ರಾಜ್ಯದಲ್ಲಿ ಹೆಚ್ಚಿದ ಡೆಂಗ್ಯೂ ಅಬ್ಬರ: ನಿಯಂತ್ರಣಕ್ಕೆ ರಾಜ್ಯ ಸರ್ಕಾರದಿಂದ ಹೊಸ ನಿಯಮ
ಬೆಂಗಳೂರು, ಸೆಪ್ಟೆಂಬರ್ 04: ಮಳೆಗಾಲ ಆರಂಭವಾಗುತ್ತಿದ್ದಂತೆ ರಾಜ್ಯದಲ್ಲಿ ಸಾಂಕ್ರಾಮಿಕ ರೋಗಗಳ ಹಾವಳಿಯೂ ಹೆಚ್ಚಾಗಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಡೆಂಗ್ಯೂ ಅಬ್ಬರ ಜೋರಾಗಿದ್ದು, ರಾಜ್ಯದ ವಿವಿಧೆಡೆ ಸಾವುಗಳು ಕೂಡ ಸಂಭವಿಸುತ್ತಿದೆ. ಹಿಂದಿನ ಕಳೆದ ಕೆಲವು ವರ್ಷಗಳಿಗಿಂತ ಈ ಬಾರಿ ಡೆಂಗ್ಯೂ ಜ್ವರ ಹೆಚ್ಚಿನ ಪ್ರಮಾಣದಲ್ಲಿ ಕಾಣಿಸಿಕೊಳ್ಳುತ್ತಿದೆ.
ಈ ಹಿನ್ನೆಲೆಯಲ್ಲಿ ಡೆಂಗ್ಯೂ ಪ್ರಕರಣಗಳ ಹೆಚ್ಚಳದಿಂದಾಗಿ ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಡೆಂಗ್ಯೂವನ್ನು ಸಾಂಕ್ರಾಮಿಕ ರೋಗವೆಂದು ಘೋಷಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅಲ್ಲದೇ ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಕೆಲವು ನಿಯಮಗಳನ್ನು ಜಾರಿಗೊಳಿಸಿದೆ.

ರಾಜ್ಯ ಸರ್ಕಾರದ ಹೊಸ ಸೂಚನೆ ಈ ಕೆಳಗಿನಂತಿದೆ.
• ಎಲ್ಲಾ ಭೂಮಾಲೀಕರು, ಒತ್ತುವರಿದಾರರು ಮತ್ತು ಬಿಲ್ಡರ್‌ಗಳು ತಮ್ಮ ಆವರಣದಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿಯನ್ನು ತಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು.
• ನಿಯಮಗಳನ್ನು ಅನುಸರಿಸಲಾಗುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಅಧಿಕೃತ ಅಧಿಕಾರಿಗಳು ಖಾಲಿ ಸ್ಥಳಗಳು, ಕಟ್ಟಡಗಳು, ನೀರಿನ ಟ್ಯಾಂಕ್‌ಗಳು, ಉದ್ಯಾನವನಗಳು ಮತ್ತು ಆಟದ ಮೈದಾನಗಳನ್ನು ನಿಯಮಿತವಾಗಿ ತಪಾಸಣೆಗಳನ್ನು ನಡೆಸುತ್ತಾರೆ.
• ಸೊಳ್ಳೆ ತಡೆಗಟ್ಟುವ ಕ್ರಮಗಳನ್ನು ಅನುಸರಿಸಲು ವಿಫಲವಾದರೆ ಸಕ್ಷಮ ಪ್ರಾಧಿಕಾರದಿಂದ ದಂಡ ವಿಧಿಸಲಾಗುತ್ತದೆ.
ಸರ್ಕಾರದ ಈ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರು ಅನುಸರಿಸಲು ಮತ್ತು ಡೆಂಗ್ಯೂ ಹರಡುವಿಕೆಯನ್ನು ನಿಯಂತ್ರಿಸಲು ನಮ್ಮೊಂದಿಗೆ ಸಹಕರಿಸಬೇಕು ಈ ಮಹಾಮಾರಿಯನ್ನು ತೊಲಗಿಸುವಲ್ಲಿ ನಿಮ್ಮ ಸಹಕಾರ ಬಹುಮುಖ್ಯ. ಡೆಂಗ್ಯೂ ತಡೆಗೆ ಒಟ್ಟಾಗಿ ಕೆಲಸ ಮಾಡೋಣ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications