Get Updates
Get notified of breaking news, exclusive insights, and must-see stories!

HMPV Virus: ಎಚ್​ಎಂಪಿವಿ ವೈರಸ್; ಆರೋಗ್ಯ ಇಲಾಖೆ ಜತೆ ಸಿಎಂ ಸಭೆ: ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು, ಜನವರಿ 07: ಎಚ್ ಎಂ.ಪಿ. ವೈರಾಣು ಬಗ್ಗೆ ಸಾರ್ವಜನಿಕರು ಭಯಪಡಬೇಕಾದ ಅಗತ್ಯವಿಲ್ಲ. ಜಾಗರೂಕರಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಈಗಾಗಲೇ ಆರೋಗ್ಯ ಇಲಾಖೆಯವರು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಎಚ್ ಎಂ.ಪಿ.ವಿ ಬಗ್ಗೆ ಇಂದು ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಚರ್ಚಿಸಲಾಗಿದ್ದು, ಇದು ಆತಂಕಾರಿಯಾದ ವೈರಸ್ ಅಲ್ಲ ಹಾಗೂ ಅದು ಚೀನಾದಿಂದ ಬಂದಿಲ್ಲ.

There Is No Need To Worry About The HMPV Virus Says Siddaramaiah

2001 ರಿಂದಲೇ ಈ ವೈರಾಣು ಪತ್ತೆಯಾಗಿದ್ದು, ಎಚ್.ಎಂ.ಪಿ ವೈರಸ್ ಮಕ್ಕಳಿಗೆ, ವಯಸ್ಸಾದವರಿಗೆ ಹಾಗೂ ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಿಗೆ ಹೆಚ್ಚಾಗಿ ತಗಲುತ್ತದೆ. ಆದರೆ ಅದು ಅಪಾಯಕಾರಿಯಲ್ಲ ಎಂದು ತಜ್ಞರು ತಿಳಿಸಿದ್ದಾರೆ.ಆದ್ರೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವುದು ಉತ್ತಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಪ್ರಸ್ತುತ ಸಾಲಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ರೂ.11182 ಕೋಟಿ ಅನುದಾನ ಒದಗಿಸಲಾಗಿದ್ದು, ಇದುವರೆಗೆ ರೂ.6593 ಕೋಟಿ ವೆಚ್ಚ ಮಾಡಲಾಗಿದೆ. ಅನುದಾನಕ್ಕೆ ಶೇ.58.96 ಪ್ರಗತಿ ಸಾಧಿಸಲಾಗಿದೆ.

ರಾಜ್ಯದಲ್ಲಿ ತಾಯಂದಿರ ಮರಣ ಅನುಪಾತ ದೇಶಕ್ಕೆ ಹೋಲಿಸಿದರೆ ಕಡಿಮೆಯಿದೆ. 2018-20ರ ಅವಧಿಯಲ್ಲಿ ರಾಜ್ಯದಲ್ಲಿ ಒಂದು ಲಕ್ಷಕ್ಕೆ 69 ಮರಣ ಸಂಭವಿಸುತ್ತಿದ್ದು, ದೇಶದ ಅನುಪಾತ 97 ಇದೆ. 2022-24ರ ಅವಧಿಯಲ್ಲಿ ರಾಜ್ಯದಲ್ಲಿ ಇದರ ಪ್ರಮಾಣ 55 ಕ್ಕೆ ಇಳಿದಿದೆ.

