ಕಾಂಗ್ರೆಸ್ ಶಾಸಕರು ಸಚಿವರ ನಡುವೆ ಸಮನ್ವಯತೆ ಇಲ್ಲ: ಬಸವರಾಜ ಬೊಮ್ಮಾಯಿ ಹೀಗೆ ಹೇಳಿದ್ಯಾಕೆ?

ಹಾವೇರಿ, ಜುಲೈ 28: ಈ ಸರ್ಕಾರದಲ್ಲಿ ಶಾಸಕರು ಹಾಗೂ ಸಚಿವರ ನಡುವೆ ಸಮನ್ವಯತೆ ಇಲ್ಲ. ಸಿಎಂ ಶಾಸಕರನ್ನು ಸಮಾಧಾನ ಪಡಿಸಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ತಿಳಿದ ಮಾಹಿತಿ ಮೊದಲನೇ ದಿನದಿಂದಲೂ ಕಾಂಗ್ರೆಸ್ ಸಿಎಂ ಮಾಡೋದ್ರಿದ ಹಿಡಿದು ಎಲ್ಲಾದರಲ್ಲೂ ಗೊಂದಲದಲ್ಲಿದೆ
ಶಾಸಕರು ಮತ್ತು ಮಂತ್ರಿಗಳ ನಡುವೆ ಸಮನ್ವಯ ಇರಲಿಲ್ಲ. ಮೀಟಿಂಗ್ ಕರೆದಿರೋದೇ ಈ ಕಾರಣಕ್ಕೆ. ಇಲ್ಲದಿದ್ದರೆ ಹೈಕಮಾಂಡ್ ಬುಲಾವ್ ಯಾಕೆ ಬರ್ತಿತ್ತು? ಸಿಎಂ ಸಮಾಧಾನ ಮಾಡಿದರೂ ಶಾಸಕರು ಸಮಾಧಾನ ಆಗುತ್ತಿಲ್ಲ. ಹಿರಿಯ ಶಾಸಕರಿಗೇ ಈ ಪರಿಸ್ಥಿತಿ ಇದೆ, ಇನ್ನು ಹೊಸ ಶಾಸಕರ ಗತಿ ಏನು? ಒಟ್ಟಾರೆ ಈ ಸರ್ಕಾರ ಪ್ರಾರಂಭದಿಂದಲೂ ಗೊಂದಲದಲ್ಲಿದೆ ಎಂದು ಹೇಳಿದರು.

no-coordination-between-congress-mlas-and-ministers

ಕಾಂಗ್ರೆಸ್ ‌ಮೊದಲಿನಿಂದಲೂ ಒಳ ಮೀಸಲಾತಿ ವಿರೋಧಿಯಾಗಿದೆ. ನಾವು ಸಂವಿಧಾನಕ್ಕೆ ತಿದ್ದುಪಡಿ ತಂದು ಒಳ ಮೀಸಲಾತಿ ಜಾರಿಗೊಳಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದೇವೆ. ನಮಗೆ ಬದ್ದತೆ ಇದೆ. ಕಾಂಗ್ರೆಸ್ ನವರಿಂದ ಪಾಠ ಕಲಿಯಬೇಕಿಲ್ಲ ಒಳ ಮೀಸಲಾತಿ ವಿರೋಧಿಸುವ ಕಾಂಗ್ರೆಸ್ ನವರ ಬಣ್ಣ ಬಯಲಾಗಿದೆ ಎಂದು ಕಾಂಗ್ರೆಸ್‌ ವಿರುದ್ದ ಕಿಡಿಕಾರಿದರು.

ಒಳ ಮೀಸಲಾತಿ ಅವಕಾಶ ವಿಚಾರದಲ್ಲಿ ಕಾಂಗ್ರೆಸ್ ‌ಸದಾ ಗೊಂದಲ ಸೃಷ್ಟಿಸುತ್ತ ಬಂದಿದೆ‌. ಹಿಂದಿನ ಚುನಾವಣೆಯಲ್ಲಿ ಪ್ರಣಾಳಿಕೆಯಲ್ಲಿ ಘೋಷಿಸಿ ಕೈಬಿಟ್ಟರು, ಒಳಮೀಸಲಾತಿ ಪರ ಬಂದವರಿಗೆ ಜಾರಿ ಮಾಡುತ್ತೇವೆ ಎನ್ನುವುದು, ಅದನ್ನು ವಿರೋಧಿಸುವವರು ಬಂದಾಗ ಜಾರಿ ಮಾಡುವುದಿಲ್ಲ ಎನ್ನುವುದು ಎಲ್ಲವೂ ಬಹಿರಂಗವಾಗಿದೆ. ಅವರಿಂದ ಪಾಠ ಕಲಿಯುವ ಅಗತ್ಯವಿಲ್ಲ ಎಂದರು.

