• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸುವರ್ಣಸೌಧದಲ್ಲಿ ಈ ವರ್ಷವೇ ಚೆನ್ನಮ್ಮ, ರಾಯಣ್ಣನ ಪ್ರತಿಮೆ: ಬೊಮ್ಮಾಯಿ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 02: ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಇದೇ ವರ್ಷ ಬೆಳಗಾವಿ ಸುವರ್ಣಸೌಧದಲ್ಲಿ ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಳಗಾವಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭಾನುವಾರ ಕಿತ್ತೂರು ಉತ್ಸವದ ಪೂರ್ವಭಾವಿಯಾಗಿ ಸಮಾರಂಭ ಆಯೋಜಿಸಲಾಗಿತ್ತು. ಅದರಲ್ಲಿ 'ಕಿತ್ತೂರು ಚೆನ್ನಮ್ಮಾಜಿ ವಿಜಯ ಜ್ಯೋತಿ ಯಾತ್ರೆಗೆ ಚಾಲನೆ ನೀಡಿ ಮುಖ್ಯಮಂತ್ರಿಗಳ ಮಾತನಾಡಿದರು.

ಕೊನೆಗೂ ನಿಟ್ಟುಸಿರು ಬಿಟ್ಟ ಲಾರಿ ಚಾಲಕರು; ಬೆಳಗಾವಿ ಡಿಸಿ ಸಂಧಾನ ಯಶಸ್ವಿ ಕೊನೆಗೂ ನಿಟ್ಟುಸಿರು ಬಿಟ್ಟ ಲಾರಿ ಚಾಲಕರು; ಬೆಳಗಾವಿ ಡಿಸಿ ಸಂಧಾನ ಯಶಸ್ವಿ

ಕಿತ್ತೂರು ಉತ್ಸವ ಪ್ರಾರಂಭವಾಗಿ 25ರಿಂದ 30 ವರ್ಷ ಆಗಿದೆ. ಮಧ್ಯೆ ಮಧ್ಯೆ ಕುಂಟುತ್ತಾ ಇದ್ದ ಉತ್ಸವಕ್ಕೆ ನಮ್ಮ ಸರ್ಕಾರ ಅಧಿಕೃತ ಆದೇಶದ ಮೂಲಕ ರಾಜ್ಯ ಮಟ್ಟದಲ್ಲಿ ಕಿತ್ತೂರು ಉತ್ಸವ ಆಚರಣೆ ಮಾಡುತ್ತಿದೆ. ಹಿಂದೆ ತಾವು ಬೆಳಗಾವಿ ಉಸ್ತುವಾರಿ ಸಚಿವರಾಗಿದ್ದ ಸಂದರ್ಭದಲ್ಲಿ ಹೆಚ್ಚಿನ ಅನುದಾನ ನೀಡಿ 3 ದಿನಗಳ ಕಿತ್ತೂರು ಉತ್ಸವಕ್ಕೆ ಚಾಲನೆ ನೀಡಿದ್ದನ್ನು ಸ್ಮರಿಸಿದರು.

ಆಗ ಜ್ಯೋತಿ ಕಿತ್ತೂರಿನಿಂದ ಬೆಂಗಳೂರಿಗೆ ಚೆನ್ನಮ್ಮಳ ಸಂದೇಶ ಹೊತ್ತು ಬರುತ್ತಿತ್ತು. ಈಗ ಕರ್ನಾಟಕದ ರಾಜಧಾನಿ ಬೆಂಗಳೂರಿನಿಂದ ಕಿತ್ತೂರು ಸಂಸ್ಥಾನದ ರಾಜಧಾನಿ ಕಿತ್ತೂರಿಗೆ ಜ್ಯೋತಿ ಯಾತ್ರೆ ಬೆಳಸಿದೆ ಎಂದು ಅವರು ಹೇಳಿದರು.

