ಮುಡಾ‌ ವಿಚಾರ ಡೈವರ್ಟ್ ಮಾಡಲು FIR ಹಾಕಲಾಗಿದೀಯಾ?ಕುಮಾರಸ್ವಾಮಿ ಕೊಟ್ಟ ಉತ್ತರವೇನು?

ಬೆಂಗಳೂರು, ಅಕ್ಟೋಬರ್‌ 05: ಮುಡಾ‌ ವಿಚಾರ ಡೈವರ್ಟ್ ಮಾಡಲು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾದ ಹೆಚ್‌ ಡಿ ಕುಮಾರಸ್ವಾಮಿ ಅವರ ವಿರುದ್ಧ FIR ಹಾಕಲಾಗಿದೀಯಾ ಎನ್ನುವ ಚರ್ಚೆ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದ್ದು, ಈ ಬಗ್ಗೆ ಕೇಂದ್ರ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಜೆಪಿ ನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಪ್ರತಿಯೊಂದು ಡೈವರ್ಟ್ ಮಾಡಲಿಕ್ಕೆ ನಡೆಯುತ್ತಿರೋದು. ಈ ಸರ್ಕಾರ ಎಲ್ಲವನ್ನೂ ಬಿಟ್ಟಿರುವ ಸರ್ಕಾರ. ಯಾವ ಭಯ ಭಕ್ತಿಯೂ ಇಲ್ಲ, ಗೌರವವೂ ಇಲ್ಲ. ಭಂಡ ಸರ್ಕಾರ ಇದು. ಈ ಸರ್ಕಾರದ ಬಗ್ಗೆ ಚರ್ಚೆ ಮಾಡುವುದು ಅರ್ಥ ಇಲ್ಲ. ಅದರಿಂದ ನಾನು ಹೇಳ್ತಾ ಇರೋದು. ಇವತ್ತು ನಡೆಯುತ್ತಿರುವ ರಾಜಕೀಯ ಬೆಳವಣಿಗೆಗೆ ಕಾಲವೇ‌ ಉತ್ತರ‌ ನೀಡುತ್ತದೆ ಎಂದು ಸಚಿವರು ತಿಳಿಸಿದರು.

There Is No Point In Discussing This Government Says HD Kumaraswamy

FIR ಮಾಡಿ ಬೆದರಿಸುವ ತಂತ್ರನಾ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು ಬೆದರಿಕೆ ಅಲ್ಲದೆ ಇನ್ನೇನು? ಎನಿದೆ FIR ನಲ್ಲಿ?. ಅದರ ಬಗ್ಗೆ ನಾನು ಚರ್ಚೆ ಮಾಡೋದು ಅನವಶ್ಯಕ. ಕಾಲವೇ ನಿರ್ಧಾರ ಮಾಡುತ್ತದೆ. ಕಾಲ ಕಾಲಕ್ಕೆ ಪ್ರತಿಯೊಂದಕ್ಕೂ ಉತ್ತರ ನೀಡುತ್ತದೆ ಎಂದು ಹೆಚ್‌ ಡಿ ಕುಮಾರಸ್ವಾಮಿ ಕಿಡಿಕಾರಿದರು.

ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿಗೆ ನನ್ನ ಕಂಡರೆ ಭಯ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ಯಾರನ್ನು ಕಂಡರೆ ಯಾರಿಗೆ ಭಯ? ನಾನು ಭಯ ಪಡೋಕೆ ಸಿಎಂ ಏನಾದರೂ ದೆವ್ವವೇ? ಅವರೇನು ದೆವ್ವ ಅಲ್ಲವಲ್ಲಾ, ಅವರಂದ್ರೆ ನಾನು ಯಾಕೆ ಭಯಪಡಲಿ. ಇಷ್ಟಕ್ಕೂ ನಾನು ದೆವ್ವಕ್ಕೂ ಹೆದರಲ್ಲ, ಇದು ಸಿದ್ದರಾಮಯ್ಯಗೆ ಗೊತ್ತಿರಲಿ ಎಂದು ಹೆಚ್‌ ಡಿ ಕುಮಾರಸ್ವಾಮಿ ಹೇಳಿದರು.

ಹೆಚ್‌ ಡಿ ಕುಮಾರಸ್ವಾಮಿ ಅವರನ್ನು ‌ಹೆದರಿಸೋಕೆ ಯಾರಿಂದಲೂ ಆಗಲ್ಲ. ನಾನು ಯಾರಿಗೂ ಹೆದರಲ್ಲ. ಹೆದರೋದು ದೇವರಿಗೆ ಮತ್ತು ನಾಡಿನ ಜನರಿಗಷ್ಟೇ. ಸಿದ್ದರಾಮಯ್ಯನಂಥವರು ಲಕ್ಷ ಜನ ಬರಲಿ, ನಾನು ಹೆದರಲ್ಲ. ಹೆದರೋದು ನನ್ನ‌ ಬೆಳೆಸಿರುವ ನಾಡಿನ‌ ಜನಕ್ಕೆ. ಇಂತಹ ಸಿದ್ದರಾಮಯ್ಯಗೆ ನಾನು ಹೆದರುತ್ತೀನಾ? ಎಂದು ಕೇಂದ್ರ ಸಚಿವರಾದ ಹೆಚ್‌ ಡಿ ಕುಮಾರಸ್ವಾಮಿ ಅವರು ತಿರುಗೇಟು ನೀಡಿದರು.

ನಾನು ರಾಜಕೀಯದಲ್ಲಿ ಸಿದ್ದರಾಮಯ್ಯ ನೆರಳಲ್ಲಿ ಬಂದಿದ್ದೀನಾ? ಸ್ವತಃ ದುಡಿಮೆ ಮೇಲೆ‌, ಕಾರ್ಯಕರ್ತರು, ಜನರ ಆಶೀರ್ವಾದದಿಂದ ಬಂದಿದ್ದೇನೆ. ಸಿದ್ದರಾಮಯ್ಯ ಹೆಸರಲ್ಲಿ ನಾನು ರಾಜಕೀಯ ಮಾಡಿಲ್ಲ. ನನ್ನ ಸ್ವತಃ ದುಡಿಮೆ ಮೇಲೆ ಬಂದಿದ್ದೇನೆ. ಹಾಗೆ ನೋಡಿದರೆ ಸಿಎಂ ಸಿದ್ದರಾಮಯ್ಯನವರು ನನ್ನ ಪಕ್ಷದ ಕಾರ್ಯಕರ್ತರು ಮತ್ತು ದೇವೇಗೌಡರ ನೆರಳಿನಲ್ಲಿ ಬಂದವರು. ನನ್ನ‌ ಹೆದರಿಸುವುದಕ್ಕೆ ಆಗುತ್ತಾ? ಎಂದು ಕಿಡಿಕಾರಿದರು
ಅದು ಯಾವುದೋ ಕೇಸ್ ಹಾಕಿಕೊಂಡು ನನ್ನ ಹೆದರಿಸೋಕೆ ಆಗುತ್ತಾ? ಎಂದು ಪ್ರಶ್ನಿಸಿದರು. ಕುಮಾರಸ್ವಾಮಿಗೆ ಬಂಧನದ ಭೀತಿ ಹೇಳುತ್ತಿದ್ದಾರೆ. ನನಗೆ ಅಂತಹ ಯಾವುದೇ ಭೀತಿಯೋ ಇಲ್ಲ ಎಂದು ಹೇಳಿದರು.

ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇರುತ್ತಾರೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆ ಕುರಿತು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅಲ್ಲಿಗೆ ಯಾವ ತರ ರಾಜಕಾರಣ ಇದೆ ನೋಡಿ. ಯಾರು ಯಾರು ಯಾವ ಹೇಳಿಕೆ ಕೊಡ್ತಾರೆ. ಆ ಹೇಳಿಕೆ ಮೇಲೆ ನೀವು ತೀರ್ಮಾನಕ್ಕೆ ಬನ್ನಿ. ಇಲ್ಲಿ ಕುಮಾರಸ್ವಾಮಿ ಹತ್ತಿರ ಇವರದ್ದು, ಯಾರದ್ದು ಏನು ನಡೆಯಲ್ಲ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+