ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧೆ ಕುರಿತು ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ
ಚನ್ನಪಟ್ಟಣ, ಆಗಸ್ಟ್ 23: ನಾನು ಚನ್ನಪಟ್ಟಣ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ, ಆಕಾಂಕ್ಷಿಯೂ ನಾನಲ್ಲ. ನಾನು ಜನರ ಸಮಸ್ಯೆಯನ್ನು ಆಲಿಸಿ, ಉಪ ಚುನಾವಣೆಗೆ ಬಗ್ಗೆ ಮುಖಂಡರ ಜೊತೆ ಚರ್ಚೆ ಮಾಡಲು ಬಂದಿದ್ದೇನೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.
ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಹೊಂಗನೂರು ಜಿ.ಪಂ. ವ್ಯಾಪ್ತಿಯ ಗ್ರಾಮಗಳಿಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಭೇಟಿ ನೀಡಿ ಸ್ಥಳೀಯ ಜನರ ಮತ್ತು ರೈತರ ಸಮಸ್ಯೆಗಳನ್ನು ಆಲಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಚನ್ನಪಟ್ಟಣ, ಶಿಂಗ್ಗಾವಿ, ಸಂಡೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್ ನಡೆಯಬೇಕಿದೆ. ರಾಜ್ಯದಲ್ಲಿ ಮೂರು ಕ್ಷೇತ್ರದಲ್ಲಿ ಉಪಚುನಾವಣೆ ಬಗ್ಗೆ ಶೀಘ್ರವೇ ದಿನಾಂಕ ಘೋಷಣೆಯಾಗಲಿದೆ.

ಹೆಚ್‌ಡಿ ಕುಮಾರಸ್ವಾಮಿ ಅವರ ಸ್ವ ಕ್ಷೇತ್ರದಲ್ಲಿ ಕೆರೆಗಳು ಖಾಲಿ ಇವೆ. ಜತೆಗೆ ಹಲವಾರು ಸಮಸ್ಯೆ ಇವೆ. ಹೀಗಾಗಿ ಜನರ ಸಮಸ್ಯೆ ಆಲಿಸಲು ನಾನು ಬಂದಿದ್ದೇನೆ.ಅಲ್ಲದೇ ಉಪ ಚುನಾವಣೆ ಬಗ್ಗೆ ಮುಖಂಡರ ಜತೆ ಚರ್ಚೆ ಮಾಡಲು ಬಂದಿದ್ದೇನೆ ಎಂದರು. ಚನ್ನಪಟ್ಟಣದಲ್ಲಿ NDA ಅಭ್ಯರ್ಥಿ ಗೆಲುವಾಗಬೇಕು. ಹೀಗಾಗಿ ತಳಮಟ್ಟದಿಂದ ಎರಡೂ ಪಕ್ಷದ ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ.ಈಗಾಗಲೇ ಚನ್ನಪಟ್ಟಣ ಕ್ಚೇತ್ರಕ್ಕೆ ಸಂಬಂಧಿಸಿದಂತೆ ವರದಿ ಸಿದ್ದಪಡಿಸಿದ್ದೇವೆ.ಆ ವರದಿಯನ್ನ ಬಿಜೆಪಿ ರಾಷ್ಟ್ರೀಯ ನಾಯಕರು ಗಮನಕ್ಕೆ ಕುಮಾರಸ್ವಾಮಿ ತರುತ್ತಾರೆ ಎಂದರು.
ಚನ್ನಪಟಣದಲ್ಲಿ ನಾನು ಸ್ಪರ್ಧೆ ಮಾಡೋ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಆಯೋಜನೆ ಮಾಡಿಲ್ಲ.ಸಾರ್ವತ್ರಿಕ ಚುನಾವಣೆಗೆ ಮೂರು ಮುಕ್ಕಾಲು ವರ್ಷ ಬಾಕಿ ಇದೆ.ಪಕ್ಷದ ತಳಮಟ್ಟದ ಕಾರ್ಯಕರ್ತರಗಳನ್ನ ಗುರುತಿಸಲು ನಾನು ಕೆಲಸ ಮಾಡಲು ಬಂದಿದ್ದೇನೆ. ಮುಂದಿನ ವಾರ ಬೇರೆ ಜಿಲ್ಲಾ ಪ್ರವಾಸದ ಸಮಯ ನಿಗದಿ ಮಾಡಿದ್ದೇನೆ.ಸದ್ಯ ಚನ್ನಪಟ್ಟಣ ಕಾರ್ಯಕರ್ತರ ಭಾವನೆಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದೇನೆ. ನಾನು ಸ್ಪರ್ಧೆ ಮಾಡುವ ಯಾವುದೇ ಪ್ರಶ್ನೆ ಇಲ್ಲ, ಆಕಾಂಕ್ಷಿಯೂ ಅಲ್ಲ ಎಂದರು.