ತಡೆಗಟ್ಟಬಹುದಾದ ತಾಯಂದಿರ ಮರಣವನ್ನು ಶೂನ್ಯಕ್ಕೆ ಇಳಿಸಲು ವ್ಯಾಪಕ ಅಭಿಯಾನ ಆರಂಭಿಸಬೇಕು. ತಾಯಂದಿರ ಮರಣ ತಡೆಗಟ್ಟಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು. ಹೆರಿಗೆ ಪ್ರಮಾಣಕ್ಕೆ ಅನುಗುಣವಾಗಿ ಆಸ್ಪತ್ರೆಗಳಲ್ಲಿ ಪ್ರಸೂತಿ ತಜ್ಞರು ಮತ್ತು ಅರವಳಿಕೆ ತಜ್ಞರನ್ನು ನೇಮಕ ಮಾಡಬೇಕು. ಇದಕ್ಕಾಗಿ ಕಡಿಮೆ ಹೆರಿಗೆ ಪ್ರಮಾಣವಿರುವ ಆಸ್ಪತ್ರೆಗಳ ವೈದ್ಯಾಧಿಕಾರಿಗಳನ್ನು ಪುನರ್‌ ನಿಯೋಜನೆ ಮಾಡಬೇಕು. ತಾಲೂಕು ಆಸ್ಪತ್ರೆಗಳಲ್ಲಿ ತಜ್ಞ ವೈದ್ಯಾಧಿಕಾರಿಗಳ ಲಭ್ಯತೆಯನ್ನು ಖಾತ್ರಿಪಡಿಸಬೇಕು.

ಔಷಧಿ ಖರೀದಿ ಪ್ರಕ್ರಿಯೆಯನ್ನು ಇನ್ನಷ್ಟು ಪಾರದರ್ಶಕಗೊಳಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಒಟ್ಟು 3927 ಎಎನ್‌ಎಂ ಖಾಲಿ ಹುದ್ದೆಗಳ ಪೈಕಿ 1205 ಹಾಗೂ 2990 ಎಚ್‌ಐಒ ಖಾಲಿ ಹುದ್ದೆಗಳ ಪೈಕಿ 300 ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆ ಈಗಾಗಲೇ ಅನುಮೋದನೆ ನೀಡಿದೆ. ಅಗತ್ಯ ಸೇವೆಗಳಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ವಿಳಂಬ ಮಾಡಬಾರದು. ಹೆಣ್ಣು ಭ್ರೂಣ ಹತ್ಯೆ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಎಲ್ಲಾ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು.

ಆಸ್ಪತ್ರೆಗಳಲ್ಲಿ ಸ್ವಚ್ಛತೆ, ಅಗತ್ಯ ಮೂಲಸೌಕರ್ಯಗಳ ನಿರ್ವಹಣೆಗೆ ವ್ಯವಸ್ಥೆ ಮಾಡಬೇಕು. ನಗರ ಪ್ರದೇಶಗಳಲ್ಲಿ 817 ನಮ್ಮ ಕ್ಲಿನಿಕ್‌ಗಳನ್ನು ಮಂಜೂರು ಮಾಡಲಾಗಿದ್ದು, ಪ್ರಸ್ತುತ 512 ಕಾರ್ಯಾಚರಿಸುತ್ತಿವೆ. ಇವುಗಳನ್ನು ಇನ್ನಷ್ಟು ಬಲಪಡಿಸಲು ಕ್ರಮ.

ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ ಅಡಿ ಚಿಕಿತ್ಸಾ ಪ್ಯಾಕೇಜ್‌ ಮೊತ್ತ ಹೆಚ್ಚಳ ಮಾಡುವ ಕುರಿತು ಪರಿಶೀಲನೆ ಮಾಡಬೇಕು. ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಸಮಗ್ರ ಸುಧಾರಣೆಯಾಗಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಚಿಕಿತ್ಸೆ ಖಾತ್ರಿಪಡಿಸಿದರೆ ಮಾತ್ರ ಜನರ ಖಾಸಗಿ ಆಸ್ಪತ್ರೆಗಳ ಅವಲಂಬನೆ ಕಡಿಮೆ ಮಾಡಬಹುದು. ಹೆಎಂಪಿವಿ ವೈರಸ್‌ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ಇದು ಪ್ರಾಣಾಂತಿಕವಲ್ಲ. ಇದನ್ನು ಪರೀಕ್ಷೆ ಮಾಡುವ ಅಗತ್ಯವಿರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+