ಕರ್ನಾಟಕಕ್ಕೆ ಮತ್ತೆ ಬಂತು ಕೊರೊನಾ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೊಟ್ಟ ಸೂಚನೆ ಏನು?
ಬೆಂಗಳೂರು, ಮೇ 24: ರಾಜ್ಯದಲ್ಲಿ ಕಳೆದ ಒಂದು ವಾರದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ ಕೊಂಚ ಏರಿಕೆ ಕಂಡಿದ್ದು ಒಟ್ಟು 35 ಜನರು ಕೋವಿಡ್ ಪಾಸಿಟಿವ್ ಹೊಂದಿದ್ದಾರೆ. ಬೆಂಗಳೂರಿನಲ್ಲಿಯೇ 32 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಇಂದು (ಶನಿವಾರ) ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಕೋವಿಡ್ ಬಂದಿದೆ ಎಂದು ಜನರು ಆತಂಕ ಪಡುವ ಅಗತ್ಯವಿಲ್ಲ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಅಗತ್ಯ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ ಎಂದರು. ಕೋವಿಡ್ ತಾಂತ್ರಿಕ ಸಮಿತಿ ನಿನ್ನೆ ಸಭೆ ನಡೆಸಿ ರಾಜ್ಯದಲ್ಲಿ ಕಂಡುಬಂದಿರುವ ಕೋವಿಡ್ ಪ್ರಕರಣಗಳ ಕುರಿತಂತೆ ಚರ್ಚೆ ನಡೆಸಿದೆ. ನಾವು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದೇವೆ. ಕೇಂದ್ರ ಸರ್ಕಾರದ ಜೊತೆ ಕೂಡ ಸಂಪರ್ಕದಲ್ಲಿದ್ದೇವೆ. ದೇಶದಲ್ಲಿ ಒಟ್ಟು 257 ಪ್ರಕರಣ ದಾಖಲಾಗಿವೆ.

ಕೋವಿಡ್ ಪಾಸಿಟಿವ್ ಹೊಂದಿದವರಿಗೆ ಮೈಲ್ಡ್ ಸಿಂಟಂಸ್ ಇದೆ ಬಿಟ್ಟರೆ ಗಂಭೀರವಾದ ಸಮಸ್ಯೆಗಳು ಕಂಡುಬಂದಿಲ್ಲ. ಉಸಿರಾಟದ ತೊಂದರೆ ಇರುವವರಿಗೆ, SARI ಪ್ರಕರಣಗಳಲ್ಲಿ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಲು ಸೂಚನೆ ನೀಡಲಾಗಿದೆ. ಉಸಿರಾಟ ಹಾಗೂ ಹೃದಯಸಂಬಂಧಿ ಕಾಯಿಲೆ ಇರುವವರು ಅಡ್ಮಿಟ್ ಅಗಿರುವ ಆಸ್ಪತ್ರೆಗಳಲ್ಲಿ ಸ್ಯಾಂಪಲ್ಸ್ ಕಲೆಕ್ಟ್ ಮಾಡಿ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ನಡೆಸುವಂತೆ ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದರು.
ಬಾಣಂತಿಯರು ಜನ ಹೆಚ್ಚಿರುವ ಕಡೆ ಮಾಸ್ಕ್ ಧರಿಸಲು ಸಲಹೆ ನೀಡಲಾಗಿದೆ. ಯಾರು ಭಯ ಪಡುವ ಅಗತ್ಯವಿಲ್ಲ. ಕೋವಿಡ್ ಬಂದಿದೆ ಎಂದು ಆತಂಕ ಪಡುವ ಅಗತ್ಯವಿಲ್ಲ. ಆರೋಗ್ಯ ಇಲಾಖೆಯ ಮಾರ್ಗಸೂಚೊಯಂತೆ ಮುಂಜಾಗ್ರತೆ ವಹಿಸಿದರೆ ಸಾಕು. ತಕ್ಷಣಕ್ಕೆ ಮಾಸ್ಕ್ ಎಲ್ಲರಿಗೂ ಕಡ್ಡಾಯ ಮಾಡಿಲ್ಲ. ಬಾಣಂತಿಯರು, ಗರ್ಭಿಣಿಯರು ಧರಿಸಬೇಕು ಎಂದು ಸೂಚಿಸಲಾಗಿದೆ. ಸ್ವಚ್ಛತೆ ಕಾಪಾಡಿಕೊಂಡು ಸ್ಯಾನಿಟೈಸರ್ ಬಳಸುವುದು ಉತ್ತಮ. ಸಾರ್ವಜನಿಕರು ಪ್ರಯಾಣ ಮಾಡಲು ಯಾವುದೇ ಅಡ್ಡಿಯಿಲ್ಲ. ಎಲ್ಲರು ಸಹಜ ಜೀವನ ನಡೆಸಬಹುದು. ಮಾಧ್ಯಮಗಳು ಆತಂಕ ಸೃಷ್ಟಿಸುವುದು ಬೇಡ. ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಧ್ಯಮಗಳಿಂದ ಆಗಲಿ ಎಂದು ದಿನೇಶ್ ಗುಂಡೂರಾವ್ ಹೇಳಿದರು.
ಒಂದು ತಿಂಗಳಿಗಾಗುವಷ್ಟು ಟೆಸ್ಟಿಂಗ್ ಕಿಟ್ ಗಳನ್ನ ತೆಗೆದಿಟ್ಟುಕೊಳ್ಳಲು ಸೂಚಿಸಲಾಗಿದೆ. ಅಗತ್ಯವಿದ್ದಾಗ ಮಾತ್ರ ಟೆಸ್ಟ್ ಮಾಡಲಾಗುವುದು. ಬೆಂಗಳೂರಿನಲ್ಲಿ 32 ಕೋವಿಡ್ ಪಾಸಿಟಿವ್ ಪ್ರಕರಣಗಳಿದ್ದು, ಕಳೆದ ಒಂದು ವಾರದಲ್ಲಿ ಕೊಂಚ ಏರಿಕೆ ಕಂಡಿದೆ. ಎಲ್ಲವನ್ನ ಮಾನಿಟರ್ ಮಾಡಲಾಗುತ್ತಿದೆ. ಸದ್ಯಕ್ಕೆ ಕೋವಿಡ್ ವಿಚಾರದಲ್ಲಿ ಆತಂಕಪಡುವ ಸ್ಥಿತಿ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications