ವಿಶ್ವದೆಲ್ಲೆಡೆ ಮೊಳಗಲಿದೆ ಕನ್ನಡ ಗೀತೆಗಳ ಗಾಯನ
ಬೆಂಗಳೂರು, ಅ.28: ಹಿಂದೆಂದೂ ನಡೆದಿರದ ಅಭೂತಪೂರ್ವ ಕನ್ನಡ ಉತ್ಸವ ಗುರುವಾರ (ಅ.28) ಕರ್ನಾಟಕ ಸೇರಿದಂತೆ ವಿಶ್ವದಾದ್ಯಂತ ಮೊಳಗಲಿದೆ.
66ನೇ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಇಡೀ ನಾಡನ್ನು ಕನ್ನಡಮಯವನ್ನಾಗಿ ಮಾಡಲು, ಕನ್ನಡದ ಭಾವಲಹರಿ ಜನಮನದ ನರನಾಡಿಗಳಲ್ಲಿ ಸಂಚರಿಸುವ ರೋಮಾಂಚನವನ್ನು ಉಂಟು ಮಾಡಬೇಕೆಂಬ ಮಹತ್ವಾಕಾಂಕ್ಷೆಯಿಂದ ಈ ಅಭಿಯಾನ ರೂಪುಗೊಂಡಿದೆ. ಸಾವಿರಕ್ಕೂ ಹೆಚ್ಚು ಸ್ಥಳಗಳಲ್ಲಿ ಐದು ಲಕ್ಷ ಕಂಠಗಳಲ್ಲಿ ಮೊಳಗಲಿದೆ ಕನ್ನಡ ಗೀತೆಯ ಗಾಯನ ನಡೆಯಲಿದೆ.
ಮೂರು ಹಾಡುಗಳು:
ರಾಷ್ಟ್ರಕವಿ ಕುವೆಂಪು ಅವರ 'ಬಾರಿಸು ಕನ್ನಡ ಡಿಂಡಿಂಮವ', ನಿಸಾರ್ ಅಹಮ್ಮದ್ ಅವರ 'ಜೋಗದ ಸಿರಿ ಬೆಳಕಿನಲ್ಲಿ' ಹಾಗೂ ಡಾ. ಹಂಸಲೇಖ ಅವರ 'ಹುಟ್ಟಿದರೇ ಕನ್ನಡ ನಾಡಲ್ಲಿ ಹುಟ್ಟಬೇಕು'- ಈ ಮೂರು ಗೀತೆಗಳು ಬೆಳಿಗ್ಗೆ 11 ಗಂಟೆಗೆ ಏಕ ಕಾಲದಲ್ಲಿ ಮೊಳಗಲಿವೆ. ಇದಕ್ಕೆ ಬೇರ ಬೇರೆ ರಾಜ್ಯಗಳಲ್ಲಿ ನೆಲೆಸಿರುವ ಹಾಗೂ ವಿಶ್ವದಾದ್ಯಂತ ನೆಲೆಸಿರುವ ಕನ್ನಡಿಗರು, ಕನ್ನಡ ಕೂಟಗಳು ತಮಗೆ ಒದಗಿಸಿರುವ ನಿರ್ದಿಷ್ಟ ಜಾಲತಾಣ ಸಂಪರ್ಕದ ಮೂಲಕ ಒಟ್ಟಿಗೆ ಸೇರಿ ಹಾಡುವ ತಾಂತ್ರಿಕ ಸಂಯೋಜನೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರೂಪಿಸಿದೆ. ಇದರ ಮೂಲಕ ಒಂದೇ ಬಾರಿ ವಿಶ್ವದಾದ್ಯಂತ ಕನ್ನಡ ಗೀತೆಗಳು ಲಕ್ಷ ಲಕ್ಷ ಕಂಠಗಳಲ್ಲಿ ಮೊಳಗಲಿದೆ. ಇದು ಈ ಹಿಂದೆ ಎಂದೂ ನಡೆದಿರದ ಬೃಹತ್ ಹಾಗೂ ಅವಿಸ್ಮರಣೀಯ ಕಾರ್ಯಕ್ರಮವಾಗಲಿದೆ.

