ಟನಲ್ ರಸ್ತೆಗೆ 43 ಸಾವಿರ ಕೋಟಿ ಖರ್ಚು; ಮೆಟ್ರೋ ಪ್ರಯಾಣದರ ಆದಷ್ಟು ಬೇಗ ಇಳಿಸಿ: ತೇಜಸ್ವಿ ಸೂರ್ಯ
ಬೆಂಗಳೂರು,ಅಕ್ಟೋಬರ್ 29: ಬೆಂಗಳೂರಿನ ಟನೆಲ್ ರಸ್ತೆಯು ಕಾಂಗ್ರೆಸ್ ಸರಕಾರದ ಸಾಮಾಜಿಕ ಪಿಡುಗಿನ ನಿವಾರಣೆಗೆ 43 ಸಾವಿರ ಕೋಟಿಯ ಯೋಜನೆ ಎಂದು ಈಗ ಗೊತ್ತಾಗಿದೆ ಎಂದು ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ಟೀಕಿಸಿದ್ದಾರೆ. ಟನೆಲ್ ರಸ್ತೆಗೆ 43 ಸಾವಿರ ಕೋಟಿ ಖರ್ಚು ಆಗಲಿದೆ. ಹೊಸ 18 ಕಿಮೀ ಸುರಂಗ ಮಾರ್ಗ ರಚನೆಯಿಂದ ಬೆಂಗಳೂರಿನ ಎಲ್ಲ ಟ್ರಾಫಿಕ್ ಸಮಸ್ಯೆ ಪರಿಹಾರ ಹೇಗೆ ಸಾಧ್ಯ? ದುರಂತ ನಿಭಾಯಿಸುವುದು ಹೇಗೆ? ಸಾರಿಗೆ ಸಾಧ್ಯತೆ ಕುರಿತು ಅಧ್ಯಯನ ನಡೆದಿಲ್ಲ, ತಜ್ಞರು ಹೇಳಿದ್ದನ್ನೂ ಕೇಳುತ್ತಿಲ್ಲ ಎಂದು ಆಕ್ಷೇಪಿಸಿದರು. ಸಾರ್ವಜನಿಕರ ದುಡ್ಡು ಪೋಲು ಮಾಡುವುದಕ್ಕೆ ಇದಕ್ಕಿಂತ ದೊಡ್ಡ ನಿದರ್ಶನ ಇಲ್ಲ ಎಂದರು.
ವೈಜ್ಞಾನಿಕ ಪರಿಹಾರಗಳನ್ನು ನೀಡಿದ್ದೇವೆ. ಬೆಂಗಳೂರಿನ ಶೇ 70 ಜನರು ಸಾರ್ವಜನಿಕ ಸಾರಿಗೆಯಲ್ಲಿ ಓಡಾಡುವಂತಾಗಬೇಕು. ಆ ನಿಟ್ಟಿನಲ್ಲಿ 5 ಅಂಶಗಳನ್ನು ಮುಂದಿಟ್ಟಿದ್ದೇವೆ. ಎಲ್ಲ ಯೋಜನೆಗಳು ವಿಳಂಬವಾಗಿವೆ ಮತ್ತು ನಿಧಾನವಾಗಿವೆ. ಹೊಸ ಯೋಜನೆಗಳನ್ನು ಆರಂಭಿಸುವ ಮೊದಲು ಬಾಕಿ ಇರುವ ಯೋಜನೆ ಮುಗಿಸಿ. ಕಡಿಮೆ ಸಮಯ, ಕಡಿಮೆ ಖರ್ಚಿನಲ್ಲಿ ಅತಿ ಹೆಚ್ಚು ಜನರಿಗೆ ಪ್ರಯೋಜನ ಲಭಿಸಬೇಕಿದೆ. ಕಾರುಗಳಿಗೆ ಆದ್ಯತೆ ಕೊಡುವ ಹಾಗೆ ಇರಬಾರದು ಎಂದಿರುವುದಾಗಿ ಹೇಳಿದರು.

ಸಾರ್ವಜನಿಕ ಸಾರಿಗೆಗೆ ಆದ್ಯತೆ ಇರಲಿ. ಸಮನ್ವಯತೆಯಿಂದ ಕೆಲಸ ನಡೆಯಲಿ. ನಡೆದುಕೊಂಡು ಓಡಾಡುವ ಸಾರ್ವಜನಿಕರಿಗೆ ಫುಟ್‍ಪಾತ್ ರಸ್ತೆ ಇರಬೇಕು. ಕಳೆದ 3 ವರ್ಷಗಳಿಂದ ರಸ್ತೆಯಲ್ಲಿ ನಡೆದಾಡುವ ಜನರ ಗರಿಷ್ಠ ಸಾವು ಸಂಭವಿಸುತ್ತಿದೆ. ಇದು ಬೆಂಗಳೂರಿನಲ್ಲಿ ಗರಿಷ್ಠ ಪ್ರಮಾಣದಲ್ಲಿದೆ. ಪುಲ್ವಾಮಾ ದಾಳಿಯಲ್ಲಿ ಕರ್ನಾಟಕದ 3 ಜನರು ಸತ್ತಿದ್ದರು. ಅದು ದೊಡ್ಡ ಸುದ್ದಿ ಆಗಿತ್ತು. ಬೆಂಗಳೂರಿನಲ್ಲಿ ಪ್ರತಿದಿನ 15-20 ಜನರು ರಸ್ತೆಯಲ್ಲಿ ನಡೆದುಕೊಂಡು ಹೋಗುವವರು ಸಾಯುತ್ತಾರೆ. ಬೆಂಗಳೂರಿಗೆ ಸಬರ್ಬನ್ ರೈಲು, ಮೆಟ್ರೋ, ಟ್ರ್ಯಾಮ್‍ಗಳು, ರಿಂಗ್ ರೈಲ್ ಬೇಕಿದೆ ಎಂದು ತಿಳಿಸಿದರು.
ಹಳದಿ ಮೆಟ್ರೋ ಮಾರ್ಗ ಆರಂಭವಾದ ಬಳಿಕ ಸಿಲ್ಕ್ ಬೋರ್ಡಿನಲ್ಲಿ ಕಾರುಗಳ ಸಂಚಾರ ದಟ್ಟಣೆ ಶೇ 37ರಷ್ಟು ಕಡಿಮೆ ಆಗಿದೆ ಎಂದು ಸರಕಾರವೇ ಹೇಳಿದೆ. ಇದನ್ನೇ ಗಮನಿಸುವುದಾದರೆ ನಾವು ಮೆಟ್ರೋ ಹೆಚ್ಚಿಸಬೇಕೇ ಅಥವಾ ಕಾರುಗಳ ಸಂಚಾರಕ್ಕೆ ಸುರಂಗ ಮಾರ್ಗ ಮಾಡಬೇಕೇ ಎಂದು ಕೇಳಿದರು. ನೇರಳೆ ಮೆಟ್ರೋ ಮಾರ್ಗದಿಂದ ಶೇ 12ರಿಂದ 14ರಷ್ಟು ಸಾರಿಗೆ ದಟ್ಟಣೆ ಕಡಿಮೆಯಾಗಿದೆ. ಕಾರಿನಲ್ಲಿ ಹೋಗುವವರು ಎ.ಸಿ. ಇರುವ ಮೆಟ್ರೋವನ್ನು ಬಯಸುತ್ತಾರೆ. ತ್ವರಿತವಾಗಿ ಓಡಾಟ ಮತ್ತು ಕಡಿಮೆ ವೆಚ್ಚದ ಪ್ರಯಾಣ ಇದಕ್ಕೆ ಕಾರಣ . ಸಮಗ್ರ ಸಂಚಾರ ಯೋಜನೆಯಡಿ ಬೆಂಗಳೂರಿಗೆ 300 ಕಿಮೀ ಮೆಟ್ರೋ ಆಗಬೇಕೆಂದಿದೆ. ಪ್ರತಿ 3 ನಿಮಿಷಕ್ಕೊಂದು ಮೆಟ್ರೋ ರೈಲು ಓಡಾಡುವಂತಿರಬೇಕು. ಇದು ಬಿಜೆಪಿಯ ಪರ್ಯಾಯ ಸಲಹೆ ಎಂದರು.
300 ಕಿಮೀ ಮೆಟ್ರೋ ಮಾರ್ಗ ಇದ್ದಾಗ ಬೆಂಗಳೂರಿನ ಯಾವುದೇ ಜಾಗದಲ್ಲಿದ್ದರೂ ಕಾಲ್ನಡಿಗೆಯಲ್ಲಿ 5 ನಿಮಿಷ ಹೋದಾಗ ಮೆಟ್ರೋ ಸ್ಟೇಷನ್ ಲಭಿಸುತ್ತದೆ. ಇದರಿಂದ ಯಾರೂ ಟ್ರಾಫಿಕ್‍ನಲ್ಲಿ ಬಳಲುವ ಸಾಧ್ಯತೆ ಇಲ್ಲ. ಖಾಸಗಿ ವಾಹನ ಮನೆಯಲ್ಲಿಟ್ಟು ಮೆಟ್ರೋದಲ್ಲಿ ಓಡಾಡುತ್ತಾರೆ ಎಂದು ತಿಳಿಸಿದರು.ಇದೇ ಮೊತ್ತ ಬಳಸಿದರೆ 5 ವರ್ಷಗಳಲ್ಲಿ ಅಂದರೆ, 2031ರ ಒಳಗೆ 317 ಕಿಮೀ ಮೆಟ್ರೋ ಮಾರ್ಗ ರಚಿಸಲು ಸಾಧ್ಯವಿದೆ. ಆದರೆ, ಸರಕಾರಕ್ಕೆ ಅದರ ಕಡೆ ಆಸಕ್ತಿ ಇಲ್ಲ ಎಂದು ಟೀಕಿಸಿದರು.
