ಬಿ ಖಾತಾಗೆ ಅವಕಾಶ; ಭೂ-ಪರಿವರ್ತನೆ, ಕಟ್ಟಡ ನಿರ್ಮಾಣದ ಬಗ್ಗೆ ಮಾಹಿತಿ ಕೊಟ್ಟ ರಹೀಂ ಖಾನ್
ಬೆಳಗಾವಿ, ಡಿಸೆಂಬರ್ 09: ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆದ ವಿನ್ಯಾಸಗಳ, ಗ್ರಾಮಠಾಣಾ, ವಿವಿಧ ಯೋಜನೆಯಡಿ ಮಂಜೂರಾದ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣಕ್ಕೆ ಪರವಾನಿಗೆ ನೀಡಲಾಗುತ್ತಿದ್ದು, ಇದರಿಂದಾಗಿ ಭೂ-ಪರಿವರ್ತನೆ ಹಾಗೂ ಕಟ್ಟಡ ನಿರ್ಮಾಣಕ್ಕೆ ಯಾವುದೇ ರೀತಿಯ ತೊಂದರೆಯಿಲ್ಲ ಎಂದು ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಅವರು ತಿಳಿಸಿದರು.
ಪರಿಷತ್ತಿನಲ್ಲಿ ಡಿಸೆಂಬರ್.09 ರಂದು ಪದವೀಧರರ ಕ್ಷೇತ್ರದ ಸದಸ್ಯರಾದ ರಾಮೋಜಿಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 29 (239)ರ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಸಚಿವರು, ಅಧಿಕೃತ ನಿವೇಶನ ಕಟ್ಟಡಗಳಿಗೆ ನಮೂನೆ -3 ಮತ್ತು ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯದ ಸ್ವತ್ತುಗಳಿಗೆ ನಮೂನೆ 3-ಎ ನೀಡಲಾಗುತ್ತಿದೆ.

ಕಟ್ಟಡ ಪರವಾನಿಗೆಯನ್ನು ತ್ವರಿತ ಪಾರದರ್ಶಕವಾಗಿ ನೀಡಲು ಎಸ್.ಬಿ.ಪಿ.ಎ.ಎಸ್./ ಯುಎಲ್ಎಮ್ಎಸ್ ತಂತ್ರಾಂಶವನ್ನು ಬಳಕೆ ಮಾಡಲಾಗುತ್ತಿದೆ. ಕಟ್ಟಡ ಪರವಾನಿಗೆ ಕೋರಿ ಆರ್ಕಿಟೆಕ್ಟ್ ಮುಖಾಂತರ ತಂತ್ರಾಂಶದಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿದ 15 ದಿನಗಳ ಒಳಗಾಗಿ ಕಟ್ಟಡ ಪರವಾನಿಗೆ ನೀಡಲಾಗುತ್ತಿದೆ. ತಂತ್ರಾಂಶವನ್ನು ಬಳಕೆ ಮಾಡುವಾಗ ತಾಂತ್ರಿಕ ಸಮಸ್ಯೆಗಳು ಉಂಟಾದಲ್ಲಿ ಕರ್ನಾಟಕ ಮುನ್ಸಿಪಲ್ ಡಾಟಾ ಸೊಸೈಟಿ ಮೂಲಕ ಪರಿಹರಿಸಲಾಗುತ್ತಿದೆ. ಖಾತಾ ಪಡೆಯಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಪೌರಾಡಳಿತ ನಿರ್ದೇಶನಾಲಯದಿಂದ ಪ್ರಮಾಣಿತ ಕಾರ್ಯವಿಧಾನ ಹೊರಡಿಸಲಾಗಿದೆ.
ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ ಕಾವೇರಿ 2.0 ತಂತ್ರಾಂಶ ಮತ್ತು ಇ-ಆಸ್ತಿ ತಂತ್ರಾಂಶಗಳನ್ನು ಜೋಡಣೆ ಮಾಡಲಾಗಿದೆ. ಇದರಿಂದ ಹಕ್ಕು ವರ್ಗಾವಣೆ ವಿಧಾನವನ್ನು ಸರಳಿಕರಣಗೊಳಿಸಲಾಗಿದ್ದು, ಹಕ್ಕು ವರ್ಗಾವಣೆಯಂತೆ ಗಣಕೀಕೃತ ನಮೂನೆ-3ನ್ನು ಸುಲಭವಾಗಿ ಪಡೆಯಬಹುದಾಗಿದೆ. ಕಟ್ಟಡ ಪರವಾನಿಗೆ ಹಾಗೂ ನಮೂನೆ-3ನ್ನು ನೀಡುತ್ತಿರುವುದರಿಂದ ನಗರ ಸ್ಥಳೀಯ ಸಂಸ್ಥೆಗಳ ಆದಾಯಕ್ಕೆ ಕೊರತೆಯಾಗಿರುವುದಿಲ್ಲ ಎಂದು ಸಚಿವರು ತಿಳಿಸಿದರು.
ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆದ ವಿನ್ಯಾಸಗಳ, ಗ್ರಾಮಠಾಣಾ, ವಿವಿಧ ಯೋಜನೆಯಡಿ ಮಂಜೂರಾದ ನಿವೇಶನಗಳಲ್ಲಿ ಪರವಾನಿಗೆಯನ್ನು ಈ ಹಿಂದಿನಂತೆಯೇ ಮುಂದುವರೆಸಲಾಗಿರುತ್ತದೆ. ಅನುಮೋದನೆ ಪಡೆಯದ/ಅನಧಿಕೃತ ಸ್ವತ್ತುಗಳಿಗೆ ನಮೂನೆ-3ಎ ನೀಡಿ, ತೆರಿಗೆ ವ್ಯಾಪ್ತಿಗೆ ಒಳಪಡಿಸಿ, ಆಸ್ತಿಕರ ವಸೂಲಿ ಮಾಡಲಾಗುತ್ತಿದೆ. ಆದರೆ, ಕಟ್ಟಡ ಪರವಾನಿಗೆ ನೀಡಲು ಪ್ರಸ್ತುತ ಅವಕಾಶವಿರುವುದಿಲ್ಲ ಎಂದು ಸಚಿವರು ತಿಳಿಸಿದರು.
ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನಮೂನೆ -3 ವಿತರಿಸಲು ಕಾವೇರಿ 2.0 ತಂತ್ರಾಂಶವನ್ನು ಬಳಕೆಮಾಡಲಾಗುತ್ತಿದ್ದು, ವಿಶ್ವಾಸ ನಕ್ಷೆ ಜಾರಿಗೆ ತಂದಿರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. ನಿವೇಶನ ಅಥವಾ ಕಟ್ಟಡಗಳಿಗೆ ಸಂಬಂಧಿಸಿದ ಕರಾರು ಹೊಂದಿದವರು ಸಹ ಬಿ ಖಾತಾ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಈ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆಯಾಗಿದೆ. ಈ ಬಗ್ಗೆ ಕಾನೂನು ಸಲಹೆ ಪಡೆದುಕೊಳ್ಳಲಾಗುತ್ತಿದೆ ಎಂದು ಇದೆ ವೇಳೆ ಸಚಿವರು ಮಾಹಿತಿ ನೀಡಿದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications