ಕಾಂಗ್ರೆಸ್ಸಿಗರ ಕುರ್ಚಿ ಕಾದಾಟ; ಸಿಎಂ ಕುರ್ಚಿಗಾಗಿ ಸಿದ್ದು, ಡಿಕೆಶಿ ಕಚ್ಚಾಟದಿಂದ ಅಭಿವೃದ್ಧಿಯೇ ಇಲ್ಲ: ವಿಜಯೇಂದ್ರ ಹೇಳಿದ್ದೇನು?
ಚಿತ್ರದುರ್ಗ: ಕಾಂಗ್ರೆಸ್ಸಿಗರ ಕುರ್ಚಿ ಕಾದಾಟದಿಂದ ರಾಜ್ಯದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ರಾಜ್ಯದಲ್ಲಿ ನಿಜವಾಗಿ ಏನೂ ಅಭಿವೃದ್ಧಿ ಆಗಿಲ್ಲ; ಕಾಂಗ್ರೆಸ್ಸಿನ ವಿರುದ್ಧ ಜನರು ಹಿಡಿಶಾಪ ಹಾಕುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ಕೊಟ್ಟರು. ನಿನ್ನೆ ಜರ್ಮನಿಯ ಚಾನ್ಸೆಲರ್ ಕರ್ನಾಟಕಕ್ಕೆ ಬಂದಿದ್ದರು. ಜರ್ಮನಿಯು ಉತ್ಪಾದನಾ ಹಬ್ ಆಗಿರುವ ತಂತ್ರಜ್ಞಾನದ ದೇಶ. ಅಂಥ ದೇಶದ ಚಾನ್ಸೆಲರ್ ಕರ್ನಾಟಕಕ್ಕೆ ಬಂದರೆ, ಇವರಲ್ಲಿ ಒಬ್ಬರು ಸಿಎಂ ಕುರ್ಚಿ ಉಳಿಸಿಕೊಳ್ಳಲು, ಇನ್ನೊಬ್ಬರು ಅದೇ ಕುರ್ಚಿ ಕಸಿದುಕೊಳ್ಳಲು ಹೋಗಿ ರಾಹುಲ್ ಗಾಂಧಿ ಜೊತೆ ನಿಂತುಕೊಂಡಿದ್ದಾರೆ. ಇದರಂದ ರಾಜ್ಯದ ಪರಿಸ್ಥಿತಿ ಏನಾಗಬೇಕು ಎಂದು ಕೇಳಿದರು.

ಇದೆಲ್ಲವನ್ನೂ ರಾಜ್ಯದ ಜನರು ಗಮನಿಸುತ್ತಿದ್ದಾರೆ. ಬರುವ ದಿನಗಳಲ್ಲಿ ಉತ್ತರ ನೀಡುತ್ತಾರೆ ಎಂದು ತಿಳಿಸಿದರು. ಕಾಂಗ್ರೆಸ್ಸಿನಲ್ಲಿ ಆಂತರಿಕ ಕಚ್ಚಾಟ ಇದೆ. ಒಬ್ಬರು ಕುರ್ಚಿ ಉಳಿಸಿಕೊಳ್ಳಲು ಕಾತುರದಲ್ಲಿದ್ದಾರೆ. ನನ್ನ ತಾಳ್ಮೆ ಕೆಣಕಬೇಡಿ; ನಾನು ಸಿಎಂ ಆಗಬೇಕೆಂದು ಉಳಿದವರು ರೆಡಿ ಆಗಿದ್ದಾರೆ ಎಂದು ಬಿ ವೈ ವಿಜಯೇಂದ್ರ ಅವರು ಹೇಳಿದರು.
ಇನ್ನೂ ಜನಾರ್ದನ ರೆಡ್ಡಿ, ಶ್ರೀರಾಮುಲು ಅವರಷ್ಟೇ ಅಲ್ಲ; ರಾಜ್ಯದ ಪ್ರಮುಖರ ಜೊತೆ ಚರ್ಚೆ ಮಾಡಿದಾಗ ನಾವೆಲ್ಲರೂ ಬಳ್ಳಾರಿ ಪಾದಯಾತ್ರೆ ಮಾಡುವುದು ಒಳ್ಳೆಯದು ಎಂಬ ಅಭಿಪ್ರಾಯ ಬಹುತೇಕ ಎಲ್ಲರದೂ ಆಗಿದೆ. ವರಿಷ್ಠರ ಜೊತೆ ಚರ್ಚಿಸಿ ತೀರ್ಮಾನಿಸಬೇಕಾಗಿದೆ ಎಂದು ನುಡಿದರು. ನಾನು ಈಗಾಗಲೇ ಈ ಕುರಿತು ಪಕ್ಷದ ದೆಹಲಿ ವರಿಷ್ಠರಿಗೆ ಮಾತನಾಡಿದ್ದೇನೆ. ಇವತ್ತು, ನಾಳೆಯೊಳಗೆ ಅದರ ಬಗ್ಗೆ ಸಂದೇಶವುಳ್ಳ ಮಾಹಿತಿ ಬರಲಿದೆ ಎಂದು ತಿಳಿಸಿದರು.
