ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ವಿದ್ಯುತ್ ಕಳ್ಳತನ ಆರೋಪ: ಎಚ್.ಡಿ.ಕುಮಾರಸ್ವಾಮಿ ಹೀಗೆ ಹೇಳಿದ್ರು!

ಮಾಜಿ ಪ್ರಧಾನಿ ಪುತ್ರ ಮತ್ತು ಕರ್ನಾಟಕ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಕರ್ನಾಟಕ ಕಾಂಗ್ರೆಸ್ ಮಧ್ಯೆ ಕಿಚ್ಚು ಹೊತ್ತಿಕೊಂಡಿದೆ. ಅದ್ರಲ್ಲೂ ತಮ್ಮ ವಿರುದ್ಧ ಮಾಡಿರುವ ವಿದ್ಯುತ್ ಕಳ್ಳತನ ಆರೋಪಕ್ಕೆ ಇದೀಗ ಕುಮಾರಸ್ವಾಮಿ ಅವರು ಕೆಂಡವಾಗಿ, ಕೈ ಪಾಳಯಕ್ಕೆ ಸವಾಲು ಹಾಕಿದ್ದಾರೆ. ಹಾಗಾದರೆ ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಅವರು ಹೇಳಿದ್ದೇನು?

ಅಷ್ಟಕ್ಕೂ ಬೆಳಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಅವರ ವಿರುದ್ಧ ಗಂಭೀರ ಆರೋಪವನ್ನ ಮಾಡಿದ್ದ ಕರ್ನಾಟಕ ಕಾಂಗ್ರೆಸ್, 'ಜಗತ್ತಿನ ಏಕೈಕ ಮಹಾಪ್ರಾಮಾಣಿಕ ಹೆಚ್.ಡಿ ಕುಮಾರಸ್ವಾಮಿಯವರ ಜೆ ಪಿ ನಗರದ ನಿವಾಸದ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ. ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ!' ಎಂದು ಗಂಭೀರ ಆರೋಪ ಮಾಡಿತ್ತು. ಈ ಬಗ್ಗೆ ಮಾಜಿ ಸಿಎಂ ಎಚ್‌ಡಿಕೆ ಈಗ ತಿರುಗೇಟು ನೀಡಿದ್ದಾರೆ.

hd-kumaraswamy-answered-karnataka-congress

'ನಾನು ಬಿಡದಿಯ ತೋಟದಲ್ಲಿದ್ದೆ...'

ಇನ್ನು ಕಾಂಗ್ರೆಸ್ ತಮ್ಮ ವಿರುದ್ಧ ವಿದ್ಯುತ್ ಕಳ್ಳತನ ಆರೋಪ ಮಾಡಿರುವ ಹಿನ್ನೆಲೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, 'ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ ತೋಟದಲ್ಲಿದ್ದೆ. ನಿನ್ನೆ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್ ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮಾಡಿದ್ದೇನೆ. ಇದು ವಾಸ್ತವ ಸ್ಥಿತಿ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ.' ಎಂದಿದ್ದಾರೆ.

'ದೊಡ್ಡದು ಮಾಡಿ ಪ್ರಚಾರ ಗಿಟ್ಟಿಸುವ ಕೆಲಸ'

ಅಲ್ಲದೆ, 'ಈ ಅಚಾತುರ್ಯಕ್ಕೆ ನನ್ನ ವಿಷಾದವಿದೆ. ಬೆಸ್ಕಾಂ ಅಧಿಕಾರಿಗಳು ಬಂದು ಪರೀಕ್ಷೆ ಮಾಡಿ ನೋಟಿಸ್ ನೀಡಲಿ. ದಂಡ ಕಟ್ಟುತ್ತೇನೆ. ಇದನ್ನೇ @INCKarnataka ದೊಡ್ಡದು ಮಾಡಿ ಪ್ರಚಾರ ಗಿಟ್ಟಿಸುವ ಕೆಲಸ ಮಾಡುತ್ತಿದೆ. ಆ ಪಕ್ಷದ ಕ್ಷುಲ್ಲಕ ಮನಃಸ್ಥಿತಿಯ ಬಗ್ಗೆ ನನಗೆ ಮರುಕ ಇದೆ.' ಎಂದು ಪ್ರತ್ಯಸ್ತ್ರ ಪ್ರಯೋಗ ಮಾಡಿದ್ದಾರೆ ಮಾಜಿ ಸಿಎಂ ಕುಮಾರಸ್ವಾಮಿ ಅವರು.

hd-kumaraswamy-answered-karnataka-congress

'ಬೆಸ್ಕಾಂ ಅಧಿಕಾರಿಗಳು ಬರಲಿ'

ಹಾಗೇ ಮಾಜಿ ಸಿಎಂ ಕುಮಾರಸ್ವಾಮಿ ಅವರು ಈ ಬಗ್ಗೆ ವಿವರಣೆ ನೀಡುತ್ತಾ, 'ನಾನೇನು ರಾಜ್ಯದ ಆಸ್ತಿ ಕಬಳಿಸಿಲ್ಲ. ಕಂಡವರ ಭೂಮಿಗೆ ಬೇಲಿ ಹಾಕಿಲ್ಲ. ಇನ್ನೊಬ್ಬರ ರಕ್ತ ಕುಡಿದು ಧನದಾಹ ತೀರಿಸಿಕೊಂಡಿಲ್ಲ. ಕುಮಾರಸ್ವಾಮಿ ವಿದ್ಯುತ್ ಕಳ್ಳತನ ಮಾಡಿದ್ದಾರೆ, ಬೆಸ್ಕಾಂ ಕ್ರಮ ಕೈಗೊಳ್ಳಲಿ ಎಂದು ಉಪ ಮುಖ್ಯಮಂತ್ರಿಗಳು ಹೇಳಿದ್ದಾರೆ. ನಾನು ಮನೆಯಲ್ಲೇ ಇದ್ದೇನೆ. ಬೆಸ್ಕಾಂ ಅಧಿಕಾರಿಗಳು ಬರಲಿ. ಅವರ ಯಾವುದೇ ಕ್ರಮಕ್ಕೆ ನಾನು ಸಿದ್ಧನಿದ್ದೇನೆ.' ಎಂದು ಸವಾಲು ಹಾಕಿದ್ದಾರೆ.

ಹೀಗೆ ಕರ್ನಾಟಕ ಕಾಂಗ್ರೆಸ್ & ಜೆಡಿಎಸ್ ಅಧ್ಯಕ್ಷರು ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರ ನಡುವೆ ದೊಡ್ಡ ಕಿಚ್ಚು ಹೊತ್ತಿಕೊಂಡಿದೆ. ವಿದ್ಯುತ್ ಕಳ್ಳತನ ಕಿತ್ತಾಟ ಜೋರಾದ ಸಮಯದಲ್ಲೇ, ತಮ್ಮ ವಿರುದ್ಧದ ಆರೋಪಕ್ಕೆ ಇದೀಗ ಎಚ್‌ಡಿಕೆ ಪ್ರತ್ಯುತ್ತರ ನೀಡಿದ್ದಾರೆ. ಪ್ರತ್ಯುತ್ತರ ನೀಡುವ ಜೊತೆಗೆ ಹೊಸ ಸವಾಲನ್ನೂ ಕುಮಾರಸ್ವಾಮಿ ಅವರು ಈಗ ಕಾಂಗ್ರೆಸ್ ನಾಯಕರಿಗೆ ಹಾಕಿದ್ದಾರೆ. ಹೀಗಾಗಿ ಮುಂದೆ ಇದು ಎಲ್ಲಿಗೆ ಬಂದು ನಿಲ್ಲುತ್ತೆ? ಈ ತಿಕ್ಕಾಟ ಮತ್ತೆಷ್ಟು ದೊಡ್ಡದಾಗುತ್ತೆ? ಅಲ್ಲದೆ ಇಬ್ಬರ ಈ ಜಗಳಕ್ಕೆ ಕಮಲ ಪಾಳಯ ಕೂಡ ಎಂಟ್ರಿ ಹಾಕುತ್ತಾ? ಅನ್ನೋದನ್ನ ಕಾದು ನೋಡಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+