ಕೋಣನಕುಂಟೆಯಿಂದ ಒರಾಯನ್ ಮಾಲ್ ಇರುವ ಜಾಗಕ್ಕೆ 4 ಜನ ಒಂದು ಕುಟುಂಬದವರು ಹೋಗಲು ಒಂದು ಕಡೆಯಿಂದ 70 ರೂ. ಟಿಕೆಟ್ ದರ ಇದೆ. 4 ಜನರು ಹೋದಾಗ 280 ರೂ. ಖರ್ಚಾಗುತ್ತದೆ. ಸ್ವಂತ ಕಾರಿನಲ್ಲಿ 160 ರೂ. ವೆಚ್ಚವಾಗುತ್ತದೆ. ಆದರೆ, 75 ನಿಮಿಷ ಬೇಕು. ಸಾರ್ವಜನಿಕ ಸಾರಿಗೆಯನ್ನು ಪ್ರೋತ್ಸಾಹಿಸಬೇಕೇ ಅಥವಾ ಅದರಲ್ಲಿ ಹೋಗುವವರಿಗೆ ಬರೆ ಹಾಕಬೇಕೇ ಎಂದು ತೇಜಸ್ವಿ ಸೂರ್ಯ ಅವರು ಪ್ರಶ್ನಿಸಿದರು.
ಲಾಲ್‍ಬಾಗ್‍ನಿಂದ ಒರಾಯನ್ ಮಾಲ್‍ಗೆ ಗಂಡ, ಹೆಂಡತಿ ಮೆಟ್ರೋದಲ್ಲಿ ಹೋಗುವುದಾದರೆ 100 ರೂ. ದರದಲ್ಲಿ 25 ನಿಮಿಷದಲ್ಲಿ ಹೋಗಬಹುದು. ಬೈಕಿನಲ್ಲಿ ಹೋದರೆ 30 ರೂ. ಖರ್ಚಾಗುತ್ತದೆ. ಜಾಸ್ತಿ ಜನರು ಹೋಗುವಂತೆ ಮೆಟ್ರೋ ದರ ಇರಬೇಕೇ? ಅಥವಾ ಗಗನಚುಂಬಿ ದರವನ್ನೇ ಮೆಟ್ರೋಗೆ ಇಡಬೇಕೇ ಎಂದು ಕೇಳಿದರು. ಮೆಟ್ರೋ ದರವನ್ನು ಆದಷ್ಟು ಬೇಗ ಇಳಿಸಿ; ಈಗ 10 ಲಕ್ಷ ಜನರು ಬೆಂಗಳೂರಿನಲ್ಲಿ ಮೆಟ್ರೋದಲ್ಲಿ ಓಡಾಡುತ್ತಿದ್ದಾರೆ. 45 ಲಕ್ಷ ಜನರು ಬಿಎಂಟಿಸಿಯಲ್ಲಿ ಓಡಾಡುತ್ತಿದ್ದಾರೆ. ಒಟ್ಟು 55 ಲಕ್ಷ ಜನರು ಸಾರ್ವಜನಿಕ ಸಾರಿಗೆಯಲ್ಲಿ ಈಗಾಗಲೇ ಸಂಚರಿಸುತ್ತಾರೆ. ಅವರಿಗಾಗಿ ದರ ಇಳಿಸಿ ಎಂದು ಒತ್ತಾಯಿಸಿದ್ದಾಗಿ ವಿವರಿಸಿದರು. ಆದರೆ, ಕಾರಿಲ್ಲದಿದ್ದರೆ ಹುಡುಗಿ ಸಿಗುವುದಿಲ್ಲ; ಅದಕ್ಕಾಗಿ ಟನೆಲ್ ರಸ್ತೆ ಮಾಡುತ್ತೇವೆ ಎಂದು ಹೇಳಿದ್ದಾಗಿ ತಿಳಿಸಿದರು.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications