ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚುನಾವಣೆ ಕಣಕ್ಕಿಳಿಯಲು ಕೃಷಿ ಇಲಾಖೆ ಕೆಲಸಕ್ಕೆ ರಾಜೀನಾಮೆ!

|
Google Oneindia Kannada News

ಬಳ್ಳಾರಿ, ಜನವರಿ 02 : ಹಗರಿಬೊಮ್ಮನಹಳ್ಳಿ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಜೋರಾಗಿದೆ. ಜೆಡಿಎಸ್‌ನಿಂದ ಈ ಬಾರಿ ನಿವೃತ್ತ ಸರ್ಕಾರಿ ಅಧಿಕಾರಿಯೊಬ್ಬರು ಸ್ಪರ್ಧಿಸಲಿದ್ದಾರೆ. ಕ್ಷೇತ್ರದ ಶಾಸಕ ಭೀಮಾ ನಾಯಕ್ ಈಗಾಗಲೇ ಜೆಡಿಎಸ್‌ನಿಂದ ಅಮಾನತುಗೊಂಡಿದ್ದು, ಕಾಂಗ್ರೆಸ್ ಸೇರಲಿದ್ದಾರೆ.

ಡಾ.ತಿಪ್ಪೇಸ್ವಾಮಿ ವೆಂಕಟೇಶ್ 2018ರ ಚುನಾವಣೆಯಲ್ಲಿ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಕೃಷಿ ಇಲಾಖೆ ಅಧಿಕಾರಿಯಾಗಿದ್ದ ಇವರು ಮಾರ್ಚ್ ತಿಂಗಳಿನಲ್ಲಿ ಸ್ವಯಂ ನಿವೃತ್ತಿ ಪಡೆದು ರಾಜಕೀಯಕ್ಕೆ ಧುಮುಕಿದ್ದಾರೆ.

ಜೆಡಿಎಸ್ ಬಂಡಾಯ ಶಾಸಕರ ಕಾಂಗ್ರೆಸ್ ಸೇರ್ಪಡೆ ಮುಂದಕ್ಕೆಜೆಡಿಎಸ್ ಬಂಡಾಯ ಶಾಸಕರ ಕಾಂಗ್ರೆಸ್ ಸೇರ್ಪಡೆ ಮುಂದಕ್ಕೆ

ಬೋವಿ ಸಮಯದಾಯಕ್ಕೆ ಸೇರಿದ ತಿಪ್ಫೇಸ್ವಾಮಿ ಅವರು ಮೂಲತಃ ಜಗಳೂರು ತಾಲೂಕಿನವರು. ಕೃಷಿ ಅಧಿಕಾರಿಯಾಗಿ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಂದಾಯ ಅಧಿಕಾರಿಯಾಗಿ ಕೆಲಸ ಮಾಡಿದ್ದಾರೆ. ಈಗ ಸರ್ಕಾರ ಕೆಲಸ ಬಿಟ್ಟು ರಾಜಕಾರಣ ಆರಂಭಿಸಿದ್ದಾರೆ.

ಚುನಾವಣೆಗೆ ಸ್ಪರ್ಧಿಸಲು ಸರ್ಕಾರಿ ಉದ್ಯೋಗ ಬಿಟ್ಟ ಡಾ.ಡಿ.ಕೆ.ರಮೇಶ್ಚುನಾವಣೆಗೆ ಸ್ಪರ್ಧಿಸಲು ಸರ್ಕಾರಿ ಉದ್ಯೋಗ ಬಿಟ್ಟ ಡಾ.ಡಿ.ಕೆ.ರಮೇಶ್

Thippeswamy Venkatesh resigned for govt job to contest election

ಡಾ.ತಿಪ್ಪೇಸ್ವಾಮಿ ವೆಂಕಟೇಶ್ ಅವರು ಹಗರಿಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಸಂಚಾರ ನಡೆಸಿ ಒಂದು ಸುತ್ತಿನ ಪ್ರಚಾರ ಮುಕ್ತಾಯಗೊಳಿಸಿದ್ದಾರೆ. ಸಾಮಾಜಿಕ ಜಾಲತಾಣ, ವಾಟ್ಸಪ್ ಗ್ರೂಪ್‌ಗಳ ಮೂಲಕ ಯುವಕರನ್ನು ತಲುಪುತ್ತಿದ್ದಾರೆ.

'ಕ್ಷೇತ್ರ ಈಗಾಗಲೇ ಜೆಡಿಎಸ್ ವಶದಲ್ಲಿಯೇ ಇದೆ. ಪಕ್ಷದಿಂದ ಆಯ್ಕೆಯಾಗಿ, ಕಾಂಗ್ರೆಸ್ ಸೇರುವ ಮೂಲಕ ಜನರಿಗೆ ದ್ರೋಹ ಮಾಡುತ್ತಿರುವ ಭೀಮಾ ನಾಯಕ್ ಅವರನ್ನು ಸೋಲಿಸುವುದು ನನ್ನ ಗುರಿ' ಎಂದು ಡಾ.ತಿಪ್ಪೇಸ್ವಾಮಿ ವೆಂಕಟೇಶ್ ಹೇಳಿದ್ದಾರೆ.

ಅಂದಹಾಗೆ 2013ರ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಜೆಡಿಎಸ್‌ನ ಭೀಮಾ ನಾಯಕ್ 51,972 ಮತಗಳನ್ನು ಪಡೆದು ಜಯಗಳಿಸಿದ್ದರು. ಆದರೆ, ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬೆಂಬಲಿಸಿದ ಕಾರಣ ಪಕ್ಷ ಅವರನ್ನು ಅಮಾನತು ಮಾಡಿತ್ತು.

English summary
Dr.Thippeswamy Venkatesh will contest for 2018 Karnataka assembly elections form Hagaribommanahalli assembly constituency, Ballari. Dr.Thippeswamy who quit the government job for contest elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X