DK Shivakumar: ಉಚಿತ ಬಸ್‌ ಪ್ರಯಾಣ ರದ್ದಾಗುತ್ತಾ?: ಯುಟರ್ನ್ ಹೊಡೆದ ಡಿಕೆ ಶಿವಕುಮಾರ್

ಬೆಂಗಳೂರು, ಅಕ್ಟೋಬರ್31: ಶಕ್ತಿ ಯೋಜನೆ ಸೇರಿದಂತೆ ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ, ತಿರುಚಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಯುಟರ್ನ್‌ ಹೊಡೆದಿದ್ದಾರೆ.

ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿ, ಶಕ್ತಿ ಯೋಜನೆ ಮರುಪರಿಶೀಲನೆ ಸಂಬಂಧಿಸಿದಂತೆ ಈ ವಿಚಾರದಲ್ಲಿ ನನ್ನ ಹೇಳಿಕೆಯನ್ನು ತಿರುಚಲಾಗಿದೆ. ಆರ್ಥಿಕವಾಗಿ ಸದೃಢವಾಗಿರುವವರು, ಐಟಿಬಿಟಿ ಸಂಸ್ಥೆಗಳವರು , ಎಂಎನ್ ಸಿ ಕಂಪನಿಗಳ ಸಿಬ್ಬಂದಿ ಸೇರಿದಂತೆ ಅನೇಕ ಮಹಿಳೆಯರು ತಮಗೆ ಬಸ್ ಗಳಲ್ಲಿ ಉಚಿತ ಪ್ರಯಾಣದ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.

There Is No Question Of Stopping Any Guarantee Scheme Including Shakti DK Shivakumar

ತಾವು ಕೆಲಸ ಮಾಡುವ ಕಂಪನಿಗಳಲ್ಲಿ ಸಂಚಾರಕ್ಕಾಗಿ ಪ್ರತ್ಯೇಕ ಭತ್ಯೆ ನೀಡಲಾಗುತ್ತಿದೆ. ಹೀಗಾಗಿ ನಮಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಈ ವಿಚಾರದ ಬಗ್ಗೆ ನಾನು ಸಚಿವರ ಜತೆ ಚರ್ಚೆ ಮಾಡುತ್ತೇನೆ ಎಂದು ಹೇಳಿದ್ದೇನೆ ಅಷ್ಟೇ. ಯೋಜನೆ ನಿಲ್ಲಿಸುತ್ತೇವೆ ಎಂದು ಎಲ್ಲಿಯೂ ಹೇಳಿಲ್ಲ ಎಂದು ತಿಳಿಸಿದರು.

ನಮ್ಮ ಐದು ಗ್ಯಾರಂಟಿ ಯೋಜನೆಗಳ ಪೈಕಿ ಯಾವುದೇ ಯೋಜನೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಈ ಯೋಜನೆ ಸೌಲಭ್ಯ ಬೇಡ ಎಂದು ಹೇಳುವವರಿಗೆ ಬಲವಂತ ಮಾಡಲು ಸಾಧ್ಯವೇ? ಅವರ ಸಂಖ್ಯೆ ಶೇಕಡಾ 7-8 ರಷ್ಟು ಇರಬಹುದು. ಹಿಂದೆ ಅಡುಗೆ ಅನಿಲಕ್ಕೆ ನೀಡಲಾಗುತ್ತಿದ್ದ ಸಬ್ಸಿಡಿ ವಿಚಾರದಲ್ಲಿ ಪ್ರಧಾನಿ ಮೋದಿ ಅವರು ಸ್ವಇಚ್ಛೆಯಿಂದ ಸಬ್ಸಿಡಿ ತ್ಯಜಿಸುವವರಿಗೆ ಅವಕಾಶ ನೀಡಿದರು. ಆ ರೀತಿ ಆಲೋಚನೆ ಮಾಡುವುದಾಗಿ ಹೇಳಿದ್ದೇನೆ.

