ಟನೆಲ್ ರಸ್ತೆ ಯೋಜನೆಯಲ್ಲಿ ಸಾವಿರಾರು ಕೋಟಿ ದುಡ್ಡು ಹೊಡೆಯುವ ಸಂಚು: ಏನಿದು ಆರೋಪ

ಬೆಂಗಳೂರು, ಜುಲೈ 14: ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಮೂಲಕ ರಸ್ತೆ ನಿರ್ಮಿಸುವ ಸಾರ್ವಜನಿಕರ ಹಣದ ಲೂಟಿಯ ಯೋಜನೆಯನ್ನು ಉಪ ಮುಖ್ಯಮಂತ್ರಿಗಳು, ರಾಜ್ಯ ಸರಕಾರ, ಬಿಬಿಎಂಪಿ ಅಧಿಕಾರಿಗಳು ಯಾವುದೇ ಕಾರಣಕ್ಕೂ ಮಾಡದ ರೀತಿ ಬಿಜೆಪಿ ಹೋರಾಟ ಮಾಡಲಿದೆ ಎಂದು ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಮತ್ತು ಸಂಸದ ತೇಜಸ್ವಿ ಸೂರ್ಯ ಅವರು ಎಚ್ಚರಿಸಿದ್ದಾರೆ.

ಟನೆಲ್ ರಸ್ತೆ ಯೋಜನೆಯನ್ನು ಬಿಜೆಪಿ ವಿರೋಧಿಸುತ್ತದೆ. ಸಾರ್ವಜನಿಕರ ಒಂದೊಂದು ರೂಪಾಯಿಗೆ ನ್ಯಾಯ ಸಿಗುವ ರೀತಿಯಲ್ಲಿ ನಾವು ಹೋರಾಟ ಮಾಡಲಿದ್ದೇವೆ ಎಂದು ತಿಳಿಸಿದರು. ಟನೆಲ್ ರಸ್ತೆಯ ಡಿಪಿಆರ್, ಸಾಧ್ಯಾಸಾಧ್ಯತೆ ವರದಿಯಲ್ಲಿ ಸಮಸ್ಯೆ ಇದೆ. ಡಿಬಾರ್ ಆದ ಕನ್ಸಲ್ಟೆಂಟ್ ಅನ್ನು ನೇಮಿಸಿ ಇದನ್ನು ಸಿದ್ಧಪಡಿಸಿದ್ದಾರೆ ಎಂದು ಆರೋಪಿಸಿದರು. ಟನೆಲ್ ರಸ್ತೆಯು ಕಾಂಗ್ರೆಸ್ ಜೋಬನ್ನು ತುಂಬಿಸುವ ಯೋಜನೆ ಎಂದು ಅವರು ದೂರಿದರು.

There is a conspiracy to embezzle thousands of crores in the tunnel road project Tejasvi Surya

ಮಾಧ್ಯಮಗಳ ಮೂಲಕ ಇವತ್ತು ಜನಜಾಗೃತಿ ಶುರು ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಬೆಂಗಳೂರಿನ ಎಲ್ಲ ಸಂಸದರು, ಶಾಸಕರು, ನಮ್ಮ ರಾಜ್ಯಾಧ್ಯಕ್ಷರು, ಬೆಂಗಳೂರಿನ ಬಿಜೆಪಿಯ ನಮ್ಮೆಲ್ಲ ನಾಯಕರು ಚರ್ಚೆ ಮಾಡಲಿದ್ದೇವೆ. ಕಾನೂನಾತ್ಮಕ ಹೋರಾಟ, ಜನಜಾಗೃತಿ ಮೊದಲಾದ ವಿಷಯಗಳ ಚಿಂತನೆ ನಡೆಸುತ್ತೇವೆ. ಇದು ಸಾರ್ವಜನಿಕರ ಹಣದ ದೊಡ್ಡ ಲೂಟಿ ಎಂದು ಆರೋಪಿಸಿದರು.

ಡಿಪಿಆರ್‍ನಲ್ಲಿ ಬೆಂಗಳೂರಿನ ಮೆಟ್ರೋ ಯೋಜನೆ ಎಂದಿದೆ. ಬಿಬಿಎಂಪಿಯು 9.5 ಕೋಟಿಯನ್ನು ಡಿಪಿಆರ್‍ಗೆ ಖರ್ಚು ಮಾಡಿದೆ. ಮೆಟ್ರೋ ಸಂಬಂಧಿಸಿದ ಯೋಜನೆಯನ್ನೇ ಕಟ್ ಆಂಡ್ ಪೇಸ್ಟ್ ಮಾಡಿ ಇದನ್ನು ತಯಾರಿಸಿದ್ದಾರೆ ಎಂದು ಅವರು ಆರೋಪಿಸಿದರು. ಈ ಭಂಡತನ ಹೇಗಿದೆ ಎಂದರೆ, ನಾಸಿಕ್, ಮಾಳೆಗಾಂವ್ ಉದಾಹರಣೆ ನೀಡಿ ಕರ್ನಾಟಕದ ಜನ ದಡ್ಡರೆಂದು ಭಾವಿಸಿದರೆ, ಈ ಥರ ಭಂಡತನದಲ್ಲಿ ಜನರ ದುಡ್ಡು ಹೊಡೆಯಬಹುದೆಂದು ನಿಂತರೆ ಅಸಹ್ಯ ಆಗುವುದಿಲ್ಲವೇ ಎಂದು ಪ್ರಶ್ನಿಸಿದರು.

ಭ್ರಷ್ಟಾಚಾರ ತಡೆಯಲು ಇಂಥ ದೊಡ್ಡ ಯೋಜನೆಯನ್ನು ಡಿಎಂಎಲ್‍ಟಿಎ ಕಾನೂನಿನಂತೆ ಮಾಡಲು ನಮ್ಮ ಸರಕಾರ ತಿಳಿಸಿತ್ತು. ಇವರು ಆ ಕಾನೂನು ಜಾರಿಯಲ್ಲಿದ್ದರೂ ಇವರು ಯೋಜನಾ ವರದಿ ಮಾಡಿ ಟೆಂಡರ್ ಕರೆಯಲು ಹೊರಟಿದ್ದಾರೆ ಎಂದು ಟೀಕಿಸಿದರು. ನಿಯೋ ಬಸ್ ವ್ಯವಸ್ಥೆಯನ್ನು ಇದರೊಳಗೆ ಅಳವಡಿಸುವ ಸಲಹೆ ಮಾಡಿದ್ದಾರೆ. ಹಾಗೆಂದರೆ ಏನು? ಅದು ನೆಲದ ಮೇಲೆ ಹೋಗಲಿದೆಯೇ? ಆಕಾಶದಲ್ಲಿ ಹೋಗಲಿದೆಯೇ? ಎಂದು ಅವರು ಕೇಳಿದರು. ಇದು ಯಾವ ದೇಶದಲ್ಲಿದೆ ಎಂದು ಪ್ರಶ್ನೆ ಮಾಡಿದರು.

ಡಿಪಿಆರ್ (ವಿಸ್ತøತ ಯೋಜನಾ ವರದಿ) ಕೂಡ ಬಹಿರಂಗಪಡಿಸಿಲ್ಲ ಎಂದ ಅವರು, ಸಾಧ್ಯಾಸಾಧ್ಯತೆ ವರದಿಗೂ ಮೊದಲೇ ಡಿಪಿಆರ್ ಸಿದ್ಧವಾಗಿತ್ತು ಎಂದು ಟೀಕಿಸಿದರು. ಸಾಧ್ಯಾಸಾಧ್ಯತೆ ವರದಿಯಲ್ಲಿ ಡಿಪಿಆರ್ ಕನ್ಸಲ್ಟೆಂಟ್ ಯಾರಾಗಬೇಕೆಂದು ಸಲಹೆ ನೀಡಿದ್ದಾರೆ ಎಂದು ಆರೋಪಿಸಿದರು.

ಸಾರ್ವಜನಿಕ ವಾಹನ ವ್ಯವಸ್ಥೆ ಇಲ್ಲದ ಕಾರಣ ಏರ್‍ಪೋರ್ಟಿಗೆ ಶೇ 72 ಜನರು ಖಾಸಗಿ ವಾಹನದಲ್ಲೇ ಹೋಗಬೇಕಿದೆ. ಬೆಂಗಳೂರಿನ ಸಂಚಾರ ಸಮಸ್ಯೆ ಬಗೆಹರಿಸಲು ನಾವು 2020ರಲ್ಲಿ ಸಮಗ್ರ ಸಂಚಾರ ಯೋಜನೆಯನ್ನು ರೂಪಿಸಿದ್ದೆವು. ಬೆಂಗಳೂರಿಗೆ 16,580 ಬಸ್ ಬೇಕೆಂದು ಈ ಯೋಜನೆ ಹೇಳಿದೆ. ಇವತ್ತು ಆರು ಸಾವಿರ ಬಸ್ಸುಗಳಿದ್ದು, 9 ಸಾವಿರಕ್ಕೂ ಹೆಚ್ಚು ಬಸ್ ಕೊರತೆ ಇದೆ ಎಂದು ವಿಶ್ಲೇಷಿಸಿದರು. ಬಸ್ ಸಂಖ್ಯೆ ಹೆಚ್ಚಿಸಲು ರಾಜ್ಯ ಸರಕಾರ ಏನೂ ಮಾಡುತ್ತಿಲ್ಲ ಎಂದು ದೂರಿದರು. 2031ನೇ ಇಸವಿ ಒಳಗೆ ಮೆಟ್ರೊ ಜಾಲ 317 ಕಿಮೀ ಇರಬೇಕಿದೆ. ಈಗ ಕೇವಲ 78 ಕಿಮೀ ಮೆಟ್ರೊ ಜಾಲ ಇದೆ ಎಂದು ವಿವರಿಸಿದರು. 4 ವರ್ಷದಿಂದ ಸಿದ್ಧವಿರುವ ಯೆಲ್ಲೊ ಲೈನನ್ನು ಸಂಚಾರಕ್ಕೆ ತೆರೆಯುತ್ತಿಲ್ಲ ಎಂದು ಟೀಕಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+