DK Shivakumar: ಕೇಂದ್ರದಿಂದ ರಾಜ್ಯಕ್ಕೆ ಅನುದಾನ ಹಂಚಿಕೆಯಲ್ಲಿ ಅನ್ಯಾಯ: ಡಿ ಕೆ ಶಿವಕುಮಾರ್‌ ಏನಂದ್ರು?

ಬೆಂಗಳೂರು, ಜನವರಿ 14: ಕೇಂದ್ರದಿಂದ ರಾಜ್ಯಕ್ಕೆ ಅನುದಾನ ಹಂಚಿಕೆಯಲ್ಲಿ ಅನ್ಯಾಯವಾಗುತ್ತಿದೆ. ಈ ವಿಚಾರವನ್ನು ನಾವು ಕೂಲಂಕುಶವಾಗಿ ಪರಿಶೀಲಿಸುತ್ತಿದ್ದು, ನಮ್ಮ ರಾಜ್ಯಕ್ಕೆ ಅನ್ಯಾಯವಾಗಿದೆ. ಈ ವಿಚಾರವಾಗಿ ನಾವು ಒಂದು ತೀರ್ಮಾನಕ್ಕೆ ಬರುತ್ತೇವೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಹೇಳಿದರು.

ಸಂಘಟನೆಗಾಗಿ ನಮ್ಮ ಪಕ್ಷ ಹಾಗೂ ಸರ್ಕಾರ ಇಡೀ ದಿನ ಮುಡಿಪಾಗಿಟ್ಟು ಸಭೆ ನಡೆಸಲಾಗಿದೆ. ಈ ವರ್ಷ ಪಕ್ಷ ಸಂಘಟನೆಗೆ ಆದ್ಯತೆ ನೀಡುವುದು ಹಾಗೂ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದ ಸಿದ್ಧತೆ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

There is injustice in the allocation of funds from the center to state Says DK Shivakumar

ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ನಿಧನರಾದ ಹಿನ್ನೆಲೆಯಲ್ಲಿ ಕಳೆದ ವರ್ಷದ ಡಿ. 27 ರಂದು ನಡೆಯಬೇಕಾಗಿದ್ದ ಎಐಸಿಸಿಯ ಸಮಾವೇಶವನ್ನು ಮುಂದೂಡಲಾಗಿತ್ತು. ಈ ಸಮಾವೇಶವನ್ನು ಇದೇ ತಿಂಗಳು 21ರಂದು ಬೆಳಗಾವಿಯಲ್ಲೇ ನಡೆಸಲಾಗುವುದು. ಈ ಸಮಾವೇಶದ ಪೂರ್ವಭಾವಿ ಸಭೆಯನ್ನು ನಡೆಸಿ ನಮ್ಮ ನಾಯಕರಿಗೆ ನೀಡಲಾಗಿರುವ ಜವಾಬ್ದಾರಿಗಳ ಬಗ್ಗೆ ಮಾರ್ಗದರ್ಶನ ನೀಡಿದ್ದೇವೆ ಎಂದು ತಿಳಿಸಿದರು.

ಶಾಸಕರು, ಮಂತ್ರಿಗಳು, ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರು, ಪ್ರಮುಖ ಘಟಕಗಳ ಅಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಭೆ ಮಾಡಿದ್ದೇವೆ. ಗಾಂಧಿ ಭಾರತದ ಕಾರ್ಯಕ್ರಮ ಅಂಗವಾಗಿ ಬೆಳಗಾವಿ ಅಧಿವೇಶನದ ಶತಮಾನೋತ್ಸವ ಆಚರಣೆ ಹಿನ್ನೆಲೆಯಲ್ಲಿ ನಡೆದ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯ ನಿರ್ಣಯಗಳ ಬಗ್ಗೆ ಈ ಸಭೆಯಲ್ಲಿ ಚರ್ಚೆ ಮಾಡಲಾಗಿದೆ ಎಂದು ತಿಳಿಸಿದರು.

