ಈಜುಕೊಳ ಉದ್ಘಾಟನೆಗೆ ಚಿಕ್ಕಮಗಳೂರಿಗೆ ಸನ್ನಿ ಲಿಯೋನ್, ದೀಪಿಕಾ ಪಡುಕೋಣೆ!

Recommended Video

      ನಿನ್ನೆ ಈಜುಕೊಳ ಉದ್ಘಾಟನೆಗೆ ಚಿಕ್ಕಮಗಳೂರಿಗೆ ಸನ್ನಿ ಲಿಯೋನ್, ದೀಪಿಕಾ ಪಡುಕೋಣೆ! | Oneindia Kannada

      ಚಿಕ್ಕಮಗಳೂರು, ಜುಲೈ 22: ಇವತ್ತು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕಳಸಾ ಹೋಬಳಿಗೆ ಸನ್ನಿ ಲಿಯೋನ್ ಹಾಗೂ ದೀಪಿಕಾ ಪಡುಕೋಣೆ ಆಗಮಿಸಲಿದ್ದಾರೆ. ಅಯ್ಯೋ ಹೌದಾ! ನಮಗೆ ಗೊತ್ತೇ ಇಲ್ಲ ಅಂತ ಗಾಬರಿಯಾಗಬೇಡಿ.

      ಕಳಸಾ ಪಟ್ಟಣದಲ್ಲಿ ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಚೆನ್ನಯ್ಯ ಮಾಡಿದ ರಸ್ತೆ ಮೂರೇ ತಿಂಗಳಿಗೆ ಅಡಿಯಷ್ಟು ಗುಂಡಿ ಬಿದ್ದಿರುವುದರಿಂದ ಸ್ಥಳೀಯರು ಈ ರೀತಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

      This is how PWD department work trolled in Chikkamagaluru?

      ಕಳಸಾ ಪಟ್ಟಣದ ಯುವಕರು ಗುಂಡಿ ಬಿದ್ದ ರಸ್ತೆಯನ್ನು ಸ್ವಿಮ್ಮಿಂಗ್ ಪೂಲ್ ಎಂಬಂತೆ ಫೋಟೋಶಾಪ್ ನಲ್ಲಿ ಎಡಿಟ್ ಮಾಡಿ, ಗುಂಡಿ ಬಿದ್ದ ರಸ್ತೆಯಲ್ಲಿ ದೀಪಿಕಾ ಪಡುಕೋಣೆ ಹಾಗೂ ಸನ್ನಿ ಲಿಯೋನ್ ರ ಭಾವಚಿತ್ರವನ್ನು ಕೂರಿಸಿ, ಇಂದು ಬೆಳಗ್ಗೆ 10 ಗಂಟೆಗೆ ಸನ್ನಿ ಹಾಗೂ ಪಡುಕೋಣೆ ಈ ಈಜುಕೊಳವನ್ನು ಉದ್ಘಾಟಿಸಲಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನು ಹರಿಬಿಟ್ಟು ಎಂಜಿನಿಯರ್ ಹಾಗೂ ಕಂಟ್ರಾಕ್ಟರ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

      This is how PWD department work trolled in Chikkamagaluru?

      ಇನ್ನು ಇದೇ ಈಜು ಕೊಳದ ಬಳಿ ತಮಿಳಿನ ಖ್ಯಾತ ನಟ ವಿಜಯ್ ಸೆಲ್ಫಿ ತೆಗೆದುಕೊಂಡಿರುವ ಫೋಟೋಗಳು ವಾಟ್ಸಾಪ್' ನಲ್ಲಿ ಹರಿದಾಡುತ್ತಿವೆ. ಮೂರು ತಿಂಗಳ ಹಿಂದೆ ಬಾಳೂರು ಹ್ಯಾಂಡ್ ಪೋಸ್ಟ್ ನಿಂದ ಕಳಸಾದ ಅಂಬಾತೀರ್ಥ ಬಸ್ ನಿಲ್ದಾಣದವರೆಗೆ ನಿರ್ಮಿಸಿರುವ ರಸ್ತೆ ಇದಾಗಿದೆ. ಎರಡು ವರ್ಷ ನಿರ್ವಹಣೆಯ ಜವಾಬ್ದಾರಿ ಹೊತ್ತಿರುವ ಇಂಜಿನಿಯರ್ ಹಾಗೂ ಕಂಟ್ರಾಕ್ಟರ್ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಈ ರೀತಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+