ವಿಧಾನಸಭೆಯ ಒಳಗೆ ಸಾವರ್ಕರ್ ಭಾವಚಿತ್ರವನ್ನು ತೆಗೆಯುವ ಕುರಿತು ಮಹತ್ವದ ಮಾಹಿತಿ ನೀಡಿದ ಸಿದ್ದರಾಮಯ್ಯ
ಬೆಳಗಾವಿ, ಡಿಸೆಂಬರ್ 05: ಸುವರ್ಣಸೌಧದಲ್ಲಿರುವ ವೀರ ಸಾರ್ವಕರ್ ಫೋಟೋ ತೆಗೆಯಲು ಕೈ ಪಾಳಯದಲ್ಲಿ ಚರ್ಚೆ ನಡೆಯುತ್ತಿದೆ ಎನ್ನಲಾಗಿದ್ದು, ಹಿಂದೆ ಬಿಜೆಪಿ ಸರ್ಕಾರವಿದ್ದ ವೇಳೆ ಸಾವರ್ಕರ್ ಫೋಟೋವನ್ನ ಬಿಜೆಪಿ ಸರ್ಕಾರ ಹಾಕಿತ್ತು. ವೀರ್ ಸಾವರ್ಕರ್ ಸ್ವತಂತ್ರ ಹೋರಾಟಗಾರರು ಎಂದು ಹೇಳಿದ ಬಿಜೆಪಿ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿಸ ಕಾಂಗ್ರೆಸ್ ಪ್ರತಿಭಟನೆಯನ್ನು ಸಹ ಈ ಹಿಂದೆ ನಡೆಸಿದ್ದು, ಇದೀಗ ಚರ್ಚೆ ಹುಟ್ಟಿಕೊಂಡಿದೆ.
ಈ ಕುರಿತು ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ವಿಧಾನಸಭೆಯ ಒಳಗೆ ಸಾವರ್ಕರ್ ಭಾವಚಿತ್ರವನ್ನು ತೆಗೆಯುವ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿ, ಈ ವಿಷಯದ ಬಗ್ಗೆ ಸಭಾಧ್ಯಕ್ಷರು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಹೇಳಿದ್ದಾರೆ.

ಸಚಿವ ಜಮೀರ್ ಅಹ್ಮದ್ ಅವರು ಮುಸ್ಲಿಂ ಸಮುದಾಯದ ಸಭಾಧ್ಯಕ್ಷರಿಗೆ ಎಲ್ಲರೂ ತಲೆಬಾಗಬೇಕು ಎಂಬ ಹೇಳಿಕೆಗೆ ಬಿಜೆಪಿಯವರು ಅವರ ರಾಜಿನಾಮೆಯನ್ನು ಕೇಳುತ್ತಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಸಚಿವ ಜಮೀರ್ ಅಹ್ಮದ್ ಅವರು ಉದ್ದೇಶಪೂರ್ವಕವಾಗಿ ಈ ಹೇಳಿಕೆಯನ್ನು ನೀಡಿಲ್ಲ ಎಂದ ಅವರು, ತೆಲಂಗಾಣ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದ್ದು, ಇನ್ನುಳಿದ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಗೆಲ್ಲಲು ಸಾಧ್ಯವಾಗಿಲ್ಲ. ಜನರ ತೀರ್ಮಾನವನ್ನು ಗೌರವಿಸುವ ಜೊತೆಗೆ ಸೋಲಿನ ಕಾರಣಗಳ ಬಗ್ಗೆ ಚಿಂತನೆ ಮಾಡಲಾಗುವುದು
ಸಮಾಜದಲ್ಲಿ ವೈವಿದ್ಯತೆ ಇದೆ. ಸಹಿಷ್ಣತೆ ಮತ್ತು ಸಹಬಾಳ್ವೆಯ ಸಂಸ್ಕಾರವನ್ನು ಪಾಲಿಸಿದರೆ ಸಮಾಜದಲ್ಲಿ ಅಶಾಂತಿ ಮತ್ತು ಅಪನಂಬಿಕೆಯ ವಾತಾವರಣ ಇಲ್ಲವಾಗುತ್ತದೆ. ಹುಟ್ಟುವಾಗ ವಿಶ್ವ ಮಾನವರಾಗಿರುವ ಎಲ್ಲರೂ ಕೊನೆಯವರೆಗೂ ವಿಶ್ವ ಮಾನವರಾಗಿಯೇ ಉಳಿಯಬೇಕು.

