ಲೋಕಸಭಾ ಚುನಾವಣೆಯಲ್ಲಿ ಪುತ್ರಿಯನ್ನು ಕಣಕ್ಕಿಳಿಸಲು ಸಚಿವರ ತಯಾರಿ? ಯಾರು? ಯಾವ ಕ್ಷೇತ್ರ?
ಬೆಂಗಳೂರು,ಡಿಸೆಂಬರ್ 20: ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳು ಮಾತ್ರ ಉಳಿದಿವೆ. ಈಗಾಗಲೇ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್ ರಾಜ್ಯದಲ್ಲಿ ಬಿಜೆಪಿಗೆ ಠಕ್ಕರ್ ಕೊಡಲು ಮಾಸ್ಟರ್ ಪ್ಲಾನ್ ನಡೆಸಿದೆ.
ಹೌದು, ಕಳೆದ 32 ವರ್ಷಗಳಿಂದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ವಿಜಯ ಸಾಧಿಸಿರುವ ಭಾರತೀಯ ಜನತಾ ಪಕ್ಷ 2024ರ ಲೋಕಸಭಾ ಚುನಾವಣೆಯಲ್ಲಿ ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣದಿಂದ ಬಿಜೆಪಿ ಅಭ್ಯರ್ಥಿಯಾದ ತೇಜಸ್ವಿ ಸೂರ್ಯ ಗೆಲುವು ಸಾಧಿಸಿದ್ರು, ಇದೀಗ 2024 ರ ಲೋಕಸಭಾ ಚುನಾವಣೆಗೆ ಬೆಂಗಳೂರು ದಕ್ಷಿಣ ಕ್ಷೇತ್ರವನ್ನ ಪಡೆಯುವ ನಿಟ್ಟಿನಲ್ಲಿ ಬಿಜೆಪಿ- ಕಾಂಗ್ರೆಸ್ ಸಕಲ ಸಿದ್ದತೆಯನ್ನ ನಡೆಸಿದೆ.

ಬೆಂಗಳೂರು ದಕ್ಷಿಣದಲ್ಲಿ ಈ ಬಾರಿ ಅಭ್ಯರ್ಥಿಯನ್ನು ಬಿಜೆಪಿ ಬದಲಾವಣೆ ಮಾಡುತ್ತಾ ಎಂಬ ಕುತೂಹಲ ಕಾಡುತ್ತಿದೆ. 2019 ರ ಲೋಕಸಭಾ ಚುನಾವಣೆಯಲ್ಲಿ ತೇಜಸ್ವಿನಿ ಅನಂತ್ ಕುಮಾರ್ ಅವರಿಗೆ ಟಿಕೆಟ್ ಸಿಗುವ ನಿರೀಕ್ಷೆ ಇತ್ತು.
ಆದರೆ, ಕೊನೆ ಕ್ಷಣದಲ್ಲಿ ಅಚ್ಚರಿ ಅಭ್ಯರ್ಥಿಯಾಗಿ ತೇಜಸ್ವಿ ಸೂರ್ಯ ಅವರನ್ನ ಬಿಜೆಪಿ ಹೈಕಮಾಂಡ್ ಚುನಾವಣಾ ಕಣಕ್ಕಿಳಿಸಿತ್ತು. ಆದರೆ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್ ಸಿಗುವುದಿಲ್ಲ ಎಂಬ ಮಾತುಗಳು ಕೇಳಿ ಬಂದಿದ್ದು, ಕಾಂಗ್ರೆಸ್ ನಲ್ಲಿ ಅಭ್ಯರ್ಥಿಯನ್ನ ಕಣಕ್ಕಿಳಿಸುವ ನಿಟ್ಟಿನಲ್ಲಿ ಹೊಸ ತಂತ್ರಗಾರಿಕೆಯನ್ನ ನಡೆಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಸೋಲು ಕಂಡಿದ್ದ ಸಚಿವ ರಾಮಲಿಂಗಾರೆಡ್ಡಿ ಅವರ ಪುತ್ರಿ ಸೌಮ್ಯ ರೆಡ್ಡಿ ಅವರನ್ನ ಕಣಕ್ಕಿಳಿಸುವ ನಿಟ್ಟಿನಲ್ಲಿ ಸಚಿವರು ತಯಾರಿ ನಡೆಸಿದ್ದಾರೆ ಎನ್ನಲಾಗಿದೆ. ಇತ್ತ ಬೆಂಗಳೂರು ಜಿಲ್ಲಾ ಉಸ್ತುವಾರಿಯಾಗಿರುವ ಡಿ ಕೆ ಶಿವಕುಮಾರ್ ಅವರ ಹಲವು ತಂತ್ರಗಾರಿಕೆಯನ್ನ ನಡೆಸಿದ್ದಾರೆ. ಈ ಬಾರೀ ಮುಸ್ಲಿಂ ಮತ್ತು ಒಕ್ಕಲಿಗ ಮತ ಬ್ಯಾಂಕ್ ವಿಭಜನೆ ಆಗುವ ಅವಕಾಶಗಳು ಕಾಣುತ್ತಿದೆ.
ಇತ್ತ ಬೆಂಗಳೂರು ವ್ಯಾಪ್ತಿಯಲ್ಲಿ ಸಚಿವ ರಾಮಲಿಂಗಾರೆಡ್ಡಿ ಅವರು ತಮ್ಮದೇ ಆದ ಹಿಡಿತವನ್ನ ಹೊಂದಿದ್ದು, ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ಪುತ್ರಿಯನ್ನ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಸುವ ನಿಟ್ಟಿನಲ್ಲಿ ತಯಾರಿ ನಡೆಸಿದ್ದಾರೆ. ಈ ಬಗ್ಗೆ ಹೈಕಮಾಂಡ್ ನಾಯಕರ ಜೊತೆಗೆ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕಿಳಿಸಬೇಕು ಎಂಬ ಇರಾದೆಯಲ್ಲಿ ಕಾಂಗ್ರೆಸ್ ಇದೆ. ಆದರೆ, ರಾಮಲಿಂಗಾರೆಡ್ಡಿ ಅವರು ತಮ್ಮ ಪುತ್ರಿ, ಮಾಜಿ ಶಾಸಕಿ ಸೌಮ್ಯ ರೆಡ್ಡಿ ಅವರಿಗೆ ಎಂಪಿ ಟಿಕೆಟ್ ನೀಡಬೇಕು ಎಂಬ ಲಾಬಿ ನಡೆಸಿರುವ ಬಗ್ಗೆ ವರದಿಯಾಗಿದೆ. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜಯನಗರ ಕ್ಷೇತ್ರದಲ್ಲಿ ಸೌಮ್ಯ ರೆಡ್ಡಿ ಅವರು ಕೇವಲ 16 ಮತಗಳಿಂದ ಬಿಜೆಪಿ ಅಭ್ಯರ್ಥಿ ವಿರುದ್ಧ ಸೋಲು ಅನುಭವಿಸಿದ್ದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಕೂಡ ಆಗಿರುವ ರಾಮಲಿಂಗಾರೆಡ್ಡಿ ಅವರು ಮಗಳ ರಾಜಕೀಯ ಭವಿಷ್ಯಕ್ಕೆ ಮುಂದಾಗಿದ್ದು, ಬೆಂಗಳೂರು ದಕ್ಷಿಣದಿಂದ ಕಣಕ್ಕಿಳಿಸಲು ಸಕಲ ತಯಾರಿಯನ್ನ ನಡೆಸಿದ್ದಾರೆ ಎನ್ನಲಾಗಿದೆ.












Click it and Unblock the Notifications