ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉದಯಪುರ ಹತ್ಯೆ ಪ್ರಕರಣ ಭಯೋತ್ಪಾದಕ ಕೃತ್ಯ ಎಂದ ಬೊಮ್ಮಾಯಿ

|
Google Oneindia Kannada News

ಬೆಂಗಳೂರು, ಜುಲೈ 01: ರಾಜಸ್ಥಾನದ ಉದಯ್‌ಪುರದಲ್ಲಿ ಟೈಲರ್‌ನ ಬರ್ಬರ ಹತ್ಯೆಯನ್ನು ಭಯೋತ್ಪಾದಕ ಕೃತ್ಯ ಎಂದು ಬಣ್ಣಿಸಿರುವ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಘಟನೆಯ ಹಿಂದೆ ದೊಡ್ಡ ಅಂತಾರಾಷ್ಟ್ರೀಯ ಪಿತೂರಿ ಇದೆ ಎಂದು ಆರೋಪಿಸಿ ಪ್ರಕರಣವನ್ನು ಕೂಲಂಕುಷವಾಗಿ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.

ಅಂತರಾಷ್ಟ್ರೀಯ ಸಂಘಟನೆಗಳು ಸೇರಿದಂತೆ ಘಟನೆಯ ಹಿಂದಿರುವ ಎಲ್ಲರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ತಪ್ಪಿತಸ್ಥರನ್ನು ಗಲ್ಲಿಗೇರಿಸಬೇಕು ಎಂದು ಅವರು ಒತ್ತಾಯಿಸಿದರು.

ಉದಯಪುರ ಟೈಲರ್ ಹತ್ಯೆ: 32 ಹಿರಿಯ ಪೊಲೀಸರ ವರ್ಗಾವಣೆ ಉದಯಪುರ ಟೈಲರ್ ಹತ್ಯೆ: 32 ಹಿರಿಯ ಪೊಲೀಸರ ವರ್ಗಾವಣೆ

ಉದಯಪುರ ಘಟನೆ ಹೇಯ ಮತ್ತು ಅಮಾನವೀಯ ಕೃತ್ಯ. ಇದೊಂದು ಭಯೋತ್ಪಾದಕ ಕೃತ್ಯ. ಇದರ ಹಿಂದೆ ದೊಡ್ಡ ಅಂತರಾಷ್ಟ್ರೀಯ ಷಡ್ಯಂತ್ರವಿದ್ದು, ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರನ್ನು ಗಲ್ಲಿಗೇರಿಸಬೇಕು ಎಂದು ಮುಖ್ಯಮಂತ್ರಿಗಳು ಹೇಳಿದರು.

ಕನ್ಹಯ್ಯ ಕೊಂದವರಿಗೆ ಗಲ್ಲು ಶಿಕ್ಷೆಯಾಗಬೇಕು ಎಂದ ಮುಸ್ಲಿಂ ಸಂಘಟನೆಕನ್ಹಯ್ಯ ಕೊಂದವರಿಗೆ ಗಲ್ಲು ಶಿಕ್ಷೆಯಾಗಬೇಕು ಎಂದ ಮುಸ್ಲಿಂ ಸಂಘಟನೆ

ಕಠಿಣ ಶಿಕ್ಷೆಯನ್ನು ನೀಡಲು ಕ್ರಮ ಕೈಗೊಳ್ಳಿ

ಕಠಿಣ ಶಿಕ್ಷೆಯನ್ನು ನೀಡಲು ಕ್ರಮ ಕೈಗೊಳ್ಳಿ

ಬಸವರಾಜ ಬೊಮ್ಮಾಯಿ ಮಾತನಾಡಿ, "ರಾಜಸ್ಥಾನ ಸರ್ಕಾರವು ಈ ಪ್ರಕರಣವನ್ನು ಕೂಲಂಕಷವಾಗಿ ತನಿಖೆ ಮಾಡಬೇಕು. ಹತ್ಯೆಯ ಹಿಂದಿರುವ ಅಂತಾರಾಷ್ಟ್ರೀಯ ಸಂಘಟನೆಗಳು ಸೇರಿದಂತೆ ಎಲ್ಲರನ್ನು ಪತ್ತೆಹಚ್ಚಬೇಕು. ಅವರಿಗೆ ಕಠಿಣ ಶಿಕ್ಷೆಯನ್ನು ನೀಡಲು ಕ್ರಮಗಳನ್ನು ತೆಗೆದುಕೊಳ್ಳಬೇಕು" ಎಂದು ಒತ್ತಾಯಿಸಿದರು.

