ಸರ್ಕಾರಕ್ಕೆ ಕಂಟಕವಾದ ವಾಲ್ಮೀಕಿ ನಿಗಮ ಪ್ರಕರಣ: ಸಿದ್ದರಾಮಯ್ಯ ಏನಂದ್ರು?

ಬೆಂಗಳೂರು ಜೂನ್‌ 01: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ರಚನೆಯಾಗಿ ಒಂದು ತಿಂಗಳು ಪೂರೈಸಿದ್ದು, ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸಚಿವ ಬಿ ನಾಗೇಂದ್ರ ಅವರ ಹೆಸರು ಕೇಳಿಬಂದಿದೆ. ಸಚಿವ ಬಿ ನಾಗೇಂದ್ರ ಅವರ ರಾಜೀನಾಮೆಗೆ ವಿಪಕ್ಷಗಳು ಪಟ್ಟು ಹಿಡಿದಿದ್ದು, ಲೋಕಸಭಾ ಚುನಾವಣಾ ಫಲಿತಾಂಶಕ್ಕೆ ಕಾಯುತ್ತಿರುವ ಹೊತ್ತಲಿ ಸರ್ಕಾರಕ್ಕೆ ದೊಡ್ಡ ಕಂಟಕ ಎದುರಾಗಿದೆ.

ಈ ಕುರಿತು ಮಾಧ್ಯಮಗಳ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ತನಿಖೆಯಲ್ಲಿ ತಪ್ಪಿತಸ್ಥರು ಎಂದು ಗೊತ್ತಾದರೆ ಎಲ್ಲರ ವಿರುದ್ದವೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸ್ಪಷ್ಟಪಡಿಸಿದರು. ವಾಲ್ಮೀಕಿ ನಿಗಮದ ಪ್ರಕರಣಕ್ಕೆ ಸಂಬಂಧಪಟ್ಟಂತೆ SIT ರಚಿಸಲಾಗಿದ್ದು ತನಿಖೆ ಚುರುಕಾಗಿ ನಡೆಯುತ್ತಿದೆ. ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದರು.

There Is No Question Of Protecting Anyone In The Valmiki Corporation Case Says Siddaramaiah

ಬಿಜೆಪಿ ಯವರು ದಾಖಲಿಸಿದ್ದ ಖಾಸಗಿ ದೂರಿನ ಸಂಬಂಧ ನ್ಯಾಯಾಲಯಕ್ಕೆ ಹಾಜರಾಗಿದ್ದ ಮುಖ್ಯಮಂತ್ರಿಗಳು ಈ ಬಗ್ಗೆ ಪ್ರತಿಕ್ರಿಯಿಸಿ ಸಿವಿಲ್ ಸ್ವರೂಪದ ಪ್ರಕರಣ ಇದಾಗಿದೆ. ಕಾನೂನು ರಕ್ಷಕರಾಗಿ, ಪಾಲಕರಾಗಿ ನ್ಯಾಯಾಲಯದ ಸೂಚನೆ ಮೇರೆಗೆ ಇಂದು ನಾನು ನ್ಯಾಯಾಧೀಶರ ಮುಂದೆ ಹಾಜರಾಗಿದ್ದೇನೆ. ಜಾಮೀನು ಪಡೆದಿದ್ದೇನೆ ಎಂದರು. ನನ್ನನ್ನು, ಕೆಪಿಸಿಸಿ ಅಧ್ಯಕ್ಷರು ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧವೂ ಖಾಸಗಿ ದೂರು ದಾಖಲಾಗಿತ್ತು. ರಾಹುಲ್ ಗಾಂಧಿಯವರೂ ನ್ಯಾಯಾಲಯಕ್ಕೆ ಹಾಜರಾಗುತ್ತಾರೆ ಎಂದರು.

ಸಿ.ಎಂ. ರಾಜೀನಾಮೆ, ಸಚಿವರ ಬಂಧನಕ್ಕೆ ಆಗ್ರಹ

ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ಅವ್ಯವಹಾರ ಹಗರಣಕ್ಕೆ ಸಂಬಂಧಿಸಿ ಸಚಿವರ ರಾಜೀನಾಮೆ ಪಡೆದು ಅವರನ್ನು ಬಂಧಿಸಬೇಕು. ಇದರ ಹೊಣೆ ಹೊತ್ತ ಮುಖ್ಯಮಂತ್ರಿಗಳೂ ರಾಜೀನಾಮೆ ಕೊಡಬೇಕು ಎಂದು ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು ಆಗ್ರಹಿಸಿದರು.

ಯೂನಿಯನ್ ಬ್ಯಾಂಕ್ ಆಫ್ ಇಂಡಿಯವು ನಿನ್ನೆಯೇ ಬೆಂಗಳೂರಿನ ಸಿಬಿಐ ಕಚೇರಿಗೆ ದೂರು ಕೊಟ್ಟಿದೆ. ಅದರನ್ವಯ ಸಿಬಿಐ ತನಿಖೆ ನಡೆಯಲಿ ಎಂದೂ ಒತ್ತಾಯಿಸಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಹಗರಣಕ್ಕೆ ರಾಜ್ಯ ಸರಕಾರವೇ ನೇರ ಹೊಣೆ ಎಂದು ದೂರಿದರು. ನಕಲಿ ಖಾತೆ ತೆರೆದು, ಕ್ರಿಯಾ ಯೋಜನೆ ಇಲ್ಲದೆ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಟೀಕಿಸಿದರು.

ಕಾಂಗ್ರೆಸ್ ಸರಕಾರ ಸಂಪೂರ್ಣ ನಿಷ್ಕ್ರಿಯವಾಗಿದೆ. ವಾಲ್ಮೀಕಿ ನಿಗಮದ ಈ ಅವ್ಯವಹಾರವು ಪರಿಶಿಷ್ಟ ಪಂಗಡಕ್ಕೆ ಆಗಿರುವ ಅನ್ಯಾಯ ಎಂದು ತಿಳಿಸಿದರು. ನೇರ ಹೊಣೆಯಾಗಿರುವ ಮುಖ್ಯಮಂತ್ರಿಗಳಿಗೆ ಇನ್ನೂ ಧ್ವನಿಯೇ ಬಂದಿಲ್ಲ. ಎಲ್ಲಿ ಧ್ವನಿ ಅಡಗಿ ಹೋಗಿದೆಯೋ ಎಂದು ವ್ಯಂಗ್ಯವಾಗಿ ಪ್ರಶ್ನಿಸಿದರು. ಹಣ ತೆಲಂಗಾಣದ ಯಾರ ಖಾತೆಗೆ ಹೋಗಿದೆ? ಯಾರು ಆ ವ್ಯಕ್ತಿಗಳು? ಎಂದು ಪ್ರಶ್ನಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+