ರಾಜ್ಯದಲ್ಲಿ ವರುಣಾರ್ಭಟ; ಮಳೆ ಹಾನಿಗೆ ಪರಿಹಾರದ ಬಗ್ಗೆ ಅಪ್‌ಡೇಟ್‌ ಕೊಟ್ಟ ಸಿದ್ದರಾಮಯ್ಯ

ಬೆಂಗಳೂರು, ಮೇ 30: ಕಳೆದ 125 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಮೇ ತಿಂಗಳಲ್ಲಿ ರಾಜ್ಯದಲ್ಲಿ ಅತಿ ಹೆಚ್ಚಿನ ಮಳೆ ದಾಖಲಾಗಿದೆ. ರಾಜ್ಯದ 28 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಮಳೆ ಹಾನಿಗೆ ಪರಿಹಾರ ಒದಗಿಸಲು ಯಾವುದೇ ಅನುದಾನದ ಕೊರತೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಜಿಲ್ಲೆಗಳಲ್ಲಿ ಎಸ್ ಡಿ.ಆರ್. ಎಫ್ ಅಡಿ ಒಟ್ಟಾರೆಯಾಗಿ ಒಂದು ಸಾವಿರ ಕೋಟಿಗಿಂತಲೂ ಹೆಚ್ಚು ಹಣ ಲಭ್ಯವಿದೆ. ಅತಿವೃಷ್ಟಿಯಿಂದ ಮನೆಗಳಿಗೆ ಹಾನಿ ಉಂಟಾದರೆ ಈಗಾಗಲೇ ಪರಿಹಾರ ಒದಗಿಸುವ ಕುರಿತು ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ತಕ್ಷಣ ಪರಿಹಾರ ಒದಗಿಸುವ ಕಾರ್ಯ ನಡೆಯಬೇಕಿದೆ ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

There Is No Shortage Of Funds To Provide Relief For Rain Damage Siddaramaiah

ಭೂಕುಸಿತದಂತಹ ಪ್ರಕರಣಗಳಲ್ಲಿ ಸಾವಿನ ಸಂಭಾವ್ಯತೆಯನ್ನು ತಪ್ಪಿಸಲು, ಜನರ ತೆರವು ಕಾರ್ಯ ಸೇರಿದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು. ಮಳೆ ಹಾನಿ ಪ್ರದೇಶಗಳಿಗೆ ಡಿಸಿ, ಸಿಇಒ ತಕ್ಷಣ ಕಡ್ಡಾಯವಾಗಿ ಭೇಟಿ ನೀಡಿ ಅಗತ್ಯ ಪರಿಹಾರ ಒದಗಿಸಬೇಕು ಎಂದರು. ಸಂಪೂರ್ಣ ಮನೆ ಹಾನಿ ಪ್ರಕರಣಗಳಲ್ಲಿ ರೂ. 1.20 ಲಕ್ಷ ಮನೆ ಹಾನಿ ತಕ್ಷಣ ಪರಿಹಾರ ಒದಗಿಸಲಾಗುತ್ತಿದೆ. ಅಂತಹವರಿಗೆ ಹೊಸ ಮನೆ ಒದಗಿಸಲು ಕಳೆದ ವರ್ಷದಂತೆ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು. ವಿವಿಧ ಯೋಜನೆಗಳಡಿ ಮನೆಗಳ ನಿರ್ಮಾಣಕ್ಕೆ ನೆರವು ಒದಗಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.

ಎಲ್ಲಾ ಗ್ರಾಮ ಪಂಚಾಯತ್ ಮಟ್ಟದಲ್ಲಿ ವಿವಿಧ ಇಲಾಖೆಗಳನ್ನು ಒಳಗೊಂಡ ಕಾರ್ಯಪಡೆ ರಚಿಸಲಾಗಿದ್ದು, ಅವರು ಸಮನ್ವಯದಿಂದ ಕಾರ್ಯನಿರ್ವಹಿಸಿದರೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬಹುದಾಗಿದೆ ಎಂದರು. ಪ್ರವಾಹ ತಪ್ಪಿಸಲು ಅಧಿಕಾರಿಗಳು ಇನ್ನೂ ಹೆಚ್ಚು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಬೇಕು. ಬೆಂಗಳೂರು ನಗರದಲ್ಲಿ ಮಳೆ ಬಗ್ಗೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಯಾಕೆ ಸಾಧ್ಯವಿಲ್ಲ. ತಗ್ಗು ಪ್ರದೇಶ, ನೀರು ನಿಲ್ಲುವ ಪ್ರದೇಶದ ಮಾಹಿತಿ ಮೊದಲೇ ಇರುತ್ತದೆ. ಅಧಿಕಾರಿಗಳು ಇನ್ನೂ ಹೆಚ್ಚು ಕ್ರಿಯಾ ಶೀಲರಾಗಿ ಕಾರ್ಯನಿರ್ವಹಿಸಬೇಕು. ತಾತ್ಕಾಲಿಕ ಕ್ರಮಗಳೊಂದಿಗೆ ಶಾಶ್ವತ ಪರಿಹಾರಕ್ಕೂ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದರು.

ಗ್ರಾಮ ಮಟ್ಟದಲ್ಲಿ ಎಲ್ಲಾ ಸರ್ಕಾರಿ ಜಮೀನು ಗುರುತಿಸಿ, ಒತ್ತುವರಿಯನ್ನು ಗುರುತಿಸುವ ಕಾರ್ಯ ಶೇ.95ರಷ್ಟು ಪೂರ್ಣಗೊಂಡಿದೆ. 14,15,492 ಎಕರೆ ಸರ್ಕಾರಿ ಜಮೀನು ಒತ್ತುವರಿಯನ್ನು ಈಗಾಗಲೇ ಗುರುತಿಸಲಾಗಿದೆ ಎಂದರು. ಬಗರ್ಹುಕುಂ ಒಟ್ಟು 14,28,838 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ವಿಲೇವಾರಿ ಬಹಳ ವಿಳಂಬವಾಗುತ್ತಿದ್ದು, ಅರ್ಹ ಅರ್ಜಿಗಳನ್ನು ತಕ್ಷಣ ವಿಲೇವಾರಿ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+