Janardhana Reddy: ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್; ಶಾಸಕ ಸ್ಥಾನಕ್ಕೆ ಸದ್ಯಕ್ಕಿಲ್ಲ ಕುತ್ತು!
ಬೆಂಗಳೂರು, ಜೂನ್ 11: ಅವಿಭಜಿತ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ನಡೆದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಮತ್ತು ಅವರ ಸಂಬಂಧಿ ಓಬಳಾಪುರಂ ಮೈನಿಂಗ್ ಕಾರ್ಪೊರೇಷನ್ ವ್ಯವಸ್ಥಾಪಕ ನಿರ್ದೇಶಕ ಬಿ.ವಿ. ಶ್ರೀನಿವಾಸ್ ರೆಡ್ಡಿ ಸೇರಿದಂತೆ ನಾಲ್ವರಿಗೆ ಹೈದರಾಬಾದ್‌ನಲ್ಲಿರುವ ಕೇಂದ್ರೀಯ ತನಿಖಾ ದಳ (ಸಿಬಿಐ) ವಿಶೇಷ ನ್ಯಾಯಾಲಯ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಆದರೆ, ಇದೀಗ ಗಂಗಾವತಿ ಬಿಜೆಪಿ ಶಾಸಕರಾಗಿದ್ದ ಗಾಲಿ ಜನಾರ್ದನ ರೆಡ್ಡಿ ಗೆ ತೆಲಂಗಾಣ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಶಿಕ್ಷೆಗೆ ಗುರಿಯಾಗಿದ್ದರು, ಇದೀಗ ತೆಲಂಗಾಣ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಈ ತೀರ್ಪು ಜನಾರ್ದನ ರೆಡ್ಡಿ ಅವರ ಶಾಸಕ ಸ್ಥಾನ ಉಳಿಸಿಕೊಳ್ಳಲು ಸಹಾಯಕವಾಗಿದ್ದು, ರಾಜಕೀಯ ಭವಿಷ್ಯಕ್ಕೆ ಜನಾರ್ದನ ರೆಡ್ಡಿ ಅವರಿಗೆ ಮತ್ತೊಂದು ಅವಕಾಶ ಸಿಕ್ಕಿದಂತಾಗಿದ್ದು, ಜನಾರ್ದನ ರೆಡ್ಡಿ ಅವರಿಗೆ ತೆಲಂಗಾಣ ಹೈಕೋರ್ಟ್ ನೀಡಿರುವ ಜಾಮೀನು ಉಸಿರು ನೀಡಿದಂತಾಗಿದೆ.

ಅಕ್ರಮ ಗಣಿಗಾರಿಕೆ ಹಾಗೂ ಗಡಿ ಒತ್ತುವರಿ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಗಂಗಾವತಿಯ ಶಾಸಕ ಜಿ. ಜನಾರ್ದನ ರೆಡ್ಡಿ ಅವರು ಶಿಕ್ಷೆಗೆ ಗುರಿಯಾಗಿದ್ದರು. ಇದೀಗ ತೆಲಂಗಾಣ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಈ ಮೂಲಕ ಜನಾರ್ಧನ ರೆಡ್ಡಿ ಅವರಿಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದ್ದು, ಅವರ ಶಾಸಕರ ಸ್ಥಾನ ಸದ್ಯಕ್ಕೆ ಉಳಿಯುವ ಸಾಧ್ಯತೆಯಿದೆ.
ಮೇ 30ರಂದು ಹೈದರಾಬಾದ್‌ನ ನಾಮಪಲ್ಲಿ ಸಿಬಿಐ ವಿಶೇಷ ನ್ಯಾಯಾಲಯವು ಜನಾರ್ದನ ರೆಡ್ಡಿ ಸೇರಿದಂತೆ 6 ಮಂದಿ ಆರೋಪಿಗಳಿಗೆ ಶಿಕ್ಷೆ ವಿಧಿಸಿತ್ತು. ಈ ತೀರ್ಪು 2011ರಲ್ಲಿ ನಡೆದ ಓಬಳಾಪುರಂ ಮೈನಿಂಗ್ ಕಂಪನಿ (OMC) ಮೂಲಕ ಗಡಿ ಮೀರಿ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊರಡಿಸಲಾಗಿತ್ತು. ಒಟ್ಟು 850 ಕೋಟಿ ರೂ. ಮೌಲ್ಯದ ಗಣಿ ಸಂಪತ್ತು ಲೂಟಿ ಆರೋಪದಡಿ, ಜನಾರ್ದನ ರೆಡ್ಡಿ 2011ರ ಸೆಪ್ಟೆಂಬರ್ 5ರಂದು ಸಿಬಿಐ ವಶಕ್ಕೆ ಸೇರುವ ಮೂಲಕ 3 ವರ್ಷ 9 ತಿಂಗಳು ಜೈಲುವಾಸ ಅನುಭವಿಸಿದ್ದರು.
ಜನಾರ್ದನ ರೆಡ್ಡಿ ಅವರು ಈ ಹಿಂದೆಯೂ ಜೈಲು ಶಿಕ್ಷೆ ಅನುಭವಿಸಿದ್ದರು. ಮೇ 30 ರಂದು ಸಿಬಿಐ ಕೋರ್ಟ್‌ನ ಆದೇಶದ ವಿರುದ್ಧ ಜನಾರ್ದನ ರೆಡ್ಡಿ ಹೈಕೋರ್ಟ್ ಮೆಟ್ಟಿಲೇರಿದ ಬಳಿಕ, ತೆಲಂಗಾಣ ಹೈಕೋರ್ಟ್ ಇದೀಗ ಸಿಬಿಐ ಕೋರ್ಟ್ ತೀರ್ಪಿಗೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಈ ಮೂಲಕ ಜನಾರ್ದನ ರೆಡ್ಡಿ ಅವರಿಗೆ ರಾಜಕೀಯ ಭವಿಷ್ಯಕ್ಕೆ ಉಸಿರಾಟ ನೀಡಿದ್ದು, ಶಾಸಕರ ಸ್ಥಾನ ಉಳಿಸಿಕೊಳ್ಳುವಲ್ಲಿ ಸಹಾಯಕವಾಗಿದೆ.
-
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ












Click it and Unblock the Notifications