ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಕ್ಟೋಬರ್‌ನಲ್ಲಿ ಗ್ರಾ.ಪಂ. ಚುನಾವಣೆ ಫಿಕ್ಸ್‌; ಲಾಕ್‌ಡೌನ್‌ ಫಲಿತಾಂಶ ನಿಶ್ಚಿತ!

|
Google Oneindia Kannada News

ಬೆಂಗಳೂರು, ಜು. 08: ಕೊರೊನಾ ವೈರಸ್‌ ಸಂಕಷ್ಟ, ಲಾಕ್‌ಡೌನ್ ಕುರಿತಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತೆಗೆದುಕೊಂಡಿದ್ದ ತೀರ್ಮಾನಗಳಿಗೆ ರಾಜ್ಯದ ಮತದಾರರು ಅಕ್ಟೋಬರ್ ತಿಂಗಳಿನಲ್ಲಿ ತಮ್ಮ ಪ್ರತಿಕ್ರಿಯೆ ಕೊಡಲು ಅವಕಾಶ ಬಂದಿದೆ.

Recommended Video

Red alert in Kodagu district | Madkeri | Oneindia Kannada

ಹೌದು, ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ಅಕ್ಟೋಬರ್ ತಿಂಗಳಿನಲ್ಲಿ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಮುಂದಾಗಿದೆ. ಹೀಗಾಗಿ ಕೊರೊನಾ ವೈರಸ್ ನಿರ್ವಹಣೆ ಹಾಗೂ ಲಾಕ್‌ಡೌನ್ ಸಂದರ್ಭಗಳಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಕೈಗೊಂಡಿದ್ದ ನೀತಿ-ನಿಯಮಗಳೇ ಚುನಾವಣೆಯ ಪ್ರಮುಖ ವಿಷಯಗಳಾಗಲಿವೆ.

ಎಲ್ಲವನ್ನೂ ಬಿಟ್ಟು, ಗ್ರಾಮ ಪಂಚಾಯಿತಿ ಚುನಾವಣೆಗಳ ಮೇಲಷ್ಟೇ ಏಕೆ ನಿರ್ಬಂಧ?ಎಲ್ಲವನ್ನೂ ಬಿಟ್ಟು, ಗ್ರಾಮ ಪಂಚಾಯಿತಿ ಚುನಾವಣೆಗಳ ಮೇಲಷ್ಟೇ ಏಕೆ ನಿರ್ಬಂಧ?

ವಿರೋಧ ಪಕ್ಷಗಳ ವಿರೋಧದ ಹೊರತಾಗಿಯೂ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಇತ್ತೀಚಿಗೆ ಆಡಳಿತಾಧಿಕಾರಿಗಳನ್ನು ಸರ್ಕಾರ ನೇಮಕ ಮಾಡಿತ್ತು. ಮೊದಲು ನಾಮನಿರ್ದೇಶಿತ ಸದಸ್ಯರ ನೇಮಕಕ್ಕೆ ರಾಜ್ಯ ಬಿಜೆಪಿ ಸರ್ಕಾರ ಮುಂದಾಗಿತ್ತು, ಆದರೆ ಅದಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಆಡಳಿತಾಧಿಕಾರಿಗಳನ್ನು ನೇಮಕ ಮಾಡಲಾಗಿತ್ತು. ಗ್ರಾಮ ಪಂಚಾಯಿತಿ ಚುನಾವಣೆಯ ಸಂಪೂರ್ಣ ಮಾಹಿತಿ ಇಲ್ಲಿದೆ.

ವಿರೋಧಿಸಿದ್ದ ವಿಪಕ್ಷಗಳು

ವಿರೋಧಿಸಿದ್ದ ವಿಪಕ್ಷಗಳು

ಅವಧಿ ಮುಗಿದಿರುವ ರಾಜ್ಯದ 5,800 ಗ್ರಾಮ ಪಂಚಾಯಿತಿಗಳಿಗೆ ನಾಮ ನಿರ್ದೇಶಿತ ಸದಸ್ಯರನ್ನು ನೇಮಕ ಮಾಡಲು ರಾಜ್ಯ ಬಿಜೆಪಿ ಸರ್ಕಾರ ಮುಂದಾಗಿತ್ತು. ಆ ಮೂಲಕ ತನ್ನ ಕಾರ್ಯಕರ್ತರಿಗೆ ಬಿಜೆಪಿ ಹಿಂಬಾಗಿಲಿನಿಂದ ಅವಕಾಶ ಮಾಡಿಕೊಡುತ್ತಿದೆ ಎಂದು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಸದಸ್ಯರ ನಾಮನಿರ್ದೇಶನಕ್ಕೆ ವಿರೋಧ ವ್ಯಕ್ತಪಡಿಸಿದ್ದವು.

ನಾಮನಿರ್ದೇಶನ ವಿರೋಧಿಸಿ ಲಾಕ್‌ಡೌನ್ ಸಂದರ್ಭಧಲ್ಲಿಯೇ ವಿಧಾನಸೌಧದ ಆವರಣದಲ್ಲಿನ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಶಾಸಕರು, ಸಂಶದರು ಹಾಗೂ ನಾಯಕರು ಪ್ರತಿಭಟನೆ ಮಾಡಿದ್ದರು. ಜೊತೆಗೆ ಕಾನೂನು ಹೋರಾಟವನ್ನು ನಡೆಸಿದ್ದರು.

ಆಡಳಿತಾಧಿಕಾರಿಗಳ ನೇಮಕ

ಆಡಳಿತಾಧಿಕಾರಿಗಳ ನೇಮಕ

ಕೊನೆಗೆ ವಿರೋಧಕ್ಕೆ ಮಣಿದಿದ್ದ ರಾಜ್ಯ ಸರ್ಕಾರ ನಾಮ ನಿರ್ದೇಶಿತ ಸದಸ್ಯರ ನೇಮಕದ ಬದಲಿಗೆ ಆಡಳಿತಾಧಿಕಾರಿಗಳ ನೇಮಕ ಮಾಡಲು ಮುಂದಾಗಿತ್ತು. ಹೀಗಾಗಿ ಜೂನ್ 28 ರಿಂದ ಜುಲೈ 29ರ ವರೆಗೆ ಹಂತಹಂತವಾಗಿ ಅವಧಿ ಮುಗಿಯುವ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಲಾಗಿತ್ತು.


ಸದ್ಯ ಅಸ್ತಿತ್ವದಲ್ಲಿರುವ 5,800 ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಈ ಮಧ್ಯೆ ಆಡಳಿತಾಧಿಕಾರಿಗಳ ಬದಲು ಗ್ರಾ.ಪಂ.ಗಳಿಗೆ ಚುನಾವಣೆ ನಡೆಸುವಂತೆ ರಾಜ್ಯ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಕೆಯಾಗಿತ್ತು.

ಗ್ರಾಮ ಪಂಚಾಯಿತಿ ಚುನಾವಣೆ: ಚುನಾವಣಾ ಆಯೋಗದ ಮಹತ್ವದ ನಿರ್ಧಾರಗ್ರಾಮ ಪಂಚಾಯಿತಿ ಚುನಾವಣೆ: ಚುನಾವಣಾ ಆಯೋಗದ ಮಹತ್ವದ ನಿರ್ಧಾರ

ಲಾಕ್‌ಡೌನ್ ಹಿನ್ನೆಲೆ ಸ್ಥಗಿತ

ಲಾಕ್‌ಡೌನ್ ಹಿನ್ನೆಲೆ ಸ್ಥಗಿತ

ಲಾಕ್‌ಡೌನ್ ಹಿನ್ನೆಲೆಯಲ್ಲಿ ಚುನಾವಣೆ ಮುಂದೂಡಲು ಸರ್ಕಾರ ನಿರ್ಧಾರ ಮಾಡಿತ್ತು. ಆದರೆ ಪಂಚಾಯತ್ ರಾಜ್ ಅಧಿನಿಯಮದಂತೆ ಕಾಲಕಾಲಕ್ಕೆ ಚುನಾವಣೆ ನಡೆಯಲೇ ಬೇಕೆಂದು ರಿಟ್ ಅರ್ಜಿ ಸಲ್ಲಿಕೆಯಾಗಿತ್ತು.

ಹೀಗಾಗಿ ಚುನಾವಣೆ ನಡೆಸುವ ಬಗ್ಗೆ ಅಭಿಪ್ರಾಯ ತಿಳಿಸುವಂತೆ ರಾಜ್ಯ ಚುನಾವಣಾ ಆಯೋಗ ಜಿಲ್ಲಾಧಿಕಾರಿಗಳಿಗೆ ಸೂಚಿಸಿತ್ತು. ಇದೀಗ ಜಿಲ್ಲಾಧಿಕಾರಿಗಳು ಚುನಾವಣೆ ನಡೆಸುವ ಬಗ್ಗೆ ಆಯೋಗಕ್ಕೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