224 ಕ್ಷೇತ್ರಗಳಿಂದ ಕನಿಷ್ಠ ಪಕ್ಷದ ನೂರು ಜನ ಮುಖಂಡರು ಹಾಗೂ ಕಾರ್ಯಕರ್ತರು ಆಗಮಿಸಬೇಕು ಎಂದು ಹೇಳಿದ್ದೇವೆ. ಈ ಐತಿಹಾಸಿಕ ಸಭೆಗೆ ಎಲ್ಲರೂ ಆಗಮಿಸಬೇಕು ಎಂದು ಆಹ್ವಾನ ನೀಡುತ್ತೇನೆ. ನಾವು ಈ ಸಮಾವೇಶಕ್ಕೆ ನೇಮಿಸಿದ್ದ ಸಮಿತಿಗಳು ತಮ್ಮ ಕಾರ್ಯ ನಿರ್ವಹಣೆ ಮಾಡಲಿವೆ. ನಮ್ಮ ಎಲ್ಲ ಪದಾಧಿಕಾರಿಗಳು ಇದೇ 15 ಹಾಗೂ 16ರಂದು ಎಲ್ಲಾ ಕ್ಷೇತ್ರಗಳಿಗೆ ಪ್ರವಾಸ ಮಾಡಿ ಈ ಸಮಾವೇಶದ ಪೂರ್ವಭಾವಿ ಸಭೆ ಮಾಡಲು ಸೂಚಿಸಿದ್ದೇವೆ. ಕಿತ್ತೂರು ಕರ್ನಾಟಕ ಭಾಗಕ್ಕೆ ನಮ್ಮ ಸಚಿವರು ಹಾಗೂ ಶಾಸಕರು ವಿಧಾನಸಭಾ ಕ್ಷೇತ್ರಗಳಿಗೆ ಹೋಗಿ ಪೂರ್ವಭಾವಿ ಸಭೆ ನಡೆಸಲು ಸೂಚಿಸಿದ್ದೇವೆ ಎಂದು ತಿಳಿಸಿದರು.

ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶಕ್ಕೆ ನಮ್ಮ ಸಿದ್ಧತೆ ಆರಂಭವಾಗಿದೆ. ಈ ವರ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಈ ವರ್ಷ ಪಕ್ಷದ ಸಂಘಟನೆ ಮಾಡಬೇಕು ಎಂದು ತೀರ್ಮಾನಿಸಿರುವ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೆವಾಲ ಅವರು ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬ್ಲಾಕ್, ಪಕ್ಷದ ಪ್ರಮುಖ ಘಟಕಗಳು, ಜಿಲ್ಲಾ ಕಾಂಗ್ರೆಸ್, ವಿಧಾನಸಭಾ ಕ್ಷೇತ್ರ, ಜಿಲ್ಲಾ ಹಾಗೂ ಲೋಕಸಭಾ ಕ್ಷೇತ್ರ ಹಂತಗಳಲ್ಲಿ ಹೊಸ ಸಮಿತಿ ರಚಿಸಬೇಕು ಎಂದು ತಿಳಿಸಿದರು.

ಮುಂದಿನ ಮೂರ್ನಾಲ್ಕು ತಿಂಗಳಲ್ಲಿ ಪಂಚಾಯ್ತಿಯಿಂದ ತಾಲೂಕು, ಜಿಲ್ಲಾ ಮಟ್ಟದಲ್ಲಿ ಸಮಿತಿ ರಚಿಸಿ ಪಕ್ಷ ಬಲವರ್ಧನೆಗೆ ಹೊಸರೂಪ ನೀಡಬೇಕು ಎಂದು ತೀರ್ಮಾನಿಸಲಾಗಿದೆ. ಉದಯಪುರ ಘೋಷಣೆಯಂತೆ ಕಾರ್ಯನಿರ್ವಹಣೆಗೆ ಸೂಚಿಸಲಾಗಿದೆ. ಇಂದು ನಡೆಸಿದ ಸಭೆಯಲ್ಲಿ ಯಾರಿಗೆ ಯಾವ ಜವಾಬ್ದಾರಿ ನೀಡಲಾಗಿದೆ ಅದನ್ನು ನಿಭಾಯಿಸಬೇಕು. ಯಾರಿಗೆಲ್ಲ ಬೇರೆ ಜವಾಬ್ದಾರಿ ಇದೆಯೋ ಅವರಿಗೆ ವಿಶ್ರಾಂತಿ ನೀಡಬೇಕು. ಈ ಬಗ್ಗೆ ವರದಿ ನೀಡುವಂತೆ ಹೇಳಿದ್ದೇನೆ ಎಂದು ಮಾಹಿತಿ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+