RCB Victory Parade: ಆರ್‌ಸಿಬಿ ಆಟಗಾರರ ಮೆರವಣಿಗೆ: ಮಹತ್ವದ ಮಾಹಿತಿ ನೀಡಿದ ಗೃಹ ಸಚಿವ ಜಿ ಪರಮೇಶ್ವರ್

ಬೆಂಗಳೂರು, ಜೂನ್ 04: 18 ವರ್ಷಗಳ ನಂತರ ಐಪಿಎಲ್ ಚಾಂಪಿಯನ್‌ಶಿಪ್ ಆಗಿರುವ ಆರ್‌ಸಿಬಿ ತಂಡಕ್ಕೆ ನನ್ನ ಅಭಿನಂದನೆಗಳು. ವಿಶೇಷವಾಗಿ ವಿರಾಟ್ ಕೊಹ್ಲಿ ಅವರು ದೇಶಕ್ಕೆ ಮಾತ್ರವಲ್ಲದೇ, ಇಡೀ ವಿಶ್ವಕ್ಕೆ ಮಾದರಿ‌ ಕ್ರೀಡಾಪಟುವಾಗಿ ಹೊರ ಹೊಮ್ಮಿರುವುದು ಸಂತೋಷದಾಯಕ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಆರ್‌ಸಿಬಿ ತಂಡ ಗೆದ್ದಂತಹ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಅವರು ಆಡಿದ ಮಾತುಗಳು ನಿಜಕ್ಕು ಹೆಮ್ಮೆ ಎನಿಸುತ್ತದೆ. 18 ವರ್ಷಗಳಿಂದ ಸತತ ಆರ‌ಸಿಬಿ ತಂಡಕ್ಕೆ ನಿಷ್ಠೆಯಾಗಿ ಆಡಿರುವುದು ಎಲ್ಲ‌ ಕ್ರೀಡಾಪಟುಗಳಿಗೆ ಉತ್ತಮ ಸಂದೇಶ ಕೊಡುತ್ತದೆ‌. ಬೆಂಗಳೂರಿನ ಬಗ್ಗೆ ಭಾವನಾತ್ಮಕ ನಂಟಿನ ಬಗ್ಗೆ ಅವರು ಹೇಳಿರುವುದು ಸಂತೋಷ ತಂದಿದೆ‌ ಎಂದರು.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಸಂಜೆ ಬೆಂಗಳೂರಿನ ವಿಧಾನಸೌಧದಲ್ಲಿ ಗ್ರಾಂಡ್ ಸ್ಟೆಪ್ಸ್ ಮೇಲೆ ಅವರಿಗೆ ಅಭಿನಂದನೆ ಸಲ್ಲಿಸಲಾಗುತ್ತದೆ. ಆದರೆ ವಿಧಾನಸೌಧದಿಂದ ಚಿನ್ನಸ್ವಾಮಿ ಸ್ಟೇಡಿಯಂ ವರೆಗೂ ತೆರೆದ ವಾಹನದಲ್ಲಿ ಆರ್‌ಸಿಬಿ ಆಟಗಾರರಿಗೆ ಮೆರವಣಿಗೆ ಇರುವುದಿಲ್ಲ. ತೆರೆದ ವಾಹನದಲ್ಲಿ ಆರ್‌ಸಿಬಿ ಆಟಗಾರರ ಮೆರವಣಿಗೆ ಇಲ್ಲ. ಭದ್ರತೆಯ ದೃಷ್ಟಿಯಿಂದ ತೆರೆದ ವಾಹನದಲ್ಲಿ ಆರ್‌ಸಿಬಿ ಆಟಗಾರರಿಗೆ ಮೆರವಣಿಗೆ ಮಾಡಲ್ಲ. ಆರ್ಸಿಬಿ ತಂಡದ ಆಟಗಾರರಿಗೆ ಸರಕಾರದಿಂದ ಅಭಿನಂದನೆ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು.

There will be no procession for RCB players in an open vehicle

ಇಂದು ಸಂಜೆ 4 ಗಂಟೆಗೆ ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಮೇಲೆ ಆರ್‌ಸಿಬಿ ತಂಡಕ್ಕೆ ಸರ್ಕಾರದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಲಾಗುವುದು. ಎಲ್ಲ ಆಟಗಾರರು ಬಸ್‌ನಲ್ಲಿ ಬರುತ್ತಾರೆ. ಕಾರ್ಯಕ್ರಮ ಮುಗಿದ ಬಳಿಕ ಬಸ್‌ನಲ್ಲೇ ವಾಪಸ್ ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗುತ್ತಾರೆ. ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪ‌ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ಅಭಿನಂದಿಸುತ್ತಾರೆ. ಆರ್‌ಸಿಬಿ ತಂಡದ ಪರವಾಗಿ ಇಬ್ಬರು ಮಾತನಾಡಲಿದ್ದಾರೆ. ಇದನ್ನು ಹೊರತುಪಡಿಸಿ ಬೇರೆ ಕಾರ್ಯಕ್ರಮಗಳಿಲ್ಲ ಎಂದು ಹೇಳಿದರು.

