ರಾಜ್ಯದಲ್ಲಿ ಕುಡಿಯುವ ನೀರಿಗೆ ಕೊರತೆ ಇಲ್ಲ, ಮಳೆ ಕಡಿಮೆಯಾಗಿದೆ: ಸಚಿವ ಕೃಷ್ಣಭೈರೇಗೌಡ

ಬೆಂಗಳೂರು, ಜುಲೈ 21: ಜುಲೈ ತಿಂಗಳಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಅಧಿಕ ಮಳೆಯಾಗಿದ್ದು ಕುಡಿಯುವ ನೀರಿನ ಪೂರೈಕೆಗೆ ಯಾವುದೇ ಸಮಸ್ಯೆ ಇಲ್ಲ. ಆಗಸ್ಟ್ ಮೊದಲ ವಾರದೊಳಗೆ ಉತ್ತಮ ಮಳೆಯಾಗದಿದ್ದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ, ಬರ ಘೋಷಣೆಯ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ವಿಧಾನಸಭೆಯಲ್ಲಿ ಹೇಳಿದ್ದಾರೆ.

ರಾಜ್ಯದಲ್ಲಿ ಈ ವರ್ಷ ಉತ್ತಮ ಮಳೆಯಾಗಿಲ್ಲ, ರೈತರ ಬೆಲೆ ಹಾನಿಯಾಗಿದೆ, ಕುಡಿಯುವ ನೀರಿಗೂ ಸಮಸ್ಯೆ ಎದುರಾಗಿದೆ ಎಂದು ಸದನದಲ್ಲಿ ಅನೇಕ ಶಾಸಕರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, "ರಾಜ್ಯದಲ್ಲಿ ಜೂನ್ ತಿಂಗಳಲ್ಲಿ ವಾಡಿಕೆಗಿಂತ ಶೇ.56 ರಷ್ಟು ಮಳೆ ಕೊರತೆಯಾಗಿದೆ. ಜುಲೈ ತಿಂಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದ್ದು, ಮಳೆಯ ಕೊರತೆ ಇದೀಗ ಶೇ. 29ಕ್ಕೆ ಇಳಿದಿದೆ. ಹೀಗಾಗಿ ಕುಡಿಯುವ ನೀರಿನ ಪೂರೈಕೆಗೆ ಯಾವುದೇ ಸಮಸ್ಯೆ ಇಲ್ಲ" ಎಂದು ಮಾಹಿತಿ ನೀಡಿದ್ದಾರೆ.

minister-krishna-byre-gowda

"ಜುಲೈ ತಿಂಗಳಿನಲ್ಲಿ ಉತ್ತಮ ಮಳೆಯಾಗಿದ್ದರೂ ಸಹ, ಕೆಲವು ಜಿಲ್ಲೆಗಳು ಈಗಲೂ ಮಳೆ ಕೊರತೆಯನ್ನು ಎದುರಿಸುತ್ತಿವೆ. ರಾಜ್ಯದ 330 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಇದೆ. ಈ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರಿನ ಸರಬರಾಜು ಮಾಡಲಾಗುತ್ತಿದೆ. 404 ಖಾಸಗಿ ಬೋರ್ವೆಲ್‌ಗಳನ್ನು ಬಾಡಿಗೆಗೆ ಪಡೆದು ನೀರಿನ ಪೂರೈಕೆ ಮಾಡಲಾಗುತ್ತಿದೆ. ಈ ಹೊರೆಯನ್ನು ಸರ್ಕಾರ ಗ್ರಾಮ ಪಂಚಾಯಿತಿಗಳ ಮೇಲೆ ಹೊರಿಸಿಲ್ಲ. ಬದಲಾಗಿ ಪ್ರತಿ ಜಿಲ್ಲೆಗೆ ನೀರಿನ ಪೂರೈಕೆಗೆಂದೆ ಸರ್ಕಾರ ತಲಾ 1 ಕೋಟಿ ರೂ.ಹಣ ಮಂಜೂರು ಮಾಡಲಾಗಿದೆ" ಎಂದು ಹೇಳಿದ್ದಾರೆ.

ಈ ಸಂಬಂಧ ಎಲ್ಲ ಜಿಲ್ಲಾಧಿಕಾರಿಗಳ ಜೊತೆಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದ್ದು, ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗದಂತೆ ಎಚ್ಚರವಹಿಸಲು ಸೂಚನೆ ನೀಡಿದ್ದಾರೆ. ಅಲ್ಲದೆ, ಹೆಚ್ಚುವರಿ ಹಣದ ಅಗತ್ಯ ಇದ್ದರೆ ಅದನ್ನೂ ಪೂರೈಸಲು ಸರ್ಕಾರ ಬದ್ಧವಾಗಿರುವುದಾಗಿ ತಿಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ಬರಗಾಲ ಘೋಷಣೆ

ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ರೈತರು ಸಂಕಷ್ಟಕ್ಕೆ ಈಡಾಗಿದ್ದಾರೆ. ಹಲವೆಡೆ ಬೆಳೆ ನಷ್ಟವಾಗಿದೆ. ಹೀಗಾಗಿ ಬರಗಾಲ ಘೋಷಿಸಿ ರೈತರಿಗೆ ನಷ್ಟ ಪರಿಹಾರವನ್ನು ತುಂಬಿಕೊಡಬೇಕು ಎಂದು ವಿಧಾನಸಭೆಯಲ್ಲಿ ಹಲವು ಶಾಸಕರು ಒತ್ತಾಯಿಸಿದ್ದಾರೆ. ಇದಕ್ಕೆ ಉತ್ತರಿಸಿರುವ ಕಂದಾಯ ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೆ ಚರ್ಚಿಸಿ ಬರಗಾಲ ಘೋಷಿಸುವ ಬಗ್ಗೆ ತಿಳಿಸಿದ್ದಾರೆ.

minister-krishna-byre-gowda

"ರಾಜ್ಯದ ಕೆಲವು ತಾಲೂಕುಗಳಲ್ಲಿ ಬರದ ಛಾಯೆ ಇದೆ. ಅಲ್ಲದೆ, ಬರ ಘೋಷಣೆಗೆ ಕೇಂದ್ರ ಸರ್ಕಾರದ ಕೆಲವು ಮಾನದಂಡಗಳಿವೆ. ಆಗಸ್ಟ್ ಮೊದಲ ವಾರದೊಳಗೆ ಉತ್ತಮ ಮಳೆಯಾಗದಿದ್ದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ, ಬರ ಘೋಷಣೆಯ ಬಗ್ಗೆ ಚಿಂತನೆ ನಡೆಸಲಾಗುವುದು" ಎಂದು ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

ಹಿಂದಿನ ಸರ್ಕಾರ ಜಲಾಶಯಗಳನ್ನು ಅಶಿಸ್ತಿನಿಂದ ನಿರ್ವಹಿಸಿದೆ

ಹಿಂದಿನ ಬಿಜೆಪಿ ಸರ್ಕಾರ ರಾಜ್ಯದ ಎಲ್ಲ ಜಲಾಶಯಗಳನ್ನು ಅಶಿಸ್ತಿನಿಂದ ನಿರ್ವಹಿಸಿದೆ. ಪರಿಣಾಮ ಜಲಾಶಯಗಳು ಬಹುತೇಕ ಬರಿದಾಗಿವೆ. ಕಳೆದ ವರ್ಷಾಂತ್ಯದ ಡಿಸೆಂಬರ್‌ವರೆಗೂ ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ. ಜಲಾಶಯಗಳಿಗೆ ನೀರಿನ ಹರಿವು ಭರಪೂರವಾಗಿತ್ತು. ಆದರೆ, ಹಿಂದಿನ ಸರ್ಕಾರ ಜಲಾಶಯಗಳನ್ನು ಅಶಿಸ್ತಿನಿಂದ ನಿರ್ವಹಿಸಿದೆ. ನೀರಿನ್ನು ಬೇಕಾಬಿಟ್ಟಿ ನಾಲೆಗಳಿಗೆ ಹರಿಸಿದೆ. ಪರಿಣಾಮ ಬಹುತೇಕ ಜಲಾಶಯಗಳು ಖಾಲಿಯಾಗಿವೆ" ಎಂದು ಕೃಷ್ಣಭೈರೇಗೌಡ ಅಸಮಾಧಾನ ಹೊರಹಾಕಿದ್ದಾರೆ.

"ಜುಲೈ ತಿಂಗಳಲ್ಲಿ ಉತ್ತಮ ಮಳೆಯಾಗದ ಕಾರಣ ಜಲಾಶಯಗಳ ನೀರಿನ ಮಟ್ಟ ಮತ್ತಷ್ಟು ಕುಸಿದಿತ್ತು. ಆದರೆ, ಜುಲೈನಲ್ಲಿ ಉತ್ತಮ ಮಳೆಯಾಗಿದೆ. ಕಾವೇರಿಯ ನಾಲ್ಕು ಜಲಾಶಯಗಳಿಗೆ 18,617 ಕ್ಯೂಸೆಕ್ಸ್ ನೀರಿನ ಒಳಹರಿವಿದೆ. ಕೃಷ್ಣ ನದಿಯ 6 ಜಲಾಶಯಗಳಿಗೆ 76, 264 ಕ್ಯೂಸೆಕ್ಸ್ ನೀರಿನ ಹರಿವಿದೆ. ಆಲಮಟ್ಟಿಗೂ 32,146 ಕ್ಯೂಸೆಕ್ಸ್ ನೀರಿನ ಒಳಹರಿವಿದೆ. ಘಟಪ್ರಭ-ಮಲಪ್ರಭದಲ್ಲೂ ನೀರಿನ ಒಳಹರಿವು ಹಣನೀಯವಾಗಿ ಹೆಚ್ಚಾಗಿದೆ" ಎಂದು ತಿಳಿಸಿದ್ದಾರೆ.

"ಹೀಗಾಗಿ ಕುಡಿಯುವ ನೀರಿನ ಸಮಸ್ಯೆ ಸದ್ಯಕ್ಕಿಲ್ಲ. ಎಲ್ಲ ಗ್ರಾಮಗಳಿಗೂ ಕುಡಿಯುವ ನೀರನ್ನು ಪೂರೈಸುವ 'ಬಹುಗ್ರಾಮ ಕುಡಿಯುವ ನೀರು' ಯೋಜನೆಗೆ ಯಾವುದೇ ಆತಂಕ ಇಲ್ಲ. ಆದರೆ, ಹಲವು ಸದಸ್ಯರ ಭಿತ್ತನೆಯಾಗಿರುವ ಬೆಳೆಗೆ ನೀರು ಹರಿಸುವಂತೆ ಹಲವು ಸದಸ್ಯರು ಮನವಿ ಮಾಡುತ್ತಿದ್ದಾರೆ. ಸದ್ಯಕ್ಕೆ ನಾಲೆಗಳಿಗೆ ನೀರು ಹರಿಸುವಷ್ಟು ನೀರಿನ ಶೇಖರಣೆ ಜಲಾಶಯಗಳಲ್ಲಿ ಇಲ್ಲ" ಎಂದು ಸಚಿವ ಕೃಷ್ಣಭೈರೇಗೌಡ ಸ್ಪಷ್ಟಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+