ಸಿದ್ದರಾಮಯ್ಯ ಅವರು ರಾಮ ಮಂದಿರ ವಿಚಾರದಲ್ಲಿ ರಾಜಕೀಯ ಬೆರೆಸುವುದು ಸರಿಯಲ್ಲ: ಮಹೇಶ್ ಟೆಂಗಿನಕಾಯಿ

ಹುಬ್ಬಳ್ಳಿ, ಜನವರಿ23: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಯೋಧ್ಯೆಯಲ್ಲಿ ನಿರ್ಮಾಣಗೊಂಡ ಮೂರ್ತಿ ಪ್ರತಿಷ್ಠಾಪನೆ ವಿಚಾರದಲ್ಲಿ ರಾಜಕೀಯ ಬೆರೆಸುವುದು ಸರಿಯಲ್ಲ ಎಂದು ಶಾಸಕ ಮಹೇಶ ಟೆಂಗಿನಕಾಯಿ ಕಿಡಿಕಾರಿದ್ದಾರೆ.

ಈ ಕುರಿತು ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಬಿಜೆಪಿಯವರು ಯಾರು ಕೆಲಸ ಮಾಡುತ್ತಿಲ್ಲ, ಇದನ್ನು ಮುಖ್ಯಮಂತ್ರಿಗಳು ಅರ್ಥ ಮಾಡಿಕೊಳ್ಳಬೇಕು. ಅಲ್ಲಿ ಯಾವುದೇ ನಿರ್ಣಯವನ್ನು ಅಲ್ಲಿನ ಟ್ರಸ್ಟ್ ಕಮಿಟಿ ನಿರ್ಧಾರ ತೆಗೆದುಕೊಳ್ಳುತ್ತದೆ. ಅಯೋಧ್ಯೆಯಲ್ಲಿ ಯಾವುದೇ ಪಕ್ಷದ ಹಸ್ತಕ್ಷೇಪ ಇರುವುದಿಲ್ಲ ಎಂದರು.

There Will Be No Party Interference In Ayodhya Says Mahesh Tenginakai

ಅಯೋಧ್ಯೆಯಲ್ಲಿ ಇದೀಗ ಶ್ರೀರಾಮನ ಮೂರ್ತಿ ಒಂದೇ ಸ್ಥಾಪನೆ ಆಗಿದೆ. ಮುಂದಿನ ದಿನಮಾನಗಳಲ್ಲಿ ಏನೇನೂ ಮಾಡಬೇಕೆಂಬ ಕುರಿತು ಕಮಿಟಿ ನಿರ್ಧಾರ ತೆಗೆದುಕೊಳ್ಳುತ್ತದೆ. ಈಗಾಗಲೇ ಕೇಂದ್ರ ಸರ್ಕಾರ ಅಯೋಧ್ಯೆಯ ವಿಮಾನ ನಿಲ್ದಾಣಕ್ಕೆ ಮಹರ್ಷಿ ವಾಲ್ಮೀಕಿ ಹೆಸರನ್ನು ಇಟ್ಟಿದೆ. ಮೂರ್ತಿ ಪ್ರತಿಷ್ಠಾಪನೆ ಕುರಿತು ಟ್ರಸ್ಟ್ ಕಮಿಟಿ ನಿರ್ಧಾರ ಕೈಗೊಳ್ಳುತ್ತದೆ. ಇದರಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಬೆರೆಸುವ ಕೆಲಸ ಮಾಡಬಾರದು ಎಂದು ವಾಗ್ದಾಳಿ ನಡೆಸಿದರು.

ಶಿವಮೊಗ್ಗದ ಶ್ರೀರಾಮೋತ್ಸವದಲ್ಲಿ ಮಹಿಳೆ ಅಲ್ಲಾ ಹು ಅಕ್ಬರ್ ಘೋಷಣೆ ಕೂಗಿದ ವಿಚಾರವಾಗಿ ಮಾತನಾಡಿ, ಇಡೀ ದೇಶ ಸೇರಿದಂತೆ ಜಗತ್ತಿನಲ್ಲಿ ಶ್ರೀರಾಮ ಜಪ ಮಾಡಲಾಗುತ್ತಿದೆ. ಆದರೆ ಶಿವಮೊಗ್ಗದಲ್ಲಿ ನಡೆದ ಘಟನೆ ಎಲ್ಲಿಯೂ ನಡೆದಿಲ್ಲ. ಎಲ್ಲರೂ ವಿಜೃಂಭಣೆಯಿಂದ ಶ್ರೀರಾಮೋತ್ಸವ ಮಾಡಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಘಟನೆ ಖೇಧಕರ ಎಂದರು.