ಭದ್ರತಾ ದೃಷ್ಟಿಯಿಂದ ಆಟಗಾರರು ತೆರೆದ ವಾಹನದಲ್ಲಿ ಸ್ಟೇಡಿಯಂಗೆ ಹೋಗುತ್ತಿಲ್ಲ. ಕೆಎಸ್‌ಸಿಎ ವತಿಯಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾರ್ಯಕ್ರಮ ಮಾಡಿಕೊಳ್ಳಲಿದ್ದಾರೆ. ಅಗತ್ಯ ಪೊಲೀಸ್ ಭದ್ರತೆ, ಟ್ರಾಫಿಕ್ ಸಮಸ್ಯೆಯಾಗದಂತೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಗೃಹ ಸಚಿವರಾದ ಡಾ. ಜಿ ಪರಮೇಶ್ವರ್‌ ಅವರು ತಿಳಿಸಿದರು.

ಕಾನೂನು ಬಿಟ್ಟವರಿಗೆ ಭಯವಾಗಬೇಕು

ದಕ್ಷಿಣ‌ ಕನ್ನಡ‌ ಜಿಲ್ಲೆಯಲ್ಲಿ ಯಾರು ಆತಂಕ‌ ಪಡಬೇಕಿಲ್ಲ‌ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿಕೊಳ್ಳುತ್ತೇನೆ‌. ಯಾರು ಕಾನೂನು ಮತ್ತು ಜನ ಸಮುದಾಯಕ್ಕೆ ವಿರುದ್ಧವಾಗಿ ಕೆಲಸ‌ ಮಾಡುತ್ತಾರೆ ಅವರಿಗೆ ಆತಂಕವಿರಬಹುದು. ಅದನ್ನು ಬಿಟ್ಟರೆ ಸಾಮಾನ್ಯ ಜನರಿಗೆ ತೊಂದರೆಯಾಗುವುದಕ್ಕೆ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಕರಾವಳಿ ಭಾಗದಲ್ಲಿ ಇನ್ನು ಕೂಡ‌‌ ಕೋಮು ಪ್ರಚೋದನೆ ಮಾಡುವ ಕೆಲಸದಲ್ಲಿ ತೊಡಗಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಇರಬಹುದು. ರಾತ್ರಿ ಗಸ್ತು ಹೆಚ್ಚು ಮಾಡುವುದು, ಮನೆಮನೆಗೆ ಹೋಗಿ ಜನರನ್ನು ಸಹಕರಿಸಲು ದೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ. ಒಂದು ವೇಳೆ ಗಲಭೆ ಹಬ್ಬಿಸುವವರು ಇದ್ದರೆ ಪೊಲೀಸರು ಪರಿಶೀಲನೆ ಮಾಡುತ್ತಾರೆ. ಯಾರಿಗು ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಈ‌ ಮೂಲಕ ಭರವಸೆ ನೀಡುತ್ತೇನೆ.

ನಾವು ಯಾರನ್ನು ಟಾರ್ಗೆಟ್ ಮಾಡುವುದಿಲ್ಲ. ನೀವು ಸಾರ್ವಜನಿಕವಾಗಿ ಕಾನೂನಿನ ಚೌಕಟ್ಟಿನಲ್ಲಿ ನಡೆದುಕೊಳ್ಳುವುದಾದರೆ ಭಯ ಏಕೆ? ಯಾರು ಕಾನೂನು ಬಿಟ್ಟು ಕೆಲಸ ಮಾಡುತ್ತಾರೆ ಅಂತವರಿಗೆ ಭಯ ಆಗಬೇಕು. ಈಗಾಗಲೇ ತೀರ್ಮಾನ ಮಾಡಿದಂತೆ ಕೋಮು ಹಿಂಸಾ ನಿಗ್ರಹ ಕಾರ್ಯಪಡೆಯನ್ನು ಇನ್ನೊಂದು ವಾರದೊಳಗೆ ಮಾಡುತ್ತೇವೆ. ರಾಜ್ಯದಲ್ಲಿ ಶಾಂತಿಯನ್ನು ಕಾಪಾಡುವ ಜವಾಬ್ದಾರಿ ಸರ್ಕಾರಕ್ಕೆ ಇದೆ. ಅದಕ್ಕೆ ಅನೇಕ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ನಾನಾಗಲಿ ಅಥವಾ‌ ಮುಖ್ಯಮಂತ್ರಿಯವರಾಗಲಿ ಪೊಲೀಸ್ ಅಧಿಕಾರಿಗಳಿಗೆ ದಿನನಿತ್ಯ ಗಂಟೆಗೊಮ್ಮೆ ಸೂಚನೆಗಳನ್ನು ಕೊಡುವುದಿಲ್ಲ. ಏನಾದರು ಘಟನೆಗಳು ನಡೆದಾಗ ಅಧಿಕಾರಿಗಳನ್ನು ನಾವು ಕೇಳುತ್ತೇವೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+