Kodi Mutt Swamiji: ಸಿಎಂ ಬದಲಾವಣೆಯಾಗಲಿದ್ದಾರಾ? ರಾಜ್ಯ ರಾಜಕೀಯದ ಬಗ್ಗೆ ಕೋಡಿಮಠ ಶ್ರೀ ಭವಿಷ್ಯ

ಬೆಳಗಾವಿ, ಜುಲೈ 30: ಕೆಲ ದಿನಗಳ ಹಿಂದೆ ದೇಶಕ್ಕೆ ಗಂಡಾಂತರ ಕಾದಿದೆ. ಭಾರಿ ಮಳೆ, ಭೂ ಕುಸಿತ, ಪ್ರವಾಹ ಸಂಭವಿಸಲಿದೆ ಎಂದು ಭವಿಷ್ಯ ನುಡಿದಿದ್ದ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು, ಇಂದು ರಾಜ್ಯ ರಾಜಕೀಯದ ಕುರಿತು ಭವಿಷ್ಯ ನುಡಿದಿದ್ದು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದ್ದಾರಾ ಎಂಬ ಪ್ರಶ್ನೆ ಉದ್ಭವಿಸಿದೆ.

ಬೆಳಗಾವಿಯ ರಾಮತೀರ್ಥನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೋಡಿಮಠದ ಶ್ರೀಗಳು,ಸನ್ಯಾಸಿ ಕಥೆಯೊಂದನ್ನು ಉದಾಹರಣೆಯಾಗಿ ನೀಡಿದ್ದಾರೆ. ಒಬ್ಬ ಸನ್ಯಾಸಿ ತಪ್ಪಸ್ಸಿಗೆ ಕುಳಿತಾಗ ಒಬ್ಬ ಬೇಡ ಜಿಂಕೆ ಭೇಟೆಯಾಡಲು ಬರುತ್ತಾನೆ. ಸನ್ಯಾಸಿ ಮುಂದೆ ಜಿಂಕೆ ಓಡಿ ಹೋಗುತ್ತದೆ. ಆಗ ಬೇಡ ಸನ್ಯಾಸಿಗೆ ಕೇಳುತ್ತಾನೆ. ಸ್ವಾಮಿ ಜಿಂಕೆ ಓಡಿ ಹೋಯಿತಾ? ಎಂದು. ಈ ವೇಳೆ ಸ್ವಾಮೀಜಿ ಇಕ್ಕಟ್ಟಿಗೆ ಸಿಲುಕುತ್ತಾರೆ. ಜಿಂಕೆ ಹೋಯಿತು ಎಂದರೆ ಅದನ್ನು ಬೇಡ ಕೊಂದು ಬಿಡುತ್ತಾನೆ. ಆ ಪಾಪ ನನಗೆ ಬಂದು ಬಿಡುತ್ತದೆ. ಇಲ್ಲ ಎಂದು ಹೇಳಿದರೆ ಸುಳ್ಳಾಡಿದಂತಾಗುತ್ತದೆ. ಇಂತಹ ಸಂದಿಗ್ಧಸ್ಥಿತಿಯಲ್ಲಿ ಸನ್ಯಾಸಿ ಒಂದು ಮಾತು ಹೇಳುತ್ತಾನೆ.

There Are More Bad Things Than Good In The Country Says Kodi Mutt Swamiji

ಯಾವುದು ನೋಡಿತೋ ಅದು ಮಾತನಾಡಲ್ಲ, ಯಾವುದು ಮಾತನಾಡಿತೋ ಅದು ನೋಡಲ್ಲ ಕಣ್ಣು ನೋಡುತ್ತದೆ ಆದರೆ ಮಾತನಾಡಲ್ಲ ನಾಲಿಗೆ ಮಾತನಾಡುತ್ತೆ ಆದರೆ ನೋಡುವುದಿಲ್ಲ. ಹಾಗೇ ರಾಜಕಾರಣದ ಬಗ್ಗೆ ಹೇಳಬೇಕಾದರೆ ಎಚ್ಚರಿಕೆಯಿಂದ ಹೇಳಬೇಕಾಗುತ್ತದೆ ಎಂದು ರಾಜ್ಯ ರಾಜಕರಣದ ಕುರಿತು ಮಾರ್ಮಿಕವಾಗಿ ಸ್ವಾಮೀಜಿಗಳು ಮಾತನಾಡಿದ್ದಾರೆ.

