Get Updates
Get notified of breaking news, exclusive insights, and must-see stories!

ಕೆಲ ದಿನದಲ್ಲೇ ರಾಜ್ಯ ರಾಜಕಾರಣದಲ್ಲಿ ಸ್ಪೋಟಕ ಬೆಳವಣಿಗೆ: ಸುಳಿವು ಕೊಟ್ಟ ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು, ನವೆಂಬರ್‌ 22: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣದಲ್ಲಿ ಸ್ಪೋಟಕ ಬೆಳವಣಿಗೆಗಳು ನಡೆಯುವ ಸುಳಿವು ನೀಡಿದ್ದಾರೆ. ರಾಜ್ಯದಲ್ಲಿ ಇವತ್ತು ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳನ್ನು ನೋಡಿದರೆ ಮುಂದಿನ ದಿನಗಳಲ್ಲಿ ಯಾರೂ ಕೂಡ ನಿರೀಕ್ಷೆ ಮಾಡದಂತಹ ಬೆಳವಣಿಗೆಗಳು ನಡೆಯಲಿವೆ ಎಂದು ಭವಿಷ್ಯ ನುಡಿದರು.

ರಾಜಕೀಯದಲ್ಲಿ ಯಾರು ಯಾವ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ ಹೇಳಲಿಕ್ಕೆ ಆಗದಂತಹ ಪರಿಸ್ಥಿತಿ ರಾಜ್ಯದಲ್ಲಿ ಸೃಷ್ಟಿ ಆಗಿದೆ. ರಾಜ್ಯ ರಾಜಕಾರಣದಲ್ಲಿ ಅನಿರೀಕ್ಷಿತ ಮತ್ತು ಸ್ಪೋಟಕ ಬೆಳವಣಿಗೆಗಳು ನಡೆಯಲಿವೆ ಎಂದು ಕುಮಾರಸ್ವಾಮಿ ಅವರು ಹೇಳಿದರು. ಪರೋಕ್ಷವಾಗಿ ಆಡಳಿತ ಪಕ್ಷ ಕಾಂಗ್ರೆಸ್ ನಲ್ಲಿ ಆಗುತ್ತಿರುವ ಬೆಳವಣಿಗೆಗಳ ಬಗ್ಗೆ ಬೊಟ್ಟು ಮಾಡಿದ ಅವರು, ದಿನಕ್ಕೊಂದು, ಕ್ಷಣಕ್ಕೊಂದು ರಾಜಕೀಯ ಬೆಳವಣಿಗೆ ನಡೆಯುತ್ತಿರುವುದು ನೋಡಿದರೆ ಕೆಲವೇ ತಿಂಗಳಲ್ಲಿ ರಾಜ್ಯದಲ್ಲಿ ರಾಜಕೀಯ ಕ್ರಾಂತಿಯೇ ಆಗುವ ಸಾಧ್ಯತೆ ಇದೆ. ಹೀಗಾಗಿ ಕಾರ್ಯಕರ್ತರು ಮತ್ತು ಮುಖಂಡರು ಜನರ ಜತೆಯೇ ಇರಬೇಕು. ಜನರ ಕಷ್ಟಗಳಿಗೆ ಸ್ಪಂದಿಸಬೇಕು ಎಂದು ಕೇಂದ್ರ ಸಚಿವರು ಕರೆ ನೀಡಿದರು.

There will be an explosive development in state politics in a few days HD Kumaraswamy

ಜನ ಕೆಟ್ಟ ಆಡಳಿತದಿಂದ ರೋಸಿ ಹೋಗಿದ್ದಾರೆ. ತೆರಿಗೆ, ದರ ಏರಿಕೆ ಸುಳಿಗೆಯಿಂದ ಬೇಸತ್ತು ಹೋಗಿದ್ದಾರೆ. ಮುಂದೆ ನಮ್ಮ ಪಕ್ಷಕ್ಕೆ ಒಂದು ಅವಕಾಶ ಕೊಡಿ. ಐದು ವರ್ಷದಲ್ಲಿ‌ ಯಾವ ರೀತಿ ಆಡಳಿತ ಕೊಡಬೇಕು, ಜನರಿಗೆ ಏನೆಲ್ಲ ಒಳ್ಳೆಯದು ಮಾಡಬೇಕು ಎಂಬುದನ್ನು ಸಾಬೀತು ಮಾಡಿ ತೋರಿಸುತ್ತೇನೆ. ಒಂದು ವೇಳೆ ಜನ ಮೆಚ್ಚುವ ಸರ್ಕಾರ ನನ್ನಿಂದ ಕೊಡಲು ಆಗದಿದ್ದರೆ ಈ ಜನ್ಮದಲ್ಲಿ ಮತ್ತೆ ನನ್ನ ಮುಖ ತೋರಿಸಲ್ಲ ಎಂದು ಕುಮಾರಸ್ವಾಮಿ ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟು ಹೋಗಿದೆ. ರಾಜ್ಯದ ಸಾಲ 7.50 ಲಕ್ಷ ಕೋಟಿ ದಾಟಿದೆ. ಸಿದ್ಧರಾಮಯ್ಯ ಒಬ್ಬರೇ 5ರಿಂದ 5.50 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಏನಕ್ಕೆ ಮಾಡಿದ್ರು ಇಷ್ಟು ಸಾಲವನ್ನು? ಯಾವ ಪುರುಷಾರ್ಥಕ್ಕೆ ಮಾಡಿದ್ರು ಎಂಬುದನ್ನು ಜನರಿಗೆ ಉತ್ತರ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.