17ರಂದು ಬೃಹತ್ ಹೋರಾಟಕ್ಕೆ ಜನಾರ್ದನ ರೆಡ್ಡಿ, ಶ್ರೀರಾಮುಲು, ಪಕ್ಷದ ಹಿರಿಯ ನಾಯಕರು ಬರಲಿದ್ದಾರೆ. ಕಾಂಗ್ರೆಸ್ ಸರಕಾರದ ವೈಫಲ್ಯಗಳು, ಭ್ರಷ್ಟಾಚಾರ, ರಾಜ್ಯದಲ್ಲಿನ ಅರಾಜಕತೆ ಸೃಷ್ಟಿ, ರಾಜ್ಯದ ರೈತರ ಸಮಸ್ಯೆ, ಡ್ರಗ್ಸ್ ಹಾವಳಿ- ಇವೆಲ್ಲ ವಿಚಾರಗಳನ್ನು ತೆಗೆದುಕೊಂಡು ರಾಜ್ಯದಲ್ಲಿ ವಿವಿಧ ಹಂತದ ಹೋರಾಟ ಮಾಡಲು ಪಕ್ಷ ಈಗಾಗಲೇ ನಿರ್ಧರಿಸಿದೆ ಎಂದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಈ ಸಂದರ್ಭದಲ್ಲಿ ಬಳ್ಳಾರಿಯಲ್ಲಿ ಬೃಹತ್ ಹೋರಾಟವನ್ನು ಇದೇ 17ರಂದು ನಾವು ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಒಂದು ಒಳ್ಳೆಯ ಉದ್ದೇಶ ಇಟ್ಟುಕೊಂಡು ಮನ್ ರೇಗಾ ಬದಲು ವಿಕಸಿತ ಭಾರತ ಜಿ ರಾಮ್ ಜಿ ಎಂದು ಕೇವಲ ಹೆಸರು ಬದಲಿದ್ದಾರೆ. ಮಹಾತ್ಮ ಗಾಂಧೀಜಿ ಅವರ ಗ್ರಾಮ ಸ್ವರಾಜ್ಯ ಅಥವಾ ಗ್ರಾಮಗಳ ಅಭಿವೃದ್ಧಿ ಆದಾಗ ದೇಶ ಅಭಿವೃದ್ಧಿ ಆಗುತ್ತದೆ ಎಂಬ ಕನಸು ನನಸು ಮಾಡುವ ನಿಟ್ಟಿನಲ್ಲಿ ಹೊರಟಿದ್ದಾರೆ. 2006ರಲ್ಲಿ ಆರಂಭವಾದ ಮನ್‍ರೇಗಾ ಯೋಜನೆಯಡಿ ಹಗರಣಗಳು, ಭ್ರಷ್ಟಾಚಾರ, ಕೂಲಿಕಾರರಿಗೆ ಹಣ ತಲುಪದೇ ಇರುವುದು ನಡೆದಿತ್ತು ಎಂದು ಹೇಳಿದರು.
ವಿಬಿ ಜಿ ರಾಮ್ ಜಿ ಅಡಿಯಲ್ಲಿ ಗ್ರಾಮೀಣ ಭಾಗದಲ್ಲಿ ಆಸ್ತಿ ನಿರ್ಮಾಣ, ಅಭಿವೃದ್ಧಿ ಆಗಬೇಕು. ರೈತರ ಅನಾನುಕೂಲ ತಪ್ಪಿಸಲು ಕೃಷಿ ಚಟುವಟಿಕೆ ಸಂದರ್ಭದಲ್ಲಿ 60 ದಿನಗಳ ಕಾಲ ಕೂಲಿಗೆ ಅವಕಾಶ ನೀಡದೇ ರಜೆ ಕೊಟ್ಟಿದ್ದಾರೆ. ಹಿಂದೆಯೂ ಗ್ರಾಮ ಪಂಚಾಯಿತಿ ಮಟ್ಟದಲ್ಲೇ ತೀರ್ಮಾನ ಆಗುತ್ತಿತ್ತು. ಮುಂದಿನ ದಿನಗಳಲ್ಲೂ ಅದೇ ಆಗಲಿದೆ.
ಕಾಂಗ್ರೆಸ್ ಪಕ್ಷ, ಸಿದ್ದರಾಮಯ್ಯನವರು, ರಾಹುಲ್ ಗಾಂಧಿಯವರು ಜಿ ರಾಮ್ ಜಿ ಕುರಿತು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ, ರಾಜ್ಯದಲ್ಲಿ ಕಾಂಗ್ರೆಸ್ ಬಗ್ಗೆ ಜನರ ವಿಶ್ವಾಸ ಹೊರಟುಹೋಗಿದೆ. ಹಾಗಾಗಿ, ಮಹಾತ್ಮ ಗಾಂಧೀಜಿ ಅವರನ್ನು ಎರಡನೇ ಬಾರಿಗೆ ಕೊಲೆ ಮಾಡುತ್ತಿದ್ದಾರೆಂದು ಅಪಪ್ರಚಾರ ಮಾಡಲು ಹೊರಟಿದ್ದಾರೆ. ಇದಕ್ಕೆ ಬಿಜೆಪಿ, ರಾಜ್ಯದ ಎಲ್ಲ ತಾಲ್ಲೂಕು ಕೇಂದ್ರಗಳು, ಗ್ರಾಮೀಣ ಭಾಗದಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಿದೆ ಎಂದು ಹೇಳಿದರು.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Abdul Jabbar: ಕಾಂಗ್ರೆಸ್ ಪಕ್ಷದಿಂದ ಅಬ್ದುಲ್ ಜಬ್ಬಾರ್ ಅಮಾನತು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಕ್ರಮ -
Government Employees: ಸರ್ಕಾರಿ ನೌಕರರ ವರ್ಗಾವಣೆ ಕುರಿತು ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು












Click it and Unblock the Notifications