ಅಕ್ಟೋಬರ್‌ನಲ್ಲಿ ಚುನಾವಣೆ

ಅಕ್ಟೋಬರ್‌ನಲ್ಲಿ ಚುನಾವಣೆ

ಇದೀಗ ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್‌ಗೆ ಕೊಟ್ಟಿರುವ ಮಾಹಿತಿಯಂತೆ ಅಕ್ಟೋಬರ್ ತಿಂಗಳಿನಲ್ಲಿ ಚುನಾವಣೆ ನಡೆಸಲು ಮುಂದಾಗಿದೆ. ಲಾಕ್‌ಡೌನ್ ಹಿನ್ನೆಲೆಯಲ್ಲಿ ಗ್ರಾ.ಪಂ. ಚುನಾವಣೆಗೆ ಮತದಾರರ ಪಟ್ಟಿ ತಯಾರಿಸುವುದನ್ನು ತಾತ್ಕಾಲಿಕವಾಗಿ ನಿಲ್ಲಿಸುವಂತೆ ರಾಜ್ಯ ಚುನಾವಣಾ ಆಯೋಗ ಸೂಚಿಸಿತ್ತು.

ಆದರೆ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಕೆಯಾಗಿದ್ದು, ಈ ಸಂಬಂಧ ಜೂನ್ 24ರಂದು ನಡೆದ ಸಬೆಯಲ್ಲಿ ಜಿಲ್ಲಾಧಿಕಾರಿಗಳು ಕೊಟ್ಟಿದ್ದ ಅಭಿಪ್ರಾಯದಂತೆ ಅಕ್ಟೋಬರ್ ತಿಂಗಳಿನಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ ಚುನಾವಣೆ ನಡೆಸುವ ಬಗ್ಗೆ ಹೈಕೋರ್ಟ್‌ ಗಮನಕ್ಕೆ ಆಯೋಗ ತಂದಿದೆ. ಅದರಂತೆ,

* 13/07/2020 ರಿಂದ 18/07/2020ರ ವರೆಗೆ ಮತದಾರರನ್ನು ಗುರುತಿಸುವುದು.

* 20/07/2020 ರಿಂದ 29/07/2020ರ ವರೆಗೆ ಕ್ಷೇತ್ರ ವ್ಯಾಪ್ತಿಯಲ್ಲಿ ಮನೆ ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿಯಲ್ಲಿನ ಮತದಾರರನ್ನು ಗುರುತಿಸುವುದು. From to Matrix ಪಟ್ಟಿಯನ್ನು ತಯಾರಿಸಿ ಮುದ್ರಕರಿಗೆ ನೀಡುವುದು.


* 30/07/2020 ರಿಂದ 05/08/2020 ಮುದ್ರಕರಿಂದ ಮೊದಲ ಪಟ್ಟಿ ಪಡೆದುಕೊಂಡು ಕ್ಷೇತ್ರದಲ್ಲಿ ಮತ್ತೊಮ್ಮೆ ಪರಿಶೀಲನೆ ನಡೆಸುವುದು.

* 06/08/2020: ಪರಿಶೀಲನೆ ಬಳಿಕ ಆಗಬೇಕಾಗಿರುವ ಬದಲಾವಣೆಗಳನ್ನು ಮುದ್ರಕರಿಂದ ಮಾಡಿಸುವುದು. ಮತದಾರರ 10 ಕರಡು ಪ್ರತಿಗಳನ್ನು ಮುದ್ರಕರಿಂದ ಪಡೆದುಕೊಳ್ಳುವುದು.

* 07/08/2020-ಸಂದಂಧಪಟ್ಟ ಕಚೇರಿಗಳಲ್ಲಿ ಮತದಾರರ ಪಟ್ಟಿಯನ್ನು ಪ್ರಕಟಿಸುವುದು.

* 14/08/2020-ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನ.

* 24/08/2020-ಆಕ್ಷೇಪಣೆಗಳನ್ನು ಇತ್ಯರ್ಥ ಪಡಿಸಲು ಕೊನೆಯ ದಿನ.

* 30/08/2020-ಆಕ್ಷೇಪಣೆ ಇತ್ಯರ್ಥ ಪಡಿಸಿದ ಬಳಿಕ ಮುದ್ರಕರಿಂದ ಬದಲಾವಣೆ ಮಾಡಿಸಿ, ಚೆಕ್ ಲಿಸ್ಟ್‌ ಪಡೆದು ಕ್ಷೇತ್ರದಲ್ಲಿ ಮತ್ತೊಮ್ಮೆ ಪರಿಶೀಲನೆ ಮಾಡುವುದು.

* 31/08/2020-ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟ ಮಾಡಬೇಕೆಂದು ರಾಜ್ಯ ಚುನಾವಣಾ ಆಯೋಗ ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ.

English summary
The state election commission is set to hold elections for the state's gram panchayats in October. Thus, the major issues of the election are the policies of the state and central governments in the context of coronavirus and lockdown.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X