SSLC Exam: ಎಸ್.ಎಸ್.ಎಲ್.ಸಿ ಪರೀಕ್ಷೆಯ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಯಾವುದೇ ಬದಲಾವಣೆ ಇಲ್ಲ : ಪರೀಕ್ಷಾ ಮಂಡಳಿ ಸ್ಪಷ್ಟನೆ
ಬೆಂಗಳೂರು, ನವೆಂಬರ್ 28, 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ಮಹತ್ವದ ಬದಲಾವಣೆ ಮಾಡಿರುವುದಾಗಿ ದಿನಪತ್ರಿಕೆಗಳಲ್ಲಿ ಸುದ್ದಿ ಪ್ರಕಟವಾಗಿರುತ್ತದೆ. ಆದರೆ 2024-25ನೇ ಸಾಲಿನ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಮಂಡಳಿಯು ಯಾವುದೇ ಬದಲಾವಣೆ ಮಾಡಿರುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಅಧ್ಯಕ್ಷರು ತಿಳಿಸಿದ್ದಾರೆ.
ಮುಂದಿನ ಶೈಕ್ಷಣಿಕ ವರ್ಷದಲ್ಲಿ ವಿಷಯ ತಜ್ಞರ ಸಮಿತಿ ರಚಿಸಿ, ಸದರಿ ಸಮಿತಿ ನೀಡುವ ವರದಿಯಂತೆ ಕ್ರಮವಹಿಸಲಾಗುವುದು. ಹಾಗಾಗಿ ಈ ಸಾಲಿನ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಯಾವುದೇ ಬದಲಾವಣೆ ಇಲ್ಲದೆ ಕಳೆದ ಸಾಲಿನಂತೆಯೇ ಮುಂದುವರಿಸಲಾಗಿದ್ದು, ಸದ್ಯದಲ್ಲೇ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಮಂಡಳಿಯ ಜಾಲತಾಣದಲ್ಲಿ ಪ್ರಕಟಿಸಲಾಗುವುದು.

ಈ ಬಗ್ಗೆ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಯಾವುದೇ ಗೊಂದಲ ಹಾಗೂ ಆತಂಕಕ್ಕೆ ಒಳಗಾಗಬಾರದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಅಧ್ಯಕ್ಷರು ಸ್ಪಷ್ಠೀಕರಣ ನೀಡಿದ್ದಾರೆ.
ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ವಿನ್ಯಾಸ ಬದಲಾವಣೆ ಕುರಿತು ಇನ್ನೂ ತೀರ್ಮಾನ ಮಾಡಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಲಿ ಅಧ್ಯಕ್ಷರು ಸ್ಪಷ್ಟಪಡಿಸಿರುವುದಾಗಿ ಕರ್ನಾಟಕ ವಾರ್ತಾ ಇಲಾಖೆ ಪ್ರಕಟಣೆ ತಿಳಿಸಿದೆ.
2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ಮಹತ್ವದ ಬದಲಾವಣೆ ಮಾಡಿರುವುದಾಗಿ ದಿನಪತ್ರಿಕೆಗಳಲ್ಲಿ ಸುದ್ದಿ ಪ್ರಕಟವಾಗಿರುತ್ತದೆ. ಆದರೆ 2024-25ನೇ ಸಾಲಿನ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಮಂಡಲಿಯು ಯಾವುದೇ ಬದಲಾವಣೆ ಮಾಡಿರುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಲಿ ಅಧ್ಯಕ್ಷರು ತಿಳಿಸಿದ್ದಾಗಿ ವಾರ್ತಾ ಇಲಾಖೆ ಹೇಳಿದೆ.
ಮುಂದಿನ ಶೈಕ್ಷಣಿಕ ವರ್ಷದಲ್ಲಿ ವಿಷಯ ತಜ್ಞರ ಸಮಿತಿ ರಚಿಸಿ, ಸದರಿ ಸಮಿತಿ ನೀಡುವ ವರದಿಯಂತೆ ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಮಾದರಿ ಬದಲಾವಣೆ ಕುರಿತು ಕ್ರಮವಹಿಸಲಾಗುವುದು. ಹಾಗಾಗಿ ಈ ಸಾಲಿನ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಯಾವುದೇ ಬದಲಾವಣೆ ಇಲ್ಲದೆ ಕಳೆದ ಸಾಲಿನಂತೆಯೇ ಮುಂದುವರಿಸಲಾಗಿದ್ದು, ಸದ್ಯದಲ್ಲೇ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಮಂಡಲಿಯ ಜಾಲತಾಣದಲ್ಲಿ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಲಿ ಅಧ್ಯಕ್ಷರು ತಿಳಿಸಿದ್ದಾಗಿ ವಾರ್ತಾ ಇಲಾಖೆ ತಿಳಿಸಿದೆ.
ಈ ಬಗ್ಗೆ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪಾಲಕರು ಯಾವುದೇ ಗೊಂದಲಕ್ಕೆ ಒಳಗಾಗಬಾರದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಅಧ್ಯಕ್ಷರು ಸ್ಪಷ್ಠೀಕರಣ ನೀಡಿದ್ದಾರೆ.












Click it and Unblock the Notifications