ಸಯ್ಯದ್ ತಾಜುದ್ದೀನ್ ಖಾದ್ರಿ ಅವರು ತಮ್ಮ ತಂದೆಯಂತೆಯೇ, ಸೂಫಿ ಧರ್ಮದ ಆಶಯದಂತೆ ವಿಶ್ವ ಮಾನವರನ್ನು ಸೃಷ್ಟಿಸುವ ಮಹೋನ್ನತ ಕಾರ್ಯವನ್ನು ನಡೆಸುತ್ತಿದ್ದಾರೆ. ಪರಸ್ಪರ ಪ್ರೀತಿ , ವಿಶ್ವಾಸ ಮತ್ತು ಬಾಂದವ್ಯದ ವಾತಾವರಣ ಸೃಷ್ಟಿಸುತ್ತಿರುವ ಖಾದ್ರಿ ಮತ್ತು ಇಂತಹ ಸೂಫಿ ಸಂತರಿಗೆ ಕೋಟಿ, ಕೋಟಿ ನಮನ ಎಂದು ಮೆಚ್ಚುಗೆ ಸೂಚಿಸಿದರು.
ವೈಚಾರಿಕತೆ ಮತ್ತು ಪ್ರತಿಯೊಬ್ಬರನ್ನೂ ಮಾನವೀಯಗೊಳಿಸುವ ಶಿಕ್ಷಣ ಇಂದಿನ ಅಗತ್ಯ. 850 ವರ್ಷಗಳ ಹಿಂದೆಯೇ ಬಸವಾದಿ ಶರಣರು, "ಇವ ನಮ್ಮವ ಇವ ನಮ್ಮವ" ಎನ್ನುವ ಅತ್ಯುನ್ನತ ಮಾನವೀಯ ಮೌಲ್ಯವನ್ನು ಸಾರುತ್ತಾ, ಸರ್ವ ಜಾತಿ ಜನಾಂಗದವರು ಸಮನಾಗಿ ಅಕ್ಕ ಪಕ್ಕ ಕೂರುವ ಅನುಭವ ಮಂಟಪವನ್ನು ನಿರ್ಮಿಸಿದರು. ಈ ಎರಡು ದಿನಗಳ ಸಮಾವೇಷದಲ್ಲಿ ಸೂಫಿಗಳ ಆಶಯವನ್ನು ಇನ್ನಷ್ಟು ಹೆಚ್ಚು ಪ್ರಚಾರ ಮಾಡುವಂತಾಗಲಿ ಎಂದು ಆಶಿಸಿದರು. ಅತ್ಯುನ್ನತ ಮಾನವೀಯ ಮೌಲ್ಯ ಸಾರಿದ ಸೂಫಿ ಸಂತ ಹಜರತ್ ಬಾದ್ ಶಾ ಪೀರಾನ್ ದರ್ಗಾದ ಅಭಿವೃದ್ಧಿಗೆ ಅಗತ್ಯ ಅನುದಾನ ನೀಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.
ಅಲ್ಹಜ್ ಸಯ್ಯದ್ ತಾಜುದ್ದೀನ್ ಖಾದ್ರಿ ಅಲ್ ಜಿಲಾನಿ, ಗುಲ್ಬರ್ಗಾ ಷರೀಫ್ ನ ಹಜರತ್ ಕ್ವಾಜಾ ಬಂದನವಾಜ್ ದರ್ಗಾದ ಖುಸ್ರೂ ಹುಸೇನ್ ಸಾಬ್ ಖಿಲಾಬಿ ಅವರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಸಮಾವೇಷದ ಮುಖ್ಯ ಅತಿಥಿಗಳಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್, ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್, ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹಮದ್, ಶಾಸಕರಾದ ಪ್ರಸಾದ್ ಅಬ್ಬಯ್ಯ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಸಹಮದ್ ಸೇರಿ ಹಲವಾರು ಶಾಸಕರು ಮತ್ತು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.












Click it and Unblock the Notifications