ಬೆಂಗಳೂರು, ಮೈಸೂರು, ಮಂಡ್ಯ ಸೇರಿ ಹಲವೆಡೆ ಎರಡು ದಿನ ಮಳೆ ಸಾಧ್ಯತೆ: ಐಎಂಡಿ ಮುನ್ಸೂಚನೆ

ಬೆಂಗಳೂರು, ಮಾರ್ಚ್. 30: ದಕ್ಷಿಣ ಕರ್ನಾಟಕ ಜಿಲ್ಲೆಗಳಲ್ಲಿ ಗುರುವಾರದಿಂದ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಬುಧವಾರದಂದು ಮುನ್ಸೂಚನೆ ನೀಡಿದೆ. ಈ ಪ್ರದೇಶದ ಉಳಿದ ಜಿಲ್ಲೆಗಳಲ್ಲಿ ಹವಾಮಾನವು ಶುಷ್ಕವಾಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ.

''ಮೈಸೂರು, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂಬಾ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ" ಎಂದು ಹವಾಮಾನ ಇಲಾಖೆ ಬುಧವಾಋ ಘೋಷಿಸಿದೆ. ಬುಧವರಾ ಸಂಜೆ ವೇಳೆಗೆ ಬೆಂಗಳೂರು ಸೇರಿದಂತೆ ಜಿಲ್ಲೆಯ ಸುತ್ತಮುತ್ತ ಹಗುರು ಮಳೆಯಾಗಿದೆ. ಬೆಂಘಳುರು ನಗರದಲ್ಲಿ ಮೋಡದ ವಾತಾವರಣವಿದ್ದು, ಸಾಧಾರಣ ಮಳೆಯಾಗಿದೆ.

This district of Karnataka will witness thundershowers for the next two days

'ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಚಾಮರಾಜನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಅತಿ ಕಡಿಮೆ ಮಳೆಯಾಗುವ ಸಂಭವವಿದೆ ಎಂದಿರುವ ಹವಾಮಾನ ಇಲಾಖೆ, ದಕ್ಷಿಣ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆ ಇದೆ ಂದು ಮುನ್ಸೂಚನೆ ನೀಡಿದೆ.

*ವಾಯುವ್ಯ ಭಾರತ*: ಜಮ್ಮು- ಕಾಶ್ಮೀರ- ಲಡಾಖ್- ಗಿಲ್ಗಿಟ್ ಪಂಜಾಬ್, ಹರಿಯಾಣ - ಚಂಡೀಗಢ - ದೆಹಲಿಯಲ್ಲಿ ಆಲಿಕಲ್ಲು ಮಳೆ ಮತ್ತ ಚದುರಿದ ಮಳೆಯ ಚಟುವಟಿಕೆಯನ್ನು ನಿರೀಕ್ಷಿಸಲಾಗಿದೆ. ಮಧ್ಯ ಭಾರತದಲ್ಲಿ ವಿದರ್ಭ ಮತ್ತು ಛತ್ತೀಸ್‌ಗಢದಲ್ಲಿ ಮಾರ್ಚ್ 30, 31 ರಂದು ಭಾರೀ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು, ಬಿಹಾರ, ಜಾರ್ಖಂಡ್, ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ವ್ಯಾಪಕವಾದ ಮಳೆಯಾಗುವ ನಿರೀಕ್ಷೆಯಿದ್ದು, ಸಿಕ್ಕಿಂನಲ್ಲಿ ಮಾರ್ಚ್ 31 ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈಶಾನ್ಯ ಭಾರತದ ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರ ಪ್ರದೇಶಗಳಲ್ಲಿ ಏಪ್ರಿಲ್‌ನಲ್ಲಿ 01 ಮತ್ತು 02ರಲ್ಲಿ ಭಾರೀ ಮಲೆಯಾಗುವ ಸಾಧ್ಯತೆಯಿದೆ.

