Karnataka weather: ಈ ಜಿಲ್ಲೆಗಳಲ್ಲಿ ಅವಧಿಗೂ ಮುನ್ನವೇ ಹೆಚ್ಚಾಯ್ತು ಭಾರಿ ಚಳಿ! ಕಾರಣ ಇಷ್ಟೇ..

ರಾಜ್ಯದಲ್ಲಿ ಅವಧಿಗೂ ಮುನ್ನವೇ ಚಳಿ ವಕ್ಕರಿಸಿದ್ದು, ಜನ ಮನೆಯಿಂದ ನಡುಗುತ್ತಾ ಹೊರಬರುವ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ ನವೆಂಬರ್‌ ನಂತರ ಚಳಿಯ ಪ್ರಮಾಣ ಹೆಚ್ಚಾಗುತ್ತಿತ್ತು. ಆದರೆ, ನವೆಂಬರ್‌ ಆರಂಭದಿಂದಲೇ ಚಳಿ ಕಾಡಲಾರಂಭಿಸಿದೆ. ಇದಕ್ಕೆ ಕಾರಣವನ್ನೂ ಹವಾಮಾನ ಇಲಾಖೆ ಬಿಚ್ಚಿಟ್ಟಿದೆ.

ಇಲಾಖೆ ಹೇಳುವ ಪ್ರಕಾರ ರಾಜ್ಯದ ಉತ್ತರ ಒಳನಾಡಿನ ಉತ್ತರ ಜಿಲ್ಲೆಗಳಲ್ಲಿ ಸುಮಾರು 12 ಡಿಗ್ರಿ ಸೆಲ್ಸಿಯಸ್‌ನಿಂದ 14 ಡಿಗ್ರಿ ಸೆಲ್ಸಿಯಸ್‌ನ ಕನಿಷ್ಠ ತಾಪಮಾನ ದಾಖಲಾಗುವ ಸಾಧ್ಯತೆಯಿದೆ. ಆದರೆ ಬೆಂಗಳೂರು ನಗರವು ನವೆಂಬರ್‌ 25ರವರೆಗೆ ಕನಿಷ್ಠ ತಾಪಮಾನ ಸುಮಾರು 16 ಡಿಗ್ರಿ ಸೆಲ್ಸಿಯಸ್‌ನಿಂದ 18 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹೇಳಿದೆ. ರಾಜ್ಯಾದ್ಯಂತ ಇನ್ನೆರಡು ದಿನಗಳಲ್ಲಿ ಬೆಳಗಿನ ಸಮಯದಲ್ಲಿ ದಟ್ಟವಾದ ಮಂಜು ಆವರಿಸುವ ಸಾಧ್ಯತೆ ಇದೆ.

The Weather Department Said That The Cold Has Increased In These Districts Of Karnataka

ಬಂಗಾಳಕೊಲ್ಲಿಯ ಮೇಲಿನ ಕಡಿಮೆ ಒತ್ತಡದ ವ್ಯವಸ್ಥೆಯಿಂದಾಗಿ ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನವೆಂಬರ್ 27ರಿಂದ 29ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಸಮಯದಲ್ಲಿ ರಾತ್ರಿ ವೇಳೆ ತಾಪಮಾನವು ಹೆಚ್ಚಾಗುವ ಸಾಧ್ಯತೆಯಿದೆ, ಹಗಲಿನ ತಾಪಮಾನವು ತುಂಬಾ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಪೂರ್ವ ಸಮಭಾಜಕ ಹಿಂದೂ ಮಹಾಸಾಗರ ಮತ್ತು ಪಕ್ಕದ ದಕ್ಷಿಣ ಅಂಡಮಾನ್ ಸಮುದ್ರ ಮತ್ತು ಆಗ್ನೇಯ ಬಂಗಾಳ ಕೊಲ್ಲಿಯ ಮೇಲಿನ ವಾಯು ಸೈಕ್ಲೋನಿಕ್ ಪರಿಚಲನೆಯ ಪ್ರಭಾವದ ಅಡಿಯಲ್ಲಿ, ಪೂರ್ವ ಸಮಭಾಜಕ ಹಿಂದೂ ಮಹಾಸಾಗರ ಮತ್ತು ಪಕ್ಕದ ಆಗ್ನೇಯ ಬಂಗಾಳ ಕೊಲ್ಲಿಯ ಮೇಲೆ ಕಡಿಮೆ ಒತ್ತಡ ರೂಪುಗೊಂಡಿದೆ.

ಇದು ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ಚಲಿಸುವುದನ್ನು ಮುಂದುವರೆಸುವ, ತೀವ್ರಗೊಳ್ಳುವ ಸಾಧ್ಯತೆಯಿದೆ ನವೆಂಬರ್ 25ರ ಸುಮಾರಿಗೆ ದಕ್ಷಿಣ ಬಂಗಾಳ ಕೊಲ್ಲಿಯ ಮಧ್ಯ ಭಾಗಗಳ ಮಾರ್ಗವಾಗಿ ಮುಂದಿನ 2 ದಿನಗಳಲ್ಲಿ ಇದು ವಾಯುವ್ಯ ದಿಕ್ಕಿನಲ್ಲಿ ತಮಿಳುನಾಡು-ಶ್ರೀಲಂಕಾ ಕರಾವಳಿಯ ಕಡೆಗೆ ಚಲಿಸುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.

ಇದರಿಂದ ದಕ್ಷಿಣ ಕೇರಳ ಮತ್ತು ನೆರೆಹೊರೆಯಲ್ಲಿ ಸಮುದ್ರ ಮಟ್ಟದಿಂದ 1.5 ಕಿಮೀ ಎತ್ತರದಲ್ಲಿ ಚಂಡಮಾರುತದ ಪರಿಚಲನೆಯು ಕಡಿಮೆ ಗುರುತಿಸಲ್ಪಟ್ಟಿದೆ. ರಾಜ್ಯದಲ್ಲಿ ಇಂದು ಒಣ ಹವೆಯಿರುವ ಸಾಧ್ಯತೆಯಿದೆ. ಒಳನಾಡಿನ ಒಂದೆರೆಡು ಕಡೆಗಳಲ್ಲಿ ಮಂಜು ಇರುವ ಸಾಧ್ಯತೆ ಇದೆ. ರಾಜ್ಯದ ಬಯಲು ಸೀಮೆಯ ಬೀದರ್, ಗುಲ್ಬರ್ಗಾ, ಧಾರವಾಡ, ಯಾದಗಿರಿ, ರಾಯಚೂರು, ಬಿಜಾಪುರ, ಬಾಗಲಕೋಟೆ, ಗದಗ, ಹಾವೇರಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನವು 13ರಿಂ 15 ಡಿಗ್ರಿ ಸೆಲ್ಸಿಯಸ್ ಇರುತ್ತದೆ.

ನಾಳೆ ರಾಜ್ಯದಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ. ಒಳನಾಡಿನ ಒಂದೆರೆಡು ಕಡೆಗಳಲ್ಲಿ ಮಂಜು ಇರುವ ಸಾಧ್ಯತೆ ಇದೆ. ನವೆಂಬರ್‌ 26ರಂದು ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳ ಒಂದೆರೆಡು ಕಡೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡನ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.

ನವೆಂಬರ್‌ 27ರಿಂದ 29ರವರೆಗೆ ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳ ಒಂದೆರೆಡು ಕಡೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡನ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.

ಮುಂದಿನ 48 ಗಂಟೆಗಳ ಕಾಲ ಬೆಂಗಳೂರಿನಲ್ಲಿ ಮೋಡವಿಲ್ಲದ ಆಕಾಶ ಇರಲಿದೆ. ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಡಿಗ್ರಿ ಸೆಲ್ಸಿಯಸ್‌ ಹಾಗೂ 17 ಡಿಗ್ರಿ ಸೆಲ್ಸಿಯಸ್ ಇರಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+