ಸಿಎಂ ಬದಲಾವಣೆಗೆ ಬ್ರೇಕ್;‌ ʼಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಆಗುವುದಿಲ್ಲʼ

ಬೆಳಗಾವಿ, ಜೂನ್‌ 29: ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ಮುಖ್ಯಮಂತ್ರಿ ಬದಲಾವಣೆ, ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ವಿಚಾರ ಕರ್ನಾಟಕ ಕಾಂಗ್ರೆಸ್​ನಲ್ಲಿ ಗೊಂದಲಕ್ಕೆ ಕಾರಣವಾಗಿದೆ. ಒಕ್ಕಲಿಗ ಸ್ವಾಮೀಜಿ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕೆಂದು ಆಗ್ರಹಿಸಿದ್ರೆ, ಇತ್ತ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಬೇಕೆಂದು ಶ್ರೀಶೈಲ ಜಗದ್ಗುರುಗಳು ಒತ್ತಾಯಿಸಿದ್ದಾರೆ.

ರಾಜ್ಯ ಕಾಂಗ್ರೆಸ್‌ ನಲ್ಲಿ ಚರ್ಚೆಯಾಗುತ್ತಿರುವ ಸಿಎಂ ಬದಲಾವಣೆ ವಿಚಾರವಾಗಿ ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ ಮಾತನಾಡಿ, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಆಗುವುದಿಲ್ಲ. ಹೆಚ್ಚುವರಿ ಡಿಸಿಎಂ ಕೇಳುವವರ ಮೇಲೆ ಹೈಕಮಾಂಡ್ ಕಠಿಣ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಮುಖ್ಯಮಂತ್ರಿ ಒಳ್ಳೆಯ ಆಡಳಿತ ನೀಡುತ್ತಿದ್ದಾರೆ, ದೆಹಲಿಗೆ ಹೋಗಿದ್ದಾರೆ.

There Will Be No Change Of CM In The State For Any Reason Says RV Deshpande

ಬೆಳಗ್ಗೆ ನಾನೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಮಾತನಾಡಿದ್ದೇನೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಹಾಗೂ ಡಿಸಿಎಂ ಚರ್ಚೆಯ ಬಗ್ಗೆ ಮಾತನಾಡಲು ಕಾಯಿಪಲ್ಲೆ ಮಾರ್ಕೆಟ್ ಅಲ್ಲ. ಹಾದಿ ಬೀದಿಯಲ್ಲಿ ಮಾತನಾಡುವವರ ವಿರುದ್ಧ ಹೈಕಮಾಂಡ್ ಶಿಸ್ತಿನ ಕ್ರಮ ಕೈಗೊಳ್ಳಬೇಕು. ನಾನು ಪಕ್ಷದ ಶಿಸ್ತಿನ ಸಿಪಾಯಿ, ಯುವ ಘಟಕದ ಅಧ್ಯಕ್ಷನಾಗಿಯೂ ಕೆಲಸ‌ ಮಾಡಿದ್ದೇನೆ ಎಂದು ಹೇಳಿದರು.

ಮುಖ್ಯಮಂತ್ರಿ ಹುದ್ದೆಯ ವಿಚಾರವಾಗಿ ಮಾಧ್ಯಮದವರ ಮುಂದೆ ವಿನಾಕಾರಣ ಹೇಳಿಕೆ ನೀಡುವುದು ಸರಿಯಲ್ಲ. ಮಾಧ್ಯಮಗಳ ಮುಂದೆ ಮಾತನಾಡುವವರು ಎಚ್ಚರಿಕೆಯಿಂದ ಇರಬೇಕು. ಅನಾವಶ್ಯಕ ಚರ್ಚೆಗಳನ್ನು ಮಾಡಬಾರದು, ನಿಮ್ಮ ಪಕ್ಷವನ್ನು ನೀವೆ ಹಾಳು ಮಾಡಿದಂತಾಗುತ್ತದೆ. ಜನರ ಕಲ್ಯಾಣಕ್ಕಾಗಿ ಚರ್ಚೆ ನಡೆಸಿ ಎಂದು ಡಿಸಿಎಂ ಸ್ಥಾನಕ್ಕೆ ಪಟ್ಟು ಹಿಡಿದವರಿಗೆ ದೇಶಪಾಂಡೆ ಎಚ್ಚರಿಕೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+