ಕೋಲಾರದಲ್ಲಿ ಸಿದ್ದರಾಮಯ್ಯಗೆ ಯಾವುದೇ ಅಪಾಯವಿಲ್ಲ: ಮುನಿಯಪ್ಪ
ಬೆಂಗಳೂರು, ನವೆಂಬರ್ 16: ಮುಂದಿನ ವಿಧಾನಸಭೆ ಚುನಾವಣೆಗೆ ಸಿದ್ದರಾಮಯ್ಯ ಅವರು ಕೋಲಾರ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದರೆ ಅವರಿಗೆ ಅಪಾಯ ಏನೂ ಇಲ್ಲ. ನಾವೆಲ್ಲರೂ ಒಂದಾಗಿ ಕೆಲಸ ಮಾಡಿದ್ರೆ ಗೆಲ್ಲಲು ಕಷ್ಟವಿಲ್ಲ ಎಂದು ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಹೇಳಿದರು.
ಬುಧವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕೋಲಾರದಲ್ಲಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಮಾಡಿದರೇ ಸ್ವಾಗತ. ಆದರೆ, ಕೋಲಾರದಲ್ಲಿ ಸ್ವಲ್ಪ ಭಿನ್ನಾಭಿಪ್ರಾಯವಿದೆ. ಅದನ್ನು ಸರಿ ಮಾಡಬೇಕು ಎಂದು ಹೇಳಿದ್ದೇನೆ. ಸಿದ್ದರಾಮಯ್ಯ ಅದನ್ನು ಮಾಡ್ತಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
ನನಗೆ ಗುಜರಾತ್‌ನಲ್ಲಿ ಚುನಾವಣಾ ಕೆಲಸ ಇತ್ತು. ಆ ಕಾರಣಕ್ಕಾಗಿ ಸಿದ್ದರಾಮಯ್ಯ ಕೋಲಾರಕ್ಕೆ ಬಂದಾಗ ಅಲ್ಲಿರಲು ಆಗಲಿಲ್ಲ. ಸಿದ್ದರಾಮಯ್ಯ ಜೊತೆ ಮಾತಾಡಿದ್ದೇನೆ. ಅವರನ್ನು ಸ್ವಾಗತ ಮಾಡಿದ್ದೇನೆ ಎಂದು ಹೇಳಿದರು.

ಕಳೆದ ಬಾರಿ ಬಿಜೆಪಿಗೆ ಕೆಲಸ ಮಾಡಿದವರ ಮುಂದಾಳತ್ವದಲ್ಲಿ ಹೋದರೆ ಗೆಲುವು ಕಷ್ಟ ಆಗುತ್ತದೆ. ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಯಾರೂ ಸಂಚು ಮಾಡುತ್ತಿಲ್ಲ. ನಿಷ್ಠ ಕಾಂಗ್ರೆಸ್‌ನವರು ಯಾರು ಇದ್ದಾರೆ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದರು.
ಮುಂದಿನ ಸಿಎಂ ಆಯ್ಕೆ ವಿಚಾರವಾಗಿ ಮಾತನಾಡಿದ ಅವರು, ಅದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಹತ್ತಾರು ಜನ ಸಿಎಂ ಆಕಾಂಕ್ಷಿಗಳು ಹಿರಿಯರು ಇದ್ದಾರೆ. ಆದರೆ, ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.
ದೇವನಹಳ್ಳಿಯಿಂದ ಮುನಿಯಪ್ಪ ಸ್ಪರ್ಧೆ ವಿಚಾರವಾಗಿ ಮಾತನಾಡಿದ ಅವರು, ಹೈಕಮಾಂಡ್ ತೀರ್ಮಾನದಂತೆ ನಾನು ಹೋಗಬೇಕಾಗುತ್ತದೆ. ಇಲ್ಲಿಯವರೆಗೆ ಅವರು ಏನು ಹೇಳಿಲ್ಲ. ಒಂದು ವರ್ಷದಿಂದ ಒತ್ತಾಯವಿದೆ. ಹೈಕಮಾಂಡ್ ಹೇಳಿದ್ರೆ ಬರಬೇಕಾಗುತ್ತದೆ ಎಂದರು.

ಈಗಾಗಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮುಂದಿನ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲು ಕೋಲಾರವನ್ನು ಆಯ್ಕೆ ಮಾಡಿಕೊಳ್ಳುವ ಇಂಗಿತವನ್ನ ವ್ಯಕ್ತಪಡಿಸಿದ್ದಾರೆ. ಆದರೆ, ಕೋಲಾರದ ಕಾಂಗ್ರೆಸ್‌ನಲ್ಲಿ ಸಮಸ್ಯೆಯಿದ್ದು, ಇಲ್ಲಿ ಸ್ಪರ್ಧೆಗೂ ಮುನ್ನವೇ ನೀವು ಮೂಲ ಕಾಂಗ್ರೆಸ್ಸಿಗರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಈ ಹಿಂದೆ ಬಿಜೆಪಿಗೆ ಬೆಂಬಲ ನೀಡಿದವರನ್ನು ನಂಬಿಕೊಂಡು ಕೋಲಾರದಲ್ಲಿ ಸ್ಪರ್ಧೆ ಮಾಡುವುದು ಉಚಿತವಲ್ಲ ಎಂದು ಮಾಜಿ ಸಂಸದ ಕೆ.ಎಚ್. ಮುನಿಯಪ್ಪ ಸಲಹೆ ನೀಡಿದ್ದಾರೆ
ಕಾಂಗ್ರೆಸ್ ಹೈಕಮಾಂಡ್‌ನಿಂದ ರಾಜ್ಯ ರಾಜಕಾರಣಕ್ಕೆ ಹೋಗುವಂತೆ ಒಂದು ವರ್ಷದಿಂದ ಒತ್ತಡ ಹೇರಲಾಗುತ್ತಿದೆ. ಹೈಕಮಾಂಡ್ ತೀರ್ಮಾನದಂತೆ ನಾನು ನಡೆದುಕೊಳ್ಳಬೇಕಾಗುತ್ತದೆ. ಇಲ್ಲಿಯವರೆಗೆ ಹೈಕಮಾಂಡ್‌ನಿಂದ ಯಾವುದೇ ಸೂಚನೆ ನೀಡಿಲ್ಲ. ಅವರು ಹೇಳಿದರೆ ರಾಜ್ಯ ರಾಜಕಾರಣಕ್ಕೆ ಬರಬೇಕಾಗುತ್ತದೆ. ಇನ್ನು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದರ ಬಗ್ಗೆ ಸಿಎಲ್‌ಪಿ ಮತ್ತು ಪಿಸಿಸಿ ಅಧ್ಯಕ್ಷರು ಹೇಳುತ್ತಾರೆ. ಇದಕ್ಕೆ ಗೆಲುವು ಮಾತ್ರ ಮಾನದಂಡವಾಗಿ ನೋಡಲಾಗುತ್ತದೆ. ಒಂದೊಂದು ಸೀಟಿನ ಗೆಲುವು ಕೂಡ ಪಕ್ಷಕ್ಕೆ ಮುಖ್ಯವಾಗುತ್ತದೆ ಎಂದು ಮುನಿಯಪ್ಪ ಹೇಳಿದರು.












Click it and Unblock the Notifications