Birth, Death Certificate: ಜನನ, ಮರಣ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ
Birth And Death Certificate: ಇದೀಗ ಯಾವುದೇ ದಾಖಲೆಗಳನ್ನು ಪಡೆಯಬೇಕು ಅಂದರೆ ಸುಲಭವಾದ ಮಾತಲ್ಲ. ಅದರದ್ದೇ ಆದ ಕಟ್ಟುನಿಟ್ಟಿನ ನಿಯಮಗಳಿವೆ. ಅವುಗಳನ್ನು ಪಾಲಿಸಿಯೇ ಮುಂದುವರೆಯಬೇಕಾಗುತ್ತದೆ. ಅದರಲ್ಲೂ ಜನನ ಹಾಗೂ ಮರಣ ಪ್ರಮಾಣ ಪತ್ರಗಳನ್ನು ಪಡೆಯಲು ಯಾವೆಲ್ಲಾ ದಾಖಲೆಗಳನ್ನು ನೀಡಬೇಕಾಗುತ್ತದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯದ ಗ್ರಾಮ ಪಂಚಾಯತಿಗಳಲ್ಲೇ ಈಗ ಮರಣ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ಜನನ ಮತ್ತು ಮರಣ ನೋಂದಣಿಗೆ ಅವಕಾಶ ನೀಡಲಾಗಿದ್ದು, ಅಲ್ಲಿಯೇ ಪ್ರಮಾಣಪತ್ರಗಳನ್ನು ಪಡೆಯಬಹುದಾಗಿದೆ. ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮಾಹಿತಿ ಹಂಚಿಕೊಂಡಿದ್ದು, ನಿಮ್ಮ ಗ್ರಾಮ ಪಂಚಾಯತಿಯಲ್ಲೇ ಮರಣ ನೋಂದಣಿ ಸಾಧ್ಯವಿದೆ.

ಮೊದಲ ಪ್ರಮಾಣ ಪತ್ರ ಉಚಿತ ಆಗಿರುತ್ತದೆ ಎಂದಿದೆ. ಜನನ, ಮರಣ ಪ್ರಮಾಣ ಪತ್ರಗಳನ್ನು ನಿಮ್ಮ ಗ್ರಾಮ ಪಂಚಾಯತಿಯಲ್ಕೇ ನೋಂದಣಿ ಮಾಡಿಸಿ, ಮೊದಲ ಪ್ರಮಾಣ ಪತ್ರವನ್ನು ಉಚಿತವಾಗಿ ಪಡೆಯಬಹುದಾಗಿದೆ. ಈ ಮೂಲಕ ಪ್ರತಿಯೊಂದು ಜನನ, ಮರಣ ನೋಂದಣಿಯನ್ನು ಖಚಿತಪಡಿಸಿಕೊಳ್ಳಿ ಅಂತಲೂ ತಿಳಿಸಲಾಗಿದೆ. ಹಾಗೆಯೇ ಈ ಇವುಗಳನ್ನು ಪಡೆಯಲು ಕೆಲವೊಂದು ದಾಖಲೆಗಳು ಕಡ್ಡಾಯವಾಗಿವೆ.
ಜನನ, ಮರಣ ಪ್ರಮಾಣ ಪತ್ರಕ್ಕೆ ಬೇಕಾದ ದಾಖಲೆಗಳು
* ಆಧಾರ್ ಕಾರ್ಡ್
* ಪಡಿತರ ಚೀಟಿ
* ವಾಹನ ಚಾಲನಾ ಪರವಾನಗಿ
* ಚುನಾವಣಾ ಗುರುತಿನ ಚೀಟಿ
* ಪಾಸ್ ಪೋರ್ಟ್
* ಜನನ ಪ್ರಮಾಣ ಪತ್ರ
* ಎಸ್‌ಎಸ್‌ಎಲ್‌ಸಿ, ಪಿಯುಸಿ ಅಂಕಪಟ್ಟಿ
* ವಿದ್ಯಾರ್ಥಿ ಗುರುತಿನ ಚೀಟಿ
ಆಧಾರ್ ಬಗ್ಗೆ ಮಹತ್ವದ ಮಾಹಿತಿ: ದೇಶದ ಪ್ರತಿಯೊಬ್ಬ ನಾಗರಿಕನ ವಿಶಿಷ್ಟ ಐಡಿ ಸಂಖ್ಯೆಯನ್ನು ಆಧಾರ್ ಕಾರ್ಡ್ ಮೇಲೆ ಮುದ್ರಿಸಲಾಗುತ್ತದೆ. ಬ್ಯಾಂಕ್ ಖಾತೆ ತೆರೆಯುವುದರಿಂದ ಹಿಡಿದು ಹೊಸ ಸಿಮ್ ಕಾರ್ಡ್ ಖರೀದಿಸುವವರೆಗೆ ಸರ್ಕಾರದ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ಆಧಾರ್ ಕಾರ್ಡ್ ಅನ್ನು ಬಳಸಲಾಗುತ್ತದೆ.
