ನಿಗಮ- ಮಂಡಳಿ ನೇಮಕ ಕುರಿತು ಸುರ್ಜೆವಾಲ ಜೊತೆಗೆ ಸಭೆ; ಡಿ.ಕೆ. ಶಿವಕುಮಾರ್ ಕೊಟ್ಟ ಮಹತ್ವದ ಮಾಹಿತಿ ಇಲ್ಲಿದೆ.

ಬೆಂಗಳೂರು, ನವೆಂಬರ್‌ 22: ನಿಗಮ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ವಿಚಾರದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​ ನಡುವೆ ಜಟಾಪಟಿ ನಡೆಯುತ್ತಿದೆ. ಶಾಸಕರು ಮತ್ತು ಎಂಎಲ್​ಸಿಗಳಿಗೆ ಮೊದಲ ಆದ್ಯತೆ ನೀಡುವಂತೆ ಸಿದ್ದರಾಮಯ್ಯ ಮನವಿ ಮಾಡಿದರೆ, ಇತ್ತ ಡಿಕೆ ಶಿವಕುಮಾರ್ ಅವರು ಕಾರ್ಯಕರ್ತರಿಗೆ ಮಣೆ ಹಾಕಲು ಪಟ್ಟು ಹಿಡಿದಿದ್ದು, ಮಂಗಳವಾರ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸುರ್ಜೆವಾಲಾ ಅವರ ನೇತೃತ್ವದಲ್ಲಿ ಸಭೆ ನಡೆದಿದೆ.

ನಿಗಮ- ಮಂಡಳಿ ನೇಮಕ ಮತ್ತಿತರ ವಿಚಾರಗಳ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಸಿಎಂ ಸಿದ್ದರಾಮಯ್ಯ ಅವರ ಜತೆ ಸಮಾಲೋಚನೆ ನಂತರ ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಾಜ್ ವೆಸ್ಟೆಂಡ್ ಬಳಿ ಮಾಧ್ಯಮಗಳಿಗೆ ಮಂಗಳವಾರ ಮಧ್ಯರಾತ್ರಿ ಪ್ರತಿಕ್ರಿಯಿಸಿದ್ದು, ಪಕ್ಷದ ಸಂಘಟನೆ, ನಿಗಮ ಮಂಡಳಿ ನೇಮಕ ಸೇರಿದಂತೆ ಶಾಸಕರು ಹಾಗೂ ಕಾರ್ಯಕರ್ತರಿಗೆ ಅಧಿಕಾರ ನೀಡುವ ಬಗ್ಗೆ ನಮ್ಮ ನಾಯಕರ ಜೊತೆ ಚರ್ಚೆ ಮಾಡಲಾಗಿದೆ ಎಂದು ಹೇಳಿದರು.

-empowering-mlas-and-activists

ಶಾಸಕರಿಗೆ ಜವಾಬ್ದಾರಿ ನೀಡುವ ಬಗ್ಗೆ ಮೊದಲ ಸುತ್ತಿನ ಚರ್ಚೆ ಆಗಿದ್ದು, ಈಗಿನ ಪಟ್ಟಿಯನ್ನು ಕೇಂದ್ರ ನಾಯಕರು ಪರಿಶೀಲಿಸಲಿದ್ದಾರೆ. ನಂತರ ಎರಡನೇ ಸುತ್ತಿನ ಚರ್ಚೆ ಆಗಲಿದೆ. ಈ ಪ್ರಕ್ರಿಯೆ ಪೂರ್ಣಗೊಳ್ಳಲು ಎಷ್ಟು ಸಮಯಾವಕಾಶ ಬೇಕು ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ, "ಪಂಚರಾಜ್ಯ ಚುನಾವಣೆ ನಡೆಯುತ್ತಿದ್ದು, ಮುಖ್ಯಮಂತ್ರಿಗಳು ಹಾಗೂ ನಾನು ಪ್ರಚಾರಕ್ಕೆ ಹೋಗಬೇಕಿದೆ. ಆದಷ್ಟು ಬೇಗ ಈ ಪ್ರಕ್ರಿಯೆ ಮಾಡುತ್ತೇವೆ ಎಂದರು.

ಗೃಹಸಚಿವರು ಮುನಿಸಿಕೊಂಡಿದ್ದಾರೆ ಎಂಬ ಬಗ್ಗೆ ಚರ್ಚೆ ಆಗುತ್ತಿದೆಯಲ್ಲ ಎಂದು ಕೇಳಿದಾಗ, ಗೃಹಸಚಿವರು ಕೂಡ ಈ ಸಭೆಯಲ್ಲಿ ಭಾಗವಹಿಸಿದ್ದರು. ಬೆಳಗಾವಿಯಿಂದ ಬಂದು ಚರ್ಚೆ ಮಾಡಿದ್ದಾರೆ. ಯಾರು ಯಾಕೆ ಮುನಿಸಿಕೊಳ್ಳುತ್ತಾರೆ ಎಂದು ಕೇಳಿದ ಅವರು, ಲೋಕಸಭೆ ಚುನಾವಣೆ ಸಂಬಂಧದ ವರದಿ ಕುರಿತು ಕೆಲವರು ತಮ್ಮ ವರದಿ ನೀಡಿದ್ದು, ಮತ್ತೆ ಕೆಲವರು ಇನ್ನಷ್ಟೇ ನೀಡಬೇಕಿದೆ ಎಂದು ತಿಳಿಸಿದರು.

ಸಿಎಂ, ಡಿಸಿಎಂ ಸಿದ್ಧಪಡಿಸಿದ ನಿಗಮ ಮಂಡಳಿ ಪಟ್ಟಿ ಲಭ್ಯ?

ಬಸವರಾಜ ರಾಯರೆಡ್ಡಿ

ನರೇಂದ್ರಸ್ವಾಮಿ

ವಿನಯ್ ಕುಲಕರ್ಣಿ

ವಿಜಯಾನಂದ ಕಾಶಪ್ಪನವರ್

ಬಂಗಾರಪೇಟೆ ನಾರಾಯಣಸ್ವಾಮಿ

ಗಣೇಶ್ ಹುಕ್ಕೇರಿ

ಕೋಲಾರ ನಂಜೇಗೌಡ

ಬಿ.ಕೆ.ಸಂಗಮೇಶ್

B.R.ಪಾಟೀಲ್

ಎಂ.ವೈ.ಪಾಟೀಲ್

ಬಿ.ಜಿ.ಗೋವಿಂದಪ್ಪ

ರಾಘವೇಂದ್ರ ಹಿಟ್ನಾಳ್

ಪ್ರಸಾದ್ ಅಬ್ಬಯ್ಯ

ಎ.ಆರ್.ಕೃಷ್ಣಮೂರ್ತಿ

ಶಿವಲಿಂಗೇಗೌಡ

ರೂಪ ಶಶಿಧರ್

ರಾಜೇಗೌಡ

ರಘುಮೂರ್ತಿ ಅನಿಲ್ ಚಿಕ್ಕಮಾದು

ಮಾಗಡಿ ಬಾಲಕೃಷ್ಣ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+