ಮಾಜಿ ಪ್ರಧಾನಿಗಳಾದ ದೇವೇಗೌಡರು ತಮ್ಮ ಇಡೀ ಬದುಕನ್ನು ಜನರಿಗೆ ಮೀಸಲಿಟ್ಟರು. ಅವರು ಅಧಿಕಾರಕ್ಕಾಗಿ ಇನ್ನೊಬ್ಬರ ಮನೆ ಬಾಗಿಲಿಗೆ ಹೋದವರಲ್ಲಾ. ಈ ರಾಜ್ಯವನ್ನು ದೀರ್ಘ ಕಾಲ ಆಳಿದ ದೇವರಾಜು ಅರಸು ಅವರೇ ಕುಂಡೆ ಬಂದು ನನ್ನ ನಮ್ಮ ಜೊತೆ ಕೈ ಜೋಡಿಸು ಎಂದು ಹೇಳಿದರು ದೇವೇಗೌಡರು ಕೇಳಲಿಲ್ಲ. ಒಂದು ಆದರ್ಶ, ಮೌಲ್ಯ ಇಟ್ಟುಕೊಂಡು ಅವರು ರಾಜಕಾರಣ ಮಾಡುತ್ತಾ ಬಂದಿದ್ದಾರೆ. ಅಂತಹವರ ಮೇಲೆ ಇಲ್ಲಸಲ್ಲದ ಆಪಾದನೆಗಳನ್ನು ಮಾಡಿದರು. ದೇವೇಗೌಡರು ಜ್ಯೋತಿಷ್ಯರನ್ನ ನಂಬುತ್ತಾರೆ ಎಂದು ಆ ಜ್ಯೋತಿಷಿಗಳನ್ನು ಟ್ರ್ಯಾಪ್ ಮಾಡಿ ವಂಚಿಸಿದರು. ಅಲ್ಲದೆ, ಮೈಸೂರಿನಲ್ಲಿ ದೇವೇಗೌಡರು 500 ನಿವೇಶನಗಳನ್ನು ಖರೀದಿ ಮಾಡಿದ್ದಾರೆ ಎಂದು ಸುಳ್ಳು ಪ್ರಚಾರ ಮಾಡಿದರು ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ದೇವೇಗೌಡರ ವಿರುದ್ದ ಸಿಐಡಿ, ಲೋಕಾಯುಕ್ತ ಸೇರಿ ಅನೇಕ ತನಿಖೆಗಳನ್ನು ನಡೆಸಿದರು. ಕೊನೆಗೆ ಸತ್ಯಕ್ಕೆ ಜಯವಾಯಿತು. ದೇವೇಗೌಡರು ಏನೆಂಬುದು ರಾಜ್ಯದ ಜನತೆಗೆ ತಿಳಿಯಿತು ಎಂದು ಅವರು ಹೇಳಿದರು. ಜನರು ಹಾಗೂ ಕಾರ್ಯಕರ್ತರಿಂದ ಜೆಡಿಎಸ್ ಉಳಿದಿದೆ. ಜನತೆಗೆ ನಮ್ಮ ಕೈಲಾದಷ್ಟು ಒಳ್ಳೆಯದನ್ನು ಮಾಡಿದ್ದೇವೆ. ನಾವೇನು ಅನ್ಯಾಯ ಮಾಡಿದ್ದೇವೆ ಈ ರಾಜ್ಯಕ್ಕೆ? ದೇವೇಗೌಡರು ಏನು ಅನ್ಯಾಯ ಮಾಡಿದ್ದಾರೆ? ನಮಗೆ ಯಾಕೆ ಪೂರ್ಣ ಪ್ರಮಾಣದ ಆಶೀರ್ವಾದ ಸಿಕ್ಕಿಲ್ಲ? ಯಾವ ಸಮುದಾಯಕ್ಕೂ ನಮ್ಮ ಪಕ್ಷದಿಂದ ಅನ್ಯಾಯ ಆಗಿಲ್ಲ. ಬೇರೆ ಬೇರೆ ರಾಜ್ಯಗಳ ಜನರು ದೇವೇಗೌಡರನ್ನು ನೆನಪು ಮಾಡಿಕೊಳ್ಳುತ್ತಾರೆ. ನಮ್ಮ ರಾಜ್ಯದ ಜನತೆಗೆ ಏಕೆ ಅಂತಹ ಭಾವನೆ ಇಲ್ಲ ಎಂದು ಸಚಿವರು ಅತೀವ ಬೇಸರ ವ್ಯಕ್ತಪಡಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+