ಆದರೆ, ಇತ್ತೀಚೆಗಷ್ಟೇ ಸರ್ಕಾರ 10 ವರ್ಷ ಹಳೆಯ ಆಧಾರ್ ಕಾರ್ಡ್ ಬಗ್ಗೆ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಸರ್ಕಾರದ ಈ ನಿರ್ಧಾರದಿಂದ 10 ವರ್ಷ ಹಳೆಯ ಆಧಾರ್ ಕಾರ್ಡ್ ಹೊಂದಿರುವವವರು ತಪ್ಪದೇ ಅಪ್ಡೇಟ್ ಮಾಡುವಂತೆ ಸೂಚನೆ ನೀಡಲಾಗಿದೆ.
ಇದೀಗ ಕೇಂದ್ರ ಸರ್ಕಾರವು 10 ವರ್ಷ ಹಳೆಯ ಆಧಾರ್ ಕಾರ್ಡ್ ಅನ್ನು ನವೀಕರಿಸಲು ಸಲಹೆ ನೀಡಿದೆ. ಆದರೂ ಸರ್ಕಾರ ಇದನ್ನು ಕಡ್ಡಾಯಗೊಳಿಸಿಲ್ಲ. ನನ್ನ ಆಧಾರ್ ಪೋರ್ಟಲ್ ಅಥವಾ ಹತ್ತಿರದ ದಾಖಲಾತಿ ಕೇಂದ್ರಕ್ಕೆ ಭೇಟಿ ನೀಡುವ ಮೂಲಕ ಯಾವುದೇ ನಾಗರಿಕರು ತಮ್ಮ ಆಧಾರ್ ದಾಖಲೆಗಳನ್ನು ನವೀಕರಿಸಬಹುದು.
10 ವರ್ಷ ಹಳೆಯ ಆಧಾರ್ ಕಾರ್ಡ್ ಹೊಂದಿರುವವರು ತಮ್ಮ ಕಾರ್ಡ್ ಅನ್ನು ನವೀಕರಿಸಬೇಕು ಎಂದು ಸರ್ಕಾರ ತಿಳಿಸಿದೆ. ಯಾಕೆಂದರೆ ಹೀಗೆ ಮಾಡುವುದರಿಂದ ಅವರು ಭವಿಷ್ಯದಲ್ಲಿ ಅನೇಕ ಪ್ರಯೋಜನಗಳನ್ನು ಪಡೆಯಬಹುದು. ಇದಕ್ಕೆ ವಿರುದ್ಧವಾಗಿ, ನೀವು ನಿಮ್ಮ ಆಧಾರ್ ಕಾರ್ಡ್ ಅನ್ನು ನವೀಕರಿಸದಿದ್ದರೆ, ನೀವು ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಈ ಹಿನ್ನೆಲೆ ಪ್ರತಿಯೊಬ್ಬರೂ ತಮ್ಮ ಆಧಾರ್ ಕಾರ್ಡ್ ಅನ್ನು ಸಕಾಲದಲ್ಲಿ ನವೀಕರಿಸಲು ಸರ್ಕಾರ ಮನವಿ ಮಾಡಿದೆ.
ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು 10 ವರ್ಷದ ಹಳೆಯ ಆಧಾರ್ ಕಾರ್ಡ್‌ನ ನಿಯಮಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದೆ. ಜೊತೆಗೆ ನಾಗರಿಕರು ತಮ್ಮ ಆಧಾರ್ ಕಾರ್ಡ್ ಅನ್ನು ನವೀಕರಿಸಲು ಸಹ ಸೂಚಿಸಲಾಗಿದೆ. ಕೆಲ ಆಧಾರ್ ಕಾರ್ಡ್ ಹೊಂದಿರುವವರ ವಿಳಾಸ, ಮೊಬೈಲ್ ಸಂಖ್ಯೆ ಸೇರಿದಂತೆ ಹಲವು ಮಾಹಿತಿಗಳು ಬದಲಾಗಿವೆ. ಈ ಕಾರಣಕ್ಕಾಗಿಯೇ ಹೊಸ ಮಾಹಿತಿಯನ್ನು ನವೀಕರಿಸಲು ಸರ್ಕಾರ ಮನವಿ ಮಾಡಿದೆ.












Click it and Unblock the Notifications