ವಿಧಾನಸೌಧ ಮುಂಭಾಗ ಮುಖ್ಯಮಂತ್ರಿ ಭಾಗಿ:
ಕನ್ನಡಕ್ಕಾಗಿ ನಾವು ಅಭಿಯಾನದ ಅಂಗವಾಗಿ ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ಕನ್ನಡದ ಗೀತ ಗಾಯನದ ಕಾರ್ಯಕ್ರಮ ಬೆಳಗ್ಗೆ 10.45 ಆಯೋಜಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶ್ರೀ ವಿ. ಸುನಿಲ್ ಕುಮಾರ್ ಭಾಗವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಗೀತಗಾಯನದ ನಂತರ ಸಂಕಲ್ಪವೊಂದನ್ನು ಸ್ವೀಕರಿಸಬೇಕಾಗಿರುತ್ತದೆ. ಸಂಕಲ್ಪದ ಪೂರ್ಣಪಾಠ ಹೀಗಿದೆ. "ಕನ್ನಡ ನಾಡಿನ ಜವಾಬ್ದಾರಿಯುತ ಪ್ರಜೆಯಾಗಿ ನಾನು ಕನ್ನಡದಲ್ಲೇ ಮಾತನಾಡುತ್ತೇನೆ. ಕನ್ನಡದಲ್ಲೇ ಬರೆಯುತ್ತೇನೆ. ನಿತ್ಯ ವ್ಯವಹಾರದಲ್ಲಿ ಕನ್ನಡವನ್ನೇ ಬಳಸುತ್ತೇನೆ ಎಂಬ ಪಣ ತೊಡುತ್ತೇನೆ.
ಕನ್ನಡ ನಾಡಿನಲ್ಲಿ ವಾಸವಾಗಿರುವ ಕನ್ನಡೇತರ ಬಂಧುಗಳಿಗೆ ಪ್ರೀತಿಯಿಂದ ಕನ್ನಡ ಕಲಿಸುತ್ತೇನೆ. ಕನ್ನಡ ನಾಡು, ನುಡಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸಲು ಕಟಿಬದ್ಧನಾಗಿರುತ್ತೇನೆ ಎಂದು ಸಂಕಲ್ಪ ಮಾಡುತ್ತೇನೆ".

ರಾಜ್ಯದಾದ್ಯಂತ ಮೊಳಗಲಿದೆ ಕನ್ನಡ
ನಾಡಿನ ಎಲ್ಲ ಸರ್ಕಾರಿ ಕಚೇರಿಗಳಲ್ಲಿ, ಶಾಲಾ- ಕಾಲೇಜುಗಳ ಆವರಣದಲ್ಲಿ, ವಿಶ್ವವಿದ್ಯಾಲಯಗಳ ಆವರಣಗಳಲ್ಲಿ, ತಾಂತ್ರಿಕ ಹಾಗೂ ವೈದ್ಯಕೀಯ ಕಾಲೇಜುಗಳ ಆವರಣಗಳಲ್ಲಿ ಹಾಗೂ ಮೈಸೂರಿನ ಅರಮನೆಯ ಮುಂಭಾಗ ಮತ್ತು ವಿಶ್ವವಿಖ್ಯಾತ ಹಂಪಿಯ ಕಲ್ಲಿನ ರಥ ಹಾಗೂ ಮಹಾನವಮಿ ದಿಬ್ಬವೂ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಸುಪ್ರಸಿದ್ಧ ಸ್ಮಾರಕಗಳ ಮುಂದೆ ಸಾವಿರಾರು ಜನರು ಒಟ್ಟಿಗೆ ನಿಂತು ಈ ಗೀತಗಾಯನದಲ್ಲಿ ಭಾಗವಹಿಸಲಿದ್ದಾರೆ.
ವಿಮಾನ ನಿಲ್ದಾಣಗಳಲ್ಲೂ ಮೊಳಗಲಿದೆ ಕನ್ನಡದ ಗಾಯನ
ಈ ಅಭಿಯಾನದ ಅಂಗವಾಗಿ ವಿಶೇಷವಾಗಿ ಕರ್ನಾಟಕದ ವಿಮಾನ ನಿಲ್ದಾಣಗಳಲ್ಲೂ ಸಹ ಈ ಕನ್ನಡದ ಗೀತಗಾಯನ ಅನುರುಣಿಸಲಿದೆ. ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ, ಮಂಗಳೂರು ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣಗಳಲ್ಲಿಯೂ ಸಹ ಸಾವಿರರು ಜನ ಒಟ್ಟಿಗೆ ನಿಂತು ಈ ಕನ್ನಡ ಗೀತೆಗಳ ಗಾಯನ ಮಾಡಲಿದ್ದಾರೆ.
ಬೆಂಗಳೂರು ಮೆಟ್ರೋದಲ್ಲಿ ಕನ್ನಡಮಯ ವಾತಾವರಣ ಉಂಟುಮಾಡಲು ಬೆಂಗಳೂರು ಮೆಟ್ರೋದ ಎಲ್ಲಾ ರೈಲುಗಳಲ್ಲೂ ಸುಗಮ ಸಂಗೀತ ಗಾಯನ ತಂಡಗಳು ಈ ಮೂರು ಗೀತೆಗಳನ್ನು ಹಾಡುತ್ತವೆ. ಮೆಟ್ರೋದ ಎಲ್ಲಾ 51 ನಿಲ್ದಾಣಗಳಲ್ಲಿ ಈ ಕನ್ನಡ ಗೀತೆಗಳ ಗಾಯನ ಧ್ವನಿವರ್ಧಕಗಳ ಮೂಲಕ ಪ್ರಸಾರವಾಗಲಿದೆ. ಅದರ ಜೊತೆಗೆ ಅತ್ಯಂತ ಜನ ನಿಬಿಡವಾದ 5 ಮೆಟ್ರೋ ನಿಲ್ದಾಣಗಳಲ್ಲಿ ಸಮೂಹ ಗೀತಗಾಯನ ನಡೆಯಲಿದೆ. ಅದರ ಜೊತೆಗೆ ಎಲ್.ಇ.ಡಿ. ಪರದೆಗಳನ್ನು ಅಳವಡಿಸಿ ಅದರ ಮೂಲಕ ಕಾರ್ಯಕ್ರಮವನ್ನು ಪ್ರದರ್ಶಿಸಲಾಗುತ್ತಿದೆ.
ಕನ್ನಡಮಯ ಕರ್ನಾಟಕ
ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳು ಹಾಗೂ 198 ವಾರ್ಡ್‌ಗಳಲ್ಲಿ ಸ್ಥಳೀಯ ಶಾಸಕರು ಮತ್ತು ನಗರ ಸಭಾ ಸದಸ್ಯರ ಸಹಯೋಗದೊಂದಿಗೆ ಈ ಗೀತಗಾಯನದ ಜೊತೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುಗಿದೆ. . ಬೆಂಗಳೂರಿನ ಎಲ್ಲಾ ಮಾಹಿತಿ ಮತ್ತು ತಂತ್ರಜ್ಞಾನ /ಜೈವಿಕ ತಂತ್ರಜ್ಞಾನ ಸಂಸ್ಥೆಗಳ ಮುಂಭಾಗದ ಆವರಣಗಳಲ್ಲಿ ಸಾವಿರ ಸಾವಿರ ಸಂಖ್ಯೆಯ ಉದ್ಯೋಗಿಗಳು, ಆಡಳಿತ ಮಂಡಳಿಯ ಸದಸ್ಯರು ಹಾಗೂ ಎಲ್ಲಾ ಆಸಕ್ತ ಸಾರ್ವಜನಿಕರು ಒಂದಾಗಿ ಸೇರಿ ಕನ್ನಡದ ಈ ಮೂರು ಗೀತೆಗಳನ್ನು ಹಾಡುವ ಮೂಲಕ ತಮ್ಮ ಕನ್ನಡ ಪ್ರೇಮ ಮೆರೆಯಲಿದ್ದಾರೆ. ಬೆಂಗಳೂರಿನ ಎಲ್ಲಾ ಕೈಗಾರಿಕಾ ಪ್ರದೇಶಗಳು, ಬಸ್ಸು ಮತ್ತು ಆಟೋ ನಿಲ್ದಾಣಗಳು ಈ ಕನ್ನಡ ಗೀತಗಾಯನಕ್ಕೆ ಕಿವಿಯಾಗಲಿವೆ.
ಈ ಗೀತಗಾಯನದ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯ ಜೋಗದ ಜಲಪಾತದ ಮುಂದೆ ಸಾವಿರ ಜನರ ಕಂಠದಲ್ಲಿ ಈ ಕನ್ನಡ ಗೀತೆಗಳನ್ನು ಹಾಡಲು ಯೋಜಿಸಲಾಗಿದೆ. ಹಾಗೆಯೇ ರಾಷ್ಟ್ರಕವಿ ಕುವೆಂಪು ಅವರ ಕುಪ್ಪಳಿಯ ಕವಿಶೈಲದಲ್ಲಿ ಈ ಗೀತೆಗಳು ಮೊಳಗಲಿವೆ. ಇದಲ್ಲದೆ ವಿವಿಧ ಜಿಲ್ಲೆಗಳಲ್ಲಿ ಗೀತಗಾಯನದ ಪ್ರಮುಖ ತಾಣಗಳು ಹೀಗಿವೆ.
* ಚಿತ್ರದುರ್ಗದ ಸುಪ್ರಸಿದ್ಧ ಕೋಟೆಯ ಮುಂಭಾಗದಲ್ಲಿ
* ಮಂಗಳೂರು ಸಮುದ್ರತೀರ,
* ಉಡುಪಿಯ ಶ್ರೀ ಕೃಷ್ಣದೇಗುಲದ ಮುಂಭಾಗದಲ್ಲಿ ಕೂಡ ಈ ಗೀತಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ.
* ಮೂಡಬಿದರೆಯ ಸಾವಿರ ಕಂಬದ ಬಸದಿ ಹಾಗೂ ಮಂಗಳೂರು ಬಂದರಿನ ಮೀನುಗಾರರ ಮಧ್ಯೆ ಈ ಗೀತೆಗಾಯನ ನಡೆಯಲಿದೆ.
* ಮೈಸೂರಿನ ಅರಮನೆ ಮುಂಭಾಗ ಹಾಗೂ ಮೈಸೂರಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಗಾಯನ ತಂಡಗಳು ಈ ಗೀತೆಗಳನ್ನು ಹಾಡಲಿದೆ.
* ಬೆಳಗಾವಿಯ ಸುವರ್ಣಸೌಧದ ಮುಂದೆ ಹಾಗೂ ಬೆಳಗಾವಿ ಗಡಿ ಪ್ರದೇಶಗಳಲ್ಲಿ
* ಹಂಪಿಯ ವಿರೂಪಾಕ್ಷ ದೇಗುಲದ ಮುಂದೆ, ಮಹಾನವಮಿ ದಿಬ್ಬ, ವಿಜಯವಿಠ್ಠಲ ದೇವಸ್ಥಾನದ ಆವರಣ, ಕಲ್ಲಿನ ರಥದ ಮುಂಭಾಗ,
* ತುಮಕೂರಿನ ಸಿದ್ಧಗಂಗಾ ಮಠದ ಆವರಣದಲ್ಲಿ ಒಂಭತ್ತು ಸಾವಿರ ವಿದ್ಯಾರ್ಥಿಗಳು ಈ ಗೀತಗಾಯನದಲ್ಲಿ ಪಾಲ್ಗೊಳ್ಳಲಿದ್ದಾರೆ.
* ಶ್ರೀರಂಗಪಟ್ಟಣದ ಶ್ರೀರಂಗನಾಥ ಸ್ವಾಮಿ ದೇಗುಲದ ಮುಂಭಾಗ,
* ಕೊಡಗಿನ ಭಾಗಮಂಡಲ ಹಾಗೂ ಇತರ ಪ್ರವಾಸಿ ತಾಣಗಳ ಮುಂದೆ
* ಹಾಸನದ ಬೇಲೂರು, ಹಳೇಬೀಡು, ಶ್ರವಣಬೆಳಗೊಳ ಹಾಗೂ ಕನ್ನಡದ ಪ್ರಥಮ ಶಾಸನ ದೊರೆತ ಹಲ್ಮಿಡಿ ಗ್ರಾಮದಲ್ಲಿ ಈ ಗೀತಗಾಯನದ ಕಂಪು ಪಸರಿಸಲಿದೆ.
* ಚಿಕ್ಕಬಳ್ಳಾಪುರದ ಭೋಗ ನಂದೀಶ್ವರ ದೇವಸ್ಥಾನದ ಮುಂಭಾಗ
* ಯಾದಗಿರಿಯ ಬಂದೀಖಾನೆ ಮುಂಭಾಗ
* ಹಾವೇರಿಯ ಸುಪ್ರಸಿದ್ಧ ಕಾಗಿನೆಲೆ, ಶಿಶುನಾಳ, ಗೊಟಗೋಡಿಯ ಜಾನಪದ ವಿಶ್ವವಿದ್ಯಾಲಯ ಹಾಗೂ ಕನಕದಾಸರ ಜನ್ಮಸ್ಥಳ ಬಾಡಾದಲ್ಲಿ ಈ ಗೀತಗಾಯನ ಆಯೋಜಿಸಲಾಗುತ್ತಿದೆ.
* ವಿಜಯಪುರದ ಅಕ್ಕಮಹಾದೇವಿ ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾಲಯದ ಆವರಣ ಹಾಗೂ ಗಡಿಭಾಗಗಳಲ್ಲಿ.
* ರಾಯಚೂರಿನ ಹಟ್ಟಿ ಚಿನ್ನದಗಣಿ ಆವರಣ, ಆರ್.ಟಿ.ಪಿ.ಎಸ್. ವಿದ್ಯುತ್ ಉತ್ಪಾದನಾ ಘಟಕದ ಮುಂಭಾಗದಲ್ಲಿಯೂ ಕನ್ನಡ ಗೀತೆಯ ಗಾಯನ ಗಂಗೆ ಪ್ರವಹಿಸಲಿದೆ.
Recommended Video
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications