Gruha Lakshmi Scheme: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹತ್ವದ ಬದಲಾವಣೆ; ಮಾರ್ಚ್ ತಿಂಗಳ ಹಣ ಸದ್ಯಕ್ಕಿಲ್ಲ
ಬೆಂಗಳೂರು, ಏಪ್ರಿಲ್ 09: ರಾಜ್ಯ ಕಾಂಗ್ರೆಸ್ ಪಂಚ ಗ್ಯಾರಂಟಿ ಯೋಜನೆಗಳನ್ನ ಹಂತ ಹಂತವಾಗಿ ಜಾರಿಗೆ ತಂದಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರೆಂಟಿಗಳ ಪೈಕಿ ಗೃಹಲಕ್ಷ್ಮಿ ಯೋಜನೆಯೂ ಕೂಡ ಒಂದು. ಈ ಯೋಜನೆಯಿಂದ ಮನೆಯ ಯಜಮಾನಿಯ ಖಾತೆಗೆ ಪ್ರತಿ ತಿಂಗಳ 2000 ಹಣ ಜಮಾ ಆಗುತ್ತಿದ್ದು, ಈ ಹಣದಿಂದ ಸಾಕಷ್ಟು ಪ್ರಯೋಜನವಾಗಿದೆ. ಈ ಯೋಜನೆಯ ಮೂಲಕ ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಅಂತಹ ಪ್ರತಿ ಮನೆಯ ಯಜಮಾನಿಗೆ ತಿಂಗಳಿಗೆ 2000 ರೂ ಹಣ ಸಿಗುತ್ತದೆ. ಆದರೆ, ಇದೀಗ ರಾಜ್ಯಾಧ್ಯಂತ ಗೃಹಲಕ್ಷ್ಮೀ ಯೋಜನೆಯ ಹಣ ಪಾವತಿಯನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ ಎಂದು ಮಾತುಗಳು ಕೇಳಿ ಬರುತ್ತಿವೆ.
ಹೌದು, ರಾಜ್ಯ ಸರ್ಕಾರ 16 ನೇ ಕಂತಿನ ಹಣವನ್ನ ಜನವರಿ ತಿಂಗಳಿನಲ್ಲಿ ಮಹಿಳೆಯರ ಖಾತೆಗೆ ಜಮಾ ಮಾಡಬೇಕಿತ್ತು. ಆದರೆ, ತಾಂತ್ರಿಕ ಸಮಸ್ಯೆಯಿಂದಾಗಿ ಕಳೆದ ಮೂರ್ನಾಲ್ಕು ಗೃಹ ಲಕ್ಷ್ಮಿ ಹಣ ಸರಿಯಾಗ ಖಾತಗೆ ಜಮಾ ಆಗದ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷಗಳು ಹಾಗೂ ರಾಜ್ಯದ ಮಹಿಳೆಯರು ಅಸಮಾಧಾನವನ್ನ ಹೊರಹಾಕಿದ್ದು, ಮಾತು ಕೊಟ್ಟಂತೆ ಹಣವನ್ನ ಖಾತೆಗೆ ಹಾಕಿ ಎಂದು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದ್ದರು.

ಇದೀಗ ಹಂತ ಹಂತವಾಗಿ ಬಾಕಿ ಉಳಿಸಿಕೊಂಡಿದ್ದ ಗೃಹ ಲಕ್ಷ್ಮಿ ಯೋಜನೆಯ ಹಣವನ್ನ ಸರ್ಕಾರ ಹಾಕಿದ್ದು. ಸದ್ಯ ಜನವರಿ ತಿಂಗಳ ಹಣ ಮಹಿಳೆಯರ ಖಾತೆಗೆ ಜಮಾ ಆಗಿದೆ. ಇನ್ನೂ ಫೆಬ್ರವರಿ ತಿಂಗಳ ಹಣ ಏಪ್ರಿಲ್ 15 ಒಳಗೆ ಮಹಿಳಾ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಹಿತಿ ನೀಡಿದ್ದಾರೆ.ಇನ್ನೂ ಕಳೆದ ಬಜೆಟ್ ನಲ್ಲೂ ಮಹಿಳೆಯರು ಆರ್ಥಿಕವಾಗಿ ಸಧೃಡರಾಗಲಿದೆ ಎಂದು ಅಕ್ಕ ಸೊಸೈಟಿಯನ್ನ ಸಿದ್ದರಾಮಯ್ಯ ಅವರು ಘೋಷಿಸಿದ್ದು, ಗೃಹಲಕ್ಷ್ಮಿ ಯೋಜನೆಯಲ್ಲಿ ಮಹತ್ವದ ಬದಲಾವಣೆ ತರಲು ಇಲಾಖೆ ಮುಂದಾಗಿದೆ.
ಇನ್ನೂ ಮಾರ್ಚ್ ತಿಂಗಳ ಗೃಹಲಕ್ಷ್ಮೀ ಯೋಜನೆ ಹಣ ಮಹಿಳೆಯರ ಖಾತೆಗೆ ಜಮಾ ಆಗೋದಿಲ್ಲ. ಯಾಕೆಂದರೆ ರಾಜ್ಯ ಶಿಶು ಅಭಿವೃದ್ದಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಂಬಂದಿಸಿದ ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಸಾರ್ವಜನಿಕ (ಫಲಾನುಭವಿಗಳ)ರ ಮಾಹಿತಿಗಾಗಿ ಐಟಿ/ಜಿಎಸ್‍ಟಿ ಟ್ಯಾಕ್ಸ್ ಪೇಯಿ ಎಂದು ತೋರಿಸುತ್ತಿರುವ ಫಲಾನುಭವಿಗಳು ಹಾಗೂ ಈಗಾಗಲೇ ದಾಖಾಲಾತಿಯನ್ನು ಸಲ್ಲಿಸಿರುವ ಫಲಾನುಭವಿಗಳ ಮಾಹಿತಿಗಾಗಿ ಸರ್ಕಾರದ ಆದಾಯ ತೆರಿಗೆ ಇಲಾಖೆಯಿಂದ ಹಾಗೂ ವಾಣಿಜ್ಯ ತೆರಿಗೆ ಇಲಾಖೆಯಿಂದ ಫಲಾನುಭವಿಗಳ ದತ್ತಾಂಶದ ಪರಿಶೀಲನೆಯ ಮಾಹಿತಿ ಸ್ವೀಕೃತವಾದ ನಂತರ ಫಲಾನುಭವಿಗಳಿಗೆ ಧನಸಹಾಯ ಪಾವತಿಸುವ ಕುರಿತು ಸರ್ಕಾರದ ಹಂತದಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಾಗುತ್ತದೆ ಎಂದು ತಿಳಿದು ಬಂದಿದೆ.
ಈ ಹಿನ್ನಲೆಯಲ್ಲಿ ಅಲ್ಲಿಯವರೆಗೂ ಐಟಿ ಹಾಗೂ ಜಿಎಸ್‍ಟಿ ಟ್ಯಾಕ್ಸ್ ಪೇಯಿ ಫಲಾನುಭವಿಗಳು ಮಾಹಿತಿಯನ್ನು ಪ್ರಧಾನ ಕಚೇರಿಗೆ ರವಾನಿಸದೇ ಇರುವಂತೆ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಂಗಳೂರು ಇವರಿಂದ ತಿಳಿಸಿರುತ್ತಾರೆ. ಹೀಗಾಗಿ ಸದ್ಯಕ್ಕೆ ಮಾರ್ಚ್ ಸೇರಿದಂತೆ ಬಾಕಿ ಗೃಹಲಕ್ಷ್ಮೀ ಯೋಜನೆಯ ಹಣ ಪಾವತಿ ತಾತ್ಕಾಲಿಕವಾಗಿ ಸ್ಥಗಿತಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ.












Click it and Unblock the Notifications