ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿನಯ ಕುಲಕರ್ಣಿ ಪಕ್ಷ ಸೇರ್ಪಡೆ ಕುರಿತು ವರಿಷ್ಠರೊಂದಿಗೆ ಮಾತನಾಡಿದ್ದೇನೆ: ಪ್ರಲ್ಹಾದ್ ಜೋಶಿ

|
Google Oneindia Kannada News

ಬೆಂಗಳೂರು, ಅ. 26: ಮಾಜಿ ಸಚಿವ, ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಅವರ ಬಿಜೆಪಿ ಸೇರ್ಪಡೆ ವಿಚಾರ ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ. ಮಾಜಿ ಸಚಿವರಾದ ಎಂ.ಬಿ. ಪಾಟೀಲ್ ಹಾಗೂ ವಿನಯ ಕುಲಕರ್ಣಿ ಅವರು ಬಿಜೆಪಿ ಸೇರ್ಪಡೆ ವಿಚಾರವಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾತನಾಡಿದ್ದಾರೆ. ಈ ಬಗ್ಗೆ ವಿವರವಾದ ಹೇಳಿಕೆಯನ್ನು ನೀಡಿದ್ದಾರೆ.

ಕಾಂಗ್ರೆಸ್ ಪಕ್ಷ ಹಾಗೂ ಉತ್ತರ ಕರ್ನಾಟಕದ ಪ್ರಭಾವಿ ನಾಯಕರಾಗಿರುವ ಮಾಜಿ ಸಚಿವರಾದ ಎಂ.ಬಿ. ಪಾಟೀಲ್ ಹಾಗೂ ವಿನಯ್ ಕುಲಕರ್ಣಿ ಅವರು ಬಿಜೆಪಿ ಸೇರುತ್ತಾರೆ ಎಂಬ ವಿಷಯ ಇದೀಗ ತಾರ್ಕಿಕ ಅಂತ್ಯ ಕಂಡಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರವನ್ನು ಮಾಜಿ ಸಚಿವ ಎಂ.ಬಿ. ಪಾಟೀಲ್ ಅವರು ಪ್ರಸ್ತುತ ಪಡಿಸಿದ್ದರು. ಅದು ಸಾರ್ವತ್ರಿಕ ವಿಧಾನಸಭೆ ಚುನಾವಣೆ ಫಲಿತಾಂಶದ ಮೇಲೆ ಪರಿಣಾಮ ಬೀರಿತು. ಹೀಗಾಗಿಯೆ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ ಆಯ್ತು ಎಂಬ ವಿಚಾರಗಳು ಆಗ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕವಾಗಿ ಚರ್ಚೆ ಆಗಿದ್ದವು.

ಧಾರವಾಡ: ಬಿಜೆಪಿ ಸೇರ್ಪಡೆ ಕುರಿತು ಸ್ವತಃ ಸ್ಪಷ್ಟನೆ ಕೊಟ್ಟ ವಿನಯ್ ಕುಲಕರ್ಣಿಧಾರವಾಡ: ಬಿಜೆಪಿ ಸೇರ್ಪಡೆ ಕುರಿತು ಸ್ವತಃ ಸ್ಪಷ್ಟನೆ ಕೊಟ್ಟ ವಿನಯ್ ಕುಲಕರ್ಣಿ

ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ವಿನಯ್ ಕುಲಕರ್ಣಿ ಅವರು ಸೋಲನ್ನು ಅನುಭವಿಸಿದರು. ಎಂ.ಬಿ. ಪಾಟೀಲ್ ಅವರು ಶಾಸಕರಾದರೂ ಪಕ್ಷದ ಚಟುವಟಿಕೆಗಳಲ್ಲಿ ಅಷ್ಟಾಗಿ ಕಾಣಿಸಿಕೊಳ್ಳುತ್ತಿಲ್ಲ. ಈ ಎಲ್ಲ ವಿಚಾರಗಳ ಹಿನ್ನೆಲೆಯಲ್ಲಿ ಇಬ್ಬರೂ ನಾಯಕರು ಬಿಜೆಪಿ ಸೇರುತ್ತಾರೆ ಎಂಬ ಸುದ್ದಿ ಕೇಳಿ ಬಂದಿತ್ತು. ಇದೀಗ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರೇ ಈ ವಿಚಾರವಾಗಿ ಕೇಂದ್ರದ ನಾಯಕರೊಂದಿಗೆ ಮಾತನಾಡಿರುವುದಾಗಿ ಹೇಳಿದ್ದಾರೆ.

ವರಿಷ್ಠರೊಂದಿಗೆ ಮಾತನಾಡಿದ್ದೇನೆ

ವರಿಷ್ಠರೊಂದಿಗೆ ಮಾತನಾಡಿದ್ದೇನೆ

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್ ಜೋಶಿ ಅವರು ಈ ಕುರಿತು ಕೇವಲ ಮಾದ್ಯಮಗಳಲ್ಲಿ ಬಂದ ವರದಿ ನೋಡಿದ್ದೇನೆ. ರಾಜ್ಯ ಹಾಗೂ ಕೇಂದ್ರದ ಮುಂದೆ ಅಂತಹ ಯಾವುದೇ ಪ್ರಸ್ತಾವನೆ ಇಲ್ಲ. ಈ ಕುರಿತು ಪಕ್ಷದಲ್ಲಿ ಯಾವುದೇ ರೀತಿ ಚರ್ಚೆ ಆಗಿಲ್ಲ. ಈ ಬಗ್ಗೆ ಪಕ್ಷದ ಯಾವ ನಾಯಕರನ್ನೂ ಯಾರೂ ಭೇಟಿ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಾನು ಈ ಕುರಿತು ರಾಷ್ಟ್ರೀಯ ನಾಯಕರ ಜೊತೆ ಮಾತನಾಡಿದ್ದೇನೆ. ಆ ರೀತಿ ಯಾವುದೇ ಚರ್ಚೆಯಾಗಿಲ್ಲ ಎಂದ ಜೋಶಿ ಅವರು ಹೇಳಿದರು. ಆದರೆ ಮುಖ್ಯಮಂತ್ರಿ ಬದಲಾವಣೆ ಕುರಿತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆ ವಿಚಾರವಾಗಿ ಯಾವುದೇ ಪ್ರತಿಕ್ರಿಯೆಯನ್ನು ಜೋಶಿ ಅವರು ಕೊಡಲಿಲ್ಲ.

ಯಡಿಯೂರಪ್ಪ ಬದಲಾವಣೆ ಕುರಿತು

ಯಡಿಯೂರಪ್ಪ ಬದಲಾವಣೆ ಕುರಿತು

ರಾಜ್ಯದಲ್ಲಿ ಪ್ರಮುಖವಾಗಿ ಮುಖ್ಯಮಂತ್ರಿ ವಿಚಾರವಾಗಿ ಹೇಳಿಕೆ ಬರುತ್ತಿವೆ. ಆದರೆ ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ನಾಲ್ಕು ವಿಧಾನ ಪರಿಷತ್ ಮತ್ತು ಉಪ ಚುನಾವಣೆಯಲ್ಲಿ ಬಹುಮತದ ಮೂಲಕ ಬಿಜೆಪಿ ಗೆದ್ದು ಬರಲಿದೆ. ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ ಅವರ ಬದಲಾವಣೆ ಇಲ್ಲ ಎಂದು ಪ್ರಲ್ಹಾದ್ ಜೋಶಿ ಅವರು ಸ್ಪಷ್ಟಪಡಿಸಿದರು.

ಉಪ ಚುನಾವಣೆಯಲ್ಲಿ ಗೆಲವು

ಉಪ ಚುನಾವಣೆಯಲ್ಲಿ ಗೆಲವು

ಉಪ ಚುನಾವಣೆ ಹಾಗೂ ನಾಲ್ಕು ವಿಧಾನ ಪರಿಷತ್ ಚುನಾವಣೆ ನಡೆಯುತ್ತಿದೆ. ಎಲ್ಲಾ ಚುನಾವಣೆಯಲ್ಲಿ ನಾನು ಭಾಗವಹಿಸುತ್ತಲೇ ಬಂದಿದ್ದೇನೆ. ಆದರೆ ಈ ಬಾರಿಯ ಚುನಾವಣೆಯಲ್ಲಿ ಕೋವಿಡ್ ಕಾರಣಕ್ಕೆ ಪ್ರಚಾರಕ್ಕೆ ಹೋಗಿಲ್ಲ. ನನ್ನ ಪಕ್ಷದ ಕಾರ್ಯಕರ್ತರಿಗೆ ಅಭಾರಿಯಾಗಿದ್ದೇನೆ. ಈ ಚುನಾವಣೆ ರಾಜ್ಯ ಸರ್ಕಾರದ ಮೇಲೆ ಪ್ರಭಾವ ಬೀರದೇ ಇದ್ದರೂ ಮಹತ್ವದ್ದಾಗಿದೆ ಎಂದು ಉಪ ಚುನಾವಣೆಯ ಕುರಿತು ಮಾತನಾಡಿದರು.

ಅವಹೇಳನ ಮಾಡುವುದೇ ಕಾಂಗ್ರೆಸ್ ಸಂಸ್ಕೃತಿ

ಅವಹೇಳನ ಮಾಡುವುದೇ ಕಾಂಗ್ರೆಸ್ ಸಂಸ್ಕೃತಿ

ಕಾಂಗ್ರೆಸ್ ಪಕ್ಷದವರಿಗೆ ಸಂವಿಧಾನದ ಮೇಲೆ, ಮೂಲ ನಂಬಿಕೆಗಳ ಮೇಲೆ ವಿಶ್ವಾಸ ಇಲ್ಲ. ಹೀಗಾಗಿ ಅವರು ಸತತವಾಗಿ ಅವಹೇಳನ ಮಾಡುವ ಪ್ರವೃತ್ತಿ ಮುಂದುವರೆಸಿಕೊಂಡು ಬಂದಿದ್ದಾರೆ. ಹಲವು ವಿಧೇಯಕಗಳು ಅಂಗೀಕಾರವಾಗಿ ಕಾಯಿದೆ ಆಗಿವೆ. ಇಂತಹ ವೇಳೆ ಡೆಪ್ಯೂಟಿ ಸ್ಪೀಕರ್ ಮೇಲೆ ಹಲ್ಲೆಮಾಡಿ ತಡೆಯುವ ಯತ್ನವೂ ಆಯಿತು ಎಂದು ಲೋಕಸಭೆ ಅಧಿವೇಶನದ ಬಗ್ಗೆ ಮಾತನಾಡಿದರು.