ಇಸ್ಲಾಂಗೆ ಅವಮಾನಕ್ಕಾದ ಪ್ರತೀಕಾರ

ಇಸ್ಲಾಂಗೆ ಅವಮಾನಕ್ಕಾದ ಪ್ರತೀಕಾರ

"ರಿಯಾಜ್ ಅಖ್ತಾರಿ ಮತ್ತು ಮೊಹಮ್ಮದ್ ಘೌಸ್ ಎಂದು ಗುರುತಿಸಲಾದ ಇಬ್ಬರು ವ್ಯಕ್ತಿಗಳು ಮಂಗಳವಾರ ಉದಯಪುರ ನಗರದ ಧನ್ ಮಂಡಿ ಪ್ರದೇಶದಲ್ಲಿ ಕನ್ಹಯ್ಯಾ ಲಾಲ್ ಕೊಂದಿದ್ದಾರೆ. ಅವರು ಇಸ್ಲಾಂ ಧರ್ಮಕ್ಕೆ ಮಾಡಿದ ಅವಮಾನಕ್ಕೆ ಪ್ರತೀಕಾರ ತೀರಿಸಿಕೊಳ್ಳುತ್ತಿದ್ದಾರೆ ಎಂದು ಹೇಳುವ ವಿಡಿಯೋಗಳನ್ನು ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಕೊಲೆ ಆರೋಪದಲ್ಲಿ ಇಬ್ಬರನ್ನೂ ಬಂಧಿಸಲಾಗಿದೆ. ವಿಡಿಯೋ ಕ್ಲಿಪ್‌ನಲ್ಲಿ ಹತ್ಯೆಗೈದ ಅಖ್ತಾರಿ ಕನ್ಹಯ್ಯ ಲಾಲ್‌ನ ಶಿರಚ್ಛೇಧ ಮಾಡಿರುವುದಾಗಿ ಹೇಳಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಜೀವ ಬೆದರಿಕೆ ಹಾಕಿದರು" ಎಂದರು.

ಕಾನೂನು ಅಡೆತಡೆಗಳನ್ನು ನಿವಾರಿಸುವ ಕ್ರಮ

ಕಾನೂನು ಅಡೆತಡೆಗಳನ್ನು ನಿವಾರಿಸುವ ಕ್ರಮ

"ಚಂಡೀಗಢದಲ್ಲಿ ಈಗಷ್ಟೇ ಮುಕ್ತಾಯಗೊಂಡ ಜಿಎಸ್‌ಟಿ ಕೌನ್ಸಿಲ್ ಸಭೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಿದ್ದರು. ಈಗ ಪರಿಹಾರವನ್ನು ವಿಸ್ತರಿಸುವ ಬಗ್ಗೆ ಚರ್ಚೆ ನಡೆದಿದೆ. ಆಗಸ್ಟ್‌ನಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆಯಿದೆ. ಅಲ್ಲದೆ, ಜಿಎಸ್‌ಟಿಯ ಕಾನೂನು ಸಮಿತಿಯು ಸಭೆ ನಡೆಸಿ ಎಲ್ಲಾ ಕಾನೂನು ಅಡೆತಡೆಗಳನ್ನು ನಿವಾರಿಸುವ ಉದ್ದೇಶದಿಂದ ಕ್ರಮಗಳನ್ನು ಕೈಗೊಂಡಿದೆ. ಫಿಟ್‌ಮೆಂಟ್ ಸಮಿತಿಯ ಶಿಫಾರಸುಗಳನ್ನು ಅಂಗೀಕರಿಸಲಾಗಿದೆ" ಎಂದು ಅವರು ಹೇಳಿದರು.

ಬಿಜೆಪಿ ಬಹುಮತ ಪಡೆಯಲಿದೆ ಎನ್ನಲು ಸಾಧ್ಯವೇ?

ಬಿಜೆಪಿ ಬಹುಮತ ಪಡೆಯಲಿದೆ ಎನ್ನಲು ಸಾಧ್ಯವೇ?

ರಾಜ್ಯದಲ್ಲಿ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಬಹುಮತ ಪಡೆಯಲಿದೆ ಎಂದು ಕಾಂಗ್ರೆಸ್‌ನ ಆಂತರಿಕ ಸಮೀಕ್ಷೆಯಲ್ಲಿ ಹೇಳಿರುವ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ಬಿಜೆಪಿ ಬಹುಮತ ಪಡೆಯಲಿದೆ ಎಂದು ಕಾಂಗ್ರೆಸ್‌ ತಮ್ಮ ಸಮೀಕ್ಷೆಯಲ್ಲಿ ಹೇಳಬಹುದೇ? ಎಂದು ವ್ಯಂಗ್ಯವಾಡಿದರು.

ಕೇಂದ್ರ ಗೃಹ ಸಚಿವಾಲಯವು ರಾಜ್ಯ ಸರ್ಕಾರದ ವಿರುದ್ಧ ಶೇ 40 ರಷ್ಟು ಕಮಿಷನ್ ಆರೋಪದ ಕುರಿತು ರಾಜ್ಯ ಗುತ್ತಿಗೆದಾರರ ಸಂಘದಿಂದ ಸಾಕ್ಷ್ಯ ಮತ್ತು ದಾಖಲೆಗಳನ್ನು ಕೇಳಿದೆ ಎಂಬ ವರದಿಗಳ ಕುರಿತು ಪ್ರಶ್ನೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಸರ್ಕಾರವು ಅಂತಹ ಯಾವುದೇ ಸಂವಹನವನ್ನು ಸ್ವೀಕರಿಸಿಲ್ಲ ಎಂದು ಹೇಳಿದರು.

ಅದರ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಅವರು (ಗುತ್ತಿಗೆದಾರರ ಸಂಘ) ಅಂತಹ ಯಾವುದೇ ಪತ್ರವನ್ನು ಸ್ವೀಕರಿಸಿದ್ದರೆ, ಅವರು ಮಾಹಿತಿಯನ್ನು ಹಂಚಿಕೊಳ್ಳಲಿ. ಸರ್ಕಾರ (ರಾಜ್ಯ) ಅಂತಹ ಯಾವುದೇ ಪತ್ರವನ್ನು ಸ್ವೀಕರಿಸಿಲ್ಲ ಎಂದು ಅವರು ಹೇಳಿದರು.

Recommended Video

HD Devegowdaರ ಸಾವು ಬಯಸಿ ನಾಲಗೆ ಹರಿಬಿಟ್ಟ KN Rajanna | Oneindia Kannada

English summary
Karnataka Chief Minister Basavaraja Bommai said tailor's killing in Udaipur in Rajasthan as a terrorist act, alleging that there was a large international conspiracy behind the incident.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X