ಡಿಕೆ ಶಿವಕುಮಾರ್ ಸಿಎಂ ಆಗ್ತಾರಾ? ನವೆಂಬರ್ ಕ್ರಾಂತಿ ಬಗ್ಗೆ ಹೆಚ್ ಡಿ ಕುಮಾರಸ್ವಾಮಿ ಭವಿಷ್ಯವೇನು?
ಮೈಸೂರು, ನವೆಂಬರ್ 07: ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆಯೇ ಭಾರೀ ಪೈಪೋಟಿ ಇದೆ ಎಂದು ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಅಲ್ಲದೇ ಕ್ರಾಂತಿ-ಗಿಂತಿ ನಡೆದಿಲ್ಲ ಎಲ್ಲಾ ಮೊದಲೇ ತೀರ್ಮಾನವಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆ ಹಾಗೂ ನವೆಂಬರ್ ಕ್ರಾಂತಿ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನವೆಂಬರ್ ನಲ್ಲಿ ಯಾವ ಕ್ರಾಂತಿಯೂ ಆಗಲ್ಲ ವಾಂತಿಯೂ ಆಗಲ್ಲ. ನನಗೆ ಸಿದ್ದರಾಮಯ್ಯನವರ ಗುಣ ಗೊತ್ತಿದೆ. ಅವರು ನಮ್ಮ ಪಕ್ಷದಲ್ಲೇ ಇದ್ದಾಗಲೇ ಅವರ ಗುಣ ತಿಳಿದುಕೊಂಡಿದ್ದೇನೆ. ಹೀಗಾಗಿ ಯಾವ ಬದಲಾವಣೆಯೂ ಅಗುವುದಿಲ್ಲ ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದರು.

ಡಿ.ಕೆ ಶಿವಕುಮಾರ್ ಯಾವಾಗಲೂ ದೇವರ ಜೊತೆ ಮಾತನಾಡುತ್ತಾರೆ. ದೇವರು ಅವರಿಗೆ ಏನೇನು ಹೇಳಿದ್ದಾನೋ ನಮಗೇನು ಗೊತ್ತು? ಅದೇನಿದ್ದರೂ ಡಿ.ಕೆ. ಶಿವಕುಮಾರ್ ಹಾಗೂ ದೇವರಿಗೆ ಸಂಬಂಧಪಟ್ಟ ವಿಚಾರ. ಹಾಗಂತ ಡಿಕೆ ಶಿವಕುಮಾರ್ ಅವವ್ರೇ ಹೇಳಿದ್ದಾರೆ. 2028ಕ್ಕೆ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. 20, 10 ವರ್ಷ ನಾವೇ ಎಂದು ಹೇಳಿದವರು ಏನಾಗಿದ್ದಾರೆ ಎಂಬುದು ನನಗೆ ಗೊತ್ತಿದೆ. 2028ಕ್ಕೆ ಏನೇನಾಗುತ್ತೊ ಯಾರಿಗೆ ಗೊತ್ತು ಬಿಡಿ ಎಂದು ಲೇವಡಿ ಮಾಡಿದರು.
ಸಿಎಂ ಸಿದ್ದರಾಮಯ್ಯ ಅವರು ಮೈಸೂರು ನಗರವನ್ನು ಗ್ರೇಟರ್ ಮೈಸೂರು ಮಾಡುತ್ತಾರೆ ಎಂದು ಹೇಳಿದ್ದಾರೆ ಎಂಬ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವರು; ಇದು ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನಡುವಿನ ಪೈಪೋಟಿ. ಡಿಕೆಶಿ ಮೇಲಿನ ಪೈಪೋಟಿಗಾಗಿ ಸಿದ್ದರಾಮಯ್ಯ ಅವರು ಗ್ರೇಟರ್ ಮೈಸೂರು ಘೋಷಣೆ ಮಾಡಿದ್ದಾರೆ. ಅಲ್ಲಿ ಡಿ.ಕೆ. ಶಿವಕುಮಾರ್ ಅವರು ಗ್ರೇಟರ್ ಬೆಂಗಳೂರು ಘೋಷಣೆ ಮಾಡಿದ್ದಾರೆ. ಅದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಅವರು ಗ್ರೇಟರ್ ಮೈಸೂರು ಎನ್ನುತ್ತಿದ್ದಾರೆ. ಯಾವ ಗ್ರೇಟರ್ ಕೂಡಾ ಆಗುವುದಿಲ್ಲ. ಇವರು ಸುಮ್ಮನೆ ಕಾಲಹರಣ ಮಾಡಿಕೊಂಡು ಹೋಗುತ್ತಿದ್ದಾರೆ ಎಂದು ಹೇಳಿದರು.
ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲಾಗದ ಮುಖ್ಯಮಂತ್ರಿಗಳು ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿದ್ದಾರೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು. ರೈತರ ಕಷ್ಟಕ್ಕೆ ಸ್ಪಂದಿಸಬೇಕು ಎನ್ನುವ ಇರಾದೆ ಈ ಸರ್ಕಾರಕ್ಕೆ ಇಲ್ಲ. ಪ್ರತಿಯೊಂದು ವಿಷಯವನ್ನೂ ಕೇಂದ್ರದ ಮೇಲೆ ಹಾಕಿ ನುಣಚಿಕೊಳ್ಳುವ ಕೆಲಸ ಮಾಡುತ್ತಿದೆ ಎಂದರು.
ಮುಖ್ಯಮಂತ್ರಿಗಳು ಮನಸು ಮಾಡಿದರೆ ಇದು ಅತ್ಯಂತ ಚಿಕ್ಕ ವಿಚಾರ. ಕೆಲವು ನಿಮಿಷಗಳಲ್ಲಿ ಬಗೆಹರಿಸಬಹುದಾದ ವಿಷಯ ಇದಾಗಿದೆ. ಆದರೆ, ಸಿಎಂ ಅವರು ಪ್ರತಿಯೊಂದಕ್ಕೂ ರಾಜಕೀಯ ಮಾಡುತ್ತಿದ್ದಾರೆ. ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನ ಮಂತ್ರಿಗೆ ಪತ್ರ ಬರೆದಿದ್ದಾರೆ. ದೇಶದ ಯಾವ ರಾಜ್ಯದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲು ಪ್ರಧಾನಮಂತ್ರಿ ಮಧ್ಯಸ್ಥಿಕೆ ವಹಿಸಿದ್ದಾರೆ ಹೇಳಿ? ಎಂದು ಕೇಂದ್ರ ಸಚಿವರು ಪ್ರಶ್ನಿಸಿದರು.
ಈ ಸಮಸ್ಯೆ ವಿಚಾರದಲ್ಲಿ ಜನ ಪ್ರತಿನಿಧಿಗಳನ್ನು ಕರೆದು ಮಾತನಾಡುವುದು ಏನಿದೆ? ಮುಖ್ಯಮಂತ್ರಿಗಳೇ ನೇರವಾಗಿ ನಿರ್ಧಾರ ಕೈಗೊಳ್ಳಬಹುದು. ನೇರವಾಗಿ ಬೆಳೆಗಾರರ ಜತೆ ಮಾತನಾಡಿ ಬಿಕ್ಕಟ್ಟನ್ನು ಬಗೆಹರಿಸಬಹುದು. ಅದನ್ನು ಮಾಡದೇ ಕೇವಲ ರಾಜಕೀಯ ಮಾಡುವುದರಲ್ಲಿ ಈ ಸರಕಾರ ಮುಳುಗಿದೆ. ಸಿಎಂ ನೇರವಾಗಿ, ಮುಕ್ತವಾಗಿ ಕಬ್ಬು ಬೆಳೆಗಾರರ ಪರವಾಗಿ ನಿರ್ಧಾರ ತೆಗೆದುಕೊಳ್ಳಬಹುದು. ಸಿಎಂ ಅವರು ಆ ಕೆಲಸ ಮಾಡುವುದು ಬಿಟ್ಟು ಕೇಂದ್ರದ ಮೇಲೆ ಆರೋಪ ಮಾಡುತ್ತಿದ್ದಾರೆ. ಬೆಳಗಾವಿಯ ಸ್ಥಳೀಯ ಜನಪ್ರತಿನಿಧಿಗಳು ಮತ್ತು ಸಕ್ಕರೆ ಲಾಬಿಯ ಒತ್ತಡಕ್ಕೆ ಅವರು ಮಣಿದಿರುವ ಸಾಧ್ಯತೆ ಇದೆ. ಅಂತಹ ಒತ್ತಡಕ್ಕೆ ಮಣಿಯದೆ ಮೊದಲು ಬೆಳೆಗಾರರ ಹಿತ ಕಾಯುವ ಕೆಲಸ ಮಾಡಬೇಕು ಎಂದು ಸಚಿವ ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ












Click it and Unblock the Notifications