ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಂಡ್ಯದ ಮೈಶುಗರ್ ಸಕ್ಕರೆ ಕಾರ್ಖಾನೆ ಕುರಿತು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಮಹತ್ವದ ತೀರ್ಮಾನ!

|
Google Oneindia Kannada News

ಬೆಂಗಳೂರು, ಆ. 14: ನಿಗಮ ಮಂಡಳಿಗಳು ಸರ್ಕಾರಕ್ಕೆ ಬಿಳಿ ಆನೆ ಸಾಕಿದಂತೆ ಎಂಬ ಮಾತಿದೆ. ಅವುಗಳಿಂದ ಬರುವ ಆದಾಯ ಕೂಡ ನೀರಿಕ್ಷಿತ ಮಟ್ಟದಲ್ಲಿ ಇರುವುದಿಲ್ಲ ಎಂಬುದು ಅದಕ್ಕೆ ಕಾರಣ. ರಾಜ್ಯ ಸರ್ಕಾರದ ಒಡೆತನದಲ್ಲಿರುವ ರೋಗಗ್ರಸ್ತ ಕೈಗಾರಿಕಾ ನಿಗಮಗಳ ಕುರಿತು ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಮಹತ್ವದ ತೀರ್ಮಾನ ಪ್ರಕಟಿಸಿದ್ದಾರೆ.

ರೋಗಗ್ರಸ್ತ ನಿಗಮಗಳಲ್ಲಿ ಸರ್ಕಾರದ ಬಂಡವಾಳ ಹಿಂತೆಗೆದುಕೊಂಡು ಪುನಶ್ಚೇತನಗೊಳಿಸಿ, ಲಾಭದತ್ತ ತೆಗೆದುಕೊಂಡು ಹೋಗಲು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಯಾವುದೇ ಕೈಗಾರಿಕೆ ಮುಚ್ಚಲು ಅವಕಾಶ ನೀಡುವುದಿಲ್ಲ. ಸಾಧ್ಯವಾದಷ್ಟು ಕೈಗಾರಿಕೆಗಳು ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುವಂತೆ ಕಾರ್ಯಕ್ರಮಗಳನ್ನು ರೂಪಿಸಲಾಗುವುದು. ರಾಜ್ಯದಲ್ಲಿರುವ ಎಲ್ಲ ನೈಸರ್ಗಿಕ ಸಂಪನ್ಮೂಲಗಳನ್ನು ಸದ್ಬಳಕೆ ಮಾಡಿಕೊಂಡು ಕೈಗಾರಿಕಾ ಉದ್ಯೋಗ ಕ್ರಾಂತಿ ಸೃಷ್ಟಿಸುವ ಗುರಿ ಹೊಂದಲಾಗಿದೆ ಎಂದಿದ್ದಾರೆ.

ಕರ್ನಾಟಕ ಪ್ರದೇಶ ಕೈಗಾರಿಕಾ ಅಭಿವೃದ್ಧಿ ಮಂಡಳಿ(ಕೆ ಐಎಡಿಬಿ) ಮೂಲಕ ಜಮೀನನ್ನು ಉದ್ಯಮಿಗಳು ಯಾವ ಕಾರಣಕ್ಕೆ ಪಡೆದಿದ್ದಾರೋ, ಅದೇ ಉದ್ದೇಶಕ್ಕೆ ಬಳಸಬೇಕು. ಒಂದು ವೇಳೆ ಭೂಮಿ ಎಲ್ಲಿಯಾದರೂ ದುರುಪಯೋಗವಾಗಿದ್ದರೆ ಸಮೀಕ್ಷೆ ನಡೆಸಲು ಸೂಚನೆ ನೀಡಿದ್ದೇನೆಂದು ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ಸರ್ಕಾರದ ಯಾವ ಕೈಗಾರಿಕೆಗಳು ನಷ್ಟದಲ್ಲಿವೆ ಎಂಬುದನ್ನು ಅವರೇ ಹೇಳಿದ್ದಾರೆ.

ಮೈಶುಗರ್ ಸೇರಿದಂತೆ ನಷ್ಟದಲ್ಲಿವೆ ಕೈಗಾರಿಕಾ ನಿಗಮಗಳು!

ಮೈಶುಗರ್ ಸೇರಿದಂತೆ ನಷ್ಟದಲ್ಲಿವೆ ಕೈಗಾರಿಕಾ ನಿಗಮಗಳು!