no-coordination-between-congress-mlas-and-ministers

ಕೇಂದ್ರ ಸಚಿವ ಸಚಿವ ನಾರಾಯಣಸ್ವಾಮಿ ಅವರು ಪ್ರಸ್ತುತ ಒಳ ಮೀಸಲಾತಿಗೆ ಅವಕಾಶ ಇಲ್ಲ ಅಂತ ಹೇಳಿದ್ದಾರೆ. ನಾವೂ ಕೂಡ ಸಂವಿಧಾನದ ಆರ್ಟಿಕಲ್ 140 ಗೆ ಕ್ಲಸ್ 2 ಹಾಕಿ ತಿದ್ದುಪಡಿ ಮಾಡಿ ಒಳ ಮೀಸಲಾತಿ ಜಾರಿಗೊಳಿಸುವಂತೆ ರಾಜ್ಯ ಪಾಲರ ಮೂಲಕ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದೇವೆ. ಈ ಪ್ರಕರಣ ಕೋರ್ಟ್ ನಲ್ಲಿದೆ. ಆದರೆ, ನಮಗೆ ಬದ್ದತೆ ಇದೆ. ಅದಕ್ಕಾಗಿಯೇ ಸಂವಿಧಾನ ತಿದ್ದುಪಡಿಗೆ ಶಿಫಾರಸ್ಸು ಮಾಡಿದ್ದೇವೆ. ಮೊದಲಿನಿಂದಲೂ ಒಳ ಮೀಲಸಾತಿ ವಿರೋಧಿಸುತ್ತಿರುವ ಕಾಂಗ್ರೆಸ್ ನ ಬಣ್ಣ ಬಯಲಾಗಿದೆ ಎಂದು ವಾಗ್ದಾಳಿ ನಡೆಸಿದರು.

ಹೆಣ್ಣು ಮಕ್ಕಳ ಗೌರವದ ವಿಚಾರದಲ್ಲಿ ಕಾಂಗ್ರೆಸ್ ಇಷ್ಟು ಹಗುರವಾಗಿ ಮಾತನಾಡುದಕ್ಕೆ ನಾಚಿಕೆಯಾಗಬೇಕು. ಹೆಣ್ಣು ಮಕ್ಕಳ ಗೌರವ ಹೋದರೆ ಅದು ದೊಡ್ಡ ವಿಚಾರ ಅಲ್ಲ ಅಂತ ಮಾತನಾಡುತ್ತಾರೆ. ಪ್ರಕರಣದ ತನಿಖೆಗೆ ಮುಂಚೆನೇ ಸರ್ಟಿಫಿಕೇಟ್ ಕೊಟ್ಟಿದ್ದಾರೆ. ಪೋಲೀಸ್ ರು ಈ ಪ್ರಕರಣ ಮುಚ್ಚಿ ಹಾಕುತ್ತಾರೆ. ವಿಡಿಯೋ ರೆಕಾರ್ಡ್ ಮಾಡಿಲ್ಲ ಅಂದರೆ ವಿದ್ಯಾರ್ಥಿನಿಯರನ್ನು ಮ್ಯಾನೇಜ್ಮೆಂಟ್ ಯಾಕೆ ಸಸ್ಪೆಂಡ್ ಮಾಡಿದರು? ತಪ್ಪೊಪ್ಪಿಗೆ ಯಾಕೆ ಬರೆಸಿಕೊಂಡರು? ಕಾಲೇಜಿನಲ್ಲಿ ಮುಗಿದು ಹೋದ ಪ್ರಕರಣ ಅಲ್ಲ, ಇದು ಮುಚ್ಚಿಹೋದ ಪ್ರಕರಣ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+