮಾಜಿ ಸಚಿವ
ಬೆಳಗಾವಿ,ಫೆಬ್ರವರಿ 17: ಬಹುಮತದಿಂದ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷವೂ ಸರ್ಕಾರ ರಚನಯಾಗಿದೆ. ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಹಳ ದಿನ ಉಳಿಯುವುದಿಲ್ಲ. ಶೀಘ್ರವೇ ಪತನವಾಗಲಿದೆ ಎಂದು ಮಾಜಿ ಸಚಿವ ಮುರಗೇಶ್ ನಿರಾಣಿ ಭವಿಷ್ಯ ನುಡಿದಿದ್ದಾರೆ.
ಹೌದು, ಐದು ಗ್ಯಾರಂಟಿಗಳನ್ನು ನಾವು ಸ್ವಾಗತ ಮಾಡಿದ್ದೇವು. ಆದರೆ ಈಗ ಕಂಡಿಷನ್ ಹಾಕುತ್ತಿದ್ದಾರೆ. ಗ್ಯಾರಂಟಿ ಯೋಜನೆ ಜಾರಿಯಾದಾಗಿನಿಂದ ಅನುದಾನ ಬಿಡುಗಡೆಯಾಗುತ್ತಿಲ್ಲ. ನಮಗೆ ಅನುದಾನ ಬಂದಿಲ್ಲ ಎಂದು ಕಾಂಗ್ರೆಸ್ ಶಾಸಕರೇ ಬೇಜಾರು ವ್ಯಕ್ತಪಡಿಸುತ್ತಿದ್ದಾರೆ ಹೀಗಾಗಿ ಸರ್ಕಾರದ ವಿರುದ್ಧ ಶಾಸಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ ಎಂದು ಮುರುಗೇಶ್ ನಿರಾಣಿ ಹೇಳಿದರು.

ಅನುದಾನದ ವಿಚಾರದಲ್ಲಿ ಶಾಸಕರೇ ಅಸಮಾದಾನಿತರಾಗಿ ಸರ್ಕಾರ ಕೆಡವಲು ತುದಿಗಾಲ ಮೇಲೆ ನಿಂತಿದ್ದಾರೆ. ಬಿಜೆಪಿ ನಾಯಕರೇನು ಈ ಸರ್ಕಾರ ಪತನಗೊಳಿಸಲು ಪ್ರಯತ್ನಿಸುತ್ತಿಲ್ಲ. ಅನುದಾನ ವಿಚಾರವಾಗಿ ಕಾಂಗ್ರೆಸ್ ಶಾಸಕರೇ ಅಸಮಾಧಾನಗೊಂಡಿದ್ದಾರೆ. ಹೀಗಾಗಿ ದೊಡ್ಡ ಪ್ರಮಾಣದಲ್ಲಿ ಕಾಂಗ್ರೆಸ್ ಶಾಸಕರಿಂದಲೇ ಈ ಸರ್ಕಾರ ಪತನವಾಗಲಿದೆ, ಅತ್ಯಂತ ಕಡಿಮೆ ಅವಧಿಯಲ್ಲಿಯೇ ಈ ಸರ್ಕಾರ ಏನಾಗುತ್ತದೆ ಎಂದು ಕಾಯ್ದು ನೋಡಿ ಎಂದು ಹೇಳಿದರು.
ಮಾಜಿ ಸಿಎಂ ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆ ಕುರಿತು ಮಾತನಾಡಿ, ಕೆಲವೊಬ್ಬರು ಅಸಾಧಾರಣ ವ್ಯಕ್ತಿಗಳಿರುತ್ತಾರೆ. ಅವರ ಬಗ್ಗೆ ನಾನು ಮಾತನಾಡುವುದಿಲ್ಲ ಎಂದ ಅವರು, ನಾನು ಲೋಕಸಬಾ ಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷಿ ನಾನಲ್ಲ. ಪಕ್ಷದ ಶಿಸ್ತಿನ ಕಾರ್ಯಕರ್ತ. ಪಕ್ಷ ನನಗೆ ಯಾವುದೇ ಜವಾಬ್ದಾರಿ ನೀಡಿದರೂ ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ಬಿಜೆಪಿಯಲ್ಲಿ ಯಾರಿಗೆ ಯಾವಾಗ ಸರ್ಪೈಸ್ ಆಗುತ್ತದೆಯೋ ಗೊತ್ತಿಲ್ಲ. ಆದರೆ, ಪಕ್ಷ ವಹಿಸಿದ ಯಾವುದೇ ಜವಾಬ್ದಾರಿ ನಿಭಾಯಿಸಲು ನಾನು ಸಿದ್ಧ ಎಂದು ಹೇಳಿದರು.
ಸದನದಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಗದ್ದಲ ವಿಚಾರವಾಗಿ ಮಾತನಾಡಿದ ವಿಧಾನಸಭೆ ವಿರೋಧಪಕ್ಷದ ನಾಯಕ ಆರ್. ಅಶೋಕ್, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಬಿಜೆಪಿಯ ಅವಧಿ ಬಳಿಕ ಅಪರಾಧ ಚಟುವಟಿಕೆ ಶೇ.46 ರಷ್ಟು ಹೆಚ್ಚಾಗಿದೆ. ಮಹಿಳೆಯರ ಮೇಲಿನ ದೌರ್ಜನ್ಯದಲ್ಲಿ ಕರ್ನಾಟಕ ದೇಶದಲ್ಲೇ ಮೂರನೇ ಸ್ಥಾನಕ್ಕೆ ಬಂದಿದೆ. ಗುಪ್ತಚರ ದಳ ಹಾಗೂ ಪೊಲೀಸ್ ಇಲಾಖೆ ಸತ್ತಿದೆಯೋ, ಬದುಕಿದೆಯೋ ಎಂಬುದೂ ಗೊತ್ತಾಗುತ್ತಿಲ್ಲ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.












Click it and Unblock the Notifications