ಚುನಾವಣಾ ಕಣದಲ್ಲಿ ಸೊಸೆಯಂದಿರ ಜಟಾಪಟಿ : ಎಲ್ಲಾ ಚರ್ಚೆಗೂ ತೆರೆ ಎಳೆದ ಅನಿತಾ ಕುಮಾರಸ್ವಾಮಿ
ಬೆಂಗಳೂರು,ಏಪ್ರಿಲ್4: ರಾಜ್ಯ ವಿಧಾನಸಭಾ ಚುನಾವಣಾಅ ಕಣ ರಂಗೇರಿದೆ. ಇತ್ತ ಚುನಾವಣೆಗೂ ಯಾವುದೇ ಗೊಂದಲವಿಲ್ಲದೆ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದ ಜೆಡಿಎಸ್ ನಾಯಕರಿರಗೆ ಎರಡನೇ ಪಟ್ಟಿಯೇ ದೊಡ್ಡ ಗೊಂದಲಕ್ಕೆ ಕಾರಣವಾಗಿದೆ.
ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತೇನೆಂಬ ವದಂತಿಗಳನ್ನು ಕೆಲವರು ವ್ಯವಸ್ಥಿತವಾಗಿ ಹಬ್ಬಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ, ಇದು ಶುದ್ಧಸುಳ್ಳು ಮತ್ತು ಅಪಪ್ರಚಾರದ ಭಾಗವಷ್ಟೇ. ಮತ್ತೊಮ್ಮೆ ನಾನು ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ಈ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ. 1/7
— ಅನಿತಾ ಕುಮಾರಸ್ವಾಮಿ | Anitha Kumaraswamy (@Anitha_JDS) April 4, 2023
ಹಾಸನ ವಿಚಾರದಲ್ಲಿ ಭವಾನಿ ರೇವಣ್ಣಗೆ ಟಿಕೆಟ್ ನೀಡುವ ಕುರಿತು ಸಾಕಷ್ಟು ಚರ್ಚೆಯಾಗುತ್ತಿದ್ದು, ಈಗಾಗಲೇ ಪುತ್ರ ನಿಖಿಲ್ ಕುಮಾರಸ್ವಾಮಿಗೆ ಟಿಕೆಟ್ ಬಿಟ್ಟುಕೊಟ್ಟಿರುವ ಅನಿತಾ ಕುಮಾರಸ್ವಾಮಿ ಅವರು ಬೇರೊಂದು ಕ್ಷೇತ್ರದಿಂದ ಕಣಕ್ಕಿಳಿಯುತ್ತಾರೆ ಎನ್ನುವ ಚರ್ಚೆಗಳು ಶುರುವಾಗಿದ್ದು, ಚುನಾವಣಾ ಕಣಕ್ಕಿಳಿಯುವ ವಿಚಾರಕ್ಕೆ ಅನಿತಾ ಕುಮಾರಸ್ವಾಮಿ ತೆರೆ ಎಳೆದಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರು ಅನಿತಾ ಕುಮಾರಸ್ವಾಮಿ, ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತೇನೆಂಬ ವದಂತಿಗಳನ್ನು ಕೆಲವರು ವ್ಯವಸ್ಥಿತವಾಗಿ ಹಬ್ಬಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ, ಇದು ಶುದ್ಧಸುಳ್ಳು ಮತ್ತು ಅಪಪ್ರಚಾರದ ಭಾಗವಷ್ಟೇ. ಮತ್ತೊಮ್ಮೆ ನಾನು ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ಈ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ ಎಂದು ಹೇಳಿದ್ದಾರೆ.
ರಾಮನಗರ ಕ್ಷೇತ್ರವನ್ನು ನನ್ನ ಪುತ್ರ ನಿಖಿಲ್ ಕುಮಾರಸ್ವಾಮಿ ಅವರಿಗೆ ಬಿಟ್ಟುಕೊಟ್ಟಿದ್ದೇನೆ. ಪುನಾ ಸ್ಪರ್ಧಿಸುವ ಮಾತೆಲ್ಲಿ? 2008ರಲ್ಲಿ ಆಪರೇಷನ್ ಕಮಲದ ಉಪ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ, ಮಾಜಿ ಪ್ರಧಾನಮಂತ್ರಿಗಳಾದ ಎಚ್ ಡಿ ದೇವೇಗೌಡರು ಹಾಗೂ ಎಚ್ ಡಿ ಕುಮಾರಸ್ವಾಮಿ ಅವರ ಆದೇಶ ಗೌರವಿಸಿ ಸ್ಪರ್ಧಿಸಿದ್ದೆ ಎಂದು ಟ್ವೀಟ್ ಮಾಡಿದ್ದಾರೆ.
ನಂತರದ ಚುನಾವಣೆಯಲ್ಲಿ ವೀರಭದ್ರಯ್ಯ ಅವರಿಗೆ ಮಧುಗಿರಿ ಕ್ಷೇತ್ರವನ್ನು ಸಂತೋಷದಿಂದ ಬಿಟ್ಟುಕೊಟ್ಟು ಪಕ್ಷದ ಕೆಲಸ, ಮನೆಗಷ್ಟೇ ಸೀಮಿತವಾದೆ. 2013ರಲ್ಲಿ ಕೂಡ ಕಾರ್ಯಕರ್ತರ ಒತ್ತಡಕ್ಕೆ ತಲೆಕೊಟ್ಟು ಚನ್ನಪಟ್ಟಣದಲ್ಲಿ ಸ್ಪರ್ಧಿಸಬೇಕಾಯಿತು. ಆಗಲೂ ನಾನು ಪಕ್ಷ ಹಾಗೂ ವರಿಷ್ಠರ ಆದೇಶವನ್ನಷ್ಟೇ ಪಾಲಿಸಿದೆ. 2018ರ ಉಪ ಚುನಾವಣೆ ವೇಳೆ ರಾಮನಗರ ಕ್ಷೇತ್ರದಲ್ಲಿ ಕೆಲವರು ನಮ್ಮ ಪಕ್ಷದ ಬೆನ್ನಿಗೆ ಇರಿಯುವ ಕೃತ್ಯವೆಸಗಿದಾಗ ಮತ್ತೆ ಎಚ್ ಡಿ ದೇವೇಗೌಡರು ಹಾಗೂ ಎಚ್ ಡಿ ಕುಮಾರಸ್ವಾಮಿ ಅವರ ಆದೇಶದ ಮೇರೆಗೆ ರಾಮನಗರ ಉಪ ಚುನಾವಣೆಯಲ್ಲಿ ಸ್ಪರ್ಧಿಸಿದೆ ಎಂದು ಹೇಳಿದ್ದಾರೆ.

ಹೀಗೆ ಪಕ್ಷ ಹಾಗೂ ವರಿಷ್ಠರ ಆದೇಶವನ್ನು ಶಿರಸಾ ಪಾಲಿಸಿದ್ದೇನೆ. ಅಂಥ ಕ್ಲಿಷ್ಟ ಪರಿಸ್ಥಿತಿಯಲ್ಲೂ ಮನೆಮಗಳೆಂದು ಭಾವಿಸಿ ನನ್ನನ್ನು ಗೆಲ್ಲಿಸಿದ ಮಧುಗಿರಿ, ರಾಮನಗರ ಕ್ಷೇತ್ರಗಳ ಮಹಾಜನತೆಗೆ ಆಜೀವ ಪರ್ಯಂತ ನಾನು ಆಭಾರಿ. ಚನ್ನಪಟ್ಟಣ ಕ್ಷೇತ್ರದ ಜನತೆಗೂ ಚಿರಋಣಿ. ಸಿಕ್ಕಿದ ಅವಕಾಶ ಬಳಸಿಕೊಂಡು ಈ ಕ್ಷೇತ್ರಗಳ ಅಭಿವೃದ್ಧಿಗೆ ಶ್ರಮಿಸಿದ್ದೇನೆ.
ಚುನಾವಣೆಯ ಕಣದಿಂದ ಹಿಂದೆ ಸರಿದು ಪಕ್ಷದ ಶ್ರಯೋಭಿವೃದ್ಧಿ ಹಾಗೂ ನನ್ನ ಕ್ಷೇತ್ರದ ಜನರ ಒಳಿತಿಗಾಗಿಯಷ್ಟೇ ಕೆಲಸ ಮಾಡುತ್ತಿದ್ದೇನೆ. ಹೀಗಾಗಿ ಯಾರೂ ಇಂಥ ವದಂತಿಗಳನ್ನು ಹಬ್ಬಿಸಬಾರದು ಮತ್ತೂ ನಂಬಬಾರದು ಎನ್ನುವುದು ನನ್ನ ಕಳಕಳಿಯ ವಿನಂತಿ.
ಎಲ್ಲಾ ಚುಣಾವಣೆಗಳಲ್ಲಿ ಪಕ್ಷದ ಆದೇಶವನ್ನಷ್ಟೇ ಪಾಲಿಸಿ ನಡೆದಿದ್ದೇನೆಯೇ ಹೊರತು, ಮಾಜಿ ಪ್ರಧಾನಮಂತ್ರಿಗಳಾದ ಶ್ರೀ ಹೆಚ್.ಡಿ.ದೇವೇಗೌಡರು ಕಟ್ಟಿದ ಈ ಪಕ್ಷಕ್ಕೆ ಧಕ್ಕೆ ತರುವ ಅಥವಾ ಕುಟುಂಬದ ಗೌರವಕ್ಕೆ ಚ್ಯುತಿಯುಂಟು ಮಾಡುವ ಕೆಲಸ ಮಾಡಿಲ್ಲ, ಮುಂದೆ ಮಾಡುವುದೂ ಇಲ್ಲ. ದಯಮಾಡಿ ನನ್ನ ಭಾವನೆಗಳನ್ನು ಗೌರವಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.












Click it and Unblock the Notifications