This district of Karnataka will witness thundershowers for the next two days

*ಗರಿಷ್ಠ ತಾಪಮಾನದ ಮುನ್ಸೂಚನೆ*

ವಾಯುವ್ಯ ಭಾರತದಲ್ಲಿ ಮುಂದಿನ 24 ಗಂಟೆಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಯಾವುದೇ ಮಹತ್ವದ ಬದಲಾವಣೆಯಾಗುವುದಿಲ್ಲ. ನಂತರ 2-4⁰C ರಷ್ಟು ಕುಸಿಯುತ್ತದೆ. ಪೂರ್ವ ಭಾರತದಲ್ಲಿ ಮುಂದಿನ 2 ದಿನಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಯಾವುದೇ ಬದಲಾವಣೆ ಇಲ್ಲ ಮತ್ತು ನಂತರ 2-4⁰C ರಷ್ಟು ಕುಸಿಯುವ ಸಾಧ್ಯತೆಯಿದೆ. ಪಶ್ಚಿಮ ಭಾರತದಲ್ಲಿ ಮುಂದಿನ 3 ದಿನಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಗಮನಾರ್ಹ ಬದಲಾವಣೆ ಇಲ್ಲ ಆದರೆ, ನಂತರ 2⁰C ರಷ್ಟು ಏರಿಕೆಯಾಗುವ ಸಾಧ್ಯತೆಯಿದೆ

"ಮಾರ್ಚ್ 30 ರಂದು ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ರಾಜಸ್ಥಾನದಲ್ಲಿ ಸಾಕಷ್ಟು ವ್ಯಾಪಕವಾದ ಮಳೆ/ಗುಡುಗು ಸಹಿತ ಮಳೆಯಾಗಲಿದೆ. ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ಪೂರ್ವ ರಾಜಸ್ಥಾನ, ಒಡಿಶಾ, ಛತ್ತೀಸ್‌ಗಢ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಮಾರ್ಚ್ 31 ರಂದು ಮತ್ತು ಉತ್ತರಾಖಂಡದಲ್ಲಿ ಏಪ್ರಿಲ್ 1 ರಂದು ಮಳೆಯಾಗುತ್ತದೆ" ಎಂದು IMD ಮುನ್ಸೂಚನೆ ತಿಳಿಸಿದೆ.

ಬಿರುಗಾಳಿ, ಆಲಿಕಲ್ಲು ಮಳೆ ತೋಟಗಳು, ತೋಟಗಾರಿಕೆ ಮತ್ತು ಬೆಳೆದು ನಿಂತ ಬೆಳೆಗಳಿಗೆ ಹಾನಿಯಾಗಬಹುದು. ಆಲಿಕಲ್ಲು ಮಳೆಯಿಂದ ತೆರೆದ ಸ್ಥಳಗಳಲ್ಲಿ ಜನರು ಮತ್ತು ಜಾನುವಾರುಗಳನ್ನು ಗಾಯಗೊಳಿಸಬಹುದು. ಬಲವಾದ ಗಾಳಿಯಿಂದಾಗಿ ಕೆಲವು ಕಟ್ಟಡಗಳಿಗೆ ಭಾಗಶಃ ಹಾನಿಯಾಗಬಹುದು. ಕಚ್ಚಾ ಮನೆಗಳು/ಗೋಡೆಗಳು ಮತ್ತು ಗುಡಿಸಲುಗಳಿಗೆ ಸಣ್ಣ ಹಾನಿಯಾಗಬಹುದು" ಎಂದು ಇಲಾಖೆ ತಿಳಿಸಿದೆ.

ಮುನ್ಸೂಚನೆಯ ಹಿನ್ನೆಲೆಯಲ್ಲಿ, ಈಗಾಗಲೇ ಕೊಯ್ಲು ಮಾಡಿದ ಉತ್ಪನ್ನಗಳನ್ನು ಸುರಕ್ಷಿತ ಸ್ಥಳದಲ್ಲಿ ಇರಿಸಲು ಹವಾಮಾನ ಇಲಾಖೆ ರೈತರಿಗೆ ಸಲಹೆ ನೀಡಿದೆ. ಇದೇ ವೇಳೆ, ವಾಯುವ್ಯ ಭಾರತದಲ್ಲಿ ಮುಂದಿನ 24 ಗಂಟೆಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಕಂಡುಬರುವುದಿಲ್ಲ ಎಂದು ಮುನ್ಸೂಚನೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+