ಉಳಿದ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಟಿಕೆಟ್ ಫೈಟ್: ಸಿದ್ದರಾಮಯ್ಯ ಏನಂದ್ರು?

ಮೈಸೂರು, ಮಾರ್ಚ್‌ 24: ಕಾಂಗ್ರೆಸ್ ಹೈಕಮಾಂಡ್‌ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಫೈಕಿ 24 ಕ್ಷೇತ್ರದ ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗಿದ್ದು, ಉಳಿದ ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಯ ಆಯ್ಕೆಯೇ ಕಾಂಗ್ರೆಸ್‌ ನಾಯಕರಿಗೆ ದೊಡ್ಡ ಸವಾಲ್‌ ಆಗಿದೆ.

ಈ ಕುರಿತು ಮೈಸೂರಿನಲ್ಲಿ ಮಾಧ್ಯಮಗಳ ಜೊತೆಗೆ ಸಿದ್ದರಾಮಯ್ಯ ಮಾತನಾಡಿದ ಅವರು, ರಾಜ್ಯದ ಉಳಿದ 4 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಯಾವುದೇ ಕಗ್ಗಂಟಿಲ್ಲ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಈ ಬಾರಿ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಹೇಳಿದರು.

There is No Confusion In The Selection Of The Candidate Says siddaramaiah

ನಾವು ಬಿಜೆಪಿ ಪಕ್ಷದವರ ಹಾಗೆ 28 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂಬ ಸುಳ್ಳು ಹೇಳುವುದಿಲ್ಲ. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಅನುಕೂಲವಾಗಲಿದೆ. ಮೈಸೂರು , ಚಾಮರಾಜನಗರ ಕ್ಷೇತ್ರವನ್ನೂ ಸೇರಿಸಿದಂತೆ ರಾಜ್ಯದ ಎಲ್ಲಾ 28 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದನ್ನು ಕಾಂಗ್ರೆಸ್ ಪ್ರತಿಷ್ಠೆಯಾಗಿ ತೆಗೆದುಕೊಳ್ಳಲಿದೆ ಎಂದರು. ನುಡಿದಂತೆ ನಡೆದ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುತ್ತದೆ ಎಂಬ ವಿಶ್ವಾಸವಿದ್ದು, ಈ ಬಾರಿ ರಾಜ್ಯದ 20 ಲೋಕಸಭಾ ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು..

ಗ್ಯಾರಂಟಿಯೋಜನೆಗಳು ಕಾಂಗ್ರೆಸ್ ಪಕ್ಷದ ನೆರವಿಗೆ ಬರಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸುತ್ತಾ, ನಮ್ಮ ಸರ್ಕಾರ ನುಡಿದಂತೆ ನಡೆದಿದ್ದು, ಜನರಿಗೆ ನೀಡಿದ ಭರವಸೆಗಳನ್ನು ಅಧಿಕಾರಕ್ಕೆ ಬಂದ ಕೂಡಲೇ ಜಾರಿಗೊಳಿಸಲಾಗಿದೆ. ಗ್ಯಾರಂಟಿಗಳಿಗೆ ಈ ವರ್ಷ 36000 ಕೋಟಿ ಹಾಗೂ ಮುಂದಿನ ವರ್ಷ 52009 ಕೋಟಿ ರೂ.ಗಳನ್ನು ವೆಚ್ಚ ಮಾಡಲಿದ್ದೇವೆ. ಬಿಜೆಪಿಯವರಂತೆ ಸುಳ್ಳು ಹೇಳದೇ , ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿದೆ ಎಂದರು.
ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಮಾಡಿರುವ ಸಾಧನೆಗಳ ಆಧಾರದ ಮೇಲೆ ಚುನಾವಣೆಯನ್ನು ಎದುರಿಸಲಿದ್ದು, ಜನತೆ ವಿಧಾನಸಭಾ ಚುನಾವಣೆಯಂತೆ ನಮ್ಮ ಪಕ್ಷದ ಕೈ ಹಿಡಿಯಲಿದ್ದಾರೆ. ನುಡಿದಂತೆ ನಡೆದ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುತ್ತದೆ ಎಂಬ ವಿಶ್ವಾಸವಿದೆ ಎಂದರು.

ಶಕ್ತಿ ಯೋಜನೆ ಹೊರತುಪಡಿಸಿದರೆ ಯಾವುದೇ ಗ್ಯಾರಂಟಿಗಳು ಜನರಿಗೆ ಸಮರ್ಪಕವಾಗಿ ತಲುಪುತ್ತಿಲ್ಲ ಎಂಬ ಬಿಜೆಪಿಯವರ ಆರೋಪಕ್ಕೆ ಪ್ರತಿಕ್ರಿಯೆ ನೀಡುತ್ತಾ, ಬಿಜೆಪಿಯವರು ನುಡಿದಂತೆ ನಡೆಯಲಿಲ್ಲ. 2018 ರಲ್ಲಿ ಬಿಜೆಪಿಯವರು ನೀಡಿದ 600 ಭರವಸೆಗಳಲ್ಲಿ ಶೇ. 10 ರಷ್ಟನ್ನೂ ಈಡೇರಿಸಲಿಲ್ಲ. ಪ್ರಧಾನಿ ಮೋದಿಯವರೂ ಕೂಡ ಜನರ ಖಾತೆಗಳಿಗೆ 15 ಲಕ್ಷ ರೂ.ಗಳಾಗಲಿ, 20 ಕೋಟಿ ಉದ್ಯೋಗವಾಗಲಿ, ರೈತರ ಆದಾಯ ದ್ವಿಗುಣಗೊಳಿಸುವ ಯಾವುದೇ ಭರವಸೆಗಳನ್ನು ಈಡೇರಿಸಲಿಲ್ಲ. ಅಚ್ಛೇ ದಿನ್ ತರುವ ಭರವಸೆಯನ್ನು ಹುಸಿಗೊಳಿಸಿದ ಮೋದಿಯವರನ್ನು ಜನರು ಯಾಕೆ ನಂಬುತ್ತಾರೆ ಎಂದು ಸಿಎಂ ಪ್ರಶ್ನಿಸಿದರು.

ಕುಟುಂಬ ರಾಜಕಾರಣವನ್ನು ವಿರೋಧಿಸುವ ಮುಖ್ಯಮಂತ್ರಿಗಳೇ ತಮ್ಮ ಸಚಿವರ ಕುಟುಂಬದವರಿಗೆ ಈ ಬಾರಿ ಟಿಕೆಟ್ ನೀಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡುತ್ತಾ, ಇದು ಕುಟುಂಬ ರಾಜಕಾರಣವಲ್ಲ. ಜನರು ಯಾವ ಅಭ್ಯರ್ಥಿಗೆ ಬೆಂಬಲ ಸೂಚಿಸಬಹುದೆಂಬ ಚಿಂತನೆಯ ಮೇಲೆ ಅವರನ್ನು ಆಯ್ಕೆ ಮಾಡಲಾಗಿದ್ದು, ಜನರ ಅಭಿಪ್ರಾಯಕ್ಕೆ ಮನ್ನಣೆ ನೀಡಲಾಗಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+