ಇನ್ನು CP ಯೋಗೇಶ್ವರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರುಯೋಗೇಶ್ವರ್ ಬಿಜೆಪಿಯಲ್ಲಿ ಎಂಎಲ್‌ಸಿ ಇದ್ದಾರೆ. ಯೋಗೇಶ್ವರ್ ಅಥವಾ ಕುಮಾರಸ್ವಾಮಿ ಆಗಲಿ ಯಾವುದೆ ಅಪಸ್ವರಕ್ಕೆ ದಾರಿ ಮಾಡಿಕೊಟ್ಟಿಲ್ಲ.ಅಂತಿಮ ತಿರ್ಮಾನ ಏನಾದ್ರೂ ಇದ್ರೆ ದೆಹಲಿಮಟ್ಟದಲ್ಲಿ ತಿರ್ಮಾನ ಆಗುತ್ತೆ.ಎಲ್ಲಾ ವಿಚಾರಗಳಿಗೂ ತಲೆ ಭಾಗಿ ಒಳ್ಳೆಯ ತಿರ್ಮಾನಕ್ಕೆ ಬರುತ್ತೇವೆ.ಯೋಗೇಶ್ವರ್ ಅವರನ್ನೂ ಕೂಡ ವಿಶ್ವಾಸವಾಗಿ ತೆಗೆದುಕೊಳ್ಳುತ್ತೇವೆ ಎಂದರು.
ನನಗೆ ಶಾಸಕನಾಗಬೇಕು, ವಿಧಾನಸೌಧದ ಮೆಟ್ಟಿಲು ಹತ್ತಬೇಕು ಎಂಬ ನಿರೀಕ್ಷಿ ಇಟ್ಟುಕೊಂಡು ಕೆಲಸ ಮಾಡುತ್ತಿಲ್ಲ. ದೇವೇಗೌಡರು ಪ್ರಾದೇಶಿಕ ಪಕ್ಷವನ್ನ ಕಟ್ಟಿ ಬೆಳೆಸಿದ್ದಾರೆ.ಇದನ್ನ ಕುಮಾರಣ್ಣ ಉಳಿಸಿಕೊಂಡು ಬೇಳೆಸಿಕೊಂಡು ಹೋಗುತ್ತಿದ್ದಾರೆ.ನಾನು ತಳಮಟ್ಟದ ಕಾರ್ಯಕರ್ತರನ್ನು ಗುರುತಿಸುವ ಕೆಲಸ ಆಗಬೇಕು ಅಂತ ನನ್ನ ಕೆಲಸ ಆರಂಭಿಸಿದ್ದೇನೆ ಎಂದರು.
ನಿಖಿಲ್ ಕುಮಾರಸ್ವಾಮಿ ರಾಜಕೀಯ ಷಡ್ಯಂತ್ರಕ್ಕೆ ಬಲಿಯಾದ್ರು ಅಂತ ನನ್ನ ಮೇಲೆ ಸಾಕಷ್ಟು ಒತ್ತಡ ಇತ್ತು.ಆದ್ರೆ ನಾನು ಚುನಾವಣೆಗೆ ಸ್ಪರ್ಧೆ ಮಾಡೊ ಸೂಕ್ತ ಸಮಯ ಅಲ್ಲ.ರಾಜ್ಯಧ್ಯಂತ ಕಾರ್ಯಕರ್ತರ ಜೊತೆ ಒಡನಾಟ ಬೆಳೆಸಿಕೊಳ್ಳಬೇಕು ಅಂತ ಕೆಲಸ ಆರಂಭಿಸಿದ್ದೇನೆ.ನಾನು ಯಾವುದೇ ಆಕಾಂಕ್ಷಿ ಅಲ್ಲ. ಅಪೇಕ್ಷೆಯೂ ಇಲ್ಲ. ಏನಾದ್ರು ಜನತಾದಳದ ಚಿನ್ಹೆ ಅಡಿ ಚನ್ನಪಟ್ಟಣದಲ್ಲಿ ಸ್ಪರ್ಧೆ ಮಾಡಬೇಕು ಅನ್ನೊ ಸಂದರ್ಭ ಬಂದರೆ ನೂರಕ್ಕೆ ನೂರರಷ್ಟು ನಮ್ಮ ಕಾರ್ಯಕರ್ತರಿಗೆ ಅವಕಾಶ ಮಾಡಿಕೊಡುತ್ತೇವೆ ಎಂದರು.












Click it and Unblock the Notifications