ಸ್ವಾತಂತ್ರ್ಯ ಹೋರಾಟದ ಮೊದಲ ವೀರ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ ಎಂಬುದಾಗಿ ನಮ್ಮ ಕರ್ನಾಟಕ ವಿಶ್ವವಿದ್ಯಾಲಯ ಗೆಜೆಟಿಯರ್ ನಲ್ಲಿ ಪ್ರಕಟಗೊಂಡಿದೆ. ಇದನ್ನು ರಾಷ್ಟ್ರೀಯ ಆರ್ಚೈವ್ಸ್ ದಾಖಲೆಗಳಿಗೂ ಸಹ ಕಳಿಸಿಕೊಟ್ಟು ನೋಂದಣಿ ಮಾಡಿಸುತ್ತೇವೆ ಎಂದರು.

ಕಿತ್ತೂರಿನ ಸಮಗ್ರ ಅಭಿವೃದ್ಧಿಗೆ ಕ್ರಮ; ಕಿತ್ತೂರಿನಲ್ಲಿ ಶಿಥಿಲಗೊಡಿರುವ ಈಗಿರುವ ಅರಮನೆಯನ್ನು ಗಟ್ಟಿಗೊಳಿಸಿ, ಪಕ್ಕದಲ್ಲೇ ಹೊಸ ಅರಮನೆಯನ್ನೂ ಕಟ್ಟಿಸಲು ತೀರ್ಮಾನ ಮಾಡಲಾಗಿದೆ. ಇದರ ಜತೆಗೆ ಕಿತ್ತೂರನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ ಮಾಡಲು ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಬೈಲಹೊಂಗಲ, ಸಂಗೊಳ್ಳಿ ಸೇರಿದಂತೆ ಕಿತ್ತೂರು ಸಂಸ್ಥಾನದ ಪ್ರಾಚೀನ ಕುರುಹುಗಳನ್ನು ಅಭಿವೃದ್ಧಿಪಡಿಸುವ ಚಿಂತನೆ ಸರ್ಕಾರಕ್ಕಿದೆ ಎಂದು ವಿವರಿಸಿದರು.

The statue of Kittur Rani Chennamma Sangolli Rayanna in Suvarna Soudha this year CM

ಈಗಾಗಲೇ ಸಂಗೊಳ್ಳಿ ರಾಯಣ್ಣ ಹೆಸರಿನಲ್ಲಿ ಸೈನಿಕ ಶಾಲೆ ಪ್ರಾರಂಭ ಮಾಡಿದ್ದೇವೆ. ಮುಂದಿನ ತಿಂಗಳು ಸೈನಿಕ ಶಾಲೆ ಉದ್ಘಾಟನೆ ಮಾಡುತ್ತೇವೆ. ಇದರ ಜತೆಗೆ ರಾಯಣ್ಣನನ್ನು ನೇಣುಗಂಬಕ್ಕೆ ಹಾಕಿದ ನಂದಗಡ ಸಮಾಧಿ ಸ್ಥಳವನ್ನೂ ಅಭಿವೃದ್ಧಿ ಮಾಡಲಾಗುತ್ತಿದೆ ಎಂದರು.

ಬೆಂಗಳೂರಿನಿಂದ ಭಾನುವಾರ ಪ್ರಾರಂಭವಾದ ವಿಜಯ ಜ್ಯೋತಿ ಯಾತ್ರೆ ಅಕ್ಟೋಬರ್ 23ರಂದು ಕಿತ್ತೂರು ತಲುಪಲಿದೆ.

ಈ ಕಾರ್ಯಕ್ರಮದಲ್ಲಿ ಬೆಳಗಾವಿ ಜಿಲ್ಲೆ ಉಸ್ತುವಾರಿ ಗೋವಿಂದ ಕಾರಜೋಳ, ಸಚಿವ ಎಂಟಿಬಿ ನಾಗರಾಜ್, ಸಾಹಿತಿ ಲೀಲಾದೇವಿ ಆರ್ ಪ್ರಸಾದ್ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ಬಸವರಾಜ ಬೊಮ್ಮಾಯಿ
Know all about
ಬಸವರಾಜ ಬೊಮ್ಮಾಯಿ
English summary
The statue of Kittur Rani Chennamma and Sangolli Rayanna in Belagavi Suvarnasoudha this year, CM Bavaraj Bommai Promised
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X