ಬರುವ ದಿನಗಳಲ್ಲಿ ಒಳ್ಳೆಯ ದಿನಗಳು ಸಹ ಇವೆ. ವಿಶೇಷವಾಗಿ ಕಪ್ಪು, ಬೆಳಕಿನಲ್ಲಿ ಕಪ್ಪು ಹೆಚ್ಚಾಗಿದೆ. ರಾಷ್ಟ್ರ ರಾಜಕಾರಣದ ಬಗ್ಗೆ, ಮಹಾಭಾರತದಲ್ಲಿ ಕೃಷ್ಣ ಇದ್ದ ಎಂದು ಭೀಮ ಗೆದ್ದ. ದುರ್ಯೋಧನ ಸೋತ. ರಾಷ್ಟ್ರ ರಾಜಕಾರಣದಲ್ಲಿ ಕೃಷ್ಣ ಇಲ್ಲ ದುರ್ಯೋಧನ ಗೆಲ್ಲುತ್ತಾನೆ ಭೀಮ ಸೋಲುತ್ತಾನೆ. ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮಹಾಭಾರತದಲ್ಲಿ ಅಭಿಮನ್ಯುವನ್ನು ಮೋಸದಿಂದ ಕತ್ತರಿಸುತ್ತಾರೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಸದ್ಯಕ್ಕೆ ತೊಂದರೆ ಇಲ್ಲ . ಪ್ರಜಾಪ್ರಭುತ್ವದಲ್ಲಿ ಮತದಾರರು ಮತವನ್ನು ದಾನ ಮಾಡುತ್ತಿಲ್ಲ. ಮಾರಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರಕ್ಕೆ ಯಾವುದೇ ಆಪತ್ತು ಇರುವುದಿಲ್ಲ. ರಾಜ್ಯದಲ್ಲಿ ಭೀಕರ ಮಳೆಯಾಗುತ್ತದೆ. ಗುಡ್ಡ ಕುಸಿತವಾಗುತ್ತದೆ ಸಾವು, ನೋವು ಸಂಭವಿಸುತ್ತದೆ ಎಂದು ಹೇಳಿದ್ದೆ. ಅದು ಅಮವಾಸ್ಯೆಯವರೆಗೂ ಇರುತ್ತದೆ. ಶ್ರಾವಣದಲ್ಲಿ ನಾನು ಮತ್ತೊಮ್ಮೆ ಸ್ಫೋಟಕ ಭವಿಷ್ಯ ಹೇಳುತ್ತೇನೆ ಎಂದು ಕೋಡಿಮಠ ಶ್ರೀಗಳು ತಿಳಿಸಿದ್ದಾರೆ.

ಜನರು ಎಲ್ಲವನ್ನೂ ಮನಶಾಂತಿಯಿಂದ ತೆಗೆದುಕೊಳ್ಳುತ್ತಿಲ್ಲ, ದ್ವೇಷ ಭಾಷೆಯಿಂದ ತೆಗೆದುಕೊಳ್ಳುತ್ತಿದ್ದಾರೆ. ಆತ್ಮಸಾಕ್ಷಿಯಾಗಿ ಜನರು‌ ಮತ ನೀಡಿತ್ತಿಲ್ಲ, ಎಲ್ಲಿಯವರೆಗೆ ಮತ ಸೆಲ್ ಮಾಡಿಕೊಳ್ಳುತ್ತಾರೆ, ಅಲ್ಲಿಯವರೆಗೆ ಲಾಭ ನಷ್ಟ ಇರುತ್ತದೆ. ಹಿಂದಿನ‌ ಕಾಲದಲ್ಲಿ ಧರ್ಮದ ಅನುಮತಿ ಪಡೆದು ರಾಜಕಾರಣ ಮಾಡುತ್ತಿದ್ರು. ಈಗ ಧರ್ಮವೂ ಇಲ್ಲ ಗುರಿಯೂ ಇಲ್ಲ, ದುಡ್ಡು ಮಾಡೋದಷ್ಟೇ ಗುರಿ. ಹಾಗಾಗಿ ಬಹುಬೇಗ ಇವರಿಗೆ ಅಪಘಾತಗಳು ಆಗುತ್ತವೆ ಎಂದ ಸ್ವಾಮೀಜಿ ಹೇಳಿದರು.

ಮನುಷ್ಯ ಯಾವುದೇ ಅಪೇಕ್ಷೆ ಇಲ್ಲದೇ ಮತ ಹಾಕ್ತಾನೆ, ಅಲ್ಲಿಯವರೆಗೆ ರಾಮರಾಜ್ಯ ಸಿಗಲ್ಲ. ಬರುವ ದಿನಗಳಲ್ಲಿ ರೋಗರುಜ್ಜಿಗಳು ಸ್ವಲ್ಪ ಜಾಸ್ತಿಯಾಗುತ್ತದೆ, ಜನರು ಮಾನಸಿಕ ಸ್ಥೈರ್ಯ ಕಳೆದುಕೊಳ್ಳುತ್ತಿದ್ದಾರೆ ಎಂದು ಬೆಳಗಾವಿಯಲ್ಲಿ ಭಯಾನಕ ಭವಿಷ್ಯ ಕೋಡಿಮಠದ ಶ್ರೀ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ನುಡಿದಿದ್ದಾರೆ.

ಕೇರಳದಲ್ಲಿ ಭೂಕುಸಿತ ಪ್ರಕರಣ ವಿಚಾರವಾಗಿ ಮಾತನಾಡಿದ ಅವರು, ಕಳೆದ ಇಪ್ಪತ್ತು ದಿನದಿಂದ ಹಿಂದೆ ನಾನು ಧಾರವಾಡದಲ್ಲಿ ಈ ತರಾ ಆಗುತ್ತೆ ಅಂತಾ ಹೇಳಿದ್ದೆ. ಮಳೆ ಆಗುತ್ತೆ, ಗುಡ್ಡ ಉರುಳುತ್ತೆ, ಜನರು ಸಾಯುತ್ತಾರೆ,
ರೋಗರುಜ್ಜಿನುಗಳು ಹೆಚ್ಚಾಗುತ್ತವೆ ಅಂತಾ ಹೇಳಿದ್ದೆ.ಇದು ಇಂಡಿಯಾ ಅಂತ ಅಷ್ಟೇ ಹೇಳಿರಲಿಲ್ಲ ಜಾಗತಿಕ ಮಟ್ಟದಲ್ಲಿ ಕೆಲವು ರಾಜ್ಯಗಳು ಮುಳುಗುತ್ತವೆ ಅಂತಾ ಹೇಳಿದ್ದೆ. ನನ್ನ ಪ್ರಕಾರ ಅಮಾವಾಸ್ಯೆವರೆಗೆ ಮಳೆ ಇರುತ್ತೆ ಬಳಿಕ ಬೇರೆ ಭಾಗಕ್ಕೆ ಹೋಗುತ್ತದೆ ಎಂದರು.

ಇದು ಕ್ರೋಧಿನಾಮ ಸಮಸ್ತರ,ಕ್ರೋಧ ಅಂದರೆ ಸಿಟ್ಟು ಇದರಲ್ಲಿ ಒಳ್ಳೆಯದು ಕೆಟ್ಟದ್ದು ಇದೆ ಆ ಪೈಕಿ ಕೆಟ್ಟದ್ದೆ ಜಾಸ್ತಿ ಇರುತ್ತದೆ. ಇದು ಪ್ರಾಕೃತಿಕ ದೋಷ ಮುಂದುವರೆಯುತ್ತೆ. ಅಮವಾಸ್ಯೆಯವರೆಗೆ ಒಂದು ಭಾಗಕ್ಕೆ ನಿಲ್ಲುತ್ತೆ ಮತ್ತೊಂದು ಭಾಗಕ್ಕೆ ಹೋಗುತ್ತದೆ. ಮುಂದೆ ಅನಿಷ್ಟ ಜಾಸ್ತಿ ಇದೆ, ಕತ್ತಲು ಬೆಳಕು ಎರಡು ಇರುತ್ತೆ ಅದರಲ್ಲಿ ಕತ್ತಲು ಜಾಸ್ತಿ ಇರುತ್ತೆ ಎಂದ ಸ್ವಾಮೀಜಿ ಭಯಂಕರ ಭವಿಷ್ಯವನ್ನ ನುಡಿದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+