ಎರಡೂವರೆ ವರ್ಷಗಳ ನಂತರ ಸಚಿವ ಸಂಪುಟ ಪುನಾರಚನೆ ಆಗುತ್ತಾ? : ಡಿ ಕೆ ಶಿವಕುಮಾರ್‌ ಹೇಳಿದ್ದೇನು?

ಬೆಂಗಳೂರು, ಅಕ್ಟೋಬರ್‌ 21: ಎರಡೂವರೆ ವರ್ಷಗಳ ನಂತರ ಸಚಿವ ಸಂಪುಟ ಪುನಾರಚನೆ ಆಗುತ್ತದೆ ಎಂದು ಚೀಫ್ ವಿಪ್ ಅಶೋಕ್ ಪಟ್ಟಣ ಹೇಳಿಕೆ ರಾಜ್ಯ ಕಾಂಗ್ರೆಸ್‌ ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.

ಈ ಕುರಿತು ಶನಿವಾರ ಮಾಧ್ಯಮಗಳ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಮಾತನಾಡಿ, ಪಕ್ಷದಲ್ಲಿ ಆಂತರಿಕವಾಗಿ ಒಂದಷ್ಟು ವಿಚಾರಗಳು ಚರ್ಚೆಯಾಗಿರುತ್ತವೆ. ಅದನ್ನು ನಾನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ಅದನ್ನು ಚರ್ಚೆ ಮಾಡಲು ನಾನು ಹೋಗುವುದಿಲ್ಲ, ನನಗೆ ಇರುವ ಮಾಹಿತಿ ಪ್ರಕಾರ ಆ ರೀತಿ ಚರ್ಚೆ ನಡೆದಿಲ್ಲ ಎಂದು ಹೇಳಿದರು.

There Was No Discussion About Reshuffle Of The Cabinet Says DCM DK Shivakumar

ಇನ್ನೂ ಡಿ ಕೆ ಶಿವಕುಮಾರ್ ಒಬ್ಬರೇ ಪಕ್ಷವನ್ನು ಅಧಿಕಾರಕ್ಕೆ ತಂದಿಲ್ಲ ಎಂಬ ಸತೀಶ್ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ಮಾಧ್ಯಮಗಳು ಪ್ರಶ್ನೆಗೆ ಡಿ ಕೆ ಶಿವಕುಮಾರ್‌ ಉತ್ತರಿಸಿ, ಪಕ್ಷವನ್ನು ನಾನೊಬ್ಬನೇ ಅಧಿಕಾರಕ್ಕೆ ತಂದಿರುವುದಾಗಿ ಯಾವತ್ತೂ ಹೇಳಿಲ್ಲ, ಹೇಳುವುದೂ ಇಲ್ಲ. ಕಾರ್ಯಕರ್ತರು ಹಾಗೂ ಜನ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಪಕ್ಷದ ಕಾರ್ಯಕರ್ತರು, ನಾವು, ನೀವು ಸೇರಿ, ರಾಜ್ಯದ ಜನರು, ಪ್ರತಿ ಹಳ್ಳಿಯಲ್ಲಿರುವವರು ಬಡಿದಾಡಿ, ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಡಿ.ಕೆ. ಶಿವಕುಮಾರ್ ಒಬ್ಬನೇ ಅಧಿಕಾರಕ್ಕೆ ತಂದಿದ್ದಾನೆ ಎಂದು ಇಂದು, ನಾಳೆ, ಎಂದಿಗೂ, ಯಾವತ್ತಿಗೂ ಹೇಳುವುದಿಲ್ಲ ಎಂದರು.

ಶಾಸಕ ಅಶೋಕ್ ಪಟ್ಟಣ ಹೇಳಿದ್ದೇನು?

ಎಲ್ಲ ಶಾಸಕರಿಗೂ ಸಚಿವ ಸ್ಥಾನ ನೀಡಲು ಸಾಧ್ಯವಿಲ್ಲ ಎಂಬುದು ನಿಜ. ಈಗಿನ ಸಂಪುಟಕ್ಕೆ ಎರಡೂವರೆ ವರ್ಷ ಆದ ತಕ್ಷಣ ಬೇರೆಯವರಿಗೆ ಅವಕಾಶ ಮಾಡಿಕೊಡುವುದಾಗಿ ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಅವರು ನಮಗೆ ಭರವಸೆ ನೀಡಿದ್ದಾರೆ ಎಂದರು. ಅಲ್ಲದೇ ಅದೃಷ್ಟವಿದ್ದವರು ಸಚಿವರಾಗುತ್ತಾರೆ. ಇಲ್ಲದವರು ಮಾತನಾಡುತ್ತೇವೆ. ನಮ್ಮ ತಂದೆ, ತಾಯಿ ಇಬ್ಬರೂ ಶಾಸಕರಾಗಿದ್ದರು. ಎಲ್ಲ ಇದ್ದರೂ, ಅದೃಷ್ಟ ಇಲ್ಲ. ನನ್ನ ನಕ್ಷತ್ರ ಸರಿಯಿಲ್ಲ ಎಂದು ಕಾಣುತ್ತದೆ. ಮುಂದೆ ಪೂಜೆ ಪುನಸ್ಕಾರ ಮಾಡಬೇಕು. ಆದರೆ ನಾವು ಪಕ್ಷಕ್ಕೆ ನಿಷ್ಠರಾಗಿರುತ್ತೇವೆ ಎಂದು ಶಾಸಕ ಅಶೋಕ್‌ ಪಟ್ಟಣ್‌ ಅಸಮಾಧಾನ ವ್ಯಕ್ತಪಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+