ಆಡಳಿತಕ್ಕೆ ಬಲ ನೀಡಲು ಈ ಚುನಾವಣೆ

ಆಡಳಿತಕ್ಕೆ ಬಲ ನೀಡಲು ಈ ಚುನಾವಣೆ

ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅತ್ಯುತ್ತಮವಾಗಿ ಅಧಿಕಾರ ನಡೆಸಿಕೊಂಡು ಬಂದಿದ್ದಾರೆ. ಇವರ ಆಡಳಿತಕ್ಕೆ ಬಲ ನೀಡಲು ಈ ಚುನಾವಣೆ ಮಹತ್ವದ್ದಾಗಿದೆ. ದೇಶದಲ್ಲಿ ಅತ್ಯಂತ ಸುದೀರ್ಘ ಕಾಲ ಆಡಳಿತ ನಡೆಸಿದವರು ಯಾವುದೇ ಬದಲಾವಣೆ ತರುವ ಪ್ರಯತ್ನವನ್ನು ಮಾಡಲಿಲ್ಲ. ಪಕ್ಷದಲ್ಲಿ ಬದಲಾವಣೆ ಬೇಕು ಅಂದವರನ್ನೇ ಕಾಂಗ್ರೆಸ್‌ ಪಕ್ಷದಲ್ಲಿ ಕಡಗಣಿಸಿದರು.

23 ನಾಯಕರನ್ನು ಸೈಡ್‌ಲೈನ್ ಮಾಡಲಾಯಿತು. ದೇಶದ, ರಾಜ್ಯದ ಆಗುಹೋಗುಗಳ ಬಗ್ಗೆ ಹಾಸ್ಯಾಸ್ಪದ ಹೇಳಿಕೆ ಕೊಡುತ್ತಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮೋದಿ ಹಾಗೂ ಯಡಿಯೂರಪ್ಪ ಅವರ ಬಗ್ಗೆ ಹಲವಾರು ಹೇಳಿಕೆ ಕೊಟ್ಟಿದ್ದಾರೆ.

Recommended Video

Surya Kumar Yadav ರನ್ನು Australia ತಂಡಕ್ಕೆ ಈಗಲೂ ಆಯ್ಕೆ ಮಾಡಿಲ್ಲ | Oneindia Kannada
ಬಿಹಾರದಲ್ಲಿ ಸ್ಪಷ್ಟ ಬಹುಮತ

ಬಿಹಾರದಲ್ಲಿ ಸ್ಪಷ್ಟ ಬಹುಮತ

ಬಿಹಾರದಲ್ಲಿಯೂ ಕೂಡ ಎನ್‌ಡಿಎ ಸ್ಪಷ್ಟ ಬಹುಮತ ಪಡೆಯಲಿದೆ. ಬಿಹಾರದಲ್ಲಿ ಮೂರನೇ ಒಂದರಷ್ಟು ಬಹುಮತ ಪಡೆದು ನಾವು ಗೆಲುವು ಸಾಧಿಸಲಿದ್ದೇವೆ. ಕಾಂಗ್ರೆಸ್ ಪಕ್ಷದ ನಾಯಕರು ಹಾಸ್ಯಾಸ್ಪದ ಹೇಳಿಕೆ ಕೊಡುತ್ತಿದ್ದಾರೆ. ಹದಿನೈದು ನಿಮಿಷದಲ್ಲಿ ಚೀನಾದ ಸೈನಿಕರನ್ನು ಹೊರಹಾಕುವ ಹೇಳಿಕೆ ನೀಡುತ್ತಾರೆ. ಅವರ ಪಕ್ಷದ ನಾಯಕರೇ ಅವರ ಹೇಳಿಕೆ ಕೇಳಿ‌ ನಗುತ್ತಾರೆ. ಚೈನಾ ಮೊದಲು ನಮ್ಮ ಬಾರ್ಡರ್ ಆಗಿರಲಿಲ್ಲ, ಕಾಂಗ್ರೆಸ್ ಆಡಳಿತದಲ್ಲಿ ಇದ್ದಾಗ ನಡೆದುಕೊಂಡಿದ್ದರಿಂದಲೇ ಬಾರ್ಡರ್ ಆಗಿದೆ

English summary
Union Minister Pralhad Joshi has spoken about Former Minister M.B. Patil and Vinay Kulkarni BJP joining. There has been no discussion of this in the party. It is clear that none of the leaders of the party have met. Know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X