ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇನ್ಮುಂದೆ ವಿದೇಶಕ್ಕೆ ಹೋಗಿ ಯಾರೂ ಶಿಕ್ಷಣ ಪಡೆಯಬೇಕಾಗಿಲ್ಲ!

|
Google Oneindia Kannada News

ಬೆಂಗಳೂರು, ಆ. 20: "ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುತ್ತಿರುವುದರ ಜತೆ ಜತೆಯಲ್ಲೇ ಶೈಕ್ಷಣಿಕ ವ್ಯವಸ್ಥೆಯ ಅಧಿಕಾರ ವಿಕೇಂದ್ರೀಕರಣ ಮಾಡಲು ಸರಕಾರ ಮುಂದಾಗಿದೆ" ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವಥ್ ನಾರಾಯಣ ಹೇಳಿದ್ದಾರೆ. ಮೈಸೂರು ವಿಶ್ವವಿದ್ಯಾಲಯದ ಕ್ಯಾಂಪಸ್ಸಿನಲ್ಲಿರುವ ಕ್ರಾಫರ್ಡ್ ಹಾಲ್‌ನಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಶಿಕ್ಷಣ ನೀತಿ ಅನಾವರಣ ಕುರಿತ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಅತ್ಯುತ್ತಮವಾಗಿ ನಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಿಗೆ ಆರ್ಥಿಕ, ಶೈಕ್ಷಣಿಕ ಮತ್ತು ಆಡಳಿತಾತ್ಮಕವಾಗಿ ಸ್ವಾಯತ್ತತೆ ನೀಡುವುದರ ಜತೆಗೆ, ಗುಣಮಟ್ಟದ ಶಿಕ್ಷಣ ನೀಡಿಕೆಯಲ್ಲಿ ಆಯಾ ಸಂಸ್ಥೆಯನ್ನೇ ಉತ್ತರದಾಯಿಯನ್ನಾಗಿ ಮಾಡಲಾಗವುದು ಹಾಗೂ ಆಯಾ ಪ್ರದೇಶದ ನಾಗರಿಕರು, ಉದ್ದಿಮೆದಾರರು, ಹಳೆಯ ವಿದ್ಯಾರ್ಥಿಗಳು ಆಯಾ ಸಂಸ್ಥೆಗೆ ಶಕ್ತಿ ತುಂಬಬೇಕು ಎಂದು ಡಾ. ಅಶ್ವಥ್ ನಾರಾಯಣ ಹೇಳಿದರು.

ಶಿಕ್ಷಣ ಸಂಸ್ಥೆಗಳು ಸಮಾಜದ, ಜನರ ಆಸ್ತಿ. ಅವುಗಳನ್ನು ಜನರೇ ಉಳಿಸಿ ಬೆಳೆಸಿಕೊಂಡು ಹೋಗಬೇಕು. ಜನರ ನೇತತ್ವದಲ್ಲಿಯೇ ನಾವು ಮುನ್ನಡೆಯಬೇಕು ಎಂದ ಅವರು, ಈಗಾಗಲೇ ಕೆಲ ಶಿಕ್ಷಣ ಸಂಸ್ಥೆಗಳಿಗೆ ಸ್ವಾಯತ್ತತೆ ನೀಡುವ ಕಾರ್ಯ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದ್ದಾರೆ.

ಮೂರನೇ ವಯಸ್ಸಿನಿಂದಲೇ ಕಲಿಕೆ

ಮೂರನೇ ವಯಸ್ಸಿನಿಂದಲೇ ಕಲಿಕೆ

ಈವರೆಗೂ ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಮಗುವಿನ ಆರನೇ ವಯಸ್ಸಿನಿಂದ ಕಲಿಕೆ ಆರಂಭವಾಗುತ್ತಿತ್ತು. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯ ನಂತರ ಮೂರನೇ ವಯಸ್ಸಿನಿಂದಲೇ ಮಕ್ಕಳು ಕಲಿಯಲಾರಂಭಿಸುತ್ತಾರೆ. ಇದು ನಮ್ಮ ದೇಶದ ಶಿಕ್ಷಣ ವ್ಯವಸ್ಥೆಯ ದಿಕ್ಕನ್ನೇ ಬದಲಿಸುತ್ತದೆ ಎಂದು ಡಾ. ಅಶ್ವಥ್ ನಾರಾಯಣ ಹೇಳಿದ್ದಾರೆ.

ಮಕ್ಕಳ ಶೇಕಡಾ 80ರಷ್ಟು ವಿಕಾಸ ಆಗುವುದು 3 ರಿಂದ 6ನೇ ವಯಸ್ಸಿನ ನಡುವೆಯೇ. ಅತಿ ಹೆಚ್ಚು ಕಲಿಕೆ ಸಾಧ್ಯವಾಗುವುದು, ಬಹು ಭಾಷೆಗಳನ್ನು ಕಲಿಯಲು ಸಾಧ್ಯ ಆಗುವುದು ಕೂಡ ಈ ವಯಸ್ಸಿನಲ್ಲಿಯೇ ಎಂದ ಸಚಿವರು; ಶೈಕ್ಷಣಿಕವಾಗಿ ಬದಲಾವಣೆ ಹಾಗೂ ದೇಶದ ಉನ್ನತಿಗೆ ಶಿಕ್ಷಣ ನೀತಿಯೊಂದೇ ರಾಜಮಾರ್ಗ ಎಂದರು.

ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ!

ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ!

ಸಾಮಾಜಿಕ ನ್ಯಾಯದ ಕಲ್ಪನೆ ಹಿನ್ನೆಲೆಯಲ್ಲಿ ನೋಡುವುದುದಾದರೆ ನೂತನ ಶಿಕ್ಷಣ ನೀತಿಯಲ್ಲಿ ಮಹತ್ವದ ಅಂಶಗಳಿವೆ. ಈವರೆಗೂ ಗುಣಮಟ್ಟದ ಶಿಕ್ಷಣ ಕೇವಲ ಉಳ್ಳವರು ಪಡೆಯಲು ಸಾಧ್ಯವಾಗುತ್ತಿತ್ತು. ಉತ್ತಮ ಸೌಲಭ್ಯಗಳುಳ್ಳ ಸಂಸ್ಥೆಗಳಿಗೆ ಬಡ ಮಕ್ಕಳು ಸೇರಲು ಆಗುತ್ತಿರಲಿಲ್ಲ. ಬಡಮಕ್ಕಳು ಸರಕಾರಿ ಶಾಲೆಗಳಲ್ಲೇ ಸೌಲಭ್ಯಗಳ ಕೊರತೆಯ ನಡುವೆಯೇ ವ್ಯಾಸಂಗ ಮಾಡಬೇಕಿತ್ತು. ಈ ಕೊರತೆ, ತಾರತಮ್ಯಗಳನ್ನು ನಿವಾರಿಸಿ ಪ್ರತಿಯೊಂದು ಗುಣಮಟ್ಟದ ಶಿಕ್ಷಣ ಪಡೆಯಬೇಕು ಎಂಬ ಉದ್ದೇಶದಿಂದ ಜಾರಿಗೆ ಬಂದಿದ್ದೇ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲಾಗಿದೆ ಎಂದು ಅಶ್ವಥ್ ನಾರಾಯಣ ಹೇಳಿದ್ದಾರೆ.

ಇನ್ಮುಂದೆ ವಿದೇಶಕ್ಕೆ ಹೋಗಬೇಕಿಲ್ಲ!

ಇನ್ಮುಂದೆ ವಿದೇಶಕ್ಕೆ ಹೋಗಬೇಕಿಲ್ಲ!

ಈ ವರ್ಷದಿಂದಲೇ ರಾಷ್ಟ್ರೀಯ ಶಿಕ್ಷಣ ನೀತಿ ರಾಜ್ಯದಲ್ಲಿ ಜಾರಿಗೆ ಬರುತ್ತಿದೆ. ಬಹು ಆಯ್ಕೆಯ ಮತ್ತು ಬಹು ಶಿಸ್ತೀಯ ಕಲಿಕೆ ವಿದ್ಯಾರ್ಥಿಗಳಿಗೆ ಕಲಿಕೆಯ ಮುಕ್ತ ಸ್ವಾತಂತ್ರ್ಯವನ್ನು ನೀಡುತ್ತದೆ. ದೇಶವನ್ನು ಕಟ್ಟುವ ಎಲ್ಲ ರೀತಿಯ ಶಿಕ್ಷಣವೂ ಇನ್ನು ನಮ್ಮ ದೇಶದಲ್ಲೇ ಲಭ್ಯವಾಗಲಿದೆ. ಯಾರೂ ಗುಣಮಟ್ಟದ ಶಿಕ್ಷಣಕ್ಕಾಗಿ ವಿದೇಶಕ್ಕಾಗಿ ಹೋಗಬೇಕಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ತಿಳಿಸಿದ್ದಾರೆ.

Recommended Video

ಕಾಂಗ್ರೆಸ್ ಯೋಗ್ಯತೆ ಬಗ್ಗೆ ಮಾತನಾಡಿದ ಬಿಜೆಪಿ ಕಟೀಲ್! | Oneindia Kannada
ಕಾಟಾಚಾರಕ್ಕೆ ಕಲಿಯುವುದು ಇನ್ಮುಂದೆ ಅಸಾಧ್ಯ!

ಕಾಟಾಚಾರಕ್ಕೆ ಕಲಿಯುವುದು ಇನ್ಮುಂದೆ ಅಸಾಧ್ಯ!

ನೂತನ ಶಿಕ್ಷಣ ನೀತಿಯು ಬೋಧನೆ ಮತ್ತು ಕಲಿಕೆಯಲ್ಲಿ ಸಂಸ್ಕಾರವನ್ನು ಪ್ರತಿನಿಧಿಸುತ್ತದೆ. ಯಾವುದೇ ವಿಷಯವನ್ನು ಕಾಟಾಚಾರಕ್ಕೆ ಕಲಿಯಲು ಹೊಸ ವ್ಯವಸ್ಥೆಯಲ್ಲಿ ಸಾಧ್ಯವಾಗುವುದಿಲ್ಲ. ಬದ್ಧತೆ ಮತ್ತು ಶ್ರದ್ಧೆಯಿಂದ ಪ್ರತಿ ವಿದ್ಯಾರ್ಥಿಯೂ ಕಲಿಯಬೇಕಾಗುತ್ತಿದೆ. ಅದಕ್ಕೆ ಬೇಕಾದ ಪೂರಕ ವಾತಾವರಣವನ್ನು ಶಿಕ್ಷಣ ನೀತಿ ಒದಗಿಸುತ್ತದೆ ಎಂದು ಇದೇ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಹೇಳಿದ್ದಾರೆ.

ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಸಂಸದ ಪ್ರತಾಪ್ ಸಿಂಹ, ವಿವಿ ಕುಲಪತಿ ಪ್ರೊ. ಹೇಮಂತ ಕುಮಾರ್ ಕುಲಸಚಿವ ಪ್ರೊ. ಆರ್. ಶಿವಪ್ಪ ಭಾಗವಹಿಸಿದ್ದರು.

English summary
The university of mysore should play a prominent role in nep implementation says Dr.C.N. Ashwatha Narayana. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X