ಕಾಂಗ್ರೆಸ್ ಅಧ್ಯಕ್ಷನಾಗಿ ಹಾಗೂ ಉಪಮುಖ್ಯಮಂತ್ರಿಯಾಗಿ ಮತ್ತೊಮ್ಮೆ ಸ್ಪಷ್ಟ ಪಡಿಸುತ್ತೇನೆ. ಐದೂ ಗ್ಯಾರಂಟಿ ಯೋಜನೆ ಮುಂದುವರಿಯುತ್ತವೆ. ಜನರಿಗೆ ಈ ಸೌಲಭ್ಯ ಮುಂದುವರಿಯಲಿದೆ. ಬೆಲೆ ಏರಿಕೆ ಸಮಸ್ಯೆ ನಿವಾರಿಸಿ ಜನರ ಬದುಕಿನಲ್ಲಿ ಬದಲಾವಣೆ ತರಲು ಮುಂದಾಗಿದ್ದು, ಜನ ನಮಗೆ ಆಶೀರ್ವಾದ ಮಾಡುತ್ತಾರೆ. ಈಗಿನ ಅವಧಿ ಜತೆಗೆ ಮುಂದಿನ ಐದು ವರ್ಷದ ಅವಧಿಯೂ ಸೇರಿ ಒಟ್ಟು ಎಂಟೂವರೆ ವರ್ಷ ಈ ಯೋಜನೆ ಮುಂದುವರಿಯಲಿದೆ ಎಂದು ತಿಳಿಸಿದರು.

ಯಾರಿಗೆ ಬೇಕೋ ಅವರು ಟಿಕೆಟ್ ಖರೀದಿ ಮಾಡಿ ಪ್ರಯಾಣ ಮಾಡಬಹುದಲ್ಲವೇ? ಪರಿಷ್ಕರಣೆ ಯಾಕೆ ಎಂದು ಕೇಳಿದಾಗ, "ಆ ರೀತಿ ಮಾಡಲು ಸಾರಿಗೆ ಸಿಬ್ಬಂದಿಗಳಿಗೆ ಸರ್ಕಾರ ಅನುಮತಿ ನೀಡಬೇಕಲ್ಲವೇ? ಇಲ್ಲದಿದ್ದರೆ ಕಂಡಕ್ಟರ್ ಗಳು ಮಹಿಳೆಯರಿಂದ ಹಣ ಪಡೆಯಲು ಹಿಂಜರಿಯುತ್ತಾರೆ. ನಾಳೆ ನೀವೇ ಹೇಳಬಹುದು, ಮಹಿಳೆಯರಿಂದ ಬಲವಂತವಾಗಿ ಹಣ ಕೀಳುತ್ತಿದ್ದಾರೆ ಎಂದು. ಹೀಗಾಗಿ ಕೆಲವು ಮಹಿಳಾ ಪ್ರಯಾಣಿಕರು ನೀಡಿರುವ ಸಲಹೆ ಬಗ್ಗೆ ನಾವು ಚರ್ಚೆ ಮಾಡಬೇಕಿದೆ. ಈ ವಿಚಾರದಲ್ಲಿ ಯಾವುದೇ ಆತುರವಿಲ್ಲ ಎಂದು ಸ್ಪಷ್ಟನೆ ನೀಡಿದರು.

ರಾಜ್ಯ ಸರ್ಕಾರ ದಿವಾಳಿಯಾಗುತ್ತಿದ್ದು, ಗ್ಯಾರಂಟಿ ಯೋಜನೆಗಳಿಂದಲೇ ಸರ್ಕಾರ ಪತನವಾಗಲಿದೆ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ, "ಈ ಗ್ಯಾರಂಟಿ ಯೋಜನೆಗಳನ್ನು ಕಂಡು ಕುಮಾರಸ್ವಾಮಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. "ಕಾಂಗ್ರೆಸ್ ನವರು 5 ಗ್ಯಾರಂಟಿ ಯೋಜನೆಗಳನ್ನು ಕೊಡುತ್ತಿದ್ದಾರೆ. ನಿಮ್ಮ ಅಧಿಕಾರ ಅವಧಿಯಲ್ಲಿ ಇಂತಹ ಒಂದು ಯೋಜನೆ ಕೊಟ್ಟಿಲ್ಲ, ಬಡವರಿಗೆ ನಿವೇಶನ ಕೊಟ್ಟಿಲ್ಲ, ಊರು ಅಭಿವೃದ್ಧಿ ಮಾಡಿಲ್ಲ. ಹೀಗಾಗಿ ಯಾಕೆ ಮತ ಕೇಳುತ್ತೀರಿ ಎಂದು ಜನ ಅವರನ್ನು ಧಿಕ್ಕರಿಸುತ್ತಿದ್ದಾರೆ. ಅದನ್ನು ಸಹಿಸಲಾಗದೆ ನನಗೆ ಈ ಅವಕಾಶ ಸಿಗಲಿಲ್ಲವಲ್ಲ ಎಂದು ಕುಮಾರಸ್ವಾಮಿ ಅಸೂಯೆಯಿಂದ ತಮ್ಮ ಕೈ ಹಿಸುಕಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+