"ಕಲಬುರಗಿಯ ಸಿಮೆಂಟ್ ಕಾರ್ಪೋರೇಷನ್, ಮಂಡ್ಯದ ಮೈಶುಗರ್, ಮೈಸೂರು ಪೇಪರ್ ಮಿಲ್ಸ್ ಸೇರಿದಂತೆ ಹಲವಾರು ನಿಗಮಗಳು ಮತ್ತು ಸಂಸ್ಥೆಗಳು ನಷ್ಟದ ಹಾದಿಯಲ್ಲಿವೆ. ಹಿಂದೆ ದೆಹಲಿಗೆ ಭೇಟಿ ನೀಡಿದ ವೇಳೆ ಸಂಬಂಧಪಟ್ಟ ಸಚಿವರ ಜೊತೆ ಚರ್ಚೆ ನಡೆಸಿ ಇವುಗಳನ್ನು ಯಾವ ರೀತಿ ಪುನಶ್ಚೇತನ ಮಾಡಬೇಕು ಎಂಬುದರ ಬಗ್ಗೆ ಚರ್ಚೆ ನಡೆಸಲಾಗಿದೆ. ಬಂಡವಾಳ ಹಿಂದಕ್ಕೆ ಪಡೆಯುವುದರ ಬಗ್ಗೆಯೂ ಚರ್ಚೆ ಮಾಡಿದ್ದೇವೆ" ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ. ಜೊತೆಗೆ ಕೆಐಎಡಿಬಿಯಿಂದ ಪಡೆದುಕೊಂಡಿರುವ ಜಮೀನನ್ನು ಯಾವುದೇ ಕಾರಣಕ್ಕೂ ಬೇರೆ ಉದ್ದೇಶಕ್ಕೆ ಬಳಸಲು ಅವಕಾಶವಿಲ್ಲ. ಅದನ್ನು ನಾವು ಸೇಲ್ ಡೀಡ್ ಮಾಡಿರುವುದಿಲ್ಲ. ಒಂದು ವೇಳೆ ಅನ್ಯ ಕಾರಣಗಳಿಗೆ ಜಮೀನನ್ನು ಬಳಸಿಕೊಂಡಿದ್ದರೆ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಇವುಗಳಲ್ಲಿ ಸರ್ಕಾರ ಮಂಡ್ಯದ ಮೈಶುಗರ್ ಕಾರ್ಖಾನೆಯಲ್ಲಿನ ಬಂಡವಾಳ ಹಿಂದಕ್ಕೆ ತೆಗೆದುಕೊಳ್ಳುವುದನ್ನು ಆ ಭಾಗದ ರೈತರು ಹೇಗೆ ಸ್ವೀಕರಿಸುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.

ಕೋಲಾರದ ಚಿನ್ನದ ಗಣಿಯಲ್ಲಿ ಹೊಸ ಕೈಗಾರಿಕೆ!

ಕೋಲಾರದ ಚಿನ್ನದ ಗಣಿಯಲ್ಲಿ ಹೊಸ ಕೈಗಾರಿಕೆ!

ಕೋಲಾರ ಜಿಲ್ಲೆ ಕೆಜಿಎಪ್ ಬಳಿ 3 ಸಾವಿರಕ್ಕೂ ಹೆಚ್ಚು ಎಕರೆ ಜಮೀನು ಇದೆ. ಈ ಹಿಂದೆ ಇಲ್ಲಿ ಹೆಚ್ಚಿನ ಪ್ರಮಾಣದ ಚಿನ್ನ ಸಿಗುತ್ತಿತ್ತು. ಒಂದು ಟನ್ ಗಣಿಗಾರಿಕೆಗೆ 40 ಗ್ರಾಂ ಚಿನ್ನ ಸಿಗುತ್ತಿತ್ತು. ಈಗ ಅದರ ಪ್ರಮಾಣ ಕಡಿಮೆಯಾಗಿದೆ.

ಸುಮಾರು 3, 200 ಎಕರೆ ಪ್ರದೇಶದಲ್ಲಿ ಚಿನ್ನದ ನಿಕ್ಷೇಪ ಇಲ್ಲ ಎಂದು ಅಧಿಕಾರಿಗಳು ಸಮೀಕ್ಷೆ ನಡೆಸಿ ವರದಿ ನೀಡಿದ್ದಾರೆ. ಹೀಗಾಗಿ ಜಮೀನನ್ನು ನಮಗೆ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ಬಂದಿದೆ. ಕೈಗಾರಿಕೆ ಬಳಕೆಗೆ ನೀಡಿದರೆ ನಾವು ಕೈಗಾರಿಕಾ ಟೌನ್‌ಶಿಪ್ ಮಾಡಲಿದ್ದೇವೆ. ಈ ಪ್ರದೇಶದಲ್ಲಿ ಉತ್ತಮ ಕೈಗಾರಿಕಾ ವಾತಾವರಣ ಮೂಡಿಸುವ ಸಂಬಂಧ ಕೇಂದ್ರ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಜಮೀನು ವಶಕ್ಕೆ ಪಡೆಯಲು ಪ್ರಯತ್ನಿಸುತ್ತೇವೆ ಎಂದು ನಿರಾಣಿ ಹೇಳಿದ್ದಾರೆ.

ಯಶಸ್ವಿಯಾಗಿದ್ದ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶ

ಯಶಸ್ವಿಯಾಗಿದ್ದ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶ

ಹಿಂದೆ ನಡೆದಿದ್ದ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶ ಅತ್ಯಂತ ಸಫಲವಾಗಿತ್ತು. ದೇಶದಲ್ಲೇ ಮೊದಲ ಬಾರಿಗೆ ನಡೆಸಲಾಗಿದ್ದ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶದಿಂದ ಸುಮಾರು 11.8 ಲಕ್ಷ ಕೋಟಿ ರೂ. ಬಂಡವಾಳ ಹರಿದು ಬಂದಿತ್ತು. ಅದರಿಂದ 15 ಲಕ್ಷ ವಿದ್ಯಾವಂತ ಯುವಕರಿಗೆ ಉದ್ಯೋಗ ನೀಡಲಾಗಿದೆ. ಅದರೊಂದಿಗೆ ಭೂ ಬ್ಯಾಂಕ್ ಸ್ಥಾಪಿಸಿ ಕೃಷಿಗೆ ಯೋಗ್ಯವಲ್ಲದ ಜಮೀನನ್ನು ವಶಪಡಿಸಿಕೊಂಡು ಕೈಗಾರಿಕೆಗಳಿಗೆ ಉತ್ತೇಜನ ನೀಡುತ್ತಿದ್ದೇವೆ. ಸುಮಾರು 1.25 ಲಕ್ಷ ರೂ. ಪರಿಹಾರವನ್ನು ನೀಡಲಾಗುತ್ತಿತ್ತು. ಇದರ ಪರಿಣಾಮ ಉದ್ದಿಮೆದಾರರಿಗೆ ಸುಲಭವಾಗಿ ಬಂಡವಾಳ ಹೂಡಿಕೆ ಮಾಡಲು ಅನುಕೂಲವಾಯಿತು ಎಂದು ಸಚಿವ ನಿರಾಣಿ ಹೇಳಿದರು.

ಜೊತೆಗೆ ಜಿಲ್ಲಾ ಮಟ್ಟದಲ್ಲಿ ಕೈಗಾರಿಕಾ ಅದಾಲತ್‍ಗಳನ್ನು ನಡೆಸಲಾಗುವುದು. ನಮ್ಮ ಸರ್ಕಾರ ಉದ್ದಿಮೆದಾರರ ಮನೆಬಾಗಿಲಿಗೆ ಹೋಗಲಿದೆ. ಉದ್ದಿಮೆಯಾಗಿ ಉದ್ಯೋಗ ಎಂಬ ಕೈಗನ್ನಡಿಯೊಂದಿಗೆ ಐಟಿಐ, ಬಿಎ, ಬಿಕಾಂ, ಬಿಎಸ್ಸಿ, ಎಂಸ್ಸಿ, ಎಂಕಾಮ್, ಪಿಎಚ್‍ಡಿ ವಿದ್ಯಾವಂತರಿಗೆ ಉದ್ಯೋಗ ನೀಡುವುದೇ ನಮ್ಮ ಸರ್ಕಾರದ ಮೊದಲ ಗುರಿ ಎಂದು ನಿರಾಣಿ ಹೇಳಿದ್ದಾರೆ.

Recommended Video

ವಿರಾಟ್ ಆಟದ ವೈಖರಿ ಬಗ್ಗೆ ಮಾತಾಡಿದ ಪಾಕ್ ಆಟಗಾರ !! | Oneindia Kannada
ಶೀಘ್ರದಲ್ಲಿ ಥೀಮ್‌ಪಾರ್ಕ್‌ ಸ್ಥಾಪನೆ!

ಶೀಘ್ರದಲ್ಲಿ ಥೀಮ್‌ಪಾರ್ಕ್‌ ಸ್ಥಾಪನೆ!

ಮೈಸೂರು ಲ್ಯಾಂಪ್ಸ್ ಬಳಿ 21 ಎಕರೆ ಜಾಗವಿದ್ದು, ಅಲ್ಲಿ ಥೀಮ್‌ಪಾರ್ಕ್‌ ಸ್ಥಾಪನೆ ಮಾಡಲು ತೀರ್ಮಾನ ಮಾಡಲಾಗಿದೆ. ಇದೇ 19ರಂದು ಭೂಮಿ ಪೂಜೆ ಮಾಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಕೈಗಾರಿಕಾ ಇಲಾಖೆಯಲ್ಲಿ ನನ್ನ ಅನುಭವದ ಜತೆಗೆ ಹಿಂದಿನ ಸಚಿವರಾದ ಜಗದೀಶ್ ಶೆಟ್ಟರ್ ಅನುಭವದ ಮಾರ್ಗದರ್ಶನ ಪಡೆದುಕೊಂಡು ಉತ್ತಮವಾಗಿ ನಿರ್ವಹಣೆ ಮಾಡಲಾಗುವುದು. 2008 ಮತ್ತು 2013ರಲ್ಲಿ ಇಡೀ ಜಗತ್ತು ಕರ್ನಾಟಕದತ್ತ ನೋಡುವಂತೆ ಕೈಗಾರಿಕೆಯನ್ನು ನಿರ್ವಹಣೆ ಮಾಡಿದ್ದೆವು ಎಂದು ಸಚಿವ ಮುರುಗೇಶ್ ನಿರಾಣಿ ನೆನಪಿಸಿಕೊಂಡಿದ್ದಾರೆ.

English summary
There are plans to revive and withdraw government capital in sick industries says industries minister Murugesh Nirani. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X