Siddaramaiah: ಮುಡಾ ಹಗರಣಕ್ಕೆ ಸಾಕ್ಷ್ಯ ನೀಡಿದ ಇಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ‌ ಫಸ್ಟ್‌ ರಿಯಾಕ್ಷನ್

ಮಂಡ್ಯ, ಡಿಸೆಂಬರ್‌ 04: ED ಯವರು ತಮ್ಮ ತನಿಖೆಯ ವಿವರವನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿರುವುದರ ಬಗ್ಗೆ ಮತ್ತು ಲೋಕಾಯುಕ್ತಕ್ಕೆ ಪತ್ರ ಬರೆದಿರುವುದರ ಹಿಂದಿನ ಉದ್ದೇಶದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿ, ಹೈಕೋರ್ಟ್ ನಲ್ಲಿ ನಮ್ಮ‌ ಅರ್ಜಿ ವಿಚಾರಣೆಗೆ ಬರುವ ಹಿಂದಿನ‌ ದಿನ ED ಯವರು ಲೋಕಾಯುಕ್ತಕ್ಕೆ ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

There Is Malice Behind ED s Letter To Lokayukta Says Siddaramaiah

ED ಯವರು ತನಿಖೆ ನಡೆಸುತ್ತಿದ್ದಾರೆ. ಇವರು ತನಿಖೆ ನಡೆಸುತ್ತಿರುವುದೇ ಸರಿಯಲ್ಲ. ಆಗಲಿ, ತನಿಖೆ ನಡೆಸಿದ ಮೇಲೆ ತನಿಖಾ ವರದಿಯನ್ನು ಲೋಕಾಯುಕ್ತಕ್ಕೆ ನೀಡಬಹುದಿತ್ತು. ಅದನ್ನು ಬಿಟ್ಟು , ಲೋಕಾಯುಕ್ತಕ್ಕೆ ಪತ್ರ ಬರೆಯುವುದು ಮತ್ತು ಮಾಧ್ಯಮಗಳಿಗೆ ಸೋರಿಕೆ ಮಾಡುವುದರ ಹಿಂದೆ ರಾಜಕೀಯ ದುರುದ್ದೇಶ ಇದೆ ಎಂದು ಸಿದ್ದರಾಮಯ್ಯ ಅವರು ಹೇಳಿದರು.

ಈ ವಿಚಾರಕ್ಕೆ ಸಂಬಂಧಪಟ್ಟಂತೆ ನಾಳೆ ನಮ್ಮ ಅರ್ಜಿ ಹೈಕೋರ್ಟ್ ನಲ್ಲಿ ವಿಚಾರಣೆ ಬರುತ್ತಿದೆ. ಇದಕ್ಕೆ ಒಂದು ದಿನ ಮೊದಲು ಮಾಧ್ಯಮಗಳಲ್ಲಿ ಪ್ರಚಾರ ಮಾಡಿರುವುದರ ಹಿಂದೆ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಮತ್ತು ನ್ಯಾಯಾಲಯವನ್ನು ಪೂರ್ವಾಗ್ರಹದ ನಿಲುವಿಗೆ ತರುವ ದುರುದ್ದೇಶದ ರಾಜಕೀಯ ನಡೆಯಾಗಿದೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದರು.

ಡಿಸೆಂಬರ್ 24 ರ ಒಳಗೆ ತನಿಖೆಯ ವರದಿ ನೀಡುವಂತೆ ನ್ಯಾಯಾಲಯ ಲೋಕಾಯುಕ್ತಕ್ಕೆ ಸೂಚನೆ ನೀಡಿದೆ. ಬೇಕಿದ್ದರೆ ED ಯವರು ಲೋಕಾಯುಕ್ತಕ್ಕೆ ವರದಿ ನೋಡಲು ಅವಕಾಶವಿತ್ತು. ಅದನ್ನು ಬಿಟ್ಟು ಈ ರೀತಿ ಮಾಡಿರುವುದರ ಹಿಂದಿನ ಉದ್ದೇಶ ರಾಜ್ಯದ ಜನರಿಗೆ ಅರ್ಥವಾಗುತ್ತದೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಮಂತ್ರಿ ಮಂಡಲ ಪುನಾರಚನೆ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿಎಂ, ಮಂತ್ರಿಮಂಡಲ ಪುನಾರಚನೆ ಮಾಡ್ತೀವಿ ಅಂತ ನಾನು ಹೇಳಿದ್ನಾ? ನೀವೇ ನಿಮ್ಮ ಪಾಡಿಗೆ ನೀವು ಕಲ್ಪಿಸಿಕೊಂಡು ಸುದ್ದಿ ಮಾಡಿದ್ರಿ. ಈಗ ನನ್ನ ಬಳಿ ಉತ್ತರ ಕೇಳಿದರೆ ಹೇಗೆ ? ಈ ಬಗ್ಗೆ ಹೈ ಕಮಾಂಡ್ ಕೂಡ ಸೂಚನೆ ಕೊಟ್ಟಿಲ್ಲ ಎಂದು ಸಿದ್ದರಾಮಯ್ಯ ಅವರು ಹೇಳಿದರು. ನಾಳೆ (ಡಿಸೆಂಬರ್‌ 05) ಹಾಸನದಲ್ಲಿ ನಡೆಯುತ್ತಿರುವ ಸಮಾವೇಶದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿ ಕಾಂಗ್ರೆಸ್ ಪಕ್ಷದಿಂದ ಸಮಾವೇಶ ನಡೆಯುತ್ತಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+