ಸರ್ಕಾರ ಇಂತಹ ಘಟನೆಯನ್ನು ತನಿಖೆಯ ಮುಂಚೆಯೇ ಬಿ ರಿಪೋರ್ಟ್ ತಯಾರು ಮಾಡಿರುತ್ತದೆ. ಅಲ್ಲಾ ಹು ಅಕ್ಬರ್ ಘೋಷಣೆ ಕೂಗಿದ ಮಹಿಳೆಗೆ ಇದೀಗ ಮಾನಸಿಕ ಅಸ್ವಸ್ಥಳು ಎಂದಿದ್ದಾರೆ. ಅಲ್ಪಸಂಖ್ಯಾತರ ರಕ್ಷಣಾತ್ಮಕ ರೀತಿಯಲ್ಲಿ ನಡೆದುಕೊಳ್ಳುವುದು ಕಾಂಗ್ರೆಸ್'ನ ಪ್ರವೃತ್ತಿಯಾಗಿದೆ ಎಈ ಹಿಂದೆ ಡಿಜಿ ಹಳ್ಳಿ, ಕೆಜೆ ಹಳ್ಳಿ ಜೊತೆಗೆ ಹುಬ್ಬಳ್ಳಿ ಗಲಭೆಯಲ್ಲಿ ಇದ್ದವರ ರಕ್ಷಣೆಗೆ ಸರ್ಕಾರ ಈಗಾಗಲೇ ಮುಂದಾಗಿದೆ. ಇದೀಗ ಶಿವಮೊ ಘಟನೆ ಮುಚ್ಚಿ ಹಾಕುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಹರಿಹಾಯ್ದರು.

ಅಸ್ಸಾಂನಲ್ಲಿ ರಾಹುಲ್ ಗಾಂಧಿ ನ್ಯಾಯಯಾತ್ರೆಯಲ್ಲಿ ಮೋದಿ ಮೋದಿ ಘೋಷಣೆ ಕೂಗಿದ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಅಸ್ಸಾಂನಲ್ಲಿಯ ರಾಹುಲ್ ಗಾಂಧಿಯ ಯಾತ್ರೆಗೂ ಬಿಜೆಪಿಗೆ ಯಾವುದೇ ಸಂಬಂಧವಿಲ್ಲ, ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಹೋರಾಟ ಮಾಡುವ ಹಕ್ಕಿದೆ. ರಕ್ಷಣೆ ದೃಷ್ಟಿಯಿಂದ ಅಲ್ಲಿಯ ಸರ್ಕಾರ ತನ್ನ ಕರ್ತವ್ಯ ಮಾಡುತ್ತಿದೆ. ಇದರಲ್ಲಿ ಯಾವುದೇ ರಾಜಕೀಯ ಬೇರಿಸುವುದು ಸರಿಯಲ್ಲ. ರಾಹುಲ್ ಗಾಂಧಿಯವರು ಈ ಹಿಂದೆ ಕರ್ನಾಟಕ, ಗೋವಾದಲ್ಲಿ ಯಾತ್ರೆ ಮಾಡಿದ್ದಾರೆ. ಆಗ ನಾವು ಅಲ್ಲಿ ಯಾರಿಗೂ ತೊಂದರೆ ನೀಡಲಿಲ್ಲ, ಅವರ ಯಾತ್ರೆ ವಿಫಲವಾಗುತ್ತಿರುವಾಗ ಸಫಲತೆ ಮಾಡಿಕೊಳ್ಳಲು ಹೀಗೆ ಮಾಡುತ್ತಾರೆ. ಸಣ್ಣ ಸಣ್ಣ ಘಟನೆಗಳನ್ನು ದೊಡ್ಡದಾಗಿ ಬಿಂಬಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಾ ಬಂದಿದೆ ಎಂದು ಕಿಡಿಕಾರಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+