ಈ ಸರ್ಕಾರ ಆಡಳಿತ ನಡೆಸುವ ವಿಶ್ವಾಸ ಕಳೆದುಕೊಂಡಿದೆ: ಬಸವರಾಜ ಬೊಮ್ಮಾಯಿ
ತುಮಕೂರು, ಸೆಪ್ಟೆಂಬರ್ 30: ಕಾಂಗ್ರೆಸ್ ಸರ್ಕಾರ ಈಗಾಗಲೇ ರಾಜ್ಯದ ಜನರ ವಿಶ್ವಾಸ ಕಳೆದುಕೊಂಡಿದೆ. ಕುಮಾರಸ್ವಾಮಿಯವರು ಎರಡು ಬಾರಿ ಸಿಎಂ ಆದವರು, ಎರಡು ಬಾರಿ ಅಧಿಕಾರ ಕಳೆದುಕೊಂಡಿದ್ದಾರೆ. ಅವರು ಅನುಭವದ ಮಾತು ಹೇಳಿದ್ದಾರೆ.
ಈ ಕುರಿತು ಶನಿವಾರ ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಸರ್ಕಾರ ಆಡಳಿತ ನಡೆಸುವ ವಿಶ್ವಾಸ ಕಳೆದುಕೊಂಡಿದೆ. ಜನರೇ ಈ ಸರ್ಕಾರದ ಆಡಳಿತದ ಬಗ್ಗೆ ಬೇಸರಗೊಂಡಿದ್ದಾರೆ ಎಂದು ಹೇಳಿದರು.

ಇನ್ನೂ ಕಾವೇರಿ ವಿವಾದ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಕಾವೇರಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತಮಿಳುನಾಡಿಗೆ ನೀರು ಬಿಡದಿದ್ದರೆ ನಮ್ಮ ಅಧಿಕಾರ ಹೋಗುತ್ತದೆ ಅಂತ ಹೇಳುತ್ತಾರೆ. ಇವರು ಅಧಿಕಾರಕ್ಕಾಗಿ ರಾಜ್ಯದ ಹಿತ ಬಲಿ ಕೊಡುತ್ತಿದ್ದಾರೆ. ಇವರು ಬಹಿರಂಗ ಹೇಳಿಕೆ ನಿಡುವಾಗ ಜವಾಬ್ದಾರಿಯುತವಾಗಿ ಮಾತನಾಡಬೇಕು. ಕೊರ್ಟ್ ನಲ್ಲಿ ವಾದ ಮಾಡಬೇಕು. ಸುಪ್ರೀಂ ಕೊರ್ಟ್ ನಲ್ಲಿ ಈಗಿನ ವಾಸ್ತವ ಸ್ಥಿತಿ ಹೆಳಿದರೆ ನ್ಯಾಯಾಂಗ ನಿಂದನೆ ಆಗುವುದಿಲ್ಲ. ಅಧಿಕಾರವು ಹೋಗುವುದಿಲ್ಲ ಎಂದು ಹೇಳಿದರು.
ಇದೇ ವೇಳೆ ಸಾಹಿತಿಗಳಿಗೆ ಜೀವ ಬೆದರಿಕೆ ಹಾಕಿದ್ದಾರೆ ಎನ್ನುವ ಕಾರಣಕ್ಕೆ ಹಿಂದೂ ಕಾರ್ಯಕರ್ತನ ಬಂಧನ ಮಾಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಸರ್ಕಾರದ ಅವಧಿಯಲ್ಲಿ ಫೇಕ್ ನ್ಯೂಸ್ ಹೆಸರಿನಲ್ಲಿ ಬೆದರಿಕೆ ಹಾಕುವ ಕೆಲಸ ನಡೆಸಲಾಗುತ್ತಿದೆ. ಫೆಕ್ ನ್ಯೂಸ್ ಅಂತ ಹೇಳಿ ಎಲ್ಲರನ್ನು ಬೆದರಿಸಿ ಬೇರೆ ಜಿಲ್ಲೆಗಳಿಗೆ ಕರೆದುಕೊಂಡು ಹೋಗಿ ವಿಚಾರಣೆ ಮಾಡುತ್ತಿದ್ದಾರೆ ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಹೇಳಿದರು.
ಇನ್ನೂ ಕಾಂಗ್ರೆಸ್ ನಲ್ಲಿ ಲಿಂಗಾಯತರು ಮೂಲೆಗುಂಪು ಎಂದು ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರ ಅವರ ಹೇಳಿಕೆ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಶಾಮನೂರು ಶಿವ ಶಂಕರ ಅವರು ಹಿರಿಯರು, ಅವರು ಅಖಿಲ ಭಾರತ ವೀರಶೈವ ಮಹಾಸಭೆಯ ಅಧ್ಯಕ್ಷರಾಗಿದ್ದಾರೆ. ಅವರು ಲಿಂಗಾಯತ ಅಧಿಕಾರಿಗಳಿಗೆ ಬೆಲೆ ಅಂತ ಹೇಳಿದ್ದರೆ ಅದು ಮುಂದಿನ ದಿನಗಳಲ್ಲಿ ಪರಿಣಾಮ ಬೀರಲಿದೆ ಎಂದು ಹೇಳಿದರು.
ಸರಕಾರದ ಜೊತೆ ಎಲ್ಲ ಸಮಾಜದವರೂ ಇದ್ದಾರೆ: ಲಕ್ಷ್ಮೀ ಹೆಬ್ಬಾಳ್ಕರ್
ಕಾಂಗ್ರೆಸ್ ಪಕ್ಷಕ್ಕೆ ಎಲ್ಲಾ ಸಮುದಾಯದ ಬೆಂಬಲ ಸಿಕ್ಕಿದೆ. ಕೇವಲ ಒಂದು ಸಮುದಾಯದ ಬೆಂಬಲದಿಂದ ಅಧಿಕಾರಕ್ಕೇರಿಲ್ಲ. ಎಲ್ಲಾ ಸಮಾಜದವರೂ ಸರಕಾರದೊಂದಿಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.
ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳ ಸ್ಥಿತಿ ನಾಯಿಪಾಡು ಎಂದು ವೀರಶೈವ ಮುಖಂಡ ಶಾಮನೂರು ಶಿವಶಂಕರಪ್ಪ ಹೇಳಿಕೆ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಶಾಮನೂರು ಶಿವಶಂಕರಪ್ಪನವರ ಹೇಳಿಕೆ ನನ್ನ ಗಮನಕ್ಕೂ ಬಂದಿದೆ. ಈ ಬಗ್ಗೆ ಚರ್ಚಿಸಲಾಗುವುದು ಎಂದು ಹೇಳಿದರು.
ಹಿಂದೆಲ್ಲ ಲಿಂಗಾಯತ ಸಮಾಜ ಕಾಂಗ್ರೆಸ್ ಜೊತೆಗೆ ಇಲ್ಲ ಎಂಬ ಕೊರಗಿತ್ತು. ಆ ಕೊರಗು ಈಗ ಇಲ್ಲ. ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಿರಿಯರಾದ ಶಾಮನೂರು ಶಿವಶಂಕರಪ್ಪ ಅವರ ಜೊತೆ ಚರ್ಚೆ ಮಾಡುತ್ತೇನೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.












Click it and Unblock the Notifications