ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದಿಗಿಲು ಗೊಳಿಸಿದ ಬಿಜೆಪಿ ಶಾಸಕ ಆನಂದ್ ಮಾಮನಿ ಟ್ವೀಟ್!

|
Google Oneindia Kannada News

ಬೆಂಗಳೂರು, ಜ. 04: ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರೊಬ್ಬರು ಇಟ್ಟಿರುವ ಬೇಡಿಕೆ ಸ್ವತಃ ಬಿಜೆಪಿ ಪ್ರಮುಖರಿಗೆ ದಿಗಿಲು ಮೂಡಿಸಿದೆ. ಹೌದು, ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಂಪುಟ ವಿಸ್ತರಣೆ ಕಗ್ಗಂಟಾಗಿರುವಂತೆ ಬಿಜೆಪಿ ಶಾಸಕರೊಬ್ಬರು ಇಟ್ಟಿರುವ ಬೇಡಿಕೆಯೂ ಕಗ್ಗಂಟಾಗಿದೆ.

ಸಂಪುಟದಲ್ಲಿ ಸಚಿವಸ್ಥಾನ ಸಿಗದ ಹಿನ್ನೆಲೆಯಲ್ಲಿ ಸವದತ್ತಿ ಬಿಜೆಪಿ ಶಾಸಕ ಆನಂದ ಮಾಮನಿ ಟ್ವೀಟರ್‌ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಅವರು ಮಾಡಿರುವ ಟ್ವೀಟ್ ಹೀಗಿದೆ.

"ಇನ್ನಾದರೂ ನನ್ನ ಕ್ಷೇತ್ರವನ್ನು ಹಾಗೂ ನಮ್ಮಂಥವರನ್ನು ಬೆಳೆಸಲು, ಈಗಾಗಲೇ ಸಾಕಷ್ಟು ಬಾರಿ ಇಲ್ಲಿಯವೆರೆಗೆ ಸರ್ಕಾರದಲ್ಲಿ ಅಧಿಕಾರ ಅನುಭವಿಸಿದವರು ಯಾವತ್ತೂ ತಾವು ಪಡೆದ ಸ್ಥಾನಮಾನ ಕಿಂಚಿತ್ತೂ ತ್ಯಜಿಸಲು ಹಿಂದೆಟು ಹಾಕುತ್ತಿರುವುದು ಒಂದೆಡೆಯಾದರೆ, ಪಕ್ಷದ ಮುಖಂಡರೂ ಸಹ ನನ್ನ ಕ್ಷೇತ್ರವನ್ನು ಹಾಗೂ ನಮ್ಮಂಥವರನ್ನು ಬೆಳೆಸಲು ಯಾವುದೇ ಆಸಕ್ತಿ ತೋರಿಸದಿರುವುದು ಇನ್ನೊಂದೆಡೆ. ಇನ್ಮೇಲೆ ಪಕ್ಷ ನಿಷ್ಠರಿಗೆ ಕಾಲವಿಲ್ಲವೇ, ಎಂಬುದು ಯಕ್ಷಪ್ರಶ್ನೆ.

ಮಂತ್ರಿ ಪದವಿ ಪಡೆಯಲು ಕೊನೆಯ ಕ್ಷಣದ ಕಸರತ್ತು!ಮಂತ್ರಿ ಪದವಿ ಪಡೆಯಲು ಕೊನೆಯ ಕ್ಷಣದ ಕಸರತ್ತು!

ಇದು ಪಕ್ಷ ನಿಷ್ಠರಿಗೆ ಹಾಗೂ ಮತದಾರರಿಗೆ ಆದ ಘೋರ ಅಪಮಾನ ಅಲ್ಲದೇ ಇನ್ನೇನು, ಎಂಬ ವಿಚಾರ ಎಲ್ಲರಲ್ಲೂ ಸ್ಪಷ್ಟ ಮೂಡಿದೆ. ಕಾಯ್ದು ನೋಡಬೇಕು. ಆದರೆ, ಮುಂದಿನ ನಡೆ ವಿಚಾರ ಮಾಡುವಂತದ್ದು."

The tweet by BJP MLA Anand Mamani has terrified BJP leaders

ಸವದತ್ತಿ ಶಾಸಕ ಆನಂದ್ ಮಾಮನಿ ಅವರು ತಮಗೆ ಮಂತ್ರಿಸ್ಥಾನ ಸಿಗದೇ ಇರುವ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿದ್ದಾರೆ. ಆದರೆ ಟ್ವೀಟ್‌ನಲ್ಲಿ ಸರಿಯಾಗಿ ಕನ್ನಡ ಭಾಷೆಯ ಬಳಕೆ ಆಗಿಲ್ಲ. ಆದರಿಂದ ಶಾಸಕರಿಗೆ ಕನಿಷ್ಠ ಕನ್ನಡ ಜ್ಞಾನ ಇಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತವಾಗಿದೆ.

ಕನ್ನಡವನ್ನು ಸರಿಯಾಗಿನ ಕಲಿತುಕೊಂಡು, ಬಳಿಕ ಮಂತ್ರಿ ಸ್ಥಾನಕ್ಕೆ ಶಾಸಕ ಆನಂದ್ ಮಾಮನಿ ಬೇಡಿಕೆ ಇಡಲಿ ಎಂದು ಸಾಮಾಜಿಕ ಜಾಲತಾಣದಲ್ಲಿ ಜನ ಸಾಮಾನ್ಯರು ಲೇವಡಿ ಮಾಡಿದ್ದಾರೆ.

English summary
The tweet by BJP MLA Anand Mamani has terrified BJP leaders in the wake of the cabinet expansion.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X