CM Change: ಸಿಎಂ ಬದಲಾವಣೆ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸಚಿವ ಬೋಸರಾಜು
ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಆಗಾಗ ಮುನ್ನಲೆಗೆ ಬರುತ್ತಲೇ ಇರುತ್ತದೆ. ಹಲವು ಬಾರಿ ಸಿಎಂ ಬದಲಾವಣೆ ವಿಚಾರ ಚರ್ಚೆಗೆ ಬಂದರೂ ನಾನೇ 5 ವರ್ಷ ಸಿಎಂ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಹಲವು ಹಿರಿಯ ನಾಯಕರು ನಾನು ಸಿಎಂ ಹುದ್ದೆ ಆಕಾಂಕ್ಷಿ ಎಂದು ಹೇಳಿಕೆ ನೀಡುವ ಮೂಲಕ ಗೊಂದಲ ಸೃಷ್ಟಿಸುತ್ತಿದ್ದಾರೆ.
ಇತ್ತೀಚೆಗೆ ಹೈಕಮಾಂಡ್ ಗರಂ ಆದ ಬಳಿಕ ಹಲವು ನಾಯಕರು ಈ ಬಗ್ಗೆ ಹೇಳಿಕೆ ಕೊಡುವುದನ್ನು ಬಿಟ್ಟಿದ್ದಾರೆ. ಈಗ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಸಣ್ಣ ನೀರಾವರಿ, ವಿಜ್ಞಾನ ತಂತ್ರಜ್ಞಾನ ಸಚಿವ ಎನ್ ಎಸ್ ಬೋಸರಾಜು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ರಾಯಚೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬದಲಾವಣೆ ಬಗ್ಗೆ ಪಕ್ಷದಲ್ಲಿ ಚರ್ಚೆಯೇ ನಡೆದಿಲ್ಲ ಎಂದು ಹೇಳಿದ್ದಾರೆ. ಅಕ್ಟೋವರ್ ಅಥವಾ ನವೆಂಬರ್ ನಲ್ಲಿ ಏನೂ ಆಗಲ್ಲ, ನಮ್ಮಲ್ಲಿ ಹೈಕಮಾಂಡ್ ಹೇಳಿದ್ದನ್ನು ಕೇಳುತ್ತೇವೆ, ಈ ಬಗ್ಗೆ ವಿರೋಧ ಪಕ್ಷಗಳು ಯಾಕಿಷ್ಟು ಮಾತನಾಡುತ್ತಾರೋ ಅರ್ಥವಾಗುತ್ತಿಲ್ಲ ಎಂದು ಹೇಳಿದ್ದಾರೆ.
ಅಶೋಕ್ ವಿರುದ್ಧ ವಾಗ್ದಾಳಿ?
ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರಿಗೆ ಕಾಮನ್‌ಸೆನ್ಸ್ ಇಲ್ಲ, ಅವರು ಮಾತನಾಡುವುದಕ್ಕೂ ಅರ್ಥ ಇಲ್ಲ, ಅವರ ಪಕ್ಷದ ಬಗ್ಗೆ ನಾವು ಮಾತನಾಡಲ್ಲ, ಮೊದಲು ಅವರು ಪಕ್ಷದಲ್ಲಿರುವ ಸಮಸ್ಯೆಯನ್ನು ಸರಿಪಡಿಸಿಕೊಳ್ಳಲಿ. ಸಿಎಂ ಬದಲಾವಣೆಗೆ ದಿನಾಂಕ ಕೊಡುವುದಕ್ಕೆ ನಾಚಿಕೆಯಾಗಬೇಕು, ವಿರೋಧ ಪಕ್ಷದಲ್ಲಿದ್ದೇ ಆರು ಭಾಗ ಮಾಡಿಕೊಂಡಿದ್ದಾರೆ, ಕೇಂದ್ರದ ನಾಯಕರು ಕೂಡ ಏನೂ ಮಾಡದ ಸ್ಥಿತಿಗೆ ಬಂದಿದ್ದಾರೆ ಎಂದು ಹೇಳಿದರು.
ಸಿಎಂ ಸಿದ್ದರಾಮಯ್ಯ ಅವರು ರಾಜಕೀಯ ಸಲಹೆಗಾರರಾಗಿದ್ದ ಬಿ.ಆರ್. ಪಾಟೀಲ್ ರಾಜೀನಾಮೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಪಾಟೀಲ್ ಹಿರಿಯ ಶಾಸಕರಾಗಿದ್ದು, ಮಹಾತ್ಮ ಗಾಂಧಿ ಸಿದ್ದಾಂತವನ್ನು ಅಳವಡಿಸಿಕೊಂಡಿದ್ದಾರೆ. ಅವರ ಕ್ಷೇತ್ರಕ್ಕೆ ಅನುದಾನ ಕೊಟ್ಟಿಲ್ಲ ಎನ್ನುವುದು ಸರಿಯಲ್ಲ, ಎಲ್ಲಾ ಕ್ಷೇತ್ರಗಳಿಗೆ ಅನುದಾನ ಕೊಡಲಾಗಿದೆ. ಎಲ್ಲಾ ಶಾಸಕರು, ಎಂಎಲ್‌ಸಿಗಳಿಗೆ 2 ಕೋಟಿ ರೂಪಾಯಿ ನೀಡಲಾಗಿದೆ. ಆದರೆ ಅವರು ಯಾಕೆ ರಾಜೀನಾಮೆ ಕೊಟ್ಟಿದ್ದಾರೆ ಎನ್ನುವುದು ಗೊತ್ತಿಲ್ಲ ಪಕ್ಷದ ನಾಯಕರು ಮಾತನಾಡಿ ಸರಿಪಡಿಸುವ ಭರವಸೆ ಇದೆ ಎಂದರು.












Click it and Unblock the Notifications