ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮತದಾರರ ಮಾಹಿತಿ ಕಳವು ಪ್ರಕರಣದ ಕಿಂಗ್‌ಪಿನ್‌ಗಳು ಸಚಿವರು, ಶಾಸಕರು ಎಂದ ಡಿ.ಕೆ.ಶಿವಕುಮಾರ್

|
Google Oneindia Kannada News

ಬೆಂಗಳೂರು, ನವೆಂಬರ್ 26: ಯಾವುದೇ ಮತವನ್ನು ಸೇರ್ಪಡೆ ಮಾಡುವಾಗ ಅಥವಾ ತೆಗೆಯುವಾಗ ಆಯಾ ವ್ಯಕ್ತಿಯ ಅರ್ಜಿ ಇರಬೇಕು. ಬಿಎಲ್ಒಗಳನ್ನು ಯಾರು ನೇಮಕ ಮಾಡಿದ್ದರು? ಈ ಬಿಎಲ್ಒಗಳನ್ನು ಕೇವಲ 3 ಕ್ಷೇತ್ರ ಚುನಾವಣಾಧಿಕಾರಿಗಳು ಮಾತ್ರ ಮಾಡಿಲ್ಲ. ಎಲ್ಲಾ 28 ಕ್ಷೇತ್ರಗಳ ಚುನಾವಣಾಧಿಕಾರಿಗಳೂ ಮಾಡಿದ್ದಾರೆ. ಸುಮಾರು 6-7 ಸಾವಿರ ಮಂದಿಗೆ ಈ ಬಿಎಲ್ಒ ಗುರುತಿನ ಚೀಟಿ ಕೊಟ್ಟಿದ್ದಾರೆ. ಇದರಲ್ಲಿ ಕೆಲವರು ಅಮಾಯಕರಿದ್ದು, ಕೆಲಸಕ್ಕೆ ಎಂದು ಸೇರಿದ್ದಾರೆ. ಆದರೆ ಇದರ ಮೂಲ ಕಿಂಗ್ ಪಿನ್ ಆಗಿ ಸರ್ಕಾರದ ಸಚಿವರು, ಶಾಸಕರಿಲ್ಲದೇ ಈ ಅಕ್ರಮ ನಡೆಯಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆರೋಪಿಸಿದ್ದಾರೆ.

ಈ ಕುರಿತು ಶನಿವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮತದಾರರ ಮಾಹಿತಿ ಕಳವು ವಿಚಾರವಾಗಿ ನಾವು ನೀಡಿದ ದೂರಿನ ಆಧಾರದ ಮೇಲೆ ಕೇಂದ್ರ ಚುನಾವಣಾ ಆಯೋಗವು ಹಿರಿಯ ಚುನಾವಣಾಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿದ್ದು, ನಾನು ಆಯೋಗಕ್ಕೆ ಅಭಿನಂದನೆ ಸಲ್ಲಿಸುತ್ತೇನೆ.

ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ಆಗಬೇಕು.

ಮೇಲಿನವರ ಆದೇಶದ ಮೇರೆಗೆ ನಾವು ಕೆಲಸ ಮಾಡಿದ್ದೇವೆ ಎಂದು ಚುನಾವಣಾಧಿಕಾರಿಗಳು ಹೇಳಿದ್ದರು. ಈ ಆದೇಶ ಕೊಟ್ಟವರು ಯಾರು ಎಂಬುದು ಗೊತ್ತಾಗಬೇಕು. ಈ ಬಗ್ಗೆ ಬಿಬಿಎಂಪಿ ತನಿಖೆ ನಡೆಸಲು ಸಾಧ್ಯವಿಲ್ಲ. ಚುನಾವಣಾ ಆಯೋಗ ಅಥವಾ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ಆಗಬೇಕು. ಅವರ ಉಸ್ತುವಾರಿಯಲ್ಲೇ ಚುನಾವಣೆ ಮಾಡಬೇಕು ಎಂದು ಅಗ್ರಹಿಸಿದರು. ಆರ್ ಆರ್ ನಗರದಲ್ಲಿ ದಾಳಿ ನಡೆಸಿ ದಾಖಲೆ ಸಂಗ್ರಹಿಸಲಾಗಿದೆ. ಎಲ್ಲಾ 28 ಕ್ಷೇತ್ರಗಳಲ್ಲಿ ಈ ಅಕ್ರಮ ನಡೆದಿದೆ. ಈ ಎಲ್ಲ ಕಡೆ ತನಿಖೆ ಆಗಬೇಕು. ಇಲ್ಲೆಲ್ಲ ಮತದಾರರ ಪಟ್ಟಿ ಮರುಪರಿಷ್ಕರಣೆ ಆಗಬೇಕು ಎಂದರು.

Theft of voter information; Ministers, MLA is the kingpin says D K Shivakumar

ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಕೈಬಿಡಲು ವ್ಯಕ್ತಿ ಸತ್ತಿದ್ದರೂ ಪ್ರಮಾಣ ಪತ್ರ ನೀಡಿಲ್ಲ ಎಂದರೆ ಅಕ್ಕಪಕ್ಕದ ಮನೆಯವರನ್ನು ವಿಚಾರಿಸಿ ಪರಿಶೀಲಿಸಬೇಕು. ಮನೆ ಬದಲಾವಣೆ ಮಾಡಿದ್ದರೂ ಸ್ಥಳಕ್ಕೆ ಹೋಗಿ ಪರಿಶೀಲನೆ ಮಾಡಬೇಕು. ಆದರೆ ಇವರು ಯಾವುದೋ ಸಂಸ್ಥೆ, ಶಾಸಕರು ಹಾಗೂ ಸಚಿವರ ಕಚೇರಿಯಲ್ಲಿ ಕೂತು ಅವರಿಗೆ ಬೇಕಾದಂತೆ ಕೆಲಸ ಮಾಡಿದ್ದಾರೆ. ಇದರ ಹಿಂದೆ ದೊಡ್ಡ ಸಂಚೇ ಇದೆ. ನಾವು ನಿನ್ನೆ ವಿಚಾರ ಪ್ರಸ್ತಾಪಿಸಿದಂತೆ ಕೇಂದ್ರ ಸರ್ಕಾರದ ಸಂಸ್ಥೆ ಮೂಲಕ ಖಾಸಗಿ ರೈತರ ಖಾತೆಗೆ ಲಕ್ಷಗಟ್ಟಲೆ ಹಣ ಹೇಗೆ ವರ್ಗಾವಣೆ ಆಯಿತು? ಯಾವ ಕಾರಣಕ್ಕೆ ಹಣ ನೀಡಲಾಗಿದೆ? ಈ ಬಗ್ಗೆ ತನಿಖೆ ಆಗಬೇಕು.

ಮಂತ್ರಿಯೊಬ್ಬರು ಆರಂಭದಲ್ಲಿ ನನಗೆ ಈ ಸಂಸ್ಥೆ ಗೊತ್ತೇ ಇಲ್ಲ ಎಂದರು. ನಂತರ ಈ ಸಂಸ್ಥೆ ಗೊತ್ತಿದೆ, ಆದರೆ ದುರ್ಬಳಕೆ ಮಾಡಿಕೊಂಡಿಲ್ಲ ಎಂದು ಹೇಳಿದರು. ಸಚಿವರು ಹಾಗೂ ಈ ಸಂಸ್ಥೆ ನಿರ್ದೇಶಕರ ಮಧ್ಯೆ ದೂರವಾಣಿ ಮಾತುಕತೆ ಎಲ್ಲವೂ ಇದೆ. ಪೊಲೀಸರು ಎಫ್ ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಈ ವಿಚಾರವಾಗಿ ಸತ್ಯಾಂಶ ಹೊರಬರಲಿ.

ಮಹದೇವಪುರ ಕ್ಷೇತ್ರದಲ್ಲಿ ಶಾಸಕರ ನೇತೃತ್ವದಲ್ಲಿ ಈ ಕೆಲಸ ಮಾಡಿದ್ದೇವೆ ಎಂಬ ಅಧಿಕೃತ ಹೇಳಿಕೆ ಹೊರಬಿದ್ದಿದೆ. ಪ್ರತಿ ಕ್ಷೇತ್ರದಲ್ಲೂ ಮತದಾರರ ಸೇರ್ಪಡೆ ಹಾಗೂ ಅಳಿಸಿರುವ ಪಟ್ಟಿ ಸಂಪೂರ್ಣವಾಗಿ ಮರು ಪರಿಷ್ಕರಣೆ ಆಗಬೇಕು. ಪ್ರತಿ ಮನೆಗೂ ಹೋಗಿ ಯಾರು ಸತ್ತಿದ್ದಾರೆ, ಯಾರು ಮನೆ ಖಾಲಿ ಮಾಡಿ ಬೇರೆಡೆಗೆ ಹೋಗಿದ್ದಾರೆ ಎಂಬುದನ್ನು ನೋಡಿ ನಂತರ ಅವರ ಹೆಸರನ್ನು ಪಟ್ಟಿಯಿಂದ ಕೈಬಿಡಲಿ. ಒಂದು ಕುಟುಂಬದ ಮತಗಳನ್ನು ಬೇರೆ, ಬೇರೆ ಬೂತ್ ಗಳಿಗೆ ವರ್ಗಾವಣೆ ಮಾಡಬಾರದು. ಆ ಕೆಲಸವೂ ಇಲ್ಲಿ ನಡೆದಿದೆ. ಇದೆಲ್ಲವೂ ಸರಿಯಾಗಬೇಕು. ಚುನಾವಣಾ ಆಯೋಗ ನಮ್ಮ ದೂರಿನ ಮೇಲೆ ಕೆಲವರನ್ನು ಅಮಾನತು ಮಾಡಿದೆ. ಆದರೆ ಈ ಮತ ಕಳ್ಳತನ ವಿಚಾರ ನಕಲಿ ನೋಟು ಮುದ್ರಣ ಮಾಡಿದಷ್ಟೇ ಅಪರಾಧ. ಇದಕ್ಕೆ ಜನರೇ ಶಿಕ್ಷೆ ನೀಡಬೇಕು.

Theft of voter information; Ministers, MLA is the kingpin says D K Shivakumar

ಸರ್ಕಾರಿ ಅಧಿಕಾರಿಗಳ ಗುರುತಿನ ಚೀಟಿಯನ್ನು ಅನಧಿಕೃತವಾಗಿ ನೀಡುವುದು ಅಪರಾಧ. ಕಾಂಗ್ರೆಸ್ ಕಾಲದಲ್ಲಿ ಇದು ಆಗಿದ್ದರೆ ತನಿಖೆ ಮಾಡಲಿ. ನಾವು ತಪ್ಪು ಮಾಡಿದ್ದರೆ ಶಿಕ್ಷೆ ನೀಡಲಿ. ವ್ಯವಸ್ಥೆ ಸರಿಮಾಡುವುದು ಮುಖ್ಯ. ಅಲ್ಪಸಂಖ್ಯಾತರು, ಹಿಂದುಳಿದವರು, ಪರಿಶಿಷ್ಟರ ಮತಗಳನ್ನು ತೆಗೆದುಹಾಕಲಾಗುತ್ತಿದೆ. ಆರ್ ಆರ್ ನಗರದಲ್ಲಿ ಗೌಡ ಎಂಬ ಹೆಸರಿದ್ದರೆ ಒಂದು ಹೆಸರು ಉಳಿಸಿಕೊಂಡು ಮೂರು ಹೆಸರು ತೆಗೆಯುತ್ತಾರೆ. ಇದರಲ್ಲಿ ಮಂತ್ರಿ, ಶಾಸಕರು ಇದ್ದಾರೆ. ಶಾಸಕರ ಪತ್ರಗಳು ಈ ಸಂಸ್ಥೆಯ ಕಚೇರಿಯಲ್ಲಿ ಸಿಕ್ಕಿವೆ. ನನ್ನ ಮೇಲೆ ಮಾನನಷ್ಟ ಮೊಕದ್ದಮೆ ದಾಖಲು ಮಾಡಲಾಗುವುದಾಗಿ ಹೇಳಿದ್ದಾರೆ. ಅವರು ಕೇಸು ಹಾಕಲಿ ಎಂದರು.

ರಾಜ್ಯದಲ್ಲಿ ಏಕರೂಪ ನಾಗರಿಕ ಕಾಯ್ದೆ ಜಾರಿಗೆ ಸಿದ್ಧ ಎಂಬ ಸಿಎಂ ಬೊಮ್ಮಾಯಿ ಹೇಳಿಕೆ ವಿಚಾರವಾಗಿ ಮಾತನಾಡಿ, ಈ ವಿಚಾರವಾಗಿ ನಾನು ಮಾತನಾಡುವುದಿಲ್ಲ ಈಗ ಮಾತನಾಡುವುದಿಲ್ಲ. ರಾಜಕೀಯ ಪಕ್ಷವಾಗಿ ನಮ್ಮ ನಿರ್ಧಾರ ಏನೆಂದು ಆಮೇಲೆ ತಿಳಿಸುತ್ತೇವೆ ಎಂದರು.

English summary
D.K Shivakumar has demanded an investigation into the voter information theft case under the leadership of